ALSO FEATURED IN

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪೌರಸೇವಾ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Spread the love

ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ನಗರಸಭೆ ಆವರಣದಲ್ಲಿ ಪೌರಸೇವಾ ನೌಕರರ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಹಾಗೂ ಕೆಜಿಐಡಿ, ಜಿವಿಎಫ್, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುತ್ತಿರುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ.

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ಅಣ್ಣಯ್ಯ ಮಾತನಾಡಿ, ಮಹಾನಗರ ಪಾಲಿಕೆಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ಕಾಯಂಗೊಳಿಸಲಾಗಿದೆ. ಆದರೆ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಜೊತೆಗೆ ಆರೋಗ್ಯ ವಿಮೆ, ಕೆಜಿಐಡಿ ಸೌಲಭ್ಯಗಳನ್ನು ಕಳೆದ ೩೦ ವರ್ಷಗಳಿಂದ ವಾಟರ್ ಮ್ಯಾನ್‌ಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ನೇರ ಪಾವತಿ ಅಡಿಗೆ ತರಬೇಕೆಂದು ಒತ್ತಾಯಿಸಿದರು.

ಸರ್ಕಾರ ಇಂದು ಸಂಜೆ ವೇಳೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವ ತೀರ್ಮಾನ ಕೈಗೊಂಡು ಭರವಸೆ ನೀಡಿದರೆ ಮುಷ್ಕರವನ್ನು ವಾಪಸ್ ಪಡೆಯುತ್ತೇವೆ. ಇಲ್ಲದಿದ್ದರೆ ಮುಷ್ಕರವನ್ನು ತೀವ್ರತರದಲ್ಲಿ ಮುಂದುವರೆಸುತ್ತೇವೆಂದು ಎಚ್ಚರಿಸಿದ ಅವರು, ಈ ಸಂಬಂಧ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ೪೫ ದಿನಗಳ ಗಡುವು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲದ ಹಿನ್ನೆಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆಂದರು.

ಸಂಘದ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಪೌರ ಸೇವಾ ನೌಕರರು ಎದುರಿಸುತ್ತಿರುವ ಹಲವು ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಪ್ರತೀ ಇಲಾಖೆ, ಸಚಿವರಿಗೆ, ಸರ್ಕಾರಕ್ಕೆ ಸಲ್ಲಿಸಿ ಒತ್ತಾಯಿಸಿದ್ದರೂ ಗಮನಹರಿಸಿಲ್ಲ, ನೇರ ಪಾವತಿ ಮತ್ತು ಗುತ್ತಿಗೆ ಆಧಾರದ ನೌಕರರು, ಮನೆ ಮನೆ ಕಸ ಸಂಗ್ರಹಣೆ ನೌಕರರು ನಗರಸಭೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರನ್ನು ಕಾಯಂ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ತಮ್ಮ ಬೇಡಿಕೆಗಳು ಈಡೇರುವವರೆಗೆ ಮುಷ್ಕರ ಮುಂದುವರೆಸುತ್ತೇವೆ, ಸರ್ಕಾರ ಈ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಸೂಕ್ತ ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.

ನಗರಸಭೆ ಕಚೇರಿ ವ್ಯವಸ್ಥಾಪಕ ರವಿ ಮಾತನಾಡಿ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ೭೪ನೇ ಸಂವಿಧಾನಾತ್ಮಕ ತಿದ್ದುಪಡಿಯಾಗಿದ್ದರೂ ಪೌರ ನೌಕರರಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿದ್ದು, ಕಳೆದ ೫೦ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ನೌಕರರ ನ್ಯಾಯಯುತವಾದ ಬೇಡಿಕೆಗಳು ಈಡೇರಿಲ್ಲ. ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂದು ದೂರಿದರು.

ಪೌರಸೇವಾ ನೌಕರರಿಗೆ ಆರೋಗ್ಯ ವಿಮೆ ನೀಡದೆ ಸರ್ಕಾರ ತಾತ್ಸಾರ ಮನೋಭಾವ ತಾಳುತ್ತಿದೆ. ಕೂಡಲೇ ಪೌರ ನೌಕರರಿಗೆ ಕೆಜಿಐಡಿ ಸೌಲಭ್ಯ ನೀಡಿ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆರ್.ಓ ಶಿವಾನಂದ್, ಸೂಪರ್‌ಡೆಂಟ್ ಲತಾಮಣಿ. ಆರೋಗ್ಯ ನಿರೀಕ್ಷಕರಾದ ವೆಂಕಟೇಶ್, ಈಶ್ವರ್, ನಾಗಪ್ಪ, ರಂಗಪ್ಪ, ಹೊರಗುತ್ತಿಗೆ ನೌಕರರಾದ ಕೃಷ್ಣ, ಮೂರ್ತಿ, ಪ್ರಸನ್ನ ಇತರರು ಉಪಸ್ಥಿತರಿದ್ದರು.

Indefinite strike by civil service employees demanding fulfillment of various demands

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version