ALSO FEATURED IN

ಜನೌಷಧಿ ಕೇಂದ್ರ ಸ್ಥಗಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ

Spread the love

ಚಿಕ್ಕಮಗಳೂರು: : ಬಡ ರೋಗಿಗಳ ಪಾಲಿಗೆ ವರದಾನವಾಗಿರುವ ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಮಲ್ಲೇಗೌಡ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿಗಳು, ಆರೊಗ್ಯ ಸಚಿವರು ಬಡವರ ವಿರೋಧಿ ಧೋರಣೆ ತಳೆದಿದ್ದಾರೆಂದು ಆರೋಪಿಸಿದರಲ್ಲದೆ, ಕೂಡಲೇ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ, ದೀನ, ದುರ್ಬಲರು, ಬಡವರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿ ಆಸರೆಯಾಗಿದ್ದನ್ನು ಸಹಿಸದ ರಾಜ್ಯ ಸರ್ಕಾರ ಜನೌಷಧಿ ಕೇಂದ್ರ ಮುಚ್ಚಿಸಿ ಜನರಿಗೆ ಇನ್ನಷ್ಟು ಬರೆ ಎಳೆಯಲು ಮುಂದಾಗಿವೆ ಎಂದು ಆರೋಪಿಸಿದರು.

ನರೇಂದ್ರ ಮೋದಿ ಜನಪರ ಆಡಳಿತವನ್ನು ಜನರ ಮನಸ್ಸಿನಿಂದ ಅಳಿಸುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಹುಡುಕುತ್ತಿದೆ. ಹಾಗೂ ಆಸ್ಪತ್ರೆಗಳಲ್ಲಿ ಅಳವಡಿಸಿರುವ ಕೇಂದ್ರ ಸಕಾರದ ಫ್ಲೆಕ್ಸ್‌ಗಳನ್ನು ತೆಗೆದು ಹಾಕುವುದು ಸರ್ಕಾರದ ಹುನ್ನಾರ. ಸರ್ಕಾರಿ ಕಚೇರಿಗಳು ಸಾರ್ವಜನಿಕ ಆಸ್ತಿ. ಕಾಂಗ್ರೆಸ್ಸಿಗೆ ಬರೆದುಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಜನರ ಸಮಯಕ್ಕೆ ಆರೋಗ್ಯ ಸುಧಾರಿಸಲು ಮೋದಿ ಸರ್ಕಾರ ಕಡಿಮೆ ವೆಚ್ಚದಲ್ಲಿ ಔಷಧಿ, ಶಸ್ತ್ರಚಿಕಿತ್ಸೆಗಾಗಿ ಪ್ರತಿಯೊಬ್ಬರಿಗೆ ಮೂರ್‍ನಾಲ್ಕು ಲಕ್ಷ ರೂ. ಆರ್ಥಿಕ ಸಹಾಯ ನೀಡಿದೆ. ಆದರೆ ರಾಜ್ಯದಲ್ಲಿ ಪಹಣಿ, ಹಾಲು, ಪೆಟ್ರೋಲ್ ಸೇರಿದಂತೆ ಇದೀಗ ರೋಗಿಗಳನ್ನು ಬಿಡದೇ ಖಾಸಗೀ ಮೆಡಿಕಲ್ ಶಾಪ್‌ಗಳಲ್ಲಿ ಖರೀದಿಸಬೇಕೆಂದು ರಾಜ್ಯ ಸರ್ಕಾರ ನಿರ್ಣಯಿಸಿ ಹಗಲು ದರೋಡೆ ಮಾಡುತ್ತಿದೆ ಎಂದರು.

ರಾಜ್ಯಸರ್ಕಾರ ಜನಸಾಮಾನ್ಯರ ಕಾಳಜಿಯಿದ್ದಲ್ಲಿ ಆರನೇ ಗ್ಯಾರಂಟಿಯಾಗಿ ಉಚಿತ ಶಿಕ್ಷಣ, ಆರೋಗ್ಯ ಸೇವೆಯನ್ನು ಒದಗಿಸಲಿ. ಜೊತೆಗೆ ಪ್ರತಿ ಖಾಸಗೀ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಲಿ ಇದನ್ನು ಮಾಡದೇ ಪ್ರತಿದಿನ ರಾಜ್ಯದ ಜನ ತಲೆ ತಗ್ಗಿಸುವಂತಹ ಕೆಲಸಗಳನ್ನೇ ಮಾಡುತ್ತಿದೆ ಎಂದು ಆರೋಪಿಸಿದರು.

ಕೂಡಲೇ ರಾಜ್ಯಸರ್ಕಾರ ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಲು ಕೈಗೊಂಡಿರುವ ನಿರ್ಣಯವನ್ನು ಹಿಂಪಡೆಯದಿದ್ದಲ್ಲಿ ರಾಜ್ಯಾದ್ಯಂತ ಭಾಜಪ ಉಗ್ರವಾದ ಪ್ರತಿಭಟನೆ ನಡೆಸುತ್ತದೆ. ಜೊತೆಗೆ ಪ್ರಧಾನಿ ಮೋದಿಯವರ ಫ್ಲೆಕ್ಸ್‌ಗಳ ತೆರವಿಗೆ ಮುಂದಾದರೆ ರಾಜ್ಯಸರ್ಕಾರ ಫ್ಲೆಕ್ಸ್‌ಗಳು ಬೆಂಕಿಗಾಹುತಿ ಯಾಗಲಿದೆ ಎಂದು ಎಚ್ಚರಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಪ್ರೇಮ್‌ಕುಮಾರ್ ಮಾತನಾಡಿ ಗ್ಯಾರಂಟಿ ಹೆಸರಿನಲ್ಲಿ ರಾಜ್ಯಸರ್ಕಾರ ಔಷಧಿ ದಂಧೆಗೆ ಮುಂದಾಗಿದೆ. ಬಡವರು, ಮಧ್ಯಮವರ್ಗದವರ ಅನುಕೂಲಕ್ಕೆ ತೆರೆದಿರುವ ಜನೌಷಧಿ ಕೇಂದ್ರ ಗಳಲ್ಲಿ ಸುಮಾರು ೧೫೦೦ಕ್ಕೂ ಹೆಚ್ಚು ಔಷಧಿಗಳು ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ದೊರಕುತ್ತಿರುವುದನ್ನು ಮುಚ್ಚಿಸಲು ಹೊರಟಿರುವುದು ನ್ಯಾಯಸಮಂಜಸವೇ ಎಂದು ಪ್ರಶ್ನಿಸಿದರು.

ಭಾರತ ಸರ್ಕಾರ ಜಗತ್ತಿನ ಬಹುಪಾಲು ರಾಷ್ಟ್ರಗಳಿಗೆ ಔಷಧಿಗಳನ್ನು ಪೂರೈಸಿ ಸ್ಪಂದಿಸುತ್ತಿದೆ. ಆದರೆ ರಾಜ್ಯದಲ್ಲಿ ತದ್ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಲು ನಿರ್ಧರಿಸಿರುವು ಸು ಸೂಕ್ತವಲ್ಲ. ಈಗಾಗಲೇ ರಾಜ್ಯದ ಜನತೆ ಬೆಲೆಏರಿಕೆಯಿಂದ ಕಂಗಾಲಾಗಿದ್ದು ಇದೀಗ ರೋಗಿಯ ಮೇಲೆ ಹೊರೆ ಹೆಚ್ಚಿಸಲು ಮುಂದಾಗುತ್ತಿದೆ ಎಂದರು.

ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ ಕಡಿಮೆ ದರದಲ್ಲಿ ಲಭ್ಯವಾಗುತ್ತಿದ್ದ ಜನೌಷಧಿ ಕೇಂದ್ರಗಳಿಗೆ ಕೊಡಲಿಪೆಟ್ಟು ಹಾಕುತ್ತಿರುವ ರಾಜ್ಯಸರ್ಕಾರ ನಡೆ ಖಂಡನೀಯ. ಮೊದಲು ಸರ್ಕಾರಿ ಆಸ್ಪತ್ರೆಗಳಲ್ಲಿ ಮೆಡಿಕಲ್ ಸೌಲಭ್ಯ ಸಂಪೂರ್ಣವಾಗಿದೆಯೇ ಎಂದು ತಿಳಿದು ಸರಿಪಡಿಸ ಬೇಕೇಹೊರತು ಜನೌಷಧಿ ಕೇಂದ್ರಗಳನ್ನು ತೆರವಿಗೆ ಮುಂದಾಗಿರುವುದು ನಾಚಿಕೇಡಿತನ ಸಂಗತಿ ಎಂದರು.

ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್ ಮಾತನಾಡಿ ಖಾಸಗಿ ಮೆಡಿಕಲ್ ಶಾಪ್‌ಗಳಲ್ಲಿ ೧೦೦ ರೂ.ಗಳ ಬೆಲೆಯಲ್ಲಿ ಲಭ್ಯವಾಗುವ ಔಷಧಗಳು, ಜನೌಷಧಿ ಕೇಂದ್ರದಲ್ಲಿ ಕೇವಲ ೧೦ ರೂ.ಗೆ ಸಿಗುತ್ತಿದೆ. ಹೀಗಾಗಿ ಉತ್ತಮ ಔಷಧಿ ಕೇಂದ್ರಗಳನ್ನು ತೆರವಿಗೆ ನೇರವಾಗಿ ನಮ್ಮ ವಿರೋಧವಿದೆ ಎಂದರು.

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತಾರಾಮ ಭರಣ್ಯ, ಓಬಿಸಿ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ತಾ.ಪಂ. ಮಾಜಿ ಅಧ್ಯಕ್ಷ ನೆಟ್ಟೆಕೆರೆಹಳ್ಳಿ ಜಯಣ್ಣ, ನಗರಸಭಾ ಸದಸ್ಯ ಕಾಯಿ ರವಿ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮುಖಂಡರುಗಳಾದ ಡಾ.ನರೇಂದ್ರ, ಸಚ್ಚಿನ್‌ಗೌಡ, ಹೆಚ್.ಕೆ.ಕೇಶವಮೂರ್ತಿ, ಬಸವರಾಜ್, ಮೋಹನ್, ರೇವನಾಥ್, ಎಸ್‌ಡಿಎಂ ಮಂಜು ಮತ್ತಿತರರು ಪ್ರತಿಭನೆಯಲ್ಲಿ ಭಾಗವಹಿಸಿದ್ದರು.

BJP protests against the closure of Janaushadhi Kendra

Facebook
X
WhatsApp
Telegram
Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

Spread the love

ಚಿಕ್ಕಮಗಳೂರು: ಬಹಳರ್ಷ ವರ್ಷಗಳ ಹಿಂದೆ ಬಯಲು ಸೀಮೆಯ ಜನರ ಜೀವನಾಡಿಯಾಗಿದ್ದು ಇದೀಗ ಜೀರ್ಣಾವಸ್ಥೆಯಲ್ಲಿರುವ ಸಖರಾಯಪಟ್ಟಣ ಸಮೀಪ ಜಾನ್ಸಾಲೆ ಗ್ರಾಮದ ಲಕ್ಸಾಗರ…

Spread the love

ಚಿಕ್ಕಮಗಳೂರು: ಮುಂದಿನ ಎರಡು ವರ್ಷದಲ್ಲಿ ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಆರಂಭವಾಗಲಿದೆ ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.…

[t4b-ticker]
Exit mobile version