Author: chikkamagalur express

ಚಿಕ್ಕಮಗಳೂರು: ಆಡಳಿತ ವೈಫಲ್ಯದಿಂದ ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಧಾರುಣ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಕೂಗುತ್ತಾ ಆಗಮಿಸಿದ ಕಾರ್ಯಕರ್ತರು ಸಿಎಂ ಮತ್ತು ಡಿಸಿಎಂ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ಹೊರಹಾಕಿದರು. ಬಳಿಕ ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿಗಾಗಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಣೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಆರ್‌ಸಿಬಿ ವಿಜಯೋತ್ಸವದಲ್ಲಿ ರಾಜ್ಯಸರ್ಕಾರ ಸೂಕ್ತ ಬಂದೋಬಸ್ತ್ ಮಾಡದೇ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿರುವ ಪರಿಣಾಮ ೧೧ ಮಂದಿ ಕ್ರೀಡಾಭಿಮಾನಿಗಳು ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳು ನೋವಿನ ಸಾಗರದಲ್ಲಿ ಮುಳುಗಲು ರಾಜ್ಯಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು. ಕುಂಭಮೇಳದ ಬಗ್ಗೆ ಟೀಕಿಸುವ ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಗುಪ್ತಚರ ಮಾಹಿತಿಗಳಿದ್ದರೂ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್ ಸೇವೆಯನ್ನು ಇನ್ನಷ್ಟು ಉನ್ನತೀಕರಣಗೊಳಿಸಲು ಯೋಜಿಸಲಾಗಿದ್ದು, ಈ ಸಂಬಂಧ ಇಲಾಖೆಯ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳನ್ನು ನಗರಕ್ಕೆ ಕರೆಸಿ ಸಭೆ ನಡೆಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಶುಕ್ರವಾರ ನಗರದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಬಿಎಸ್‌ಎನ್‌ಎಲ್ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ೯ ತಾಲ್ಲೂಕುಗಳ ಜೆಟಿಓಗಳು, ಸಲಹಾ ಸಮಿತಿ ಸದಸ್ಯರುಗಳೊಂದಿಗೆ ಸಭೆ ನಡೆಸಿ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ೨,೫೬,೪೫೬ ಬಿಎಸ್‌ಎನ್‌ಎಲ್ ಸಿಮ್‌ಗಳು ಕಾರ್ಯನಿರ್ವಹಿಸುತ್ತಿವೆ. ಇನ್ನೊಂದು ವರ್ಷದಲ್ಲಿ ಎಲ್ಲಾ ಟವರ್‌ಗಳನ್ನು ಸುಸ್ಥಿತಿಗೆ ತಂದು ಜನರೇಟರ್, ಬ್ಯಾಟರಿ ಹಾಗೂ ವಿದ್ಯುತ್ ಸಂಪರ್ಕವನ್ನು ಸಮರ್ಪಕಗೊಳಿಸಿದಲ್ಲಿ ದುಪ್ಪಟ್ಟು ಸಿಮ್‌ಗಳಿಗೆ ಬೇಡಿಕೆ ಬರಬಹುದು. ಅದಕ್ಕೆ ಪೂರ್ವಭಾವಿ ತಯಾರಿಗಳನ್ನು ಮಾಡುತ್ತೇವೆ ಎಂದರು. ಪ್ರತಿ ತಾಲ್ಲೂಕು ಮಟ್ಟದಲ್ಲಿ ಜೆಟಿಓಗಳು ಹಾಗೂ ನಾಮನಿರ್ದೇಶಿತ ಸದಸ್ಯರ ಸಮಕ್ಷಮದಲ್ಲಿ ಗ್ರಾಹಕರ ಕುಂದು ಕೊರತೆಗಳನ್ನು ಕೇಳಲಾಗುವುದು. ಈಗ ಇರುವ ೨೧೭ ಟವರ್‌ಗಳ ಪೈಕಿ ೧೭೧ ಕ್ಕೆ ೪ಜಿ ಮಾಡಲು ಪ್ರಸ್ತಾವನೆ ಇದೆ. ಈ ಪೈಕಿ ಈಗಾಗಲೆ ೧೬೫…

Read More

ಚಿಕ್ಕಮಗಳೂರು: ಶೋಷಿತ ವರ್ಗದವರು ಸೇರಿದಂತೆ ಎಲ್ಲಾ ಜಾತಿ, ಜನಾಂಗದ ಬಡವರು ಸಮಾಜದ ಮುನ್ನಲೆಗೆ ಬರಬೇಕೆಂಬ ಉದ್ದೇಶದಿಂದ ರಾಜ್ಯಸರ್ಕಾರ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸಿ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಕ್ಷೇತ್ರದ ಹಳೇ ಲಕ್ಯಾ ಗ್ರಾಮದಲ್ಲಿ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ೧.೭೫ ಕೋಟಿ ರೂ. ವೆಚ್ಚದಲ್ಲಿ ಪ್ರತಿ ಫಲಾನುಭವಿಗೆ ೩.೭೫ ಲಕ್ಷ ರೂಗಳಂತೆ ಒಟ್ಟು ೪೭ ಫಲಾನುಭವಿಗಳ ಭೂಮಿಯಲ್ಲಿ ಬೋರ್‌ವೆಲ್ ಕೊರೆಯಲು ಚಾಲನೆ ನೀಡಿ ಮಾತನಾಡಿ ರಾಜ್ಯಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆಮಾಡಿ ಬೋರ್‌ವೆಲ್ ಕೊರೆಸುವ ಯೋಜನೆಗೆ ಇಂದು ಪ್ರಾರಂಭೋತ್ಸವ ನಡೆಸಲಾಗಿದೆ ಎಂದು ಹೇಳಿದರು. ಹಿಂದೆ ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಫಲಾನುಭವಿಗೆ ೨.೫೦ ಲಕ್ಷ ರೂ ನೀಡುತ್ತಿದ್ದು, ಕೊಳವೆ ಬಾವಿಗೆ ಸಂಬಂಧಿಸಿದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿರುವುದರಿಂದ ರಾಜ್ಯಸರ್ಕಾರ ಇದನ್ನು ಮನಗಂಡು ೩.೭೫ ಲಕ್ಷ ರೂಗಳಿಗೆ ಹೆಚ್ಚಿಸಿದೆ ಎಂದು ಶ್ಲಾಘಿಸಿ ಫಲಾನುಭವಿಗಳು ಗಂಗಾ…

Read More

ಚಿಕ್ಕಮಗಳೂರು: ತಾಲ್ಲೂಕು ಅಲ್ಲಂಪುರ ಬ್ಲಾಕ್ ಪ್ರದೇಶದ ವ್ಯಾಪ್ತಿಗೆ ಬರುವ ಪ್ರದೇಶವನ್ನು ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸದಂತೆ ಆಗ್ರಹಿಸಿ ಶಾಸಕ ಹೆಚ್.ಡಿ ತಮ್ಮಯ್ಯ ರವರಿಗೆ ಈ ಭಾಗದ ಗ್ರಾಮಸ್ಥರುಗಳು ಆಕ್ಷೇಪಣೆ ಸಲ್ಲಿಸಿದ್ದಾರೆ. ಶಾಸಕ ಹೆಚ್.ಡಿ ತಮ್ಮಯ್ಯ ರವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ದಾಸರಹಳ್ಳಿ, ಕೈಮರ ಗ್ರಾಮಸ್ಥರುಗಳಾದ ಎಂ. ಕೃಷ್ಣಪ್ಪ, ಪಿ.ಸಿ ಶಿವಾನಂದ, ಟಿ. ಎಸ್ ಶಿವಕುಮಾರ್, ಹೆಚ್.ಎಸ್ ಈಶ್ವರಾಗೌಡ, ಎಂ.ಬಿ ಸತೀಶ್ ಇವರುಗಳು ಅಲ್ಲಂಪುರ ಬ್ಲಾಕ್ ಪ್ರದೇಶದ ವ್ಯಾಪ್ತಿಗೆ ಬರುವ ದಾಸರಹಳ್ಳಿ ಗ್ರಾಮ ಸರ್ವೇ ನಂ. ೪ ಮತ್ತು ೭, ಅಲ್ಲಂಪುರ ಗ್ರಾಮದ ಸರ್ವೇ ನಂ. ೨೬, ಅರಳಗುಪ್ಪೆ ಗ್ರಾಮದ ಸ.ನಂ ೧೫ ಮತ್ತು ಹುಳಿಯಾರಳ್ಳಿ ಗ್ರಾಮದ ಸ.ನಂ ೩೫ ಮತ್ತು ೩೬ ರಲ್ಲಿ ಒಟ್ಟು ೯೮೮ ಎಕರೆ ೧೦ ಗುಂಟೆ ವಿಸ್ತೀರ್ಣದ ಪ್ರದೇಶವನ್ನು ಅಲ್ಲಂಪುರ ಮೀಸಲು ಅರಣ್ಯ ಬ್ಲಾಕ್ ಎಂದು ಸಂರಚಿಸುವ ಬಗ್ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ, ಈ ಭಾಗದ ೫೦೦ ಕ್ಕೂ ಹೆಚ್ಚು ರೈತರುಗಳು ೧ ಎಕರೆಯಿಂದ…

Read More

ಚಿಕ್ಕಮಗಳೂರು:  ಪ್ರತಿಯೊಬ್ಬರಲ್ಲಿ ಪರಿಸರ ಉಳಿಸುವ ಬಗ್ಗೆ ಕಾಳಜಿ ಸ್ವಚ್ಚತೆ ಮೂಲಕ ಅರಿವು ಮೂಡಿಸಬೇಕಾದ ಅಗತ್ಯ ಇದೆ ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಕರೆ ನೀಡಿದರು. ಅವರು ಇಂದು ನಗರಸಭೆ ಆವರಣದಲ್ಲಿ ವಿಶ್ವ ಪರಿಸರ ದಿನಾಚಾರಣೆ ಅಂಗವಾಗಿ ತಾಯಿ ಹೆಸರಿನಲ್ಲಿ ಒಂದು ಗಿಡ ಶೀರ್ಷಿಕೆ ಅಡಿಯಲ್ಲಿ ಸಸಿ ನಡುವ ಕಾರ್ಯಕ್ರಮ ಹಾಗೂ ಜಾಗತಿಕ ಮಟ್ಟದಲ್ಲಿ ಪ್ಲಾಸ್ಟಿಕ್ ಮಾಲಿನ್ಯ ನಿರ್ಮೂಲನೆ ಕುರಿತು ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿದರು. ಜಿಲ್ಲೆ ಪರಿಸರದ ಮಡಿಲಾಗಿದ್ದು ದಟ್ಟ ಅರಣ್ಯ ನದಿ ಮೂಲಗಳನ್ನು ಹೊಂದಿರುವ ಪ್ರವಾಸೋದ್ಯಮಕ್ಕೆ ಪೂರಕವಾದ ವಿಶೇಷ ಜಿಲ್ಲೆಯಾಗಿದ್ದು, ಪರಿಸರ ಉಳಿದರೆ ಆರೋಗ್ಯವಂತ ಜೀವ ಸಂಕುಲಗಳು ಸಮೃದ್ಧಿ ಜೀವನಕ್ಕೆ ನಾಂದಿಯಾಗುತ್ತದೆ ಎಂದರು. ಮನೆಗೊಂದು ಮಗು ಮಗುವಿಗೊಂದು ಮರ ಎಂಬ ಘೋಷ ವಾಕ್ಯದೊಂದಿಗೆ ಪ್ರತಿಯೊಬ್ಬರು ಮನೆಗೊಂದು ಮರ ನೆಟ್ಟು ಪೋಷಿಸಿದರೆ ಒಳ್ಳೆಯ ಗಾಳಿ, ಹಣ್ಣು, ಹೂವು ಕೊಡುತ್ತದೆ ಈ ನಿಟ್ಟಿನಲ್ಲಿ ಪರಿಸರ ಕಾಪಾಡಲು ಮುಂದಾಗಬೇಕು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಭೂಮಿ ನಮ್ಮ ನೆಲ ಅಭಿಯಾನ ಆರಂಭಿಸಿ ಮಣ್ಣಿನಲ್ಲಿ…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಡ್ರೋಣ್‌ಗಳನ್ನು ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಡ್ರೋಣ್ ಬಳಕೆಯನ್ನು ಪ್ರಮುಖವಾಗಿ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಾವರಗಳ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಎಲ್ಲ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ಭದ್ರತೆ ಒದಗಿಸುವ ಎಲ್ಲ ಖಾಸಗಿ ಭದ್ರತಾ ಸಂಸ್ಥೆಗಳು, ಕಣ್ಗಾವಲು ಅಥವಾ ಇತರ ಉದ್ದೇಶಗಳಿಗಾಗಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಡ್ರೋಣ್‌ಗಳನ್ನು ಹಾರಿ ಬಿಡುವುದು, ಬಳಕೆ ಮಾಡಬಾರದೆಂದು ಅವರು ಹೇಳಿದ್ದಾರೆ. ಭಾರತ, ಪಾಕ್ ಗಡಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮತ್ತು ಭದ್ರತಾ ಪಡೆಗಳ ಅನಿಯಂತ್ರಿತ ಮತ್ತು ಗುರುತಿಸಲಾಗದ ಡ್ರೋಣ್ ಚಟುವಟಿಕೆಯ ಬಗ್ಗೆ, ವಿಶೇಷವಾಗಿ ಸೂಕ್ಷ್ಮ ಮಿಲಿಟರಿ ಮತ್ತು ಪ್ರಮುಖ ಸ್ಥಾವರಗಳ ಬಳಿ (ಸಂಸ್ಕಾರಣಾಗಾರಗಳು, ಬಂದರುಗಳು, ವಿದ್ಯುತ್ ಸ್ಥಾವರಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ತೈಲ ಡಂಪ್‌ಗಳು ಮತ್ತು ಸಾರ್ವಜನಿಕರ ಸ್ಥಾವರಗಳು) ಎದ್ದಿರುವ ಭದ್ರತಾ…

Read More

ಚಿಕ್ಕಮಗಳೂರು: ಸರ್ಕಾರ ಪೇಪರ್‌ಲೆಸ್ ಸೇವೆ ಉತ್ತೇಜಿಸುವ ಉದ್ದೇಶದೊಂದಿಗೆ ರಾಜ್ಯದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ ಲ್ಯಾಪ್‌ಟಾಪ್ ಪಡೆದುಕೊಂಡ ಕಂದಾಯ ಇಲಾಖೆ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ಬೇರೆಯವರಿಗೆ ಲ್ಯಾಪ್‌ಟಾಪ್ ಕೊಡುವ ಮೂಲಕ ಸರ್ಕಾರದ ಅಗತ್ಯ ಮಾಹಿತಿಗಳು ಸೋರಿಕೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಇದೂವರೆಗೆ ಗ್ರಾಮ ಲೆಕ್ಕಾಧಿಕಾರಿಗಳು ಮೊಬೈಲ್‌ನಲ್ಲಿ ದಾಖಲೆ ಪತ್ರಗಳನ್ನು ಸಿದ್ಧಪಡಿಸುವ ಮೂಲಕ ಸೇವೆ ಸಲ್ಲಿಸುತ್ತಿದ್ದರು. ಇದನ್ನರಿತ ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರುಗಳು ಚರ್ಚಿಸಿ ರಾಜ್ಯದ ಎಲ್ಲ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಿಲು ನಿರ್ಧರಿಸಿದ್ದಾರೆ ಎಂದರು. ಪ್ರತೀ ಲ್ಯಾಪ್‌ಟಾಪ್‌ಗೆ ೪೦ ಸಾವಿರ ರೂ ವೆಚ್ಚವಾಗುತ್ತಿದ್ದು, ಈಗಾಗಲೇ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಅಧಿಕಾರಿಗಳು,…

Read More