Author: chikkamagalur express

ಚಿಕ್ಕಮಗಳೂರು:  ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದೊಂದಿಗೆ ಒಂದು ಭೂಮಿ ಒಂದು ಆರೋಗ್ಯ ಎಂಬ ಘೋಷವಾಕ್ಯದ ಮೂಲಕ ಯೋಗ ಶಿಕ್ಷಣ, ಪ್ರಾಣಾಯಾಮ ಹಾಗೂ ಧ್ಯಾನ ಉಚಿತ ತರಗತಿಯನ್ನು ಜೂ.೫ ರಿಂದ ನಗರದೆಲ್ಲೆಡೆ ಆರಂಭಿಸಲಾಗುವುದೆಂದು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಸಿ.ಎಸ್. ಶ್ರೀನಿವಾಸ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜೂ.೨೧ ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತ ಯೋಗ ತರಬೇತಿ ಶಿಬಿರಗಳನ್ನು ಜೂ.೫ ರಿಂದ ೨೦ ರವರೆಗೆ ಒಟ್ಟು ೧೫ ದಿನಗಳ ಕಾಲ ಜಿಲ್ಲೆಯ ೨೩ ಸ್ಥಳಗಳಲ್ಲಿ ನಡೆಸಲಾಗುವುದೆಂದು ಹೇಳಿದರು. ಜೂ.೨೧ ರಂದು ಜಿಲ್ಲಾಡಳಿತ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಶ್ರಯದಲ್ಲಿ ವಿಜಯಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಚಿಕ್ಕಮಗಳೂರು ನಗರ, ಕಡೂರು, ಶೃಂಗೇರಿ, ಲಿಂಗದಹಳ್ಳಿ ಈ ನಾಲ್ಕು ಕಡೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇಂದಿನ ಯಾಂತ್ರಿಕ ಜಗತ್ತಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಒತ್ತಡ, ಮಾನಸಿಕ ಕ್ಷೆಭೆಗಳಿಂದ ಮನಸ್ಸು, ದೇಹವನ್ನು ಪ್ರಶಾಂತವಾಗಿಡಲು…

Read More

ಚಿಕ್ಕಮಗಳೂರು:  ಮಿಂಚಿನ ಕಾರ್ಯಾಚರಣೆ ನಡೆಸಿ ೪೩ ಎಕರೆ ಅರಣ್ಯ ಒತ್ತುವರಿ ಭೂಮಿಯನ್ನು ತೆರವು ಮಾಡುವ ಮೂಲಕ ಅಧಿಕಾರಿಗಳು ಇದೇ ಮೊದಲ ಭಾರಿಗೆ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯ ಭದ್ರಾ ಅಭಯಾರಣ್ಯದ ಹುಲಿ ಮೀಸಲು ವ್ಯಾಪ್ತಿಯ ಮುತ್ತೋಡಿ ವಲಯದ ಕೆಸವಿನ ಮನೆ ಸರ್ವೇ ನಂಬರ್ ೪೩ರಲ್ಲಿ ನಗರದ ನರೇಂದ್ರ ಪೈ ಎಂಬುವರಿಗೆ ಸೇರಿದ ಕೆಸವಿನಮನೆ ಹಕ್ಲು ತೋಟದಲ್ಲಿ ಅಭಯಾರಣ್ಯಕ್ಕೆ ಸೇರಿದ ೪೩ ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿತ್ತು. ಈ ಸಂಬಂಧ ೨೦೨೨-೨೩ನೇ ಸಾಲಿನಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ೧೯೭೨ರ ಅನ್ವಯ ಪ್ರಕರಣವು ಕೂಡ ದಾಖಲಾಗಿತ್ತು. ನ್ಯಾಯಾಲಯದ ಆದೇಶ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ಅವರ ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಅರಣ್ಯ ಒತ್ತುವರಿ ಅಂಶ ಸಾಬೀತಾದ ಹಿನ್ನೆಲೆಯಲ್ಲಿ ಒತ್ತುವರಿ ತೆರವುಮಾಡಿಕೊಡುವಂತೆ ಒತ್ತುವರಿದಾರರಿಗೆ ಏಪ್ರಿಲ್ ಒಂದು ತಿಂಗಳು ಕಾಲಾವಕಾಶ ನೀಡಿ ಆದೇಶ ಮಾಡಲಾಗಿತ್ತು. ಸದರಿ ಒತ್ತುವರಿದಾರರು ಯಾವುದೇ ಅರಣ್ಯ ಒತ್ತುವರಿ ತೆರವು ಮಾಡಿಕೊಡದ ಹಿನ್ನೆಲೆಯಲ್ಲಿ, ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ಕಳೆದ ೩…

Read More

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯಲ್ಲಿನ ೧೦೧ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಿ ದತ್ತಾಂಶವನ್ನು (ಎಂಪೆರಿಕಲ್ ಡಾಟಾ) ಸಂಗ್ರಹಿಸಿ ಹೊಸದಾದ ಸಮೀಕ್ಷೆಯನ್ನು ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್.ನಾಗಮೋಹನ್‌ದಾಸ್ ಇವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಮೇ ೫ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ. ಅದರಂತೆ ರಾಜ್ಯಾದ್ಯಂತ ಈಗಾಗಲೇ ಸಮೀಕ್ಷೆ ನಡೆಯುತ್ತಿದ್ದು, ಇದೀಗ ಆ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ, ಹವಾಮಾನ ವೈಪರೀತ್ಯಗಳಿಂದಾಗಿ ಪರಿಶಿಷ್ಟ ಜಾತಿ, ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂಬ ಕಾರಣಕ್ಕಾಗಿ ಸಮೀಕ್ಷಾ ಅವಧಿಯನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ವಿನಂತಿಸಿದ್ದಾರೆ. ಜೊತೆಗೆ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗುವಂತೆ ಈ ವಿಸ್ತರಣೆ ಮಾಡಲಾಗಿದ್ದು, ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ)ವನ್ನು ಜೂನ್ ೨ ರಿಂದ ಜೂ.೮ರವರೆಗೆ ವಿಸ್ತರಿಸಲಾಗಿದೆ ಮತ್ತು ಆನ್‌ಲೈನ್…

Read More

ಚಿಕ್ಕಮಗಳೂರು: ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಖಾಯಂ ನೌಕರರ ಸಂವಿಧಾನಾತ್ಮಕ ಸಾರ್ವತ್ರಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಅಜಾದ್ ವೃತ್ತದಲ್ಲಿ ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು. ಇಂದು ವಸತಿ ಶಾಲೆಗಳ ನೌಕರರ ಸಂಘದ ಜಿಲ್ಲಾಧ್ಯಕ್ಷೆ ದೀಪಾ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿದರು. ಸಮಾಜ ಕಲ್ಯಾಣ ಇಲಾಖೆಯ ಕ್ರೈಸ್ ಅಧೀನದಲ್ಲಿ ನಡೆಯುತ್ತಿರುವ ಎಸ್ಸಿ, ಎಸ್‌ಟಿ, ಓಬಿಸಿ ವಸತಿ ಶಾಲೆಗಳ ನಿರ್ವಹಣೆಗಾಗಿ ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಬೇಕು ಅಥವಾ ಕ್ರೈಸ್ ಅಧೀನದ ವಸತಿ ಶಾಲೆಗಳನ್ನು ಖಾಯಂ ಸಿಬ್ಬಂದಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕೆಂದು ಆಗ್ರಹಿಸಿದರು. ಆರೋಗ್ಯ ಸಂಜೀವಿನಿ, ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಮರಣ ಮತ್ತು ನಿವೃತ್ತಿ ಉಪದಾನ ಯೋಜನೆಯನ್ನು ಕ್ರೈಸ್ ಖಾಯಂ ನೌಕರರಿಗೆ ವಿಸ್ತರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಳೆದ ೧೨ ವರ್ಷದಿಂದ ಕ್ರೈಸ್ ಸಂಸ್ಥೆ ಮೂಲಕ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು…

Read More

ಚಿಕ್ಕಮಗಳೂರು: : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ ೧೦ ದಿನಗಳ ಉಚಿತ ತರಬೇತಿಯನ್ನು ಜೂನ್ ೧೭ ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಜೂನ್ ೧೨ ಕೊನೆಯ ದಿನವಾಗಿದೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: ೯೭೪೦೯೮೨೫೮೫, ೯೨೪೧೪೮೨೫೪೧,…

Read More

ಚಿಕ್ಕಮಗಳೂರು: ಪರಿಶಿಷ್ಟ ಜಾತಿಯಲ್ಲಿನ ೧೦೧ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಿ ದತ್ತಾಂಶವನ್ನು (ಎಂಪೆರಿಕಲ್ ಡಾಟಾ) ಸಂಗ್ರಹಿಸಿ ಹೊಸದಾದ ಸಮೀಕ್ಷೆಯನ್ನು ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್.ನಾಗಮೋಹನ್‌ದಾಸ್ ಇವರ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಮೇ ೫ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ. ಅದರಂತೆ ರಾಜ್ಯಾದ್ಯಂತ ಈಗಾಗಲೇ ಸಮೀಕ್ಷೆ ನಡೆಯುತ್ತಿದ್ದು, ಇದೀಗ ಆ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ, ಹವಾಮಾನ ವೈಪರೀತ್ಯಗಳಿಂದಾಗಿ ಪರಿಶಿಷ್ಟ ಜಾತಿ, ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂಬ ಕಾರಣಕ್ಕಾಗಿ ಸಮೀಕ್ಷಾ ಅವಧಿಯನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ವಿನಂತಿಸಿದ್ದಾರೆ. ಜೊತೆಗೆ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗುವಂತೆ ಈ ವಿಸ್ತರಣೆ ಮಾಡಲಾಗಿದ್ದು, ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ)ವನ್ನು ಜೂನ್ ೨ ರಿಂದ ಜೂ.೮ರವರೆಗೆ ವಿಸ್ತರಿಸಲಾಗಿದೆ ಮತ್ತು ಆನ್‌ಲೈನ್…

Read More

ಚಿಕ್ಕಮಗಳೂರು:  ವಚನ ಸಾಹಿತ್ಯ ಎಂಬುದು ಕೊನೆಯಿರದ ತೀರ, ಅದರಲ್ಲಿ ಮಾನವ ನೆಮ್ಮದಿ ಜೀವನಕ್ಕೆ ಅಗತ್ಯವಿರುವ ಸಂಸ್ಕಾರ, ಸಂಸ್ಕೃತಿ ಅಡಗಿದೆ. ಅದನ್ನು ಅರಿತು ಮುನ್ನಡೆದವನೆ ನಿಜ ಶರ ಣನಾಗುತ್ತಾನೆ ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಕಲ್ಯಾಣನಗರದ ಎಂ.ಎಸ್.ಲೋಕಶಪ್ಪ ಸಭಾಂಗಣದಲ್ಲಿ ಭಾನುವಾರ ಸಂಜೆ ನಡೆದ ಎಸ್.ಎಂ.ಲೋ ಕೇಶಪ್ಪ ಮತ್ತು ಸಹೋದರರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತ ನಾಡಿ ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯ ಕುರಿತು ಸಂದೇಶಗಳಿವೆ. ಮನಸ್ಸಿನಿಂದ ಮನಸ್ಸಿನ ಸಂಪರ್ಕವೇ ಅನುಭಾವ. ಅದುವೇ ವಚನದ ಜೀವಾಳ. ಮನು?ನಿಗೆ ಜ್ಞಾನಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ ಎಂದು ತೋರಿಸಿಕೊಟ್ಟ ವಚನ ಸಾಹಿತ್ಯದಿಂದ ಸಮಾಜ ಕಲಿಯುವುದು ಸಾಕಷ್ಟಿದೆ ಎಂದರು. ಸಂಸ್ಕಾರದಿಂದ ಬದುಕು ಸಾರ್ಥಕವಾಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿರುವ ಇಂದಿನ ಪೀಳಿಗೆಯವರಿಗೆ ಸಂಸ್ಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ತಾಯಂದಿರ ಪಾತ್ರ ಮಹತ್ತರವಾಗಿದೆ. ಜೀವ ನದ ನಿಜ ಸತ್ಯ, ಅಂಕು-ಡೊಂಕುಗಳನ್ನು ತಿದ್ದಿ ಹೇಳುವುದು ಹಿರಿಯರ ಕೆಲಸ. ಅದನ್ನು ಪಾಲಿಸುವುದು,…

Read More

ಚಿಕ್ಕಮಗಳೂರು: ರಾಜ್ಯದ ವಿವಿಧ ಭಾಗಗಳ ಅಲ್ಲಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿದ್ದ ಕೋವಿಡ್ ವೈರಸ್ ಇದೀಗ ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಕೋವಿಡ್ 19 ಕಾಣಿಸಿಕೊಂಡಾಗ ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಜಿಲ್ಲಾಡಳಿತ ಈ ಬಾರಿ ಆರಂಭದಲ್ಲೇ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜೊತೆಗೆ ಜಿಲ್ಲಾಸ್ಪತ್ರೆ, ತಾಲೂಕು, ಹೋಬಳಿ ಆಸ್ಪತ್ರೆಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಕೋವಿಡ್ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗೋವಿಂದ್ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಆರ್‌ಟಿಪಿಸಿಆರ್ ಕೋವಿಡ್ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಮತ್ತೆ ಆರ್ ಟಿಪಿಸಿಆರ್ ಪರೀಕ್ಷೆ ಆರಂಭಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಅತಿಯಾದ ಜ್ವರ, ಶೀತ, ಉಸಿರಾಟದ ತೊಂದತೆಯಿಂದ ಬಳಲುತ್ತಿರುವವರ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಗುತ್ತಿದೆ. ಜ್ವರ, ಶೀತದಿಂದ ಬಳಲುತ್ತಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿಲ್ಲ. ಬದಲಿಗೆ ತೀವ್ರ ಜ್ವರ, ಶೀತ, ಉಸಿರಾಟದ ತೊಂದರೆಯಿಂದ…

Read More