ಹಲವು ವರ್ಷಗಳಿಂದ ಅನಧೀಕೃತ ಮಸೀದಿ ನಿರ್ಮಾಣದ ಹಿನ್ನೆಲೆ ನಗರಸಭೆ ಅಧ್ಯಕ್ಷ ಹಾಗೂ ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅಕ್ರಮ ಮಸೀದಿ ನಿರ್ಮಾಣದ ಆರೋಪ ಕೇಳಿ ಬರುತ್ತಿದ್ದಂತೆ ಕೂಡಲೇ ದಾಳಿ ನಡೆಸಿದ ಅಧಿಕಾರಿಗಳು, ಸ್ಥಳಕ್ಕೆ ಭೇಟಿ ನೀಡಿ ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಹಾಗೂ ಆಯುಕ್ತ ಬಸವರಾಜ್ ಮಸೀದಿ ಕುರಿತದಂತೆ ಪರಿಶೀಲನೆ ನಡೆಸಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ಮಸೀದಿ ಕುರಿತಂತೆ ಸೂಕ್ತ ದಾಖಲೆಗಳನ್ನ ಒದಗಿಸುವಂತೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ದಾಖಲೆ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಸೀದಿಯ ಸುತ್ತಲು ವೀಕ್ಷಣೆ ನಡೆಸಿದ್ದಾರೆ. ಯಾರ ಜಾಗ, ಯಾವಾಗಿಂದ ಮಸೀದಿ ಇದೆ. ಅನುಮತಿ ಇದೆಯಾ ಎಂಬೆಲ್ಲಾ ಪ್ರಶ್ನೆ ಕೇಳಿ ಸೂಕ್ತ ದಾಖಲೆ ಒದಿಗಿಸುವಂತೆ ಸೂಚಿಸಿದ್ದಾರೆ.
Trending
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
- ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯ
- e-paper (10-07-2025) Chikkamagalur Express
- ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು