ಚಿಕ್ಕಮಗಳೂರು: ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ಮತ್ತು ಕರ್ನಾಟಕ ಬೆಳಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣನವರ ನೇತೃತ್ವದಲ್ಲಿ ಮೂಡಿಗೆರೆ ತಾಲ್ಲೂಕು ಬೆಳಗಾರರ ಸಂಘದ ಕಟ್ಟಡದಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲೆಯ ೧೦ ಸಹಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಕೆ.ರತೀಶ್ ಕುಮಾರ್ರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕಾಫಿ ಮಂಡಳಿ ಅಧ್ಯಕ್ಷ ಎಂಜೆ ದಿನೇಶ್ ಕಾಫಿ, ಕಾಳು ಮೆಣಸು, ಅಡಿಕೆ ಬೆಳೆಗಾರರ ಹಿತ ದೃಷ್ಟಿಯಿಂದ ಚಿಕ್ಕಮಗಳೂರು ಜಿಲ್ಲೆಗೆ ನೂತನ ಸಂಘಟನೆ ಅತ್ಯವಶ್ಯಕವಾಗಿದ್ದು, ಸಮಸ್ಯೆಗೆ ಸಂಘಟನೆಯೊಂದೆ ಪರಿಹಾರವಾಗಿದ್ದು,ಎಲ್ಲ ಬೆಳೆಗಾರರ ಹಿತ ಕಾಪಡಲು ಕಟಿಬದ್ಧರಾಗಿ ಕಾರ್ಯನಿರ್ವಹಿಸುವಂತೆ ನೂತನ ಅಧ್ಯಕ್ಷರಿಗೆ ಸಲಹೆ ನೀಡಿದರು.
ನೂತನ ಜಿಲ್ಲಾಧ್ಯಕ್ಷ ಕೆ.ಯು ರತೀಶ್ ಕುಮಾರ್ ಮಾತನಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧನಿದ್ದು, ಸಂಘಟನೆಯ ಹಿರಿಯರು ಇಟ್ಟಿರುವ ನಂಬಿಕೆಗೆ ದ್ರೋಹವಾಗದಂತೆ ಬೆಳೆಗಾರರ ಸರ್ವತೋಮುಖ ಅಭಿವೃದ್ಧಿಗೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
New District Growers Association to be formed in the district