ALSO FEATURED IN

saint of India Sevalal:ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್

Spread the love

ಚಿಕ್ಕಮಗಳೂರು: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ,

ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು.

ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ ಪವಿತ್ರವಾದದ್ದು, ಇದನ್ನು ಹಾಳು ಮಾಡಿಕೊಳ್ಳಬಾರದು, ವ್ಯಸನಗಳಿಂದ ದೂರವಿರಬೇಕು. ಹರಿಷಡ್ ವರ್ಗಗಳನ್ನು ಸುಟ್ಟು ಹಾಕಿ ಪ್ರಾಮಾಣಿಕರಾಗಿ ಜೀವಿಸಿ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಸಾರಿದವರು ಸಂತ ಸೇವಾ ಲಾಲ್. ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರಿಗೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರಲ್ಲದೆ ಸೇವಾಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಿಸಲು ಪ್ರೇರೇಪಿಸಿದರು ಎಂದರು.

ಮಹಾನೀಯರ ಸಂದೇಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನಡೆದಾಗ ಮಾತ್ರ ನಾವು ಇತರರಿಗೆ ಮಾದರಿಯಾಗಲು ಸಾಧ್ಯ, ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತಾ, ಜನದಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದಾರೆ.

ಲಂಬಾಣಿ ಸಮುದಾಯ ಸಾವಿರಾರು ವರ್ಷಗಳಿಂದ ನಗರ ಮತ್ತು ಗ್ರಾಮೀಣ ಜೀವನಗಳಿಂದ ದೂರವಿದ್ದು, ಅರಣ್ಯ ವಾಸಿಗಳಾಗಿ ಜೀವನ ಸಾಗಿಸುತ್ತಿದ್ದರು. ಇವರಲ್ಲಿನ ಅಜ್ಞಾನ ಅಂಧಕಾರಗಳನ್ನು ದೂರ ಮಾಡಿ ಜ್ಞಾನ ಮಾರ್ಗ ತೋರಿದ ಸೇವಾಲಾಲರನ್ನು ಬಂಜಾರರು ಮೋತಿವಾಳು ಅಥವಾ ಲಾಲ ಮೋತಿ ಎಂದು ಕರೆಯುತ್ತಿದ್ದರು. ಮುಂಬೈಯ ಸ್ಮಿತ್ ಭಾವುಚಾ ಎಂಬಲ್ಲಿ ಪೋರ್ಚುಗೀಸರ ಹಡಗು ಸಿಕ್ಕಿಹಾಕಿಕೊಂಡಾಗ ಅದನ್ನು ತಮ್ಮ ಜಾಣತನದಿಂದ ದಡ ಸೇರಿಸಿದ ಸೇವಾಲಾಲರಿಗೆ ಪೋರ್ಚುಗೀಸರು ಮುತ್ತಿನ ಹಾರವನ್ನು ಕಾಣಿಕೆಯಾಗಿ ನೀಡಿದ್ದರು. ಆದ್ದರಿಂದಲೇ ಇವರನ್ನು ಮೋತಿವಾಳೋ ಎಂದು ಕರೆಯುತ್ತಿದ್ದರು ಎಂದು ಹೇಳಿದರು

ಉಪತಹಶಿಲ್ದಾರ್ ರಾಮ್ ರಾವ್ ದೇಸಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸೇವಾಲಾಲ್ ಒಬ್ಬ ದನಕಾಯುವ ಗೋಪಾಲಕನಾಗಿ ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದವರು ಎಂದು ತಿಳಿಸಿದರು.

ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ಹೇಳಿದರು. ಸೇವಾ ಲಾಲರು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮೂಲಕ ಮುಕ್ತಿ ಮಾರ್ಗ ತೋರಿಸಿದರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೇಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ದರಾಗಿದ್ದರು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್,ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ  ನಗರಸಭೆ ಸದಸ್ಯೆ ಲಲಿತಾ ರವಿನಾಯ್ಕ್, ಸಂತ ನೇವಾಲಾಲ್ ಬಂಜಾರ ಅಭಿವೃದ್ಧಿ ಸಂಘದ ಅಧ್ಯಕ್ಷ ಗಂಗಾಧರ್ ನಾಯ್ಕ್, ಶ್ರೀ ರಾಮ್ ನಾಯ್ಕ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಸಮಿತಿ  ಸದಸ್ಯ ಲಕ್ಷ್ಮಣ್ ಹೆಚ್,ಎಸ್,ಬಂಜಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Historical male saint of India Sevalal

Facebook
X
WhatsApp
Telegram
Spread the love

ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ…

Spread the love

ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು…

Spread the love

ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ…

Spread the love

ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು…

[t4b-ticker]
Exit mobile version