Subscribe to Updates
Get the latest creative news from FooBar about art, design and business.
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
- ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯ
- e-paper (10-07-2025) Chikkamagalur Express
- ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು
Author: chikkamagalur express
ಚಿಕ್ಕಮಗಳೂರು: ಮುಷ್ಕರ ನಿರತರ ಬಳಿಗೆ ತೆರಳಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಸ್ವಚ್ಚತೆ ಮೂಲಕ ನಗರವಾಸಿಗಳ ಆರೋಗ್ಯ ಕಾಪಾಡುವ ಪೌರಸೇವಾ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ನಡೆಸುತ್ತಿರುವ ಮುಷ್ಕರಕ್ಕೆ ತಾವು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ನಿಮ್ಮೆಲ್ಲರ ಪ್ರತಿನಿಧಿಯಾಗಿ ಶಿಫಾರಸ್ಸು ಪತ್ರವನ್ನು ಮೇ.೩೦ ರಂದು ಶುಕ್ರವಾರ ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಮಾಡಿ ಪತ್ರ ಸಲ್ಲಿಸಿ ಶೀಘ್ರ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸುತ್ತೇನೆಂದು ಹೇಳಿದರು. ಇದೇ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂಖಾನ್ ದೂರವಾಣಿ ಮೂಲಕ ಮಾತನಾಡಿದರು ಐದು ದಿನ ಗಡುವು ನೀಡುವಂತೆ ಕೋರಿದ್ದು, ಹಂತಹಂತವಾಗಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆಂದು ಮುಷ್ಕರ ನಿರತ ಪೌರಕಾರ್ಮಿಕರಿಗೆ ತಿಳಿಸಿದರು. ನಗರಸಭಾಧಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು ಮಳೆ ಚಳಿ ಬಿಸಿಲು ಎನ್ನದೆ ವಾಟರ್ ಮ್ಯಾನ್‌ಗಳು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದರು. ಲೋಡರ್‍ಸ್ ಮತ್ತು ಚಾಲಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ…
ಚಿಕ್ಕಮಗಳೂರು: ನಗರದ ಎಂ.ಜಿ ರಸ್ತೆಯ ೫ನೇ ಕ್ರಾಸ್‌ನಲ್ಲಿರುವ ಸೂರಪ್ಪ ಬೀದಿಯ ಎಂ.ಎಂ ಕಾಂಪ್ಲೆಕ್ಸ್‌ನಲ್ಲಿ ವೃದ್ಧಿ ಸೌಹಾರ್ದ ಸಹಕಾರಿ ಸಂಘವನ್ನು ಮೇ.೨೯ ರಂದು ಗುರುವಾರ ಬೆಳಗ್ಗೆ ೧೧ ಗಂಟೆಗೆ ಪ್ರಾರಂಭಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಸಿ.ಟಿ. ಜಯವರ್ಧನ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ನೂತನ ವೃದ್ಧಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಕಚೇರಿ, ಆಡಳಿತ ಮಂಡಳಿಯ ಸಭಾ ಕೊಠಡಿ ಅಧ್ಯಕ್ಷರು-ಉಪಾಧ್ಯಕ್ಷರು ನಿರ್ದೇಶಕರ ಪದಗ್ರಹಣ ಹಾಗೂ ಸನ್ಮಾನ ಸಮಾರಂಭವನ್ನು ಅಂದು ಏರ್ಪಡಿಸಲಾಗಿದೆ ಎಂದರು. ನೂತನ ಕಚೇರಿ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಉದ್ಘಾಟಿಸುವರು, ನೂತನ ಭದ್ರತಾ ಕೊಠಡಿಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ, ಆಡಳಿತ ಮಂಡಳಿಯ ಸಭಾ ಕೊಠಡಿಯನ್ನು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ಸಿಇಓ ಕೊಠಡಿಯನ್ನು ಎಂಎಲ್‌ಸಿ ಎಸ್.ಎಲ್. ಭೋಜೇಗೌಡ ಉದ್ಘಾಟಿಸುವರು ಎಂದು ಹೇಳಿದರು. ನಿರ್ದೇಶಕರ ಪದಗ್ರಹಣವನ್ನು ವಿಧಾನ ಪರಿಷತ್‌ನ ಉಪಸಭಾಪತಿ ಎಂ.ಕೆ. ಪ್ರಾಣೇಶ್ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಜಿ. ನಂಜನಗೌಡ, ಬೆಳ್ಳಿಪ್ರಕಾಶ್, ಡಿ.ಎನ್. ಸುರೇಶ್ ಕುಮಾರ್,…
ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ನಗರಸಭೆ ಆವರಣದಲ್ಲಿ ಪೌರಸೇವಾ ನೌಕರರ ಸಂಘದ ಜಿಲ್ಲಾ ಶಾಖೆ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಹಾಗೂ ಕೆಜಿಐಡಿ, ಜಿವಿಎಫ್, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುತ್ತಿರುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ಅಣ್ಣಯ್ಯ ಮಾತನಾಡಿ, ಮಹಾನಗರ ಪಾಲಿಕೆಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ಕಾಯಂಗೊಳಿಸಲಾಗಿದೆ. ಆದರೆ, ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಜೊತೆಗೆ ಆರೋಗ್ಯ ವಿಮೆ, ಕೆಜಿಐಡಿ ಸೌಲಭ್ಯಗಳನ್ನು ಕಳೆದ ೩೦ ವರ್ಷಗಳಿಂದ ವಾಟರ್ ಮ್ಯಾನ್‌ಗಳಾಗಿ ಸೇವೆ ಸಲ್ಲಿಸುತ್ತಿರುವವರಿಗೆ ನೇರ ಪಾವತಿ ಅಡಿಗೆ ತರಬೇಕೆಂದು ಒತ್ತಾಯಿಸಿದರು. ಸರ್ಕಾರ ಇಂದು ಸಂಜೆ ವೇಳೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವ ತೀರ್ಮಾನ ಕೈಗೊಂಡು…
ಚಿಕ್ಕಮಗಳೂರು: ನಗರದ ಗೌರಿಕಾಲುವೆಯಲ್ಲಿರುವ ವಿದ್ಯಾಭಾರತಿ ಇಂಗ್ಲಿಷ್ ಪ್ರೈಮರಿ ಮತ್ತು ಹೈಸ್ಕೂಲ್‌ಗೆ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರಾದ ಸಾಯರಾ ಫಾತಿಮಾ ತಿಳಿಸಿದ್ದಾರೆ. ಮಹಮದ್ ಅನಾಸ್ ಶೇ.೯೪.೦೪, ಜೈನ್ ಸಾಲಿಕ್ ಶೇ.೯೨.೧೪, ಮಹಮದ್ ಶಮಾಸ್ ಶೇ.೮೯.೧೨, ಅಮೃತ ಹೆಚ್.ಸಿ ಶೇ.೮೯, ವೈಷ್ಣವಿ.ಎ.ಕೆ ಶೇ.೮೮, ಧನಷ್ ಶೇ.೮೭, ಅಫೀಫಾ ಶೇ.೮೪.೩೨, ಮಹಮದ್ ಅಜಾನ್ ಶೇ.೮೪ ರಷ್ಟು ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆಂದು ಶ್ಲಾಘಿಸಿದರು. ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆಂದು ತಿಳಿಸಿರುವ ಅವರು, ಇದಕ್ಕೆ ಶ್ರಮಿಸಿದ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. Vidya Bharathi School achieves 100% results in SSLC
ಚಿಕ್ಕಮಗಳೂರು: ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರಾಗಿ ಗುತ್ತಿಗೆದಾರರಾದ ಕೆ.ಎಸ್. ಶಾಂತೇಗೌಡ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಮಾಡಲಾಗಿದೆ. ಇಂದು ನಗರದ ಕನಕ ಭವನದಲ್ಲಿ ನಡೆದ ಜಿಲ್ಲಾ ಕುರುಬರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಸಂಘದಲ್ಲಿ ಹಾಲಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಎಸ್. ಶಾಂತೇಗೌಡ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಶಾಂತೇಗೌಡರು ಸಮಾಜದ ಕೆಲಸ ಮಾಡಿಕೊಂಡು ಬರುತ್ತಿದ್ದು, ಈಗ ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆಮಾಡಿರುವುದರಿಂದ ಉತ್ತಮವಾಗಿ ಸಮುದಾಯದ ಕೆಲಸ ಮಾಡಲು ಗುರಿ ಹೊಂದಿದ್ದೇನೆ ಎಂದರು. ಕನಕ ಭವನಕ್ಕೆ ಕಾಂಪೌಂಡ್ ನಿರ್ಮಾಣ, ಅಡುಗೆ ಮನೆ ಮುಂತಾದವುಗಳ ನಿರ್ಮಾಣದ ಜೊತೆಗೆ ಕುರುಬ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಕಳೆದ ಹತ್ತಾರು ವರ್ಷಗಳಿಂದ ಕುರುಬರ ಸಂಘದ ಅಧ್ಯಕ್ಷರಾಗಿದ್ದ ಕೆ.ಎಂ. ಮಂಜುನಾಥ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಸಹಕರಿಸಿದ ಎಲ್ಲಾ ಸರ್ವ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಕೆ.ಎ. ಗೋಪಾಲಕೃಷ್ಣ, ಕೆ.ವಿ. ಮಂಜುನಾಥ, ಎನ್.ಹೆಚ್. ಮೋಹನ್, ರೇಖಾಹುಲಿಯಪ್ಪಗೌಡ, ಡಿ.ಸಿ.…
ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಮಣ್ಣನಗಂಡಿ ಬಳಿ ಕಳೆದ 24 ಗಂಟೆಗಳೊಳಗೆ ಒಂದು ಹಿಂದೊಂದು ಮೂರು ಕಾರುಗಳು ಪಲ್ಟಿಯಾದ ಘಟನೆ ಉಂಟಾಗಿದೆ. ಭಾರೀ ಮಳೆಯಿಂದಾಗಿ ರಸ್ತೆ ಸ್ಪಷ್ಟವಾಗಿ ಕಾಣದೆ ಚಾಲಕರು ನಿಯಂತ್ರಣ ಕಳೆದುಕೊಂಡು ಈ ಅವಘಡಗಳು ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಸಂಭವಿಸಿದ ಪ್ರಥಮ ಅಪಘಾತದ ನಂತರ, ಅದೇ ಸ್ಥಳದಲ್ಲಿ ಇನ್ನೂ ಎರಡು ಕಾರುಗಳು ಪಲ್ಟಿಯಾದವು. ಒಂದು ಕಾರು ನೇರವಾಗಿ ಹೇಮಾವತಿ ನದಿಗೆ ಬಿದ್ದಿದ್ದು, ಇನ್ನೊಂದು ಕಾರು ರಸ್ತೆಯ ಬದಿಯ ಎಡೆದಾರಿಗೆ ಜಾರಿದೆ. ವಾಹನ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಬಣಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಅವೈಜ್ಞಾನಿಕ ಮತ್ತು ಅಸುರಕ್ಷಿತ ಎಂದು ಟೀಕಿಸಿದ್ದು, ಇದನ್ನು ಅಪಘಾತಗಳಿಗೆ ಕಾರಣವಾಗುತ್ತಿರುವುದಾಗಿ ಆರೋಪಿಸಿದ್ದಾರೆ. ಹೆದ್ದಾರಿ ಬದಿ ಎಚ್ಚರಿಕೆ ಫಲಕಗಳ ಹಾಗೂ ಸರಿಯಾದ ನಿಕಾಸಿ ವ್ಯವಸ್ಥೆಯ ಕೊರತೆಯು ಮಳೆಯ ಸಮಯದಲ್ಲಿ ವಾಹನ ಚಾಲನೆಗೆ ಭಾರೀ ಅಡಚಣೆಯಾಗುತ್ತಿದೆ ಎಂಬುದು ಸ್ಥಳೀಯರ ವಾದ. ಅಪಘಾತದ…
ಚಿಕ್ಕಮಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದು ಚಾಲಕ ಕುಳಿತ ಜಾಗದಲ್ಲೇ ಸಾವನ್ನಪ್ಪಿರುವ ಘಟನೆ ಜಯಪುರ ಸಮೀಪ ಸಂಭವಿಸಿದ್ದು, ಈ ಬಾರಿಯ ಮುಂಗಾರು ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾದಂತಾಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪ ಬೈರೇದೇವರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಮೃತರನ್ನು ೩೮ ವರ್ಷದ ರತ್ನಾಕರ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಊಟಕ್ಕೆಂದು ಮನೆಗೆ ತೆರಳುವಾಗ ರಸ್ತೆ ಬದಿಯ ಭಾರೀ ಗಾತ್ರದ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದಿದೆ. ಆಟೋದ ಮುಂಭಾಗದಲ್ಲೇ ಮರ ಬಿದ್ದಿರುವುದರಿಂದ ಜೀವ ಉಳಿಸಿಕೊಳ್ಳಲು ಚಾಲಕನಿಗೆ ಯಾವುದೇ ಅವಕಾಶವೂ ಸಿಕ್ಕಿಲ್ಲ. ತಕ್ಷಣ ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮರವನ್ನು ಯಂತ್ರಗಳಿಂದ ಕತ್ತರಿಸಿ ತೆರವು ಮಾಡಿದ್ದಾರೆ. ಮಲೆನಾಡಿನಲ್ಲಿ ಈ ವರ್ಷದ ಮಹಾಮಳೆಗೆ ಇದು ಮೂರನೇ ಬಲಿಯಾಗಿದ್ದು, ಮುಂಗಾರಿಗೆ ಮೊದಲ ಬಲಿಯಾಗಿದೆ. ಇತ್ತಿಚೆಗೆ ಅಜ್ಜಂಪುರ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದರು. ಪೂರ್ವ ಮುಂಗಾರಿನ ಅಬ್ಬರಕ್ಕೆ ಜಿಲ್ಲೆಯು ನಲುಗುತ್ತಿದ್ದು,…
ಚಿಕ್ಕಮಗಳೂರು: ಪ್ರಕೃತಿಯ ನಡುವೆ ಜೀವನ ರೂಪಿಸಿಕೊಂಡಿರುವ ಆದಿವಾಸಿಯ ಬುಡ ಕಟ್ಟು ಜನಾಂಗದವರು ಮೊದಲು ಶಿಕ್ಷಣ, ಆರೋಗ್ಯದಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡು ಸಮರ್ಥ ವ್ಯಕ್ತಿ ಗಳಾಗಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಕರೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ನ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ಧ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ಪೂರ್ವಿಕರ ಕಾಲದಿಂದಲೂ ಕಾಡಿನ ಮಧ್ಯೆಯೇ ಬದುಕು ಕಟ್ಟಿಕೊಂಡು ಸಾಗುತ್ತಿರುವ ಜನಾಂಗದವ ರು ತಮ್ಮ ಮಕ್ಕಳ ಭವಿಷ್ಯವನ್ನು ಶಿಕ್ಷಣದಿಂದ ವಂಚಿತಗೊಳಿಸಬಾರದು. ಐಎಎಸ್, ಐಪಿಎಸ್ ಅಥವಾ ಸ ರ್ಕಾರಿ ಹುದ್ದೆಗಳ ಕನಸುಗಳನ್ನು ಹೊತ್ತಿರುವ ಮಕ್ಕಳಿಗೆ ಪಾಲಕರು ಎಲ್ಲಾ ಹಂತದಲ್ಲೂ ಪ್ರೋತ್ಸಾಹಿಸಬೇಕು ಎಂದರು. ಬುಡಕಟ್ಟು ಸಮುದಾಯವನ್ನು ಮೇಲ್ದರ್ಜೇಗೇರಿಸಲು ಕೇಂದ್ರ ಹಾಗೂ ರಾಜ್ಯಸರ್ಕಾರ ಅನೇಕ ಸವಲ ತ್ತುಗಳನ್ನು ಪೂರೈಸಿ ಹೊಸಬದುಕನ್ನು ರೂಪಿಸುತ್ತಿದೆ. ಆ ನಿಟ್ಟಿನಲ್ಲಿ ಜನಾಂಗದ ಮಕ್ಕಳು ಕಠಿಣ ಪರಿಶ್ರಮ, ನಿರಂತರ ಕಲಿಕೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಜೊತೆಗೆ ಪೂರ್ವಿಕರ ಆಚಾರ-ವಿಚಾರ ,ಪೂಜಾಪದ್ಧತಿ, ಹಿಂದಿನ ಕಸುಬುನ್ನು ಉಳಿಸಬೇಕು…