ಬಾಳೆಹೊನ್ನೂರು: ಮಾರ್ಚ್ 10ರಿಂದ 14ರವರೆಗೆ ನಡೆಯಲಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಸಂದರ್ಭದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ತಿಳಿಸಿದರು.
10ರಂದು ವೀರಗಾಸೆ– ಪುರವಂತರ ಸಮ್ಮೇಳನವನ್ನು ಎಡೆಯೂರು ಕ್ಷೇತ್ರದ ರೇಣುಕಶಿವಾಚಾರ್ಯರು ಉದ್ಘಾಟಿ ಸಲಿದ್ದು, ಅತಿಥಿಗಳಾಗಿ ಶಾಸಕ ಎಚ್.ಡಿ. ತಮ್ಮಯ್ಯ, ಜಗದೀಶ ಗುಡಗುಂಟಿಮಠ, ಮುಖಂಡ ಮಂಜುನಾಥ ಕುನ್ನೂರು, ವಾಣಿಜ್ಯ ತೆರಿಗೆ ಅಧಿಕಾರಿ ಭುವನೇಶ್ವರಿ ಪಾಟೀಲ ಭಾಗವಹಿಸಲಿದ್ದು, ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಎಂ.ಬಸವರಾಜ್ ‘ರಂಭಾಪುರಿ ಬೆಳಗು’ ಮಾಸ ಪತ್ರಿಕೆ ಬಿಡುಗಡೆ ಮಾಡುವರು.
11ರಂದು ಬೆಳಿಗ್ಗೆ 11 ಗಂಟೆಗೆ ನರಸಿಂಹರಾಜಪುರ ತಾಲ್ಲೂಕು ಪತ್ರಕರ್ತರ ಸಂಘದಿಂದ ಕೃಷಿ ಸಮ್ಮೇಳನ, ಕಾಫಿ-ಅಡಿಕೆ ಬೆಳೆಗಾರರ ಹಿತ ಚಿಂತನ ಮಂಥನ ಸಮಾರಂಭ ನಡೆಯಲಿದ್ದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿ ಸುವರು. ಸಂಜೆ 6.30ಕ್ಕೆ ಕೃಷಿ ಮೇಳದ ಸಮಾರೋಪವನ್ನು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಲಿದ್ದಾರೆ. ರಾಯಚೂರಿನ ಚನ್ನಬಸವಯ್ಯ ಹಿರೇಮಠ ಅವರು ಮಮತಾ ರಾಣಿ ಅವರ ಸಂಶೋಧಿತ ಕೃತಿ ‘ಅವಿಭಜಿತ ಬೆಂಗಳೂರು ಜಿಲ್ಲೆಯ ವೀರಭದ್ರ ಆರಾಧನೆ–ಒಂದು ಅಧ್ಯಯನ’ ಬಿಡುಗಡೆ ಮಾಡುವರು.
12ರಂದು ಬೆಳಿಗ್ಗೆ 11ಕ್ಕೆ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ, ಕ್ಷೇತ್ರನಾಥ ವೀರ ಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಶಿವಾದ್ವೈತ ಸಮಾವೇಶ ನಡೆ ಯಲಿದೆ. ಉದ್ಯಮಿ ವಿಜಯ ಸಂಕೇಶ್ವರ ಕಾರ್ಯಕ್ರಮ ಉದ್ಘಾಟಿಸುವರು. ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಯನ್ನು ರಾಯಚೂರು ಜಿಲ್ಲೆ ಕವಿತಾಳ ಗ್ರಾಮದ ಸಾವಯವ ಕೃಷಿ ತಜ್ಞೆ ಕವಿತಾ ಮಿಶ್ರಾ ಅವರಿಗೆ ಪ್ರದಾನ ಮಾಡಲಾಗುವುದು. ಚನ್ನಬಸವಯ್ಯ ಹಿರೇಮಠ ರಾಯಚೂರು ರಚಿತ ‘ವೀರಶೈವ ರೇಣುಕ ರೇವಣಸಿದ್ಧ ಸತ್ಯ ದರ್ಶನ’ ಕೃತಿಯನ್ನು ಸಾಹಿತ್ಯ ಸಂಶೋಧಕ ಎ.ಸಿ. ವಾಲಿ ಬಿಡುಗಡೆ ಮಾಡುವರು. ಅತಿಥಿಗಳಾಗಿ ಸಚಿವ ಎಂ.ಬಿ. ಪಾಟೀಲ, ಅಭಾವೀ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ, ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಚಿವ ಡಿ.ಎನ್. ಜೀವರಾಜ್, ಕೊಡ್ಲಿಪೇಟೆ ರಾಜೇಶ್ವರಿ ನಾಗರಾಜ್, ಶಿವಮೊಗ್ಗದ ಎಸ್.ಎಸ್. ಜ್ಯೋತಿಪ್ರಕಾಶ್ ಭಾಗವಹಿಸುವರು.
ಸಂಜೆ ಸಂಗೀತ ಸೌರಭ, ನಗೆ ಹಬ್ಬವನ್ನು ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಉದ್ಘಾಟಿಸುವರು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಿ.ಚಿದಾನಂದಪ್ಪ, ಜುಂಜಪ್ಪ ಹೆಗ್ಗಪ್ಪ ನವರ ಪಾಲ್ಗೊಳ್ಳುವರು. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಸೌರಭ, ಹಾಸ್ಯ ಕಲಾವಿದ ಶರಣು ಹಿರೇಮಠ, ಗದುಗಿನ ಜಾನಪದ ಸಂಜೀವಿನಿಯ ಗವಿಸಿದ್ಧಯ್ಯ ಹಳ್ಳಿಕೇರಿಮಠ ಅವರಿಂದ ನಗೆ ಹಬ್ಬ ನಡೆಯಲಿದೆ. 13ರಂದು ಸಂಜೆ ಜಾನಪದ ಮೇಳ ನಡೆಯಲಿದ್ದು, ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸು ವರು. ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್, ಕೊಗಳಿಯ ಎಚ್.ಎಸ್.ಶಂಕರಯ್ಯ, ನಂದಿಬೇವೂರಿನ ವೀರೇಶ, ಸೋಮಲಾಪುರದ ವೀರಣ್ಣ ಅಂಗಡಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
10ರಂದು ಧ್ವಜಾರೋಹಣ ಮತ್ತು ಹರಿದ್ರಾ ಲೇಪನ, 11ರಂದು ದೀಪೋತ್ಸವ ಕುಂಕುಮೋತ್ಸವ, ವೀರಭದ್ರಸ್ವಾಮಿ ಚಿಕ್ಕರಥೋತ್ಸವ, 12ರಂದು ವೀರಭದ್ರಸ್ವಾಮಿ ಮಹಾರಥೋತ್ಸವ, 13ರಂದು ಶಯನೋತ್ಸವ, ಶಿವಾನಂದ ಎಸ್ಟೇಟಿನಲ್ಲಿ ಪೂಜಾ-ಪ್ರಸಾದ, ಕೆಂಡಾರ್ಚನೆ, 14ರಂದು ವಸಂತೋತ್ಸವ, ಭದ್ರಾ ನದಿ ತೀರದಲ್ಲಿ ನಡೆಯುವ ಸುರಗಿ ಸಮಾರಾಧನೆ ಯೊಂದಿಗೆ ಜಾತ್ರಾ ಮಹೋತ್ಸವ ಪೂರ್ಣಗೊಳ್ಳಲಿದೆ ಅವರು ತಿಳಿಸಿದರು.
Jagadguru Renukacharya Jayanti celebration in Balehonnur