ಚಿಕ್ಕಮಗಳೂರು: ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಎಲ್ಲರೂ ಕಾನೂನು ಪಾಲಕರಾದರೆ ಯಾವುದೆ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವಿ.ಹನುಮಂತಪ್ಪ ಹೇಳಿದರು.
ಅವರು ಶ್ರೀನಿವಾಸ ನಗರದಲ್ಲಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಅರಣ್ಯ ಹುತಾತ್ಮ ದಿನಾಚರಣೆಯಲ್ಲಿ ದಿ.ಪಿ.ಶ್ರೀನಿವಾಸ್ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿ ಮಾನವನ ದುರಾಸೆಯಿಂದ ವನ ಮತ್ತು ವನ್ಯಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಸಂಬಂದ ಅರಣ್ಯ ಸಂಪತ್ತನ್ನು ನಾಶ ಮಾಡುತ್ತಿರುವುದರಿಂದ ಕಾಡಿನಲ್ಲಿರಬೇಕಾದ ಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಅವುಗಳ ಆವಾಸ ಸ್ಥಾನವನ್ನು ಮನುಷ್ಯರು ಆಕ್ರಮಿಸುತ್ತಿರುವ ಸಲುವಾಗಿ ದಿಕ್ಕುತೋಚನೆ ನಗರಪ್ರದೇಶದತ್ತ ದಾವಿಸುತ್ತಿದೆ. .
ಪ್ರಾಣಿ, ಪಕ್ಷಿಗಳು ಸೇರಿದಂತೆ ಇರುವೆಯಿಂದ ಆನೆಯವರೆಗೂ ಎಲ್ಲವೂ ವಾಸಿಸುವ ಸ್ಥಳ ಅರಣ್ಯ ಪ್ರದೇಶಗಳು, ಅವುಗಳು ಉಳಿದರೆ ಮಾತ್ರವೇ ನಾವುಗಳು ಉಳಿಯಲು ಸಾಧ್ಯ. ನಮ್ಮ ರಾಜ್ಯದ ಓರ್ವ ದಕ್ಷ, ನಿಷ್ಠಾವಂತ ಪ್ರಾಮಾಣಿಕ ಅರಣ್ಯಾಧಿಕಾರಿ ಪಿ.ಶ್ರೀನಿವಾಸ್ ರವರು ಕಾಡುಗಳ್ಳ ವೀರಪ್ಪನ್ನ ಕುತಂತ್ರಕ್ಕೆ ಬಲಿಯಾಗಿ ಹುತಾತ್ಮ ರಾಗಿದ್ದಾರೆ ಇಂತಹವರು ಸಾಕಷ್ಟು ಮಂದಿ ಇದ್ದಾರೆ. ಅರಣ್ಯ ಉಳಿವಿಗಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಮಾಡಲಾಗುತ್ತಿದೆ. ಇವರೆಲ್ಲಾ ಇಡೀ ಜೀವ ಸಂಕುಲ ಉಳಿವಿಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡಿದರವರು ಎಂದರು.
ಹುತಾತ್ಮ ದಿನಾಚರಣೆ ಎಂದರೆ ಮನಸ್ಸಿನಲ್ಲಿ ಒಂದುರೀತಿ ವೇದನೆ ಮತ್ತು ಭಾರ ಕಾರಣ ಲಕ್ಷಾಂತರ ಮಂದಿ ದೇಶವನ್ನು ಸಂರಕ್ಷಣೆ ಮಾಡಬೇಕೆಂಬ ದೃಷ್ಟಿಯಿಂದ ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಗಡಿಭಾಗದಲ್ಲಿ ನಿಂತು ಪ್ರಾಣಾರ್ಪಣೆ ಮಾಡುವ ಸೈನಿಕರು ಒಂದೆಡೆ ಇದ್ದಾರೆ. ದೇಶದ ಒಳಗಡೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕೆಂಬ ದೃಷ್ಟಿಯಿಂದ ನಮ್ಮನ್ನು ಸಂರಕ್ಷಣೆ ಮಾಡುವ ಪೊಲೀಸ್ ವ್ಯವಸ್ಥೆ ಮತ್ತೊಂಡೆ ಕರ್ತವ್ಯ ನಿರ್ವಹಿಸುತ್ತಿದೆ ಇವುಗಳನ್ನು ಹೊರತು ಪಡಿಸಿ ದೇಶದಲ್ಲಿ ಮನುಷ್ಯನನ್ನು ಒಳಗೊಂಡಂತೆ ಎಲ್ಲಾ ಜೀವ ಸಂಕುಲಗಳನ್ನು ವಿಶ್ವಾಸ ಮತ್ತು ಶಾಂತಿಯಿಂದ ತಮ್ಮ ಬದುಕನ್ನು ನಡೆಸಿಕೊಂಡಿರಬೇಕೆಂಬ ತ್ಯಾಗ, ಬಲಿದಾನವನ್ನು ಮಾಡುವಂತವರು ಕೇವಲ ಅರಣ್ಯ ಇಲಾಖೆ ಯವರು ಮಾತ್ರ ಎಂದರು.
ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ್ ಕ್ಷೀರ್ಸಾಗರ್ ಮಾತನಾಡಿ, ರಾಜ್ಯದಲ್ಲಿರುವ ೨೪ ಇಲಾಖೆಗಳಲ್ಲಿ ೨೩ ಇಲಾಖೆಗಳು ಈ ಪೀಳಿಗೆಗೆ ಕೆಲಸ ಮಾಡುತ್ತಿದೆ ಆದರೆ ಮುಂದಿನ ಪೀಳಿಗೆಗೆ ಕಾರ್ಯ ನಿರ್ವಹಿಸುತ್ತಿರುವುದು ನಮ್ಮ ಅರಣ್ಯ ಇಲಾಖೆ ಮಾತ್ರ ಎಂಬುದು ಹೆಮ್ಮೆ . ಅರಣ್ಯ ಉಳಿವಿಗಾಗಿ ಹಗಲು ರಾತ್ರಿ ಎನ್ನದೆ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭ ಬಲಿದಾನವಾದವರ ನೆನಪಿಗಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ ಹುತಾತ್ಮರ ಸಂಖ್ಯೆ ಮುಂದೆ ಹೆಚ್ಚದಂತಾಗಲಿ ಎಂದರು.
ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಾಗಿರುವ ಬಗ್ಗೆ ದೇಶಕ್ಕೆ ತಿಳಿದಿದೆ, ಉತ್ತರಾಖಂಡ್, ಜಮ್ಮುವಿನ ಗುಡ್ಡಗಾಡು ಪ್ರದೇಶದಲ್ಲಾದ ಪ್ರವಾಹಗಳಾಗಳು, ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಾದ ಭೂ ಕುಸಿತಕ್ಕೆ ಪರಿಸರದ ಮೇಲಾಗುತ್ತಿರುವ ಹಾನಿಯೇ ಕಾರಣ. ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಜನರಲ್ಲಿ ಬಹಳಷ್ಟು ಅರಿವು ಮೂಡಿಸಿದ್ದಾರೆ. ಪರಿಸರ ಉಳಿವಿಗಾಗಿ ಬೀಷ್ಣೋಯಿ ಸಮಾಜದವರು ಹೋರಾಟ ಮಾಡಿ ಬಹಳಷ್ಟು ಮಂದಿ ಪ್ರಾಣತ್ಯಾಗಮಾಡಿದ್ದಾರೆ ಅವರ ಕೊಡುಗೆ ದೊಡ್ಡದಿದೆ ಎಂದರು.
ಕರ್ತವ್ಯದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥ ಪುಷ್ಪಗುಚ್ಚ ಸಮರ್ಪಿಸಲಾಯಿತು. ಉಪ ವಲಯಾರಣ್ಯಾಧಿಕಾರಿ ಎಂ.ಪಿ.ಸಂತೋಷ್ಕುಮಾರ್ ನೇತೃತ್ವದಲ್ಲಿ ಫರೇಡ್ ನಡೆಸಿ ಪೊಲೀಸ್ ತಂಡದವರಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಹುತಾತ್ಮರಿಗೆ ಗೌರವ ಸಲ್ಲಿಸಲಾಯಿತು. ಡಿಸಿಎಫ್ ರಮೇಶ್ ಬಾಬು ಹುತಾತ್ಮರ ಹೆಸರುಗಳನ್ನು ಸ್ಮರಿಸಿದರು.
ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ಧೇಶಕ ಪುಲ್ಕಿತ್ ಮೀಣಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಸಿ.ಆನಂದ್, ಎನ್.ರಮೇಶ್ ಬಾಬು, ಕೆ.ಟಿ.ಬೋರಯ್ಯ , ಆಕರ್ಷ್, ಕೆ.ಎಸ್.ಮೋಹನ್, ವಲಯಾರಣ್ಯಾಧಿಕಾರಿ ಎನ್,ವಿ.ತನೂಜ್ ಕುಮಾರ್ ಇದ್ದರು. ರಾಕೇಶ್ ನಿರೂಪಿಸಿದರು.
Human and animal species can survive only if there is forest wealth.