Author: chikkamagalur express

ಚಿಕ್ಕಮಗಳೂರು: ಅಧಿಕಾರ ವಿಕೇಂದ್ರೀಕರಣದ ಮೂಲ ಸ್ಥಾನ ಗ್ರಾಮ ಪಂಚಾಯಿತಿ ಅಧಿಕಾರದ ಜೊತೆಗೆ ಮೂಲಭೂತ ಸೌಕರ್ಯಗಳು ಒಟ್ಟಿಗೆ ಸಮ್ಮಿಲನಗೊಂಡಾಗ ಆ ಪಂಚಾಯಿತಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಅಭಿಪ್ರಾಯಿಸಿದರು. ಅವರು ಇಂದು ಕ್ಷೇತ್ರದ ವ್ಯಾಪ್ತಿಯ ಅಂಬಳೆಯಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ವರೂ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದ ಪರಿಣಾಮ ಕಳೆದ ೫ ತಿಂಗಳಲ್ಲಿ ಗ್ರಾಮ ಪಂಚಾಯಿತಿಯ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣವಾಗಿದೆ ಎಂದು ಶ್ಲಾಘಿಸಿದ ಅವರು, ಈಗಾಗಲೇ ಕ್ಷೇತ್ರದ ವ್ಯಾಪ್ತಿಯ ಮೆಲೆನಾಡು ಭಾಗದಲ್ಲಿ ಹಲವಾರು ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಸಾರ್ವಜನಿಕ ಸಮರ್ಪಣೆ ಮಾಡಿದ್ದೇವೆಂದು ಹೇಳಿದರು. ಆದರೆ, ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು, ಸದಸ್ಯರು ಒಗ್ಗಟ್ಟಾಗಿ ಜನಪರ ಕೆಲಸ ಮಾಡುತ್ತಿರುವುದರಿಂದ ಸಮಸ್ಯೆಗಳು ನನ್ನ ಬಳಿ ಬರುವುದು ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಜೀವಿನಿ ಕಟ್ಟಡ ನಿರ್ಮಾಣವಾಗಬೇಕು, ಇದಕ್ಕೆ ಬೇಕಾದ ಅನುದಾನ ನೀಡುವುದಾಗಿ ಭರವಸೆ…

Read More

ಚಿಕ್ಕಮಗಳೂರು:  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ಬೆಲೆ ಏರಿಕೆಯನ್ನೇ ಸಾಧನೆ ಎಂದು ಪರಿಗಣಿಸಿ ಸಮಾವೇಶ ಮಾಡಲು ಹೊರಟಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು. ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ೨ ವರ್ಷದಲ್ಲಿ ೬೪ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದೆ. ಜನನ-ಮರಣ ಪ್ರಮಾಣ ಪತ್ರಗಳಿಂದ ಹಿಡಿದು ವಿದ್ಯುತ್, ನೀರು, ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಎಕ್ಸೈಸ್ ಡ್ಯೂಟಿ, ಸ್ಟಾಂಪ್ ಪೇಪರ್, ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ. ಇದು ಕಾಂಗ್ರೆಸ್‌ನ ಹೇಳಿಕೊಳ್ಳಲಾಗದ ಸಾಧನೆ ಎಂದು ವ್ಯಂಗ್ಯವಾಡಿದರು. ಮತ್ತೊಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಮೂಡಾ ಹಗರಣ, ವಾಲ್ಮೀಕಿ ಹಗರಣ, ಸ್ಮಾರ್ಟ್ ಮೀಟರ್ ಹಗರಣ, ಪ್ಲಾನ್ ಅನುಮೋದನೆಗೆ ೧೦೦ ಲಂಚ ವಸೂಲಿ ಹಗರಣ, ಗುತ್ತಿಗೆದಾರರರಿಂದ ಶೇ.೬೦ ರಷ್ಟು ವಸೂಲಿ ಹಗರಣ ಇದೂ ಸಹ ಕಾಂಗ್ರೆಸ್ ಹೇಳಿಕೊಳ್ಳಲಾಗದ ಸಾಧನೆಗಳು ಎಂದು ಕುಟುಕಿದರು. ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ ಆದರೆ ಜಾತಿ, ಜಾತಿ ನಡುವೆ ಸಂಘರ್ಷವನ್ನು ಹುಟ್ಟು ಹಾಕಿ…

Read More

ಚಿಕ್ಕಮಗಳೂರು: ಇದೊಂದು ಬೇಜವಬ್ದಾರಿ ಸರ್ಕಾರ, ಬೆಲೆ ಏರಿಕೆಯ ತನ್ನ ಚಾಳಿಯನ್ನು ಬಿಟ್ಟಿಲ್ಲ. ಖಜಾನೆ ಖಾಲಿ, ಆಸ್ಪತ್ರೆಯಲ್ಲಿ ಔಷಧಿ ಇಲ್ಲ, ಮೂರು ಬಾರಿ ಮದ್ಯದ ಬೆಲೆ ಏರಿಕೆ. ಇದು, ನಿಮ್ಮ ಸಾಧನೆ ಎಂದು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದ ಅವರು, ಬೆಲೆ ಏರಿಕೆ ನಿಮ್ಮ ನಿತ್ಯದ ಕೆಲಸವಾಗಿದೆ. ಎರಡು ವರ್ಷದ ನಿಮ್ಮ ಸಾಧನೆ ಏನು ಎಂದು ಅವರು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿ ನಾಳೆ ಕಾಂಗ್ರೆಸ್ ಪಕ್ಷ ನಡೆಸಲು ಉದ್ದೇಶಿಸಿರುವ ಸಾಧನಾ ರ್‍ಯಾಲಿಯ ಬಗ್ಗೆ ಮಾತನಾಡಿದರು ಮದ್ಯದ ಟ್ಯಾಕ್ಸ್ ಶೇ. ೧೦೦ ರಷ್ಟು ಹೆಚ್ಚಳ ಮಾಡಲಾಗಿದೆ. ಲೈಸನ್ಸ್ ಶುಲ್ಕ ೨೭ ರಿಂದ ೫೦ ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಐಎಂಎಲ್ ಲೈಸನ್ಸ್ ೪೫ ರಿಂದ ೯೫ ಸಾವಿರಕ್ಕೆ ಹೆಚ್ಚಿಸಲಾಗಿದೆ. ಮದ್ಯದ ದರ ಹೆಚ್ಚು ಮಾಡುವುದರಿಂದ ಮದ್ಯ ಕುಡಿಯುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ. ಮದ್ಯದ ದರ ಹೆಚ್ಚಳ ಆಗಿರುವುದರಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ.…

Read More

ಚಿಕ್ಕಮಗಳೂರು: ಶಶಿತರೂರ್ ಭಾರತ ಹಾಗೂ ೧೪೦ ಕೋಟಿ ಜನರನ್ನು ಪ್ರತಿನಿಧಿಸಿರುವುದು. ಬಿಜೆಪಿ ಅಥವಾ ಕಾಂಗ್ರೆಸ್ ಪ್ರತಿನಿಧಿಸಲು ಹೋಗಿರುವುದು ಅಲ್ಲಾ, ಭಾರತದ ಜನರ ಭಾವನೆಯನ್ನು ಪ್ರತಿನಿಧಿಸಿ ಹೋಗುತ್ತಿದ್ದಾರೆ ಎಂದಾಗ ಅದನ್ನ ಗೌರವಿಸ ಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತಿಳಿಸಿದರು ಅವರು ಭಾನುವಾರ ಸುದ್ದಿಗಾರೊಂದಿಗೆ ಮಾತನಾಡಿ ರಾಷ್ಟ್ರೀಯ ಪಕ್ಷ ಹಾಗೂ ರಾಷ್ಟ್ರೀಯ ಪ್ರಜ್ಞೆ ಇರುವ ಪಕ್ಷಗಳ ಕರ್ತವ್ಯ ಕಾಂಗ್ರೆಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಂತ ಹೆಸರನ್ನ ಇಟ್ಟುಕೊಂಡಿದೆ ನ್ಯಾಷನಲ್ ಅನ್ನೋದನ್ನ ಕಾಂಗ್ರೆಸ್‌ನವರು ಮರೆಯ ಬಾರದು ಸಲಹೆ ನೀಡಿದರು ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್‌ರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣದ ಕುರಿತು ಪ್ರತಿಕ್ರಿಯೆ ನೀಡಿದರು. ಕೌರವರು ಹಾಗೂ ಪಾಂಡವರ ಕಥೆಯ ಮೂಲಕ ಕಾಂಗ್ರೆಸ್ಸಿಗರನ್ನು ಕುಟುಕಿದ್ದಾರೆ. ಕೌರವರು ಪಾಂಡವರನ್ನ ವನವಾಸಕ್ಕೆ ಕಳುಹಿಸ್ತಾರೇ, ಈ ಸಂದರ್ಭದಲ್ಲಿ ಕೌರವರು…

Read More

ಚಿಕ್ಕಮಗಳೂರು: ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ೨೦೨೫-೨೬ (ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ) ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ (ಆಡಿಷನ್) ಮೇ ೨೫ರಂದು ಬೆಳಿಗ್ಗೆ ೧೦ ಗಂಟೆಗೆ ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನಶೀಲವಾಗಿದೆ. ತನ್ನ ಚಟುವಟಿಕೆಯ ಭಾಗವಾಗಿ ೧೬ ರಿಂದ ೩೨ ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿ ರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು ೫೦೦ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಸಂಜೆ ೫.೩೦ರಿಂದ…

Read More

ಚಿಕ್ಕಮಗಳೂರು: ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ ಮನೋರಂಜನೆ ಸಂಗೀತ ಮಹಾವಿದ್ಯಾಲಯ ಟ್ರಸ್ಟ್‌ನ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಶ್ಚ್ಯಾತ್ಯ ಸಂಸ್ಕೃತಿಗೆ ಯುವ ಪೀಳಿಗೆ ಮಾರುಹೋಗುತ್ತಿದ್ದು, ಸಂಗೀತ ಪರಂಪರೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮಹತ್ವವಾಗಿದೆ ಎಂದರು. ಭಾರತೀಯ ಸಂಸ್ಕೃತಿಯ ಅವಿಚಿನ್ನ ಭಾಗವಾದ ಸಾಂಸ್ಕೃತಿಕ, ಧಾರ್ಮಿಕ,ಸಾಮಾಜಿಕ ಮೌಲ್ಯಗಳಿಗೆ ತರ್ಪಣ ಬಿಡುತ್ತಿರುವ ಸಂದಿಗ್ದ ಪರಿಸ್ಥಿತಿಯಲ್ಲಿ ದೇಶೀಯ ಸಂಗೀತ ಕಲೆ ಉಳಿಸುವಲ್ಲಿ ಮತ್ತು ಕರ್ಮ,ಯೋಗ ,ಜ್ಞಾನಮಾರ್ಗದಲ್ಲಿ ತೊಡಗಿಸಿಕೊಂಡಿರುವ ಮನರಂಜನೆ ಸಂಗೀತ ಮಹಾವಿದ್ಯಾಲಯದ ಕಾರ್ಯಶ್ಲಾಘನೀಯ ಎಂದರು. ಸಂಗೀತಗಾರರಿಗೆ ಮತ್ತು ಕೇಳುಗರಿಗೆ ಮೆದುಳಿನ ಅಗತ್ಯವಿಲ್ಲ ಹೃದಯವಂತಿಕೆ ಇರಬೇಕು. ಇಂದಿನ ಅಬ್ಬರದ ಕಾರ್ಯಕ್ರಮಗಳ ಅಪಸಂಸ್ಕೃತಿಯ ಹೊರಳು ಹಾದಿಯಲ್ಲಿರುವ ಸಮಾಜದಲ್ಲಿ ಸಂಸ್ಕೃತಿಯನ್ನು ಉಳಿಸಿ,ಬೆಳೆಸುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದು ಹೇಳಿದರು. ಶಿವಮೊಗ್ಗದ ಸಂಗೀತ ವಿದ್ವಾನ್‌ಗುರುಗುಹಾನಾಗರಾಜ್ ಮಾತನಾಡಿ ಶಾಸ್ತ್ರೀಯ ಸಂಗೀತ ಮನಸ್ಸು,ಬುದ್ಧಿಗಳನ್ನು ಎಚ್ಚರ…

Read More

ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಣ್ಯ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿಕ್ಕಮಗಳೂರು ಮಾತ್ರವಲ್ಲದೆ, ನೆರೆಯ ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲೂ ಕಾಡಾನೆಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಿಗೆ ಅನ್ವಯವಾಗುವಂತೆ ಕಾಡಾನೆ ನಿಯಂತ್ರಣಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅನುಪಾಲನಾ ವರದಿಯ ಆಧಾರದ ಮೇಲೆ ಸಭೆ ನಡೆಸುವಂತೆ ಕೆಲವು ಶಾಸಕರು ಸಲಹೆ ನೀಡಿದರು. ಆದರೆ, ವಿಧಾನಪರಿಷತ್‌ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌ ಅವರು ಕಾಡಾನೆಗಳ ಉಪಟಳ ನಿಯಂತ್ರಣ ಕುರಿತಂತೆ ಚರ್ಚೆಗೆ ಮನವಿ ಮಾಡಿದರು. ಅಲ್ಲದೆ, ಪ್ರಮುಖವಾಗಿ ಮೂಡಿಗೆರೆ ತಾಲೂಕಿನಲ್ಲಿ 55 ಕಾಡಾನೆಗಳು ನಾಲ್ಕೈದು ಗುಂಪುಗಳಲ್ಲಿ ಓಡಾಡುತ್ತಿವೆ. ಇವುಗಳಿಂದಾಗಿ ರೈತರು, ಕಾಫಿ ಬೆಳೆಗಾರರಿಗೆ ಅಪಾರ…

Read More