ಚಿಕ್ಕಮಗಳೂರು: ರೈತರು, ಕೂಲಿ ಕಾರ್ಮಿಕರು, ಅನಕ್ಷರಸ್ಥರು ಮತ್ತು ವಿವಿಧ ವರ್ಗದ ಜನರ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲೇ ಪರಿಹರಿಸಿ ಜನಸ್ನೇಹಿ ಆಡಳಿತ ನೀಡುವುದೇ ಜನ ಸಂಪರ್ಕ ಸಭೆಯ ಮುಖ್ಯ ಉದ್ದೇಶ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಕಡೂರು ಹಾಗೂ ಹುಲಿಕೆರೆ, ಪಿಳ್ಳೇನಹಳ್ಳಿ, ಮತ್ತು ಎಸ್ ಬಿದರೆ ಗ್ರಾಮ ಪಂಚಾಯಿತಿ ವತಿಯಿಂದ ಹುಲಿಕೆರೆ ಗ್ರಾಮದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಬಹುದಾದ ಸಾರ್ವಜನಿಕರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳೆ ಸ್ವತಹ ಜನ ಸಾಮಾನ್ಯರ ಮನೆ ಅಂಗಳಗಳಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಜನ ಸಂಪರ್ಕ ಸಭೆ ಕಾರ್ಯಕ್ರಮ ಉತ್ತಮ ವೇಧಿಕೆಯಾಗಿದೆ ಎಂದರು
ಜನ ಸಂಪರ್ಕ ಕಾರ್ಯಕ್ರಮದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದು ಸಾರ್ವಜನಿಕರು ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರು ಅವುಗಳನ್ನು ಬಿತ್ತರಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೆ ಸೂಕ್ತ ಪರಿಹಾರ ನೀಡಿ ಬಗೆಹರಿಸಲಾಗುವುದು. ಅಧಿಕಾರಿಗಳು ಒಮ್ಮೆ ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ತಂದರೆ ಶೀಘ್ರವಾಗಿ ಪರಿಹಾರ ಕ್ರಮ ಕೈಗೊಂಡು ಸಮಸ್ಯೆಗಳ ಅಹವಾಲುಗಳು ಪುನರಾವರ್ತನೆ ಆಗದಂತೆ ಕ್ರಮ ವಹಿಸಬೇಕು ಎಂದರು.
ಪಿಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ೧ ಕೋಟಿ ೨೩ ಲಕ್ಷ, ಎಸ್ ಬಿದರೆ ಗ್ರಾಮ ಪಂಚಾಯಿತಿಗೆ ೭೩ ಲಕ್ಷ ಹಾಗೂ ಹುಲಿಕೆರೆ ಗ್ರಾಮ ಪಂಚಾಯಿತಿಗೆ ೧ ಕೋಟಿ ೮೦ ಲಕ್ಷ ಅನುದಾನವನ್ನು ನೀಡಿ ರಸ್ತೆ, ದೇವಾಲಯ, ಸಮುದಾಯ ಭವನ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಯೋಜನೆ ರೂಪಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಹಾಗೂ ಎಲ್ಲಾ ಕಾಮಗಾರಿಗಳನ್ನು ಗುಣ ಮಟ್ಟದ ಕಾಮಗಾರಿ ನಿರ್ವಹಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಜಿಲ್ಲೆಯ ಗ್ರಾಮಾಂತರ ಭಾಗಗಳಿಗೆ ೧೦ ಕೋಟಿ ವಿಶೇಷ ಅನುದಾನವನ್ನು ನೀಡುತ್ತಿದ್ದಾರೆ ಅದರ ಕ್ರಿಯಾ ಯೋಜನೆಯು ನಿರ್ವಹಿಸಲಾಗುತ್ತಿದೆ ಎಂದ ಅವರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ವಿಳಂಬವಾಗಿಲ್ಲ ಎಂದು ಹೇಳಿದರು.
ವಿದ್ಯುತ್ ನಿಲುಗಡೆಯಿಂದ ಗ್ರಾಮಸ್ಥರಿಗೆ ಬಹಳ ಸಮಸ್ಯೆ ಆಗುತ್ತಿದೆ ಸರ್ಕಾರ ಏಳು ಗಂಟೆ ವಿದ್ಯುತ್ ನೀಡಬೇಕು. ನಮ್ಮ ಗ್ರಾಮಕ್ಕೆ ಕೇವಲ ಎರಡು ಗಂಟೆ ಮಾತ್ರ ನೀಡುತ್ತಾರೆ ಮೆಸ್ಕಾಂ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸರ್ಕಾರಿ ಶಾಲೆಗಳ ಶಿಕ್ಷಕರು ಸರಿಯಾದ ಸಮಯಕ್ಕೆ ಆಗಮಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.
ಜಲ್ ಜೀವನ ಮಿ?ನ್ ಯೋಜನೆಯಡಿ ನೀರು ಸರಿಯಾಗಿ ಬರುತ್ತಿಲ್ಲ. ರಸ್ತೆಗಳೆಲ್ಲ ಸಂಪೂರ್ಣ ಹದಗೆಟ್ಟಿವೆ ತಕ್ಷಣವೇ ದುರಸ್ಥಿ ಪಡಿಸಬೇಕು. ೪೮ ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಸಮಯ ಮುಗಿದಿದ್ದರೂ ಕೆಲಸ ಪ್ರಾರಂಭಿಸಿಲ್ಲ ಎ? ದೊಡ್ಡ ಗುತ್ತಿಗೆದಾರರಾಗಿದ್ದರು ಸಹ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವಾರದ ಒಳಗಾಗಿ ಕೆಲಸ ಪ್ರಾರಂಭಿಸದಿದ್ದರೆ ಅವರ ಟೆಂಡರ್ ರದ್ದುಗೊಳಿಸಿ, ಹೊಸ ಟೆಂಡರ್ ಕರೆದು ತಕ್ಷಣ ಕೆಲಸ ಪ್ರಾರಂಭಿಸಬೇಕು. ಮನೆಯಲ್ಲಿಯೇ ಅಕ್ರಮ ಮಧ್ಯವನ್ನು ವ್ಯಾಪಾರ ಮಾಡುತ್ತಿದ್ದಾರೆ ಇದನ್ನು ನಿಲ್ಲಿಸಬೇಕು ಎಂದು ಆರೋಪಿಸಿದರು.
ಗ್ರಾಮೀಣ ಭಾಗದ ಮಹಿಳೆಯರಿಗೆ ಗೃಹ ಲಕ್ಷ್ಮಿ ಹಣ ಸರಿಯಾಗಿ ಬರುತ್ತಿಲ್ಲ ಅಕ್ಕಿಯ ಹಣ ಸಹ ಮೂರು ನಾಲ್ಕು ತಿಂಗಳಿಂದ ಬಂದಿಲ್ಲ ತಕ್ಷಣವೇ ಹಣ ನೀಡಬೇಕೆಂದು ಮನವಿ ಮಾಡಿದರು
ಕಡೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಪ್ರವೀಣ್ ಪ್ರಾಸ್ಥಾವಿಕವಾಗಿ ಮಾತನಾಡಿ ಆಡಳಿತ ವ್ಯವಸ್ತೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುವಂತ ಕಾರ್ಯಕ್ರಮ ಜನ ಸಂಪರ್ಕ ಸಭೆ. ಕ್ಷೇತ್ರದಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಶಾಸಕರು ಹೆಚ್ಚಿನ ಕ್ರಮ ವಹಿಸುತಿದ್ದಾರೆ. ಈ ಸಭೆಯಲ್ಲಿ ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು ಈ ಸಭೆಯಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ತಿತರಿದ್ದು ಯಾವುದೇ ಯೋಜನೆಗೆ ಸಂಬಂಧಿಸಿದ ಅಹವಾಲು, ಕುಂದು ಕೊರತೆಗಳು ಇದಲ್ಲಿ ಅವುಗಳನ್ನು ಬಿತ್ತಿರಿ ಪರಿಹರಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಹುಲಿಕೆರೆ ಗ್ರಾ.ಪಂ ಅಧ್ಯಕ್ಷೆ ರತ್ನಮ್ಮ, ಪಿಳ್ಳೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಮಹೇಂದ್ರ ಆಚಾರ್, ಎಸ್.ಬಿದರೆ ಗ್ರಾ.ಪಂ ಅಧ್ಯಕ್ಷ ಸತೀಶ್, ಕಡೂರು ತಾಲ್ಲೂಕು ತಹಶೀಲ್ದಾರ್ ಮಂಜುನಾಥ್, ಕಡೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಮೂರು ಗ್ರಾಮ ಪಂಚಾಯಿತಿಗಳ ಉಪಾಧ್ಯಕ್ಷರು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು
Public relations meeting organized in Hulikere village