ALSO FEATURED IN

ಗೋಹಂತಕರನ್ನು ಹದ್ದುಬಸ್ತಿನಲ್ಲಿಡುವ ಕೆಲಸವ ಹಿಂದೂ ಸಮಾಜ ಬರುತ್ತದೆ

Spread the love

ಚಿಕ್ಕಮಗಳೂರು: ಸಂಪೂರ್ಣ ಗೋಹತ್ಯೆ ಕಾಯ್ದೆ ಜಾರಿಯಲ್ಲಿದೆ. ಗೋಹಂತಕರನ್ನು ಪೊಲೀಸರು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಮಾಡದೇ ಇದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ. ಹಿಂದೂ ಸಮಾಜಕ್ಕೆ ಆ ತಾಕತ್ತು ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಇತ್ತಿಚೆಗೆ ನಗರದಲ್ಲಿ ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಸೇರಿದಂತೆ ಗೋಹತ್ಯೆ, ಲವ್‌ಜಿಹಾದ್ ನಂತಹ ಪ್ರಕರಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಆಜಾದ್ ಪಾರ್ಕ್ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸಿದರೆ ಗೋರಕ್ಷಣೆಯಂತಹ ಕಾರ್ಯಕ್ಕೆ ಬಜರಂಗದಳದ ಕಾರ್ಯಕರ್ತರು ಮುಂದಾಗುವುದಿಲ್ಲ. ಗೋಹಂತಕರಿಂದ ಹಫ್ತಾ ವಸೂಲಿ ಮಾಡಿ ಸುಮ್ಮನಾದರೆ ನಿಮ್ಮ ಹೆಂಡತಿ, ಮಕ್ಕಳು ಸುಖವಾಗಿರಲು ಸಾಧ್ಯವಿಲ್ಲ ಎಂದರು.

ಉಪ್ಪಳ್ಳಿ ಬಳಿ ಅಕ್ರಮವಾದ ಮಸೀದಿ ನಿರ್ಮಾಣವಾಗುತ್ತಿದೆ. ಇಂದಿಗೂ ನ್ಯಾಯಬದ್ಧವಾದ ಅನುಮತಿ ಪಡೆದಿಲ್ಲ. ಜಿಲ್ಲಾಡಳಿತ ನಿಲ್ಲಿಸದೇ ಇದಲ್ಲಿ ನಾವೇ ನಿಲ್ಲಿಸಬೇಕಾಗಬಹುದು. ಜಿಲ್ಲಾಡಳಿತ ಕಾನೂನು ಪಾಲಿಸುವಂತೆ ನೋಡಿಕೊಂಡರೆ ಕೋಮು ಗಲಭೆ ಆಗುವುದಿಲ್ಲ ಎಂದು ಹೇಳಿದರು.

ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಗೋಹತ್ಯೆಯನ್ನು ನಿಷೇಧ ಮಾಡಿದ್ದರೂ, ಅಕ್ರಮ ಕಸಾಯಿಖಾನೆಗಳು ನಡೆಯುತ್ತಿವೆ ಎಂದರೆ ಅದು ಸಂವಿಧಾನ ವಿರೋಧಿ ಕೃತ್ಯ. ಅದನ್ನು ಮಾಡುತ್ತಿರುವವರಿಗೆ ಬುದ್ಧಿ ಕಲಿಸಬೇಕು ಎಂದು ಒತ್ತಾಯತಿಸುವುದು ಅಪರಾಧವೇ ಎಂದು ಪ್ರಶ್ನಿಸಿದರು.

ನನ್ನದು ಬಸವ ಧರ್ಮ, ಅಂಬೇಡ್ಕರ್ ವಾದ, ಗಾಂಧಿ ಮಾರ್ಗ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ ಬಸವಣ್ಣನವರು ಕಳಬೇಡ, ಕೊಲಬೇಡ ಎಂದು ಹೇಳಿದ್ದಾರೆ. ಹಾಗಿದ್ದರೆ ಗೋಹತ್ಯೆಯನ್ನು ಮುಖ್ಯಮಂತ್ರಿ ಹೇಗೆ ಸಮರ್ಥನೆ ಮಾಡುತ್ತಾರೆ. ದಯೆ ಇರಬೇಕು ಸಕಲ ಜೀವಾತ್ಮರಿಗೂ ಎಂದು ಬಸವಣ್ಣ ಹೇಳಿದ್ದಾರೆ. ಆದರೆ ಬೆಂಗಳೂರಿನಲ್ಲಿ ಗೋವಿನ ಕೆಚ್ಚಲು ಕತ್ತರಿಸಿ ರಕ್ತ ಹರಿಸಿದರು ಆದರೆ ಬಸವ ಧರ್ಮ ಪಾಲಿಸುವ ಮುಖ್ಯಮಂತ್ರಿಗಳಿಗೆ ಕಣ್ಣೀರು ಬರಲಿಲ್ಲ ಎಂದರು.

ಭಟ್ಕಳದಲ್ಲಿ ಗಬ್ಬದ ಹಸುವಿಗೆ ಚೂರಿ ಹಾಕಿ ಭ್ರೂಣವನ್ನು ಹೊರತೆಗೆದರು ಮುಖ್ಯಮಂತ್ರಿಗಳಿಗೆ ಸಂಕಟವಾಗಲಿಲ್ಲ. ಜಿಲ್ಲೆಯ ಕಡೂರಿನ ಕಲ್ಕೆರೆ, ಚೌಳಹಿರಿಯೂರು, ಕಳಸ, ಕೊಟ್ಟಿಗೆಹಾರ, ಶೃಂಗೇರಿ, ಚಿಕ್ಕಮಗಳೂರು, ಕಳಸಗಳಲ್ಲಿ ಅಕ್ರಮ ಗೋಸಾಗಣೆ, ಗೋಹತ್ಯೆ ನಿರಂತರವಾಗಿ ನಡೆಯುತ್ತಿದೆ. ಇದನ್ನೆಲ್ಲ ಮಾಡಿದ್ದು ಮುಖ್ಯಮಂತ್ರಿಗಳು ಶಾಂತಿಧೂತರು ಎಂದು ಕರೆದ ಜನರೇ ಆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳು ಹೇಳಿದ ಶಾಂತಿಧೂತರೇ ಗೋಹಂತಕರು, ಗೋವಿನ ಕೆಚ್ಚಲು ಕತ್ತರಿಸಿದವರು. ದಯೆ ಇಲ್ಲದವರನ್ನು ನೋಡಿಕೊಂಡು ಸುಮ್ಮನಿದ್ದು, ಅದನ್ನು ತಡೆದವರ ಮೇಲೆ ಕೇಸು ದಾಖಲಿಸಿದ್ದೀರಿ. ಇನ್ನೆರಡುವರೆ ವರ್ಷ ತಾಳಿಕೊಳ್ಳಿ ನೀವು ಹಾಕಿರುವ ಎಲ್ಲಾ ಕೇಸುಗಳನ್ನು ವಾಪಾಸ್ ತೆಗೆಸುತ್ತೇವೆ ಎಂದರು.

ಮುಂದೆ ನಮ್ಮ ಸರ್ಕಾರ ಬಂದ ನಂತರ ಜಿಲ್ಲೆಗೊಂದು ಜೆಸಿಬಿ ಪಡೆ ತಯಾರು ಮಾಡುತ್ತೇವೆ. ಅಲ್ಲೇ ಡ್ರಾ, ಅಲ್ಲೇ ಬಹುಮಾನ ಎನ್ನುವಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಕಲ್ಲು ಹೊಡೆದರೆ ಜೆಸಿಬಿ ಬರುತ್ತದೆ. ಇವರಾರು ಶಾಶ್ವತವಾಗಿ ಇರುವುದಿಲ್ಲ ಎಂದರು.

ಜಿಲ್ಲಾಡಳಿತ ಅಕ್ರಮ ಕಸಾಯಿ ಕೇಂದ್ರಗಳನ್ನು ಬಂದ್ ಮಾಡಿಸಬೇಕು. ಇಲ್ಲವಾದಲ್ಲಿ ನೆಲದ ಕಾನೂನು, ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಹಿಂದೂ ಸಮಾಜ ಹಿಂದುಳಿಯುವುದಿಲ್ಲ. ನಮಗೆ ಖಾಜಿ ನ್ಯಾಯ ಬೇಡ, ಅಂಬೇಡ್ಕರ್ ಕೊಟ್ಟ ಸಂವಿಧಾನದ ಪ್ರಕಾರ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ತಾಯಿಯ ಸಮಾನವಾದ ಗೋಮಾತೆಯ ಮೇಲೆ ದಾಳಿಗಳು ನಡೆದಾಗ ಯಾವ ತ್ಯಾಗಕ್ಕಾದರೂ ಸಿದ್ಧರಿರಬೇಕು. ನಾವೂ ಸಹ ರಾಜೀನಾಮೆ ಕೊಟ್ಟು ಹೊರಬರಲು ಸಿದ್ಧರಿದ್ದೇವೆ ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನಮಗೆ ದೇಶಭಕ್ತಿಯನ್ನೇ ಹೇಳಿಕೊಟ್ಟಿದೆ. ನಮಗೆ ಹಿಂದುತ್ವ, ದೇಶ ಮೊದಲು ಮಿಕ್ಕೆಲ್ಲವೂ ಗೌಣ ಎಂದು ಹೇಳಿದರು.
ಹಿಂದೂಗಳು ಸಂಘಟಿತರಾಗಿ ಪ್ರತಿ ಮನೆಯಿಂದ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗಿ ಬೀದಿಗೆ ಬರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಹಿಂದೆ ಔರಂಗಜೇಬನ ಆಡಳಿತದಲ್ಲಿ ತುಘಲಕ್ ದರ್ಬಾರ್ ಇತ್ತು ತಲೆಗಂದಾಯ ಕೊಟ್ಟರೆ ಮಾತ್ರ ಹಿಂದೂಗಳು ಬದುಕಲು ಅವಕಾಶವಿತ್ತು. ಅದೇ ರೀತಿ ಆಡಳಿತವನ್ನು ರಾಜ್ಯದಲ್ಲೂ ಮುಖ್ಯಮಂತ್ರಿಗಳು ತರಲು ಹೊರಟಿದ್ದಾರೆ. ಹಿಂದೂ ಎಂದು ಹೇಳಿಕೊಳ್ಳು ಆಗದ ಸ್ಥಿತಿ ಬಂದಿದೆ.

ಗೋವಿಗೆ ಬೆಂಕಿ ಕೊಟ್ಟು ವಿಕೃತಿ ಮೆರೆದ ಕೃತ್ಯ ನಗರದಲ್ಲಿ ನಡೆದಿದೆ. ಅದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಅಪ್ರಾಪ್ತನಿಂದ ಈ ಕೆಲಸ ನಡೆದಿದ್ದರೆ ಅದಕ್ಕೆ ಕುಮ್ಮಕ್ಕು ಕೊಟ್ಟವರನ್ನು ಯಾಕೆ ಬಂಧಿಸಿಲ್ಲ ಹಾಗಿದ್ದರೆ ಗೋವಿನ ಹಿಂಸೆಯನ್ನು ತಡೆದವರ ಮೇಲೆ ಏಕೆ ಕೇಸು ದಾಖಲಿಸಿದ್ದೀರಿ ಎಂದು ಪ್ರಶ್ನಿಸಿದರು.

ನಗರದ ಕತ್ರಿಮಾರಮ್ಮ ದೇವಸ್ಥಾನದ ಬಳಿ ಗೋಪೂಜೆ ನೆರವೇರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಸಿ.ಟಿ.ರವಿ ಚಾಲನೆ ನೀಡಿದರು. ಆಜಾದ್ ಪಾರ್ಕ್‌ವರೆಗೆ ಭಗವಾಧ್ವಜ ಹಿಡಿದು ಪ್ರತಿಭಟನೆ ನಡೆಸಲಾಯಿತು. ಗೋಹಂತಕರ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಶ್ರಿಕಾಂತ್ ಪೈ, ಬಜರಂಗದಳದ ಶ್ಯಾಂ ವಿ.ಗೌಡ, ರಂಗನಾಥ್, ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

Hindu society is tasked with keeping cow killers in check.

Facebook
X
WhatsApp
Telegram
Spread the love

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ…

Spread the love

ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ದರ್ಶನ ಪಡೆಯಲು ಭಕ್ತರು ಬರಿಗಾಲಿನಲ್ಲೇ ದಣಿವರಿಯದೆ ಬೆಟ್ಟ ಹತ್ತಿದರು. ಮಳೆ, ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು…

Spread the love

ಚಿಕ್ಕಮಗಳೂರು:  ಅಪರಾಧವನ್ನು ದ್ವೇಷಿಸಬೇಕು ಹೊರತು, ಅಪರಾಧಿಯನ್ನಲ್ಲ. ಆಕಸ್ಮಿಕವಾಗಿ ಪೆಟ್ಟು ತಿಂದು ಶಿಕ್ಷೆಗೆ ಗುರಿಯಾಗುವ ವ್ಯಕ್ತಿಗಳು, ಬಿಡುಗಡೆ ಬಳಿಕ ಸಾತ್ವಿಕ ಜೀವನದಡಿ…

Spread the love

ತರೀಕೆರೆ: ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ವಿವಿಧ…

Spread the love

ಚಿಕ್ಕಮಗಳೂರು: ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ದರ್ಶನ ಪಡೆಯಲು ಭಕ್ತರು ಬರಿಗಾಲಿನಲ್ಲೇ ದಣಿವರಿಯದೆ ಬೆಟ್ಟ ಹತ್ತಿದರು. ಮಳೆ, ಕಾಡುಮೇಡು, ತಗ್ಗುದಿಣ್ಣೆ, ಮೊನಚು, ಬೆಣಚು…

Spread the love

ಚಿಕ್ಕಮಗಳೂರು:  ಅಪರಾಧವನ್ನು ದ್ವೇಷಿಸಬೇಕು ಹೊರತು, ಅಪರಾಧಿಯನ್ನಲ್ಲ. ಆಕಸ್ಮಿಕವಾಗಿ ಪೆಟ್ಟು ತಿಂದು ಶಿಕ್ಷೆಗೆ ಗುರಿಯಾಗುವ ವ್ಯಕ್ತಿಗಳು, ಬಿಡುಗಡೆ ಬಳಿಕ ಸಾತ್ವಿಕ ಜೀವನದಡಿ…

[t4b-ticker]
Exit mobile version