ಚಿಕ್ಕಮಗಳೂರು: ಕರ್ತವ್ಯ ಲೋಪ ಹಿನ್ನಲೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಕ್ಕಣ್ಣರನ್ನು ಅಮಾನತು ಮಾಡಲಾಗಿದೆ.
ಶೃಂಗೇರಿ ಪಿಎಸ್ಐ ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ಮೇಲೆ ದಾಳಿ, ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಹಿನ್ನಲೆ ಅಮಾನತು ಮಾಡಲಾಗಿದೆ.
ಶೃಂಗೇರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್ಗಿರಿ ಜೊತೆಗೆ ಶೃಂಗೇರಿಯ ಮೀಗಾ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಚಿಕ್ಕಮಗಳೂರು ಸೆನ್ ಪೊಲೀಸ್ ದಾಳಿ, ಈ ಎಲ್ಲಾ ಪ್ರಕರಣದಲ್ಲೂ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಕ್ಕಣ್ಣ ಸಸ್ಪೆಂಡ್ ಮಾಡಲಾಗಿದೆ.
Sub-inspector of Sringeri Police Station suspended