Subscribe to Updates
Get the latest creative news from FooBar about art, design and business.
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
- ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯ
- e-paper (10-07-2025) Chikkamagalur Express
- ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು
Author: chikkamagalur express
ಚಿಕ್ಕಮಗಳೂರು: ಭಾರತೀಯರ ಮನದಾಳದಲ್ಲಿ ಸ್ಥಿರಸ್ಥಾಯಿಯಾಗಿ ಉಳಿದಿರುವ ಅಹಲ್ಯ ಬಾಯಿ ಹೊಳ್ಕರ್ ಉತ್ತಮ ಆಡಳಿತ, ಜನಾನುರಾಗಿ ಕಾರ್ಯ ಮತ್ತು ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃ ತಿಕ ಅಭಿವೃದ್ಧಿಗಳಿಂದಾಗಿ ಮಾದರಿಯಾಗಿದ್ದಾರೆ ಎಂದು ಭಾಜಪ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂ ಜುಳಾ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಶನಿವಾರ ನಡೆದ ಲೋಕಮಾ ತೆ ಅಹಲ್ಯ ಬಾಯಿ ಹೊಳ್ಕರ್ ೩೦೦ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಮಹರಾಷ್ಟ್ರದಲ್ಲಿ ಜನಿಸಿ ಮಧ್ಯಪ್ರದೇಶದ ಸೊಸೆಯಾಗಿ ತೆರಳಿದ ಅಹಲ್ಯ ಬಾಯಿ ಸತತ ಮೂರು ದಶಕ ದಿಂದ ರಾಜ್ಯದ ಆಳ್ವಿಕೆಯನ್ನು ನಿಭಾಯಿಸಿ ನಾರಿ ಶಕ್ತಿಯನ್ನು ಎತ್ತಿಹಿಡಿದವರು. ಅತಿ ಕಡಿಮೆ ವಯಸ್ಸಿನಲ್ಲಿ ಬಾಲ್ಯ ವಿವಾಹವಾಗಿ ಪತಿಯನ್ನೇ ಕಳೆದು ಅಹಲ್ಯರವರು ಇಡೀ ರಾಜ್ಯಭಾರವನ್ನು ಹತೋಟಿಗೆ ತಂದು ಬಾ ಲ್ಯವಿವಾಹ ಕನಿಷ್ಟ ಪದ್ಧತಿಯನ್ನು ಹೋಗಲಾಡಿಸಿದರು ಎಂದರು. ಮಹಿಳಾ ಸಬಲೀಕರಣಕ್ಕಾಗಿ ನೇಯ್ಗೆ ವೃತ್ತಿ, ಹತ್ತಿ ಬೆಳೆ ಕೃಷಿ ಹಾಗೂ ಆಭರಣ ತಯಾರಿಸುವ ತರಬೇ ತಿಗಳನ್ನು ಹೆಣ್ಣುಮಕ್ಕಳಿಗೆ ಒದಗಿಸಿ ಸ್ವಾವಲಂಬಿ ಬದುಕಿಗೆ…
ಚಿಕ್ಕಮಗಳೂರು: ಕಳೆದ ನಾಲ್ಕು ದಿನಗಳಿಂದ ನಗರಸಭೆ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ನಡೆಸುತ್ತಿದ್ದ ಪೌರಸೇವಾ ನೌಕರರ ಅನಿದಿರ್ಷ್ಟಾವಧಿ ಮುಷ್ಕರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಳಿಸಿ ಇಂದಿನಿಂದ ಪೌರಕಾರ್ಮಿಕರು ಕರ್ತವ್ಯಕ್ಕೆ ಮರಳಿದ್ದಾರೆ. ಇಂದು ಬೆಳಗ್ಗೆ ನಗರಸಭೆ ಆವರಣದಿಂದ ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಪೌರ ಕಾರ್ಮಿಕರು, ಆಜಾದ್ ವೃತ್ತದವರೆಗೆ ಸಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಘದ ಜಿಲ್ಲಾಧ್ಯಕ್ಷ ಎನ್.ಅಣ್ಣಯ್ಯ ಮಾತನಾಡಿ, ಪೌರ ಕಾರ್ಮಿಕರಿಗೆ ಕೆಜಿಐಡಿ ಮತ್ತು ಜ್ಯೋತಿ ಸಂಜೀವಿನಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಬಹುತೇಕ ಈಡೇರಿಸುವುದಾಗಿ ಪೌರಾಡಳಿತ ಸಚಿವರು ಲಿಖಿತ ಪತ್ರದ ಮೂಲಕ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದರು. ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರಿಗೆ ನೇರ ಪಾವತಿಯೆಡೆಗೆ ಹಾಗೂ ಹಾಲಿ ನೇರ ಪಾವತಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಕಾಯಂಗೊಳಿಸುವುದಾಗಿ ಲಿಖಿತ ಪತ್ರದ ಮೂಲಕ ಸಚಿವರು ತಿಳಿಸಿದ್ದಾರೆ ಎಂದು ವಿವರಿಸಿದರು. ಈಗಾಗಲೇ ಒಟ್ಟು ನಗರಸಭೆಯಲ್ಲಿ ನೇರಪಾವತಿಯಡಿ ೭೦ ನೌಕರರು ಸೇವೆ ಸಲ್ಲಿಸುತ್ತಿದ್ದು,…
ಚಿಕ್ಕಮಗಳೂರು: : ಬಡ ರೋಗಿಗಳ ಪಾಲಿಗೆ ವರದಾನವಾಗಿರುವ ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ನಗರದ ಮಲ್ಲೇಗೌಡ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿಗಳು, ಆರೊಗ್ಯ ಸಚಿವರು ಬಡವರ ವಿರೋಧಿ ಧೋರಣೆ ತಳೆದಿದ್ದಾರೆಂದು ಆರೋಪಿಸಿದರಲ್ಲದೆ, ಕೂಡಲೇ ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ, ದೀನ, ದುರ್ಬಲರು, ಬಡವರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿ ಆಸರೆಯಾಗಿದ್ದನ್ನು ಸಹಿಸದ ರಾಜ್ಯ ಸರ್ಕಾರ ಜನೌಷಧಿ ಕೇಂದ್ರ ಮುಚ್ಚಿಸಿ ಜನರಿಗೆ ಇನ್ನಷ್ಟು ಬರೆ ಎಳೆಯಲು ಮುಂದಾಗಿವೆ ಎಂದು ಆರೋಪಿಸಿದರು. ನರೇಂದ್ರ ಮೋದಿ ಜನಪರ ಆಡಳಿತವನ್ನು ಜನರ ಮನಸ್ಸಿನಿಂದ ಅಳಿಸುವ ದುರುದ್ದೇಶದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಹುಡುಕುತ್ತಿದೆ. ಹಾಗೂ…
ಚಿಕ್ಕಮಗಳೂರು: ರಾಜ್ಯದಲ್ಲಿ ಪ್ರತೀವರ್ಷ ೧೦೦ ಕಾಲುಸಂಕ ನಿರ್ಮಿಸಲು ನೀಲಿ ನಕ್ಷೆ ತಯಾರಿಸಲಾಗಿದ್ದು, ಈಗಾಗಲೇ ೨೦ ಕೋಟಿ ರೂ. ಅನುದಾನದಲ್ಲಿ ೨೦ ಕಡೆ ಕಾಲುಸಂಕ ನಿರ್ಮಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮೂಡಿಗೆರೆ ತಾಲ್ಲೂಕಿನ ಹಳಸೆ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ೩೬ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಲುಸಂಕ ನಿರ್ಮಿಸಲು ಪ್ರಾಥಮಿಕ ಹಂತದಲ್ಲಿ ತಲಾ ಒಂದು ಕೋಟಿ ರೂ. ಅನುದಾನ ಒದಗಿಸಲಾಗಿದೆ. ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆಯಿಂದ ರಸ್ತೆ, ಸೇತುವೆ, ರೈತರ ಬೆಳೆ ಮತ್ತಿತರ ಆಸ್ತಿಪಾಸ್ತಿಗಳಿಗೆ ಹಾನಿಯಾದ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಈ ಸಂಬಂಧದ ವರದಿ ಬಂದ ಕೂಡಲೆ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸೂಚನೆ ನೀಡಲಿದ್ದಾರೆ. ೨೦೧೯ ರಿಂದ ನಿರಂತರವಾಗಿ ಅತಿವೃಷ್ಟಿಯುಂಟಾಗಿ ಸೇತುವೆ,…
ಚಿಕ್ಕಮಗಳೂರು: ಉದ್ಯೋಗ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಹೊರಗುತ್ತಿಗೆ ಪೌರನೌಕರರು ನಡೆಸುತ್ತಿರುವ ಅರ್ನಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ನಗರವೆಲ್ಲ ಗಬ್ಬೆದ್ದು ಕೊಳಕಾಗುತ್ತಿದೆ. ಸಂತೆ ಮೈದಾನ, ಎಪಿಎಂಸಿ ಯಾರ್ಡ್, ಮೀನು ಮಾರುಕಟ್ಟೆ, ದಿನನಿತ್ಯ ಕಸ ಸಂಗ್ರಹ ಮಾಡುತ್ತಿದ್ದ ಕಸ ಸಂಗ್ರಹ ಪಾಯಿಂಟ್‌ಗಳಲ್ಲಿ ರಾಶಿರಾಶಿ ಕಸ ಬಿದ್ದಿದ್ದು, ಜಿಲ್ಲಾ ಶಕ್ತಿ ಕೇಂದ್ರವಾದ ಜಿಲ್ಲಾಧಿಕಾರಿಗಳ ಕಚೇರಿ ಆವರಣವನ್ನು ಎರಡು ದಿನದಿಂದ ಸ್ವಚ್ಚಗೊಳಿಸದ ಹಿನ್ನೆಲೆಯಲ್ಲಿ ಕಸ ಕಡ್ಡಿಯಿಂದ ಕಚೇರಿ ಪಾಳುಬಿದ್ದ ಬಂಗಲೆಯಂತೆ ಕಾಣುತ್ತಿದೆ. ನೀರುಗಂಟಿಗಳ ಹೊರತುಪಡಿಸಿ ಉಳಿದಂತೆ ಕಸ ಗುಡಿಸುವವರು, ಕಸ ಲೋಡ್ ಮಾಡುವವರು ಸೇರಿದಂತೆ ಹೊರಗುತ್ತಿಗೆ ನೌಕರರೆಲ್ಲರೂ ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ನಗರ ಸ್ವಚ್ಛತೆ ಮಾಡುವವರಿಲ್ಲದೆ ಇಡೀ ನಗರ ಸ್ಮಶಾನ ಸದೃಶ್ಯವಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿ, ರಾಶಿ ತುಂಬಾ ಹಂದಿ, ನಾಯಿಗಳ ಹಿಂಡು, ಜಾನುವಾರುಗಳು ಪ್ಲಾಸ್ಟಿಕ್ ಮತ್ತಿತರೆ ವಸ್ತುಗಳನ್ನು ಮೆಲ್ಲುತ್ತಿರುವ ದೃಶ್ಯ ಕಾಣಸಿಗುತ್ತಿದೆ. ನಗರದ ಸಂತೆ ಮಾಳದಲ್ಲಿ ಸಂತೆ ನಂತರ ವ್ಯಾಪಾರಿಗಳು ಬಿಟ್ಟುಹೋದ ತರಕಾರಿ ಗುಡ್ಡೆಗಳು, ಟೊಮೆಟೋ ಮತ್ತಿತರೆ ತ್ಯಾಜ್ಯಗಳು ಸಂತೆ ಆವರಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು ಸುತ್ತುಮುತ್ತಲು…
ಚಿಕ್ಕಮಗಳೂರು: ನಗರದಲ್ಲಿ ನೂತನವಾಗಿ ಆರಂಭವಾಗಿರುವ ವೃದ್ಧಿ ಸೌಹಾರ್ದ ಸಹಕಾರಿ ಸಂಘ ಯಶಸ್ವಿಯಾಗಿ ನಡೆಯುವ ಮೂಲಕ ಸಾರ್ವಜನಿಕರಿಗೆ ಹಾಗೂ ಷೇರುದಾರರಿಗೆ ಸಾಲಸೌಲಭ್ಯ ನೀಡಿ ಆರ್ಥಿಕ ಪ್ರಗತಿಗೆ ಸಹಕರಿಸಲಿ ಎಂದು ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್. ಸುರೇಶ್ ಶುಭ ಹಾರೈಸಿದರು. ಅವರು ಇಂದು ವೃದ್ಧಿ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಆಡಳಿತ ಮಂಡಳಿಯಲ್ಲಿ ಹೆಚ್ಚು ಯುವಕರೇ ಇರುವುದರಿಂದ ಹಾಗೂ ಸಿಇಓ ಜವಾಬ್ದಾರಿ ಬಹಾಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸೌಹಾರ್ದ ಸಹಕಾರ ಸಂಘ ಚನ್ನಾಗಿ ನಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಮಾತನಾಡಿ, ಚಿಕ್ಕಮಗಳೂರು ನಗರದ ಜನತೆ ಹಾಗೂ ಸುತ್ತಮುತ್ತಲ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವೃದ್ಧಿ ಸೌಹಾರ್ದ ಸಹಕಾರ ಸಂಘವನ್ನು ಸ್ಥಾಪನೆ ಮಾಡಿದ್ದಾರೆಂದು ಶುಭ ಹಾರೈಸಿದರು. ಈಗಾಗಲೇ ಬಹಳಷ್ಟು ಜನ ಅವರವರ ಅನುಕೂಲಕ್ಕೆ ತಕ್ಕಂತೆ ಹಣಕಾಸಿನ ನೆರವು ಪಡೆಯುತ್ತಾರೆ. ಮೈಕ್ರೋಫೈನಾನ್ಸ್ ಮೂಲಕ ಆರ್ಥಿಕ ಸಹಾಯ ಪಡೆದುಕೊಳ್ಳುತ್ತಾರೆ. ಆ ದೃಷ್ಟಿಯಲ್ಲಿ ಈ ಸಹಕಾರ…
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು) ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ೨೦೨೫ನೇ ಸಾಲಿನ ಜೂನ್ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ. ದಿನಾಂಕ ೩ ರಂದು ಶಿವಮೊಗ್ಗದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ, ೪ರಂದು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯಲ್ಲಿ ಜಡಿಮಠ ಶ್ರೀಗಳವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭ, ೬ರಂದು ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾರ್ಜುವಳ್ಳಿ ಹಿರೇಮಠದಲ್ಲಿ ರಜತ ಸಂಚಿಕೆ ಬಿಡುಗಡೆ ಮತ್ತು ಇಷ್ಟಲಿಂಗ ಮಹಾಪೂಜಾ, ೭ರಂದು ಅಜ್ಜಂಪುರ ತಾಲೂಕ ಹಣ್ಣೆಮಠದಲ್ಲಿ ಧರ್ಮ ಜಾಗೃತಿ ಸಮಾರಂಭ, ೮ರಂದು ಕೊರಟಗೆರೆ ತಾಲೂಕ ಸಿದ್ಧರಬೆಟ್ಟ ಕ್ಷೇತ್ರದಲ್ಲಿ ವೀರಭದ್ರ ಶ್ರೀಗಳವರ ಪಟ್ಟಾಧಿಕಾರದ ವರ್ಧಂತಿ ಹಾಗೂ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸುವರು. ದಿನಾಂಕ ೯ರಂದು ಮೈಸೂರಿನಲ್ಲಿ ಇಷ್ಟಲಿಂಗ ಮಹಾಪೂಜಾ, ೧೦ರಂದು ಭದ್ರಾವತಿ ತಾಲೂಕ ಹನುಮಂತಪುರದಲ್ಲಿ ಇಷ್ಟಲಿಂಗ ಮಹಾಪೂಜಾ ನಡೆಸುವರು. ದಿನಾಂಕ ೧೧ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. ದಿನಾಂಕ ೧೩ರಂದು ಚಿಕ್ಕಮಗಳೂರಿನಲ್ಲಿ ಶ್ರೀ ಜಗದ್ಗುರು…