ಚಿಕ್ಕಮಗಳೂರು: ರಾಜ್ಯದ ವೀರಶೈವ ಲಿಂಗಾಯುತರು ಯಡಿಯೂರಪ್ಪ ಅವರ ಬೆಂಬಲಿಸಲಿದ್ದಾರೆ ಎಂಬುದನ್ನು ಪ್ರದರ್ಶನ ಮಾಡಲು ಮಾ.೮ ರಂದು ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯುತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಶೈವ ಲಿಂಗಾಯುತ ಸಮುದಾಯದ ಮುಖಂಡರು ಎಲ್ಲ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡು ಜನತೆಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವೀರಶೈವ ಲಿಂಗಾಯುತರ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ಏಳಿಗೆಯನ್ನು ಸಹಿಸದ ಕೆಲವು ಪಟ್ಟಭದ್ರ ಶಕ್ತಿಗಳು ಅವರ ಮೇಲೆ ಅನಗತ್ಯವಾದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.
ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಹೀಯಾಳಿಸುತ್ತಾ ಪಕ್ಷ ಸಂಘಟನೆ ಮತ್ತು ಜನಸೇವೆಗೆ ಅಡ್ಡಿ ಪಡಿಸುತ್ತಿದ್ದಾರೆ. ಸ್ವ ಪಕ್ಷದವರೇ ಆದ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋ ಗುಂಪಿನ ಮುಂಚೂಣಿ ನಾಯಕರಾಗಿದ್ದಾರೆ. ಅವರ ನಡೆಯನ್ನು ಸಮುದಾಯ ಖಂಡಿಸುತ್ತದೆ. ಬಿಜೆಪಿ ಕೇಂದ್ರ ನಾಯಕರು ಮಧ್ಯ ಪ್ರವೇದ್ರಿವರ ರಾಜಕೀಯ ನಡೆಯನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ವೀರಶೈವ ಲಿಂಗಾಯುತರು ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಅವರನ್ನು ಬೆಂಬಲಿಸುತ್ತಾರೆ ಎಂಬುದನ್ನು ಪ್ರದರ್ಶಿಸಲು ಮಾ.೮ ರಂದು ಬೃಹತ್ ಸಮಾವೇಶ ನಗರದಲ್ಲಿ ನಡೆಯಲಿದೆ. ಈ ಹೋರಾಟ ಎಲ್ಲ ಪ್ರಜ್ಞಾವಂತ ವೀರಶೈವ ಲಿಂಗಾಯುತರದ್ದಾಗಿದೆ ಜತೆಗೆ ಪಕ್ಷಾತೀತವಾಗಿದೆ ಎಂದು ಹೇಳಿದರು.
ವೀರಶೈವ ಲಿಂಗಾಯುತ ಸಮಾಜದ ಮುಖಂಡರಾದ ಕಲ್ಮರುಡಪ್ಪ, ಸೋಮಶೇಖರ್, ರುದ್ರಮುನಿ, ಈಶ್ವರಪ್ಪ, ಜಗದೀಶ್, ತೇಜಸ್ಕುಮಾರ್ ಮತ್ತಿತರರಿದ್ದರು.