ಚಿಕ್ಕಮಗಳೂರು: ಮೂಡಿಗೆರೆಯ ಅಲ್ಪಸಂಖ್ಯಾತರ ಮತ್ತು ತರೀಕೆರೆ ತಾಲೂಕಿನ ಗೊಲ್ಲರಹಟ್ಟಿ ದಲಿತ ಯುವಕ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ದಲಿತ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ ನಡೆಯಿತು.
ಇಂದು ಬೆಳಗ್ಗೆ ನಗರದ ಆಜಾದ್ಪಾರ್ಕ್ನಲ್ಲಿ ಸಮಾವೇಶಗೊಂಡ ವೇದಿಕೆ ಮುಖಂಡರು ಸರ್ಕಾರದ ವಿರುದ್ಧ ಘೋ?ಣೆ ಕೂಗಿ ಈ ಎರಡು ಪ್ರಕರಣದಲ್ಲಿ ಭಾಗಿಯಾಗಿರುವ ಹಲ್ಲೆ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿ ಅವರನ್ನು ಒತ್ತಾಯಿಸಿದರು.
ತರೀಕೆರೆ ಗೊಲ್ಲರಹಟ್ಟಿಯಲ್ಲಿ ಜ.೧ ರಂದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವುದು ಖಂಡನೀಯ ಹಾಗೂ ಪೊಲೀಸರು ಸುಮಾರು ೧೨ ಜನ ಆರೋಪಿಗಳ ಮೇಲೆ ಕೇಸು ದಾಖಲಿಸಿದ್ದು ಆದರೆ ಈವರೆಗೆ ಕೇವಲ ನಾಲ್ಕು ಆರೋಪಿಗಳನ್ನು ಬಂಧಿಸಿ ಉಳಿದ ಆರೋಪಿಗಳನ್ನು ಬಂಧಿಸದೆ ಇರುವುದು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪರೋಕ್ಷವಾಗಿ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವುದು ಕಂಡುಬಂದಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಈ ರೀತಿಯ ಘಟನೆಗಳಿಂದ ಜಾತಿವಾದಿಗಳಿಗೆ ಇನ್ನ? ಶಕ್ತಿ ನೀಡಿದಂತೆ ಆಗುತ್ತದೆ ಆದ್ದರಿಂದ ಈ ಕೂಡಲೇ ತಪ್ಪಿಸಿಕೊಂಡಿರುವ ಆರೋಪಿಗಳನ್ನು ಬಂಧಿಸಬೇಕು ಮತ್ತು ಗೊಲ್ಲರಹಟ್ಟಿಯಲ್ಲಿ ಪ್ರತಿಯೊಬ್ಬರಿಗೂ ಮುಕ್ತ ಸರ್ವ ಸ್ವಾತಂತ್ರ್ಯ ನೀಡಬೇಕಾಗಿ ಈ ಮೂಲಕ ಒತ್ತಾಯಿಸುತ್ತಾ ಹಾಗೂ ಹಲ್ಲೆಗೊಳಗಾದ ವ್ಯಕ್ತಿಗೆ ರಕ್ಷಣೆ ನೀಡುವುದರ ಜೊತೆಗೆ ೫೦ ಲಕ್ಷ ಪರಿಹಾರ ಹಣ ನೀಡಬೇಕಾಗಿ ಆಗ್ರಹಿಸಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಜ.೯ರಂದು ಮುನಾಜ್ ಎಂಬ ಯುವಕನಿಗೆ ಸುಮಾರು ೨೦ಕ್ಕೂ ಹೆಚ್ಚು ಜನ ಹಳೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿ ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುನಾಜ್ ಮೇಲೆ ಕೇಸು ದಾಖಲುಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳಿಗೆ ಸಾಧಾರಣ ಕೇಸು ದಾಖಲಿಸಿ ಠಾಣೆ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ದೂರಿದ್ದಾರೆ.
ಮುನಾಜ್ ಇಂದಿಗೂ ಕೂಡ ಚೇತರಿಸಿಕೊಂಡಿಲ್ಲ. ಕಾರಣ ದೇಹದಲ್ಲಿ ತುಂಬಾ ಬಲವಾದ ಗಾಯಗಳಾಗಿದ್ದು ಮಮಾಂಗಕ್ಕೆ ತೀವ್ರವಾಗಿ ಹಲ್ಲೆಯಾಗಿದೆ. ಇ?ಲ್ಲಾ ಸತ್ಯ ಸಂಗತಿ ಇದ್ದರೂ ಕೂಡ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರುಗಳಾದ ದಂಟರಮಕ್ಕಿ ಶ್ರೀನಿವಾಸ್, ಟಿ.ಎಲ್ ಗಣೇಶ್, ಹುಣಸೇಮಕ್ಕಿ ಲಕ್ಷ್ಮಣ್, ಹೊನ್ನೇಶ್, ಉಮೇಶ್ಕುಮಾರ್, ಎಸ್ಡಿಪಿಐ ನ ಜಿಲ್ಲಾಧ್ಯಕ್ಷ ಗೌಸ್ಮುನೀರ್, ಅಂಗಡಿ ಚಂದ್ರು ಮತ್ತಿತರರು ಭಾಗವಹಿಸಿದ್ದರು.
Dalit organizations staged a protest demanding the arrest of the accused in the assault case