Author: chikkamagalur express

ಚಿಕ್ಕಮಗಳೂರು: ಬಾಬಾಬುಡನ್‌ಗಿರಿಯಲ್ಲಿ ಅರ್ಚಕರ ನೇಮಕ ಸಂಬಂಧ ಸುಪ್ರೀಂ ಕೋರ್ಟಿಗೆ ಸಹಮತ ಸೂಚಿಸಿ ಪ್ರಮಾಣಪತ್ರ ಸಲ್ಲಿಸಿರುವ ರಾಜ್ಯ ಕಾಂಗ್ರೆಸ್ ಸರಕಾರ ದರ್ಗಾದ ಪವಿತ್ರ ಪರಂಪರೆ ಮತ್ತು ಸಾಂವಿಧಾನಿಕ ಮೌಲ್ಯಗಳು ಹಾಗೂ ಸೂಫಿ ಸಂಸ್ಕೃತಿಗೆ ದ್ರೋಹ ಮಾಡಿದೆ ಎಂದು ಸೈಯದ್ ಬುಡನ್ ಶಾಖಾದ್ರಿ ವಂಶಸ್ಥ ಫಕ್ರುದ್ದೀನ್‌ಶಾಖಾದ್ರಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದರ್ಗಾದ ಪರಂಪರೆ, ಸೂಫಿ ಸಂಸ್ಕೃತಿ ಮತ್ತು ಸಾಂವಿಧಾನಿಕ ಮೌಲ್ಯಗಳ ಮೇಲೆ ಹೊಡೆತ ನೀಡಿದೆ. ಸುಪ್ರೀಂಗೆ ಪ್ರಮಾಣ ಪತ್ರ ಸಲ್ಲಿಸಿರುವುದು ೧೯೯೧ರ ಪ್ಲೇಸಸ್ ಆಫ್ ವರ್ಶಿಪ್ ಕಾಯಿದೆಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಧ್ಯಕ್ಷರಾಗಿರುವ ಕ್ಯಾಬಿನೆಟ್ ಉಪಸಮಿತಿಯ ಸಭೆಯಲ್ಲಿ ನಮ್ಮ ಕಡೆಯಿಂದ ೪ ಜನರಿಗೆ ಮಾತನಾಡಲು ಮಾತ್ರ ಅವಕಾಶ ನೀಡಿದ್ದರು. ಆದರೆ, ವಿರೋಧ ಪಕ್ಷದಿಂದ ಇಬ್ಬರು ಸ್ವಾಮೀಜಿಗಳು, ಸಿ.ಟಿ.ರವಿ ಸೇರಿ ಏಳು ಮಂದಿಗೆ ಅವಕಾಶ ನೀಡಿದರು ಎಂದು ತಿಳಿಸಿದರು. ಮೂಡಿಗೆರೆ ಶಾಸಕಿ ನಯನಾಮೋಟಮ್ಮ ಅವರು ಸೂಫಿ ಪರಂಪರೆಯ…

Read More

ಚಿಕ್ಕಮಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ವಿಫಲವಾಗಿರುವುದರಿಂದ ಸಿಪಿಐ ತಾಲೂಕು ಸಮಿತಿ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿದ್ದು, ಜನಾಂದೋಲನ ನಡೆಸಲಾಗುವುದು ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಲೆ ಏರಿಕೆಯನ್ನು ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದ್ದು, ಜನರನ್ನು ಸಂಕಷ್ಟಕ್ಕೆ ದೂಡುವಂತಹ ಜನವಿರೋಧಿ ನೀತಿಗಳನ್ನು ಅನುಸರಿಸುವ ಮೂಲಕ ಜನರು ಬೀದಿಗೆ ಬೀಳುವಂತೆ ಮಾಡಿವೆ ಎಂದು ಆರೋಪಿಸಿದರು. ಬೆಲೆ ಏರಿಕೆಯನ್ನು ತಡೆಗಟ್ಟುವುದಾಗಿ ಆಶ್ವಾಸನೆ ನೀಡುವುದರೊಂದಿಗೆ ೨೦೧೪ರಲ್ಲಿ ಅಧಿಕಾರದ ಗದ್ದುಗೆ ಏರಿದ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ತಲೆಯ ಮೇಲೆ ಬೆಲೆಏರಿಕೆ ಹೊರೆಯನ್ನು ಹೊರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ೫೦ ರೂಪಾಯಿ ಹೆಚ್ಚಿಸುವುದರೊಂದಿಗೆ ಜನಸಾಮಾನ್ಯರ…

Read More

ಚಿಕ್ಕಮಗಳೂರು:  ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಣಿಯಾಗಿ ಕೆಲಸ ಮಾಡಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿರುವುದರ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಆಗ್ರಹಿಸಿ ನಗರದ ಆಜಾದ್ ವೃತ್ತದಲ್ಲಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಂದು ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಯುವಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ಗಾಂಧೀಜಿ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ನಕಲಿ ಗಾಂಧಿಗಳ ಕುಟುಂಬ ದೇಶವನ್ನು ಲೂಟಿ ಎಸಗಿದ ಮೂಲ ರೂವಾರಿಗಳು. ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದ ಹೆರಾಲ್ಡ್ ಸಂಸ್ಥೆ ಕೇವಲ ಐದು ಜನರ ಕೈನಲ್ಲಿ ಸಿಲುಕಿ ನರಳುತ್ತಿದೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮುಖವಾಣಿಯಾಗಿ ಕಾರ್ಯನಿರ್ವಹಿಸಿದ ಸಂಸ್ಥೆ ಇಂದು…

Read More

ಚಿಕ್ಕಮಗಳೂರು: ಎಲ್ಲಾ ಸಮಾಜದ ಮಹಾನ್ ಪುರುಷರ ಜಯಂತಿಗಳನ್ನು ಸರ್ಕಾರದ ಜೊತೆಗೆ ಸಂಘ-ಸಂಸ್ಥೆಗಳು ಆಚರಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಅವರ ತತ್ವ ಸಿದ್ಧಾಂತಗಳು ಹಾಗೂ ವಿಚಾರಧಾರೆಗಳನ್ನು ಸರ್ವರೂ ಗೌರವಿಸಬೇಕಾದ ಅಗತ್ಯತೆ ಇದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಆಜಾದ್‌ಪಾರ್ಕ್ ವೃತದಲ್ಲಿ ಜಿಲ್ಲಾ ಸವಿತಾ ಸಮಾಜ ಹಾಗೂ ತಾಲೂಕು ಸವಿತಾ ಸಮಾಜ ಇವರ ವತಿಯಿಂದ ಏರ್ಪಡಿಸಲಾಗಿದ್ದ ಶ್ರೀರಾಮನವಮಿ ಮತ್ತು ಹನುಮಜಯಂತಿ ಅಂಗವಾಗಿ ಶ್ರೀರಾಮಹನುಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪುರ್ಷ್ಪಾಚನೆ ಸಲ್ಲಿಸಿ ಮಾತನಾಡಿದರು. ಇಂದು ಮಹಾನ್ ಪುರುಷರಿಲ್ಲದೇ ಇದ್ದರೂ ಅವರ ವಿಚಾರಧಾರೆಗಳು ಮತ್ತು ಸಿದ್ಧಾಂತಗಳು ಪ್ರಸ್ತುತವಾಗಿದ್ದು, ಪ್ರಪಂಚ ಇರುವವರೆಗೆ ಜೀವಂತವಾಗಿರುತ್ತವೆ ಎಂದು ಬಣ್ಣಿಸಿದರು. ನಮ್ಮ ಪೂರ್ವಜರು ಈ ಮಹಾನ್ ಪುರುಷರ ತತ್ವಾದರ್ಶಗಳನ್ನು ಪರಿಚಯಿಸಿದಂತೆ ಮುಂದಿನ ಪೀಳಿಗೆಗೆ ಅವುಗಳನ್ನು ಉಳಿಸಿ-ಬೆಳಸಬೇಕಾದ ಬಹುದೊಡ್ಡ ಜವಾಬ್ದಾರಿ ಎಲ್ಲರ ಮೇಲಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ವಿಚಾರ-ಸಿದ್ಧಾಂತಗಳ ಕುರಿತು ನ್ಯಾಯಾಧೀಶ ವಿ.ಹನುಮಂತಪ್ಪ ಅವರು ಜಯಂತಿ ಸಂದರ್ಭದಲ್ಲಿ ಜಾಗೃತಿ ಮೂಡಿಸಿದ್ದು ಶ್ಲಾಘನೀಯ ಎಂದು ತಿಳಿಸಿದರು. ವಿಧಾನ…

Read More

ಚಿಕ್ಕಮಗಳೂರು: -ಭಾರತ ದೇಶದಲ್ಲಿ ಸ್ವಾತಂತ್ರ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಇವರು ಇಡಿ ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ವಿರುದ್ಧ ಚಾರ್ಜ್‌ಶೀಟ್ ಹಾಕುವ ಮೂಲಕ ಸೇಡಿನ ರಾಜಕಾರಣ ಮಾಡಿ ದೇಶಕ್ಕೆ ತ್ಯಾಗ ಮಾಡಿದವರಿಗೆ ಅಪಮಾನ ಮಾಡಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಆರೋಪಿಸಿದರು. ಅವರು ಇಂದು ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ ಇಂದು ಸ್ಪಷ್ಟ ಬಹುಮತದಿಂದ ಅಧಿಕಾರವನ್ನು ಕೇಂದ್ರಸರ್ಕಾರ ನಡೆಸುತ್ತಿಲ್ಲ, ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಪಾಪದ ಕೊಡ ತುಂಬಲಿದೆ. ಸರ್ಕಾರ ಪಥನವಾಗಲಿದೆ ಎಂದು ಭವಿಷ್ಯ ನುಡಿದರು. ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ಬಿಜೆಪಿ ಒಡೆದು ಹಾಳುವ ನೀತಿ ಅನುಸರಿಸುತ್ತಿದೆ ಎಂದು ದೂರಿದ ಅವರು, ಮುಂಬರುವ ೨೦೨೯ ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.…

Read More

ಚಿಕ್ಕಮಗಳೂರು: ರಾಜ್ಯ, ರಾಷ್ಟ್ರಾದ್ಯಂತ ಸದ್ದು ಮಾಡುತ್ತಿರುವ ಕರ್ನಾಟಕದ ಜಾತಿ ಗಣತಿಗೆ ಸಂಬಂಧಿಸಿದ ವರದಿಯನ್ನು ವಿರೋಧಿಸುವುದಾಗಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಸುಧಾರಕರ ಶೆಟ್ಟಿ ತಿಳಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ಬಹಿರಂಗವಾಗಿರುವ ಜಾತಿಗಣತಿ ವರದಿಯಲ್ಲಿ ಬಂಟರು ೩.೫೨ ಲಕ್ಷ ಜನರಿದ್ದಾರೆ ಎಂದು ತಿಳಿಸಲಾಗಿದೆ. ಆದರೆ ನನ್ನ ಪ್ರಕಾರ ರಾಜ್ಯದಲ್ಲಿ ೧೨ ಲಕ್ಷ ಜನ ಬಂಟರಿದ್ದಾರೆ. ಹೊರ ರಾಜ್ಯಗಳಲ್ಲಿ ೨ ಲಕ್ಷ ಮಂದಿ ಇದ್ದಾರೆ. ಹೀಗಿರುವಾಗಿ ಜಾತಿಗಣತಿಗೆ ಅಳವಡಿಸಿರುವ ಮಾನದಂಡಗಳೇನು ಎನ್ನುವುದು ಗೊತ್ತಾಗುತ್ತಿಲ್ಲ ಎಂದರು. ನನ್ನ ಮನೆ ಹಾಗೂ ನನ್ನ ಕುಟುಂಬದಲ್ಲೇ ಯಾರ ಮನೆಯಲ್ಲೂ ಜಾತಿ ಗಣತಿ ನಡೆದಿಲ್ಲ. ಹಾಗಾದರೆ ಉಪಗ್ರಹ ಸರ್ವೇ ಏನಾದರೂ ಮಾಡಿದ್ದಾರಾ? ಅಥವಾ ಪಂಚಾಯ್ತಿ ಮಟ್ಟದಲ್ಲಿ ಎಂಟತ್ತು ಜನರ ಅಭಿಪ್ರಾಯ ಪಡೆದು ಚುನಾವಣೆ ಸಮೀಕ್ಷೆ ಏನಾದರೂ ಮಾಡಿದ್ದೀರಾ? ಎಂದು ಪ್ರಶ್ನಿದ ಅವರು, ಅವೈಜ್ಞಾನಿಕವಾಗಿ ಜಾತಿಗಣತಿ ವರದಿ ತಯಾರಿಸಲಾಗಿದೆ ಎಂದು ದೂರಿದರು. ಜಾತಿ ಜನಗಣತಿ ಮಾಡಲು ಬಹಳ ಸಮಯ ಬೇಕಾಗುತ್ತದೆ. ಹಿಂದೆ ಕಾಂತರಾಜು ಅವರನ್ನು ಆಯೋಗದ ಅಧ್ಯಕ್ಷರಾಗಿ…

Read More

ಚಿಕ್ಕಮಗಳೂರು:  ದೇಶದ ಎಲ್ಲ ಜನರಿಗೂ ಡಾ.ಬಿ.ಆರ್.ಅಬೇಡ್ಕರ್ ಅವರು ಸಂವಿಧಾನದ ಮೂಲಕ ರಾಜಕೀಯ ಸಮಾನ ಹಕ್ಕು ನೀಡಿದ್ದಾರೆ. ಆ ಹಕ್ಕನ್ನು ಪ್ರಾಮಾಣಿಕವಾಗಿ ಚಲಾಯಿಸುತ್ತಿದ್ದೇವೆಯೇ ಎಂಬ ಬಗ್ಗೆ ಎಲ್ಲರೂ ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು. ಐಡಿಎಸ್‌ಜಿ ಕಾಲೇಜಿನಲ್ಲಿ ಐಸಿರಿ ಫೌಂಡೇಶನ್ ಮಂಗಳವಾರ ಹಮ್ಮಿಕೊಂಡಿದ್ದ ವಿ ದ ಪೀಪಲ್ ಆಫ್ ಇಂಡಿಯಾ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿ ಸಂವಿಧಾನ ಪೀಠಿಕೆಯಲ್ಲಿ ಧರ್ಮ ನಿರಪೇಕ್ಷತೆ, ಸೌಹಾರ್ದತೆ, ಸಹಬಾಳ್ವೆ ಮತ್ತಿತರೆ ಅಂಶಗಳ ಬಗ್ಗೆ ತಿಳಿದಿದ್ದೇವೆ. ಸ್ವಾತಂತ್ರ್ಯ, ಸಮಾನತೆ, ಭಾತೃತ್ವ ಅಂಬೇಡ್ಕರ್ ಆಶಯವಾಗಿತ್ತು ಅದರಂತೆ ದೇಶ ಮುನ್ನೆಡೆಯುತ್ತಿದೆಯೇ ಎಂಬ ಚಿಂತನೆ ಅಗತ್ಯ. ಅಂದು ಪದವಿ ಪಡೆದವರಿಗೆ,ಭೂಮಾಲೀಕರಿಗೆ, ಶ್ರಿಮಂತರಿಗೆ ಓಟಿನ ಹಕ್ಕು ಕೊಡೋಣ ಎಂಬ ಚರ್ಚೆ ನಡೆದಿತ್ತು. ಆಗ ಅಂಬೇಡ್ಕರ್ ಹಾಗೆ ಮಾಡಿದರೆ ದೇಶದ ಶೇ.೨೦ ಜನರಿಗಷ್ಟೇ ಹಕ್ಕು ಕೊಟ್ಟಂತಾಗುತ್ತದೆ. ಹೀಗಾಗಿ ಎಲ್ಲರಿಗೂ ವಯಸ್ಸಿನ ಆಧಾರದ ಮೇಲೆ ಮತದಾನದ ಹಕ್ಕು ನೀಡಬೇಕು ಎಂದು ವಾದಿಸಿ ಅದರಲ್ಲಿ ಯಶಸ್ವಿಯಾದರು. ಈ ದೇಶದಲ್ಲಿರುವ ಎಲ್ಲರಿಗೂ…

Read More