Author: chikkamagalur express

ಚಿಕ್ಕಮಗಳೂರು:  ಅಪರಾಧವನ್ನು ದ್ವೇಷಿಸಬೇಕು ಹೊರತು, ಅಪರಾಧಿಯನ್ನಲ್ಲ. ಆಕಸ್ಮಿಕವಾಗಿ ಪೆಟ್ಟು ತಿಂದು ಶಿಕ್ಷೆಗೆ ಗುರಿಯಾಗುವ ವ್ಯಕ್ತಿಗಳು, ಬಿಡುಗಡೆ ಬಳಿಕ ಸಾತ್ವಿಕ ಜೀವನದಡಿ ಬಾಳ ನ್ನು ಮುನ್ನೆಡೆಸಬೇಕು ಎಂದು ಕಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು ಹೇಳಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಶನಿವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಹಿಳಾ ಘಟ ಕ, ಜಿಲ್ಲಾ ಕೇಂದ್ರ ಕಾರಾಗೃಹ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಸಹಯೋಗದಲ್ಲಿ ಹಮ್ಮಿ ಕೊಂಡಿದ್ಧ ಸಂಗೀತ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಆಸ್ತಿ, ಅಂತಸ್ತು ಹಾಗೂ ಹಣದ ದುರಾಸೆಗಾಗಿ ಮನುಷ್ಯ ಸನ್ನಿವೇಶನಕ್ಕೆ ಸಿಲುಕಿಕೊಂಡು ಮನಸ್ಸನ್ನು ಹತೋಟಿ ತರಲಾಗದೇ ತಪ್ಪುದಾರಿಯ ಗುಲಾಮರಾಗಿ ಬಿಡುತ್ತಾರೆ. ಹೀಗಾಗಿ ಮನಸ್ಸನ್ನು ಸ್ಥಿಮಿತಗೊಳಿಸಲು ಪುಸ್ತಕ, ಸಂಗೀತ ಹಾಗೂ ಸಾಹಿತ್ಯದ ಅಭ್ಯಾಸಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಅಧರ್ಮದ ದಾರಿಯಲ್ಲಿ ಸಾಗುವ ವ್ಯಕ್ತಿಗಳು ಒಂದಲ್ಲೊಂದು ದಿನ ಶಿಕ್ಷೆ ಒಳಗಾಗುವನು. ಹಾಗಾಗಿ ವಿಶ್ವ ಮಾನವ ಸಂದೇಶದಂತೆ ಮೊದಲು ಮಾನವನಾಗು ಎಂಬ ತತ್ವ, ಆಲೋಚನೆಗಳ ಮೌಲ್ಯಗಳನ್ನು ಅರ್ಥೈ…

Read More

ಚಿಕ್ಕಮಗಳೂರು:  ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭವಾಗಿದ್ದು, ಮೊದಲ ದಿನ ಭಕ್ತರು ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಬೆಟ್ಟ ಏರಿ ದೇವಿಯ ದರ್ಶನ ಪಡೆದರು. ಬೆಳಿಗ್ಗೆ 6ರಿಂದಲೇ ದೇವೀರಮ್ಮ ಬೆಟ್ಟಕ್ಕೆ ಬರಿಗಾಲಿನಲ್ಲಿ ಭಕ್ತರು ಏರಲು ಆರಂಭಿಸಿದರು. ಇಡೀ ರಾತ್ರಿ ಮಳೆ ಸುರಿದಿದ್ದರಿಂದ ಹಾದಿ ಜಾರುತ್ತಿತ್ತು. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಬಿಂಡಿಗ ದೇವಿರಮ್ಮ ದೇವಿಯನ್ನು ಕಣ್ತುಂಬಿಕೊಂಡು ಆಶೀರ್ವಾದ ಪಡೆಯಲು ಭಾನುವಾರ ಭಕ್ತ ಸಾಗರವೇ ಹರಿದಿತ್ತು. ಇಡೀ ದೇವೀರಮ್ಮ ಗುಡ್ಡ ಭಕ್ತರಿಂದ ತುಂಬಿಕೊಂಡಿತ್ತು. ಬೆಳಿಗ್ಗೆ ಮಳೆ ಬಿಡುವು ನೀಡಿದ್ದರೂ ಮೋಡ ಕವಿದ ವಾತಾವರಣ ಇತ್ತು. ಚಿಕ್ಕಮಗಳೂರು ನಗರದ ಬಸ್‌‍ ನಿಲ್ದಾಣದಿಂದ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮಲ್ಲೇನಹಳ್ಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಲ್ಲೇನಹಳ್ಳಿ ಕಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬೆಟ್ಟ ಏರಿದರೆ, ಮಾಣಿಕ್ಯಧಾರ ಜಲಪಾತ ಕಡೆಯಿಂದಲೂ ಭಕ್ತರು ಬಂದರು. ಇನ್ನೊಂದೆಡೆ ಅರಿಶಿನಗುಪ್ಪೆ ಕಡೆಯಿಂದಲೂ ಭಕ್ತರು ಬೆಟ್ಟ ಏರಿದರು. ಭಾನುವಾರ ಬೆಳಿಗ್ಗೆ ವಿಗ್ರಹವನ್ನು ಬೆಟ್ಟದ ಮೇಲಕ್ಕೆ ಹೊತ್ತೊಯ್ದು ಪ್ರತಿಷ್ಠಾಪಿಸಲಾಗಿತ್ತು. ಕಟ್ಟಿಗೆ ಹೊತ್ತು ತಂದವರು ಕೊಂಡಕ್ಕೆ ಹಾಕಿ ಹರಕೆ…

Read More

ಚಿಕ್ಕಮಗಳೂರು:  ಶೋಷಿತರು, ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ನಗರದ ಬಸವೇಶ್ವರ ಬಡಾವಣೆ ಪೈ ಕಲ್ಯಾಣಮಂಟಪ ಹಿಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಮಾರು ೭ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಉನ್ನತ ಶಿಕ್ಷಣ ಪಡೆದವರು ಹುಲಿಹಾಲಿನ ರೀತಿ ಘರ್ಜಿಸುತ್ತಾರೆ, ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕೆ ಎಂದು ಭಾವಿಸದೆ ಬದುಕಿನ ಸಂಸ್ಕಾರ ಕಲಿಯಲು ಎಂದು ಭಾವಿಸುವ ಮೂಲಕ ಶಿಕ್ಷಣ ಪಡೆಯಿರಿ ಎಂದು ಸಲಹೆ ನೀಡಿದರು. ಸಮಾಜಕಲ್ಯಾಣ ಸಚಿವ ಹೆಚ್.ಸಿ ಮಹಾದೇವಪ್ಪ ಅವರು ೭ ಕೋಟಿ ರೂ ಅನುದಾನವನ್ನು ವಿದ್ಯಾರ್ಥಿ ನಿಲಯಕ್ಕೆ ಮಂಜೂರು ಮಾಡಿರುವುದನ್ನು ಅಭಿನಂದಿಸಿದ ಅವರು, ಸರ್ಕಾರಿ ಕಟ್ಟಡ ಎಂಬ ತಾತ್ಸಾರ ಮನೋಭಾವ ಬಿಟ್ಟು…

Read More

ಚಿಕ್ಕಮಗಳೂರು:  ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ. ಆದಿಯಿಂದ ಅಂತ್ಯದವರೆಗೆ ಬಿದಿರನ್ನು ಪೂರೈಕೆ ಮಾಡುತ್ತಾ ಬಂದಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ಅವರು ನಗರದ ಅಂಬೇಡ್ಕರ್ ರಸ್ತೆಯ ನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಗರಸಭೆ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಮೇದ ಸಮುದಾಯಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಾಜದ ಮುಖಂಡರುಗಳಾದ ಪಿ.ರಾಜೇಶ್, ಕುಮಾರ್ ಮತ್ತಿತರರು ಇಲ್ಲಿ ಮೇದ ಸಮುದಾಯ ಭವನ ನಿರ್ಮಿಸಬೇಕು ಎಂದು ಕನಸು ಕಂಡಿದ್ದರು. ಅದಕ್ಕೆ ಹಿಂದಿದ್ದ ಶಾಸಕರು, ನಗರಸಭೆ ಆಡಳಿತ, ಜಿಲ್ಲಾಧಿಕಾರಿಗಳು ನೀರೆರೆದ ಪರಿಣಾಮ ಇಂದು ಭವನ ನಿರ್ಮಾಣ ಕಾಮಗಾರಿ ಆರಂಭವಾಗುತ್ತಿದೆ. ಅವರೆಲ್ಲರಿಗೂ ಧನ್ಯವಾದ ಸಲ್ಲಿಸುತ್ತೇವೆ ಎಂದರು. ನೆನೆಗುದಿಗೆ ಬಿದ್ದಿದ್ದ ಈ ಕಾಮಗಾರಿಗೆ ನಾವು ಶಾಸಕರಾದ ನಂತರ ನಗರೋತ್ಥಾನ ಯೋಜನೆಯಡಿ ಅನುದಾನ ಮಂಜೂರಾಗಿದ್ದರೂ ಹಣಕಾಸಿನ ಸಮಸ್ಯೆಯಿಂದ ಮೂರು ಬಾರಿ ಟೆಂಡರ್ ಮುಂದೂಡಲ್ಪಟ್ಟಿತ್ತು. ಇದೀಗ ಹಣ ಬಿಡುಗಡೆ ಮಾಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದರು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಮೇದ ಜನಾಂಗದ ಕೃಷ್ಣಪ್ಪ ಇತರರು ಇಲ್ಲಿ…

Read More

ಚಿಕ್ಕಮಗಳೂರು: ಪೌರಕಾರ್ಮಿಕರ ಆರೋಗ್ಯ ಮಾನಸಿಕ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ನಗರಸಭೆ ಸಭಾಂಗಣದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರು ದುಶ್ಚಟಗಳಾದ ಮಾದಕ ವ್ಯಸನಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರು ಆರೋಗ್ಯವಾಗಿದ್ದಾಗ ಮಾತ್ರ ಎಲ್ಲಾ ನಾಗರಿಕರು ಆರೋಗ್ಯವಾಗಿರಲು ಸಾಧ್ಯ ಎಂದು ಹೇಳಿದರು. ಕೆಲವು ಪೌರಕಾರ್ಮಿಕರನ್ನು ಸರ್ಕಾರ ಖಾಯಂಗೊಳಿಸಿರುವ ಮಾದರಿಯಲ್ಲಿ ನೀರುಗಂಟಿಗಳನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಖಾಯಂಗೊಳಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಡಾ. ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯದಂತೆ ಸಮಸಮಾಜ ನಿರ್ಮಾಣವಾಗಬೇಕೆಂಬ ಅವರ ಕನಸು ಇಂದು ಒಂದೇ ವೇದಿಕೆಯಲ್ಲಿ ಆಸೀನರಾಗಲು ಕಾರಣ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಶರಣರ ಆಶಯ ಕಾರಣ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ…

Read More

ಚಿಕ್ಕಮಗಳೂರು: ರಕ್ತದಾನ ಜೀವ ಉಳಿಸುವ ಮಹತ್ವಾದಾನ. ರಕ್ತದಾನ ಮಾಡು ವವರ ಆರೋಗ್ಯ ಸುಧಾರಿಸುವ ಜೊತೆಗೆ ದೈಹಿಕ, ಮಾನಸಿಕ ಹಾಗೂ ಶಾರೀರಿಕವಾಗಿ ಆರೋಗ್ಯವಾಗಿರಲು ಸಹಕಾರಿ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಹೋಲಿಕ್ರಾಸ್ ಆಸ್ಪತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಸಹಯೋಗದಲ್ಲಿ ವಕೀಲರಿಗೆ ಹಮ್ಮಿಕೊಂಡಿದ್ಧ ರಕ್ತದಾನ ಶಿಬಿರ ಹಾಗೂ ಉಚಿ ತ ಕಣ್ಣಿನ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಲ್ಲಿ ಹೆಚ್ಚು ಯುವವಕೀಲರು ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸಬೇಕು. ಪ್ರಕೃತಿ ಮನುಷ್ಯನಿ ಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದೆ, ಆದರೆ ಮನುಷ್ಯ ಅಲ್ಪಮಾನವನಾಗದೇ, ಮತ್ತೊಬ್ಬರ ಜೀವ ಉಳಿ ಸುವ ರೀತಿಯಲ್ಲಿ ರಕ್ತದಾನದಲ್ಲಿ ತೊಡಗಿಸಿಕೊಂಡರೆ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು. ತುರ್ತು ಚಿಕಿತ್ಸೆ ಅಥವಾ ಅಪಘಾತ ವೇಳೆಯಲ್ಲಿ ರಕ್ತವು ಬಹಳಷ್ಟು ಅವಶ್ಯಕತೆಯಿದೆ. ಹೀಗಾಗಿ ವಕೀಲ ರು ಸೇರಿದಂತೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದಾಗಬೇಕು. ಓರ್ವನ ರಕ್ತದಾನದಿಂದ ಕನಿಷ್ಟ ಮೂರು ಮಂದಿ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.…

Read More

ಚಿಕ್ಕಮಗಳೂರು: ಬಿಂಡಿಗಾ ಆದಿಶಕ್ತಿ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿ ಆದೇಶ ಹೊರಡಿಸಿರುವ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಸಿ.ಎನ್.ಮೀನಾ ನಾಗರಾಜ್ ಅವರು ಅಕ್ಟೋಬರ್ ೧೯ರ ಬೆಳಿಗ್ಗೆ ೬ ಗಂಟೆಯಿಂದ ೨೦ರ ರಾತ್ರಿ ೧೦ ಗಂಟೆಯವರೆಗೆ ಸ್ಥಳೀಯರು ಹಾಗೂ ಭಕ್ತಾದಿಗಳ ವಾಹನಗಳನ್ನು ಹೊರತುಪಡಿಸಿ ತರೀಕೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುವ ಇತರ ಎಲ್ಲಾ ವಾಹನಗಳು ಕಡ್ಡಾಯವಾಗಿ ಕಡೂರು ಮಾರ್ಗವಾಗಿ ಚಲಿಸುವಂತೆ ಸೂಚಿಸಿದ್ದಾರೆ. ಬಿಂಡಿಗಾ ಹಾಗೂ ಮಲ್ಲೇನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ ೧೯ ರಿಂದ ೨೩ರವರೆಗೆ ನಡೆಯಲಿರುವ ಶ್ರೀ ದೇವೀರಮ್ಮನವರ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯನ್ನು ಆಧರಿಸಿ ಅವರು ವಾಹನ ಸಂಚಾರ ಹಾಗೂ ನಿಲುಗಡೆ ಬಗ್ಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅಕ್ಟೋಬರ್ ೧೯ ಮತ್ತು ೨೦ ರಂದು ಚಿಕ್ಕಮಗಳೂರು-ಮಲ್ಲೇನಹಳ್ಳಿ ಮತ್ತು ತರೀಕೆರೆ-ಲಿಂಗದಹಳ್ಳಿ-ಮಲ್ಲೇನಹಳ್ಳಿ ಮಾರ್ಗದಲ್ಲಿ ಅನುಮತಿ ಇಲ್ಲದೆ ಸಂಚರಿಸುವ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅ.೧೯ ಮತ್ತು ೨೦…

Read More