Author: chikkamagalur express

ಚಿಕ್ಕಮಗಳೂರು: ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚು ಂಚನಗಿರಿ ಮಹಾಸಂಸ್ಥಾನದ ಮಠದ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಹೇಳಿದರು. ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ನಡೆದ ಬಿ.ಇ., ಎಂ.ಟೆಕ್., ಎಂಬಿಎ ಅಂ ತಿಮ ವ?ದ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆದಿಚುಂಚನಗಿರಿ ವಿಶ್ವ ವಿದ್ಯಾಲಯದಿಂದ ಪದವಿ ಪಡೆದು ಹೊಸ ಪ್ರಪಂಚ ಪ್ರವೇಶಿಸುತ್ತಿರುವ ಪದ ವೀಧರರ ನಿಜವಾದ ಜೀವನ ಈಗ? ಆರಂಭವಾಗಲಿದೆ. ವಿದ್ಯಾರ್ಥಿಗಳು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳು ವುದನ್ನು ಕಲಿತುಕೊಳ್ಳಬೇಕು. ನಿಮ್ಮ ಮೇಲೆ ಪೋ?ಕರು ಸಾಕ? ನಿರೀಕ್ಷೆಯಿದೆ ಎಂದರು. ಪದವಿ ಅಭ್ಯಾಸಿಸುವ ವೇಳೆಯಲ್ಲಿ ವಿದ್ಯಾರ್ಥಿಗಳು ಅನೇಕ ತುಂಟಾಟಗಳ ನಡುವೆಯು ಅಂತಿಮ ವಾ ಗಿ ಸಮಾಜದ ಮುಖ್ಯವಾಹಿನಿಗೆ ಧಾವಿಸಿದ್ದೀರಿ. ಇದೀಗ ಬದುಕು ಕಟ್ಟಿಕೊಳ್ಳುವ ಸಮಯವಾಗಿದೆ. ಕಳೆದ ಸಮಯ ಹಿಂತಿರುಗಿಬಾರದು. ಹಾಗಾಗಿ ಮುಂದಿನ ಭವಿಷ್ಯ ರೂಪಿಸುವ ಉದ್ಯೋಗದತ್ತ ದಾಪು ಹಾಕಬೇಕಿ ದೆ ಎಂದು ತಿಳಿಸಿದರು. ಶಿಕ್ಷಕರು…

Read More

ಚಿಕ್ಕಮಗಳೂರು: ಪ್ರಪಂಚದಲ್ಲಿಯೇ ಧರ್ಮದ ಆಧಾರದಲ್ಲಿ ಭಾರತ ಧಾರ್ಮಿಕವಾಗಿ ನೆಲೆ ಹೊಂದಿದ್ದು, ದೇಶ ಮತ್ತು ಧರ್ಮ ಇದ್ದರೆ ಮಾತ್ರ ನೆಮ್ಮದಿ ಬದುಕಿಗೆ ನಾಂದಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಸಮೀಪದ ಬೀಕನಹಳ್ಳಿಯಲ್ಲಿ ಶ್ರೀ ಕಾಳಮ್ಮ ಮತ್ತು ಶ್ರೀ ಚಿಕ್ಕಮ್ಮ ದೇವಿಯವರ ನೂತನ ದೇವಾಲಯ ಪ್ರವೇಶೋತ್ಸವ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ, ಕಳಸಾರೋಹಣ ಧಾರ್ಮಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ನೀಡುವ ಅನುದಾನದ ಜೊತೆಗೆ ಗ್ರಾಮಸ್ಥರು ಒಟ್ಟಾಗಿ ಸೇರಿ ಹಣ ಸಂಗ್ರಹಿಸಿ ದೇವಾಲಯ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರ ಎಂದ ಅವರು, ಹಿಂದೆ ಬ್ರಿಟೀಷರು ಘಜ್ನಿ ಮಹಮದ್ ದಾಳಿ ಮಾಡಿದ್ದರೂ ಭಾರತದಲ್ಲಿ ಧರ್ಮ ಮತ್ತು ಸಂಸ್ಕಾರ ಉಳಿದಿದೆ ಎಂದು ಹೇಳಿದರು. ದೇಶದಲ್ಲಿ ಧರ್ಮ, ಸಂಸ್ಕೃತಿ ನಾಶವಾಗದೇ ಇರುವುದಕ್ಕೆ ಕಾರಣ ಮುಕ್ಕೋಟಿ ದೇವರುಗಳ ಆಶೀರ್ವಾದದ ಫಲ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಸುಮಾರು ೨೬ ಜನ ಪ್ರವಾಸಿಗರು ಹತ್ಯೆಯಾಗಿರುವುದನ್ನು ಖಂಡಿಸಿದ ಅವರು, ತಿರಂಗ ಯಾತ್ರೆ ನಡೆಸುವ ಮೂಲಕ ಸೇನೆಗೆ ಬಲ-ಬೆಂಬಲ ತುಂಬುವ…

Read More

ಚಿಕ್ಕಮಗಳೂರು: ಶಾಂತಿ ಮತ್ತು ಜ್ಞಾನದ ಜ್ಯೋತಿಯನ್ನು ಬೆಳಗಿಸಿ ಜಗತ್ತಿನ ಕೋಟಿ ಕೋಟಿ ಜನರ ಹೃದಯವನ್ನು ಗೆದ್ದಂತಹ ವಿಶ್ವ ಶಾಂತಿಯ ಪ್ರತಿಪಾದಕ ಭಗವಾನ್ ಬುದ್ಧ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಪ್ರತಿಪಾದಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ರಿ.ಪೂ. ಆರನೇ ಶತಮಾನದಲ್ಲಿ ಕಪಿಲವಸ್ತು ರಾಜ್ಯದ ದೊರೆಯಾಗಿದ್ದ ಶುದ್ಧೋದನ ಹಾಗೂ ಮಾಯಾದೇವಿಯ ಪುತ್ರನಾಗಿ ಜನಿಸಿದವರು ಸಿದ್ಧಾರ್ಥ. ಮುಂದೆ ಒಬ್ಬ ಮಹಾ ಯೋಗಪುರುಷನಾಗುತ್ತಾನೆ, ಸನ್ಯಾಸಿಯಾಗುತ್ತಾನೆ ಎನ್ನುವ ಭವಿಷ್ಯ ನುಡಿ ಕೇಳಿದ ಮಹಾರಾಜ ಏನಾದರೂ ಮಾಡಿ ಮಗನನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡಬೇಕು. ಆತ ಸನ್ಯಾಸಿಯಾಗಬಾರದು ಎಂದು ಬಯಸಿ ಆತನಿಗೆ ವಿವಾಹವನ್ನು ಮಾಡುತ್ತಾನೆ. ಮಗುವೂ ಜನಿಸುತ್ತದೆ. ಆದರೂ ಆತ ಯೋಗ ಪುರುಷನಾಗುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ. ಅಂದಿನ ಪ್ರಾಪಂಚಿಕ ವ್ಯವಸ್ಥೆಯಲ್ಲಿ ವೃದ್ಧಾಪ್ಯ, ರೋಗಿಷ್ಟ ಮತ್ತು ಶವವನ್ನು ಹೊತ್ತೊಯ್ಯುತ್ತಿದ್ದ ದೃಶ್ಯವನ್ನು ಗಮನಿಸಿ ಆತನಲ್ಲಿ ಜ್ಞಾನೋದಯವಾಗಿ ಈ ಮೂರು ಎಲ್ಲರ ಜೀವನದಲ್ಲೂ ಬರುವಂತಹವು ಎಂದು…

Read More

ಚಿಕ್ಕಮಗಳೂರು: ಸಂಸಾರದ ಜಂಜಾಟ ಹಾಗೂ ಖಿನ್ನತೆಯಿಂದ ಹೊರಬರಲು ಮನುಷ್ಯ ದೇವಾಲಯ ಹಾಗೂ ಗುರುಗಳ ಸನ್ನಿಧಿಯಲ್ಲಿ ಪ್ರಾರ್ಥಿಸಿದರೆ ಚಿಂತೆಗಳು ಕಣ್ಮರೆಯಾಗಿ ಮನಸ್ಸಿಗೆ ಶಾಂತಿ ಲಭಿಸಲಿದೆ ಎಂದು ಮಾಚನಗೊಂಡನಹಳ್ಳಿ ಬೃಹ್ನಮಠದ ಶ್ರೀ ರೇಣುಕಾ ಮಹಂತ ಶಿವಾಚಾರ್ಯ ಸ್ವಾಮಿ ಜಿ ಹೇಳಿದರು. ತಾಲ್ಲೂಕಿನ ತೊಂಡವಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಶನೇಶ್ವರ ದೇವಾಲಯ ಪ್ರವೇಶೋತ್ಸವ ಹಾಗೂ ನೂತನ ವಿಗ್ರಹ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದಲ್ಲಿ ದಿವ್ಯಸಾನಿಧ್ಯ ವಹಿಸಿ ಅವರು ಆರ್ಶೀವಚನ ನೀಡಿ ಮಾನವರು ಕೆಲಸ ಕಾರ್ಯಗಳಲ್ಲಿ ಕೇವಲ ಆರ್ಥಿಕ ಸದೃಢರಾಗಬಹುದು. ಮನಸ್ಸಿಗೆ ಶಾಂತಿ ಲಭಿಸಲು ದೇವಾಲಯದ ಶ್ರದ್ದಾಕೇಂದ್ರಗಳು ಅವಶ್ಯಕತೆಯಿದೆ. ಆ ನಿಟ್ಟಿನಲ್ಲಿ ದೃಢ ಸಂಕಲ್ಪದೊಂದಿಗೆ ಮನುಷ್ಯನು ಮು ನ್ನೆಡೆದರೆ ಭಗವಂತನ ಪ್ರಭಾವದಿಂದ ವೈಯಕ್ತಿಕ ಬದುಕು ಹಸನಾಗಲಿದೆ ಎಂದು ಹೇಳಿದರು ಕೌಟುಂಬಿಕ ಚಿಂತೆ, ಮಕ್ಕಳ ಪಾಲನೆ, ಕೆಲಸದೊತ್ತಡದಿಂದ ಮಾನವರಿಗೆ ಹಲವಾರು ಸಂಕಷ್ಟಗಳು ಎ ದುರಾಗಲಿದ್ದು ಮಾನಸಿಕವಾಗಿ ಕುಗ್ಗುವ ಜೊತೆಗೆ ಶಾಂತಿ, ನೆಮ್ಮದಿ ಕಳೆದುಕೊಂಡು ಬದುಕೆಂಬ ಬಂಡಿಯ ನ್ನು ನಡೆಸಲಾಗದು, ಹೀಗಾಗಿ ಶ್ರದ್ದಾಕೇಂದ್ರ ಹಾಗೂ ಗುರುಗಳ ಆರ್ಶೀವಾದದಿಂದ ಕಳೆದುಕೊಂಡ ನೆಮ್ಮದಿ…

Read More

ಚಿಕ್ಕಮಗಳೂರು: ಭಾರತ ದೇಶದಲ್ಲಿ ಜನಿಸಿದ ನಾವು ಮೊದಲು ದೇಶ ಬಳಿಕ ಧರ್ಮ, ನಂತರ ಗ್ರಾಮ, ಮನೆ. ದೇಶಕ್ಕೆ ಉಗ್ರಗಾಮಿಗಳಿಂದ ಭಯೋತ್ಪಾದಕರ ಉಪಟಳದಿಂದ ತೊಂದರೆಯಾಗುತ್ತಿದ್ದು, ಈ ಸಂದರ್ಭದಲ್ಲಿ ದೇಶದ ಯಾವುದೇ ಧರ್ಮದ ಪ್ರಜೆಗಳ ಮೇಲೆ ದಾಳಿ ಮಾಡಿದರೆ ಸಹಿಸಲಾಗದು. ಕೇಂದ್ರ ಸರ್ಕಾರ ಉಗ್ರರನ್ನು ಸದೆಬಡಿಯಲು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ಶಾಸಕ ಹೆಚ್.ಡಿ. ತಮ್ಮಯ್ಯ ಎಂದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ರಾಜ್ಯಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೇನೆಗೆ ನೈತಿಕ ಬೆಂಬಲ ತುಂಬುವ ದೃಷ್ಟಿಯಿಂದ ಉಗ್ರವಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಾಶಮಾಡಲು ಮುಂದಾಗಿರುವ ಕೇಂದ್ರಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಬೆಂಗಳೂರಿನಲ್ಲಿ ನೆನ್ನೆ ನಡೆದ ತಿರಂಗಾ ಯಾತ್ರೆ ಇತಿಹಾಸದ ಪುಟದಲ್ಲಿ ಸೇರುತ್ತಿದೆ. ಇದರಲ್ಲಿ ಸರ್ವರೂ ಒಗ್ಗಟ್ಟಿನಿಂದ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಉಗ್ರಗಾಮಿಗಳನ್ನು ಸದೆಬಡಿಯುವ ಶಕ್ತಿಯನ್ನು ಸೇನೆಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ಭಾರತ ಅತೀ ಶೀಘ್ರ ಉಗ್ರಗಾಮಿಗಳ, ಭಯೋತ್ಪಾದಕರ ಮುಕ್ತ ದೇಶವಾಗಬೇಕು. ಯಾವುದೇ ರಾಜ್ಯದ ಪ್ರವಾಸಿ…

Read More

ಚಿಕ್ಕಮಗಳೂರು:  ಜಿಲ್ಲೆಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮುಂದಿನ ದಿನಗಳಲ್ಲಿ ಮಹಲ್‌ನಿಂದ ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಗುರಿಹೊಂದಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಸುಮಾರು ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಅತ್ತಿಗುಂಡಿಯಿಂದ ಕೊಳಗಾಮೆಗೆ ಹೋಗುವ ರಸ್ತೆ ಅಭಿವೃದ್ಧಿಗೆ ೧.೫೦ ಕೋಟಿ ರೂ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈಗಾಗಲೇ ಮಹಲ್‌ನಿಂದ ಕೆಮ್ಮಣ್ಣುಗುಂಡಿ ಸಂಪರ್ಕಿಸುವ ರಸ್ತೆಗೆ ಸುಮಾರು ೩೩ ಕೋಟಿ ರೂ ವೆಚ್ಚದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಲವು ತಾಂತ್ರಿಕ ತೊಂದಿರೆಯಿಂದಾಗಿ ವಾಪಸ್ ಬಂದಿದೆ ಎಂದು ಹೇಳಿದರು. ಈ ರಸ್ತೆ ಅಭಿವೃದ್ಧಿಯಾದರೆ ವಾಹನ ದಟ್ಟಣೆ ಕಡಿಮೆಯಾಗಿ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಕೆಮ್ಮಣ್ಣುಗುಂಡಿಯಿಂದ ತರೀಕೆರೆ ಮಾರ್ಗವಾಗಿ ಪ್ರವಾಸಿಗರು ವಾಪಸ್ ಹೋಗುತ್ತಾರೆಂದು ವಿವರಿಸಿದರು. ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಸೇರಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಪರಿಸರಕ್ಕೆ ಹಾನಿಯಾಗದಂತೆ ಸೂಕ್ತ…

Read More

ಚಿಕ್ಕಮಗಳೂರು: ಮಾನವನ ಮನಸ್ಸು ಬುದ್ಧಿ ಮತ್ತು ಸದ್ವಿಚಾರಗಳು ಬೆಳೆದು ಬಂದಾಗ ಶ್ರೇಯಸ್ಸು ನಿಶ್ಚಿತ. ಆದರ್ಶ ಬದುಕಿಗೆ ಗುರು ಕಾರುಣ್ಯ ಧರ್ಮಶ್ರದ್ಧೆ ಅವಶ್ಯಕ. ಧರ್ಮದ ದಿಕ್ಸೂಚಿ ಮಾನವನ ಬಾಳಿನ ಭಾಗ್ಯೋದಯಕ್ಕೆ ಅಡಿಪಾಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಶುಕ್ರವಾರ ತಾಲೂಕಿನ ಮುಗುಳವಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಾಲಯದ ಪ್ರವೇಶೋತ್ಸವ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಆಧುನಿಕ ಜಗತ್ತಿನಲ್ಲಿ ಪ್ರಗತಿಪರ ವಿಚಾರಧಾರೆಗಳ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಗೊಳ್ಳಬಾರದು. ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣು. ಧರ್ಮಶ್ರದ್ಧೆ ಸಾಮರಸ್ಯ ರಾಷ್ಟ್ರಾಭಿಮಾನ ಬೆಳೆಸುವ ಗುರಿ ಎಲ್ಲರದೂ ಆಗಬೇಕು. ರವಿಕಿರಣದಿಂದ ಪುಷ್ಪ ಅರಳುತ್ತದೆ. ಗುರು ಕರುಣ ಆತ್ಮವನ್ನು ಅರಳಿಸುತ್ತದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನಗಳು ಸಕಲರ ಬಾಳಿಗೆ ಬೆಳಕು ತೋರುತ್ತವೆ. ಮುಗುಳವಳ್ಳಿ ಗ್ರಾಮದ ಸಕಲ ಸದ್ಭಕ್ತರ ಸಹಕಾರದಿಂದ ಭವ್ಯ ದಿವ್ಯ ಶ್ರೀ ವೀರಭದ್ರೇಶ್ವರ ದೇವಾಲಯ ನಿರ್ಮಿಸಿರುವುದು ಅತ್ಯಂತ…

Read More