ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ರಾಜ್ಯಸರ್ಕಾರ ಬಿಸಿಯೂಟ, ಪಠ್ಯಪುಸ್ತಕ, ಸಮ ವಸ್ತ್ರ, ವಿದ್ಯಾರ್ಥಿವೇತನ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಒದಗಿಸಿ ಸಂಪೂರ್ಣ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ನಗರದ ಶಾಂತಿನಗರದಲ್ಲಿ ಪಿಎಂಶ್ರೀ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರ ಗತಿ ಮಕ್ಕಳ ಸ್ನೇಹ ಸಮ್ಮೇಳನ ಹಾಗೂ ಚಿಣ್ಣರ ವೈಭವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಉದ್ಘಾ ಟಿಸಿ ಅವರು ಮಾತನಾಡಿದರು.
ಖಾಸಗೀ ಶಾಲೆಗಳ ಅಬ್ಬರದ ನಡುವೆಯು ಶಾಂತಿನಗರದ ಶಾಲೆಗೆ ಸುಮಾರು ೧೬೦ಕ್ಕೂ ಹೆಚ್ಚು ಮಕ್ಕಳು ದಾಖಲಾಗಿರುವುದು ಹೆಮ್ಮೆಯ ಸಂಗತಿ ಎಂದ ಅವರು ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳೆಂಬ ಕೀಳರಿಮೆ ಹೊಂದಿರದೇ, ಪಠ್ಯದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಿ ಶಾಲೆಗೆ ಕೀರ್ತಿ ತರ ಬೇಕು ಎಂದರು.
ವಿದ್ಯೆ ಬದುಕು ಅಥವಾ ನೌಕರಿಗಷ್ಟೇ ಸೀಮಿತವಾಗಬಾರದು. ಸಂಸ್ಕಾರಯುತ ಜೀವನ ಹಾಗೂ ಸಾ ಮಾಜಿಕ ಕಳಕಳಿಯಿಂದ ಕೂಡಿರಬೇಕು. ಮಕ್ಕಳಿಗೆ ಆಸ್ತಿ, ಅಂತಸ್ತು ಸಂಪಾದಿಸಿದರೆ, ಇನ್ನೊಬ್ಬರು ದೋಚ ಬಹುದು. ಆದರೆ ನೈತಿಕ ಶಿಕ್ಷಣ, ಗುರುಹಿರಿಯರನ್ನು ಗೌರವಿಸುವ ಸಂಸ್ಕಾರ ಕಲಿಸಿಕೊಟ್ಟರೆ ಶಾಶ್ವತವಾಗಿ ಬೇ ರೂರಲಿದೆ ಎಂದರು.
ಶಾಂತಿನಗರ ಸುತ್ತಮುತ್ತಲು ಅತಿಹೆಚ್ಚು ಸಂಖ್ಯೆಯಲ್ಲಿ ಕೂಲಿಕಾರ್ಮಿಕರು ವಾಸಿಸುತ್ತಿರುವ ಹಿನ್ನೆಲೆ ಸರಿ ಯಾಗಿ ಹಕ್ಕುಪತ್ರ ದೊರೆತಿಲ್ಲ. ಕೆಲವರಿಗೆ ಹಕ್ಕುಪತ್ರ ದೊರೆತರೂ ಖಾತೆಯಾಗಿಲ್ಲ. ಈ ಬಗ್ಗೆ ಸ್ಥಳೀಯ ನಗರ ಸಭಾ ಸದಸ್ಯರು ಗಮನಕ್ಕೆ ತಂದಿದ್ದು ಸದ್ಯದಲ್ಲೇ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಅ ಭ್ಯಾಸಿದಂತೆ ಅನೇಕ ವಿದ್ಯಾರ್ಥಿಗಳು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಹೀಗಾಗಿ ಮಕ್ಕಳು ಅಂತಿಮ ಪರೀಕ್ಷೆ ಎದುರಾಗುವ ಹಿನ್ನೆಲೆ ಹೆಚ್ಚು ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯ ಚಂದ್ರಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಗೆ ಪ್ರಧಾನ ಮಂತ್ರಿ ಯೋಜನೆಯಡಿ ಪೂರ್ವ ಪ್ರಾಥಮಿಕ ಶಾಲೆ ಆರಂಭಗೊಂಡು ಪೀಠೋಪಕರಣ, ಕಂಪ್ಯೂಟರ್ ವ್ಯವಸ್ಥೆ ಕಲ್ಪಿಸಿಕೊಟ್ಟಿದೆ. ಗ್ರಂಥಾಲಯ ನಿರ್ಮಿಸಲು ಕೊಠಡಿ ಮಂಜೂರಾಗಿದೆ. ಶಾಲೆಯಲ್ಲಿ ಬಾಲಕಿಯರ ಶೌಚಾಲ ಯ ಕೊರತೆಯಿರುವ ಕಾರಣ ಶಾಸಕರು ಅನುದಾನ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಶಾಲಾ ಮಕ್ಕಳು, ಪಾಲಕರಿಗೆ ಏರ್ಪಡಿಸಿದ್ಧ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಮಣಿಕಂಠ, ಮುನೀರ್ ಅಹ್ಮದ್, ಸಿಡಿಎ ಸದಸ್ಯೆ ಗುಣ ವತಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ವಸಂತ್ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೂರ್ತಿ, ಉಪಾಧ್ಯಕ್ಷೆ ತಬಸುಮ್, ಸದಸ್ಯರುಗಳು, ದಾನಿಗಳು ಸೇರಿದಂತೆ ಮತ್ತಿತರರಿದ್ದರು.
Facilitate children’s education by providing infrastructure