ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ
ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ವಿ.ಎಸ್.ಹಾಲಮೂರ್ತಿರಾವ್ ಇವರುಗಳ ಮಾರ್ಗದರ್ಶನದಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ತಂಡವನ್ನು ರಚಿಸಲಾಗಿತ್ತು.
ಕಾರ್ಯಪ್ರವೃತ್ತವಾದ ತಂಡವು ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿ ಬಳ್ಳಾರಿ ನಗರ ಈಗ ಚಿಕ್ಕಮಗಳೂರು ನಗರದ ಟಿಪ್ಪುನಗರದಲ್ಲಿ ವಾಸವಾಗಿದ್ದ ಮೊಹಮ್ಮದ್ ಸಾಂ ಸದ್ದಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈತನ ಮೇಲೆ ಈ ಹಿಂದೆ ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿರುತ್ತದೆ.
ಈ ವ್ಯಕ್ತಿಯ ತನ್ನ ಸಹಚರನೊಂದಿಗೆ ಕಡೂರು, ಯಗಟಿ, ಬೀರೂರು, ಸಖರಾಯಪಟ್ಟಣ, ಅಜ್ಜಂಪುರ, ಚಿಕ್ಕಮಗಳೂರು ನಗರ, ಬಸವನಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್, ಕಳ್ಳತನ ಮಾಡಿದ್ದ ಕಾಣಿಕೆ ಹುಂಡಿ ಮತ್ತು ವಿವಿಧ ಮುಖಬೆಲೆಯ ಚಿಲ್ಲರೆ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಇವುಗಳ ಒಟ್ಟು ಮೌಲ್ಯ ಸುಮಾರು ೧ ಲಕ್ಷ, ರೂ.ಗಳಾಗಿದೆ. ಈತನ ಬಂಧನದಿಂದ ಕಡೂರು ಠಾಣೆಯಲ್ಲಿ ೧ ಕಳ್ಳತನ ಪ್ರಕರಣ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿದ ಪೊಲೀಸ್ ಠಾಣೆಗ ಲ್ಲಿ ದಾಖಲಾಗಿದ್ದ ೭ ಪ್ರಕರಣಗಳು ಸೇರಿದಂತೆ ಒಟ್ಟು ೮ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ಆರೋಪಿ ಪತ್ತೆಕಾರ್ಯದಲ್ಲಿ ಕಡೂರು ಪೊಲೀಸ್ ಠಾಣೆಯ ಪಿಎಸ್ಐ ಸಿ.ಸಿ.ಪವನ್ಕುಮಾರ್, ಡಿ.ಹೆಚ್.ಧನಂಜಯ್, ಲೀಲಾವತಿ ಮತ್ತು ಸಿಬ್ಬಂದಿಗಳಾದ, ಕುಚೇಲ, ಮಧುಕುಮಾರ್, ಬಿ.ಸಿ. ಹರೀಶ್, ಧನಪಾಲ್ ನಾಯ್ಕ, ಸ್ವಾಮಿ, ಪರಮೇಶ್, ರಬ್ಬಾನಿ ಮತ್ತು ನಯಾಜ್ ತಾಂತ್ರಿಕ ವಿಭಾಗದ ಡಿ ಪಿ ಓ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಶ್ರಮಿಸಿರುತ್ತಾರೆ.
ಪ್ರಕರಣಗಳಲ್ಲಿ ಯಶಸ್ವಿಯಾಗಿ ಆರೋಪಿಯನ್ನು ಪತ್ತೆ ಮಾಡಿ ಕದ್ದ ಮಾಲನ್ನು ವಶಕ್ಕೆ ಪಡೆದು ಜಿಲ್ಲೆಯ ಒಟ್ಟು ೦೮ ಪ್ರಕರಣಗಳನ್ನು ಭೇದಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಶ್ರಮಿಸಿದ ಅಪರಾಧ ಪತ್ತೆ ತಂಡದ ಅಧಿಕಾರಿ ಸಿಬ್ಬಂದಿಯವರನ್ನು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಚಿಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.
Man arrested for stealing from temples: Rs 1 lakh seized