Subscribe to Updates
Get the latest creative news from FooBar about art, design and business.
- e-paper (21-10-2025) Chikkamagalur Express
- ರಾಜ್ಯ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡ ಪ್ರಥಮ ಸ್ಥಾನ
- ದೇವೀರಮ್ಮನ ದರ್ಶನಕ್ಕೆ ದೇವೀರಮ್ಮನ ಬೆಟ್ಟಕ್ಕೆ ಸಾಗಿ ಬಂದ ಭಕ್ತರು
- ಅಪರಾಧವನ್ನು ದ್ವೇಷಿಸಬೇಕು ಹೊರತು-ಅಪರಾಧಿಯಲ್ಲ
- ಮಲ್ಲೇನಹಳ್ಳಿ ಗ್ರಾಮದ ಬಿಂಡಿಗಾ ದೇವೀರಮ್ಮ ಉತ್ಸವ ಆರಂಭ
- e-paper (19-10-2025) Chikkamagalur Express
- ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ
- ಮೇದ ಜನಾಂಗವು ಸದಾ ಸಮಾಜದೊಂದಿಗೆ ಗಟ್ಟಿಯಾಗಿ ಉಳಿದಿದೆ
Author: chikkamagalur express
ಚಿಕ್ಕಮಗಳೂರು: ರಕ್ತದಾನ ಜೀವ ಉಳಿಸುವ ಮಹತ್ವಾದಾನ. ರಕ್ತದಾನ ಮಾಡು ವವರ ಆರೋಗ್ಯ ಸುಧಾರಿಸುವ ಜೊತೆಗೆ ದೈಹಿಕ, ಮಾನಸಿಕ ಹಾಗೂ ಶಾರೀರಿಕವಾಗಿ ಆರೋಗ್ಯವಾಗಿರಲು ಸಹಕಾರಿ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶೆ ರಾಜೇಶ್ವರಿ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಹೋಲಿಕ್ರಾಸ್ ಆಸ್ಪತ್ರೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಸಹಯೋಗದಲ್ಲಿ ವಕೀಲರಿಗೆ ಹಮ್ಮಿಕೊಂಡಿದ್ಧ ರಕ್ತದಾನ ಶಿಬಿರ ಹಾಗೂ ಉಚಿ ತ ಕಣ್ಣಿನ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಲ್ಲಿ ಹೆಚ್ಚು ಯುವವಕೀಲರು ಪಾಲ್ಗೊಂಡು ಶಿಬಿರ ಯಶಸ್ವಿಗೊಳಿಸಬೇಕು. ಪ್ರಕೃತಿ ಮನುಷ್ಯನಿ ಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದೆ, ಆದರೆ ಮನುಷ್ಯ ಅಲ್ಪಮಾನವನಾಗದೇ, ಮತ್ತೊಬ್ಬರ ಜೀವ ಉಳಿ ಸುವ ರೀತಿಯಲ್ಲಿ ರಕ್ತದಾನದಲ್ಲಿ ತೊಡಗಿಸಿಕೊಂಡರೆ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು. ತುರ್ತು ಚಿಕಿತ್ಸೆ ಅಥವಾ ಅಪಘಾತ ವೇಳೆಯಲ್ಲಿ ರಕ್ತವು ಬಹಳಷ್ಟು ಅವಶ್ಯಕತೆಯಿದೆ. ಹೀಗಾಗಿ ವಕೀಲ ರು ಸೇರಿದಂತೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮುಂದಾಗಬೇಕು. ಓರ್ವನ ರಕ್ತದಾನದಿಂದ ಕನಿಷ್ಟ ಮೂರು ಮಂದಿ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.…
ಚಿಕ್ಕಮಗಳೂರು: ಬಿಂಡಿಗಾ ಆದಿಶಕ್ತಿ ಶ್ರೀ ದೇವೀರಮ್ಮ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹಾಗೂ ನಿಲುಗಡೆ ವ್ಯವಸ್ಥೆಯನ್ನು ಕ್ರಮಬದ್ಧಗೊಳಿಸಿ ಆದೇಶ ಹೊರಡಿಸಿರುವ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಸಿ.ಎನ್.ಮೀನಾ ನಾಗರಾಜ್ ಅವರು ಅಕ್ಟೋಬರ್ ೧೯ರ ಬೆಳಿಗ್ಗೆ ೬ ಗಂಟೆಯಿಂದ ೨೦ರ ರಾತ್ರಿ ೧೦ ಗಂಟೆಯವರೆಗೆ ಸ್ಥಳೀಯರು ಹಾಗೂ ಭಕ್ತಾದಿಗಳ ವಾಹನಗಳನ್ನು ಹೊರತುಪಡಿಸಿ ತರೀಕೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುವ ಇತರ ಎಲ್ಲಾ ವಾಹನಗಳು ಕಡ್ಡಾಯವಾಗಿ ಕಡೂರು ಮಾರ್ಗವಾಗಿ ಚಲಿಸುವಂತೆ ಸೂಚಿಸಿದ್ದಾರೆ. ಬಿಂಡಿಗಾ ಹಾಗೂ ಮಲ್ಲೇನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್ ೧೯ ರಿಂದ ೨೩ರವರೆಗೆ ನಡೆಯಲಿರುವ ಶ್ರೀ ದೇವೀರಮ್ಮನವರ ಜಾತ್ರೆ ಹಾಗೂ ದೀಪೋತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿರುವ ವರದಿಯನ್ನು ಆಧರಿಸಿ ಅವರು ವಾಹನ ಸಂಚಾರ ಹಾಗೂ ನಿಲುಗಡೆ ಬಗ್ಗೆ ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅಕ್ಟೋಬರ್ ೧೯ ಮತ್ತು ೨೦ ರಂದು ಚಿಕ್ಕಮಗಳೂರು-ಮಲ್ಲೇನಹಳ್ಳಿ ಮತ್ತು ತರೀಕೆರೆ-ಲಿಂಗದಹಳ್ಳಿ-ಮಲ್ಲೇನಹಳ್ಳಿ ಮಾರ್ಗದಲ್ಲಿ ಅನುಮತಿ ಇಲ್ಲದೆ ಸಂಚರಿಸುವ ಖಾಸಗಿ ಬಸ್‌ಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅ.೧೯ ಮತ್ತು ೨೦…
e-paper (16-10-2025) Chikkamagalur Express
ಚಿಕ್ಕಮಗಳೂರು: ಸರಿಯಾದ ಹಣಕಾಸಿನ ವ್ಯವಸ್ಥೆ ಇದ್ದಾಗ ಮಾತ್ರ ಉದ್ಯಮ ಸ್ಥಾಪಿಸಲು ಸಾಧ್ಯ. ಈ ನಿಟ್ಟಿನಲ್ಲಿ ಬ್ಯಾಂಕಿನಲ್ಲಿ ದೊರೆಯುವ ಸಾಲಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಉದ್ಯಮಿ ಮುನೀರ್ ಅಹಮದ್ ಹೇಳಿದರು. ಅವರು ಇಂದು ಡಿಐಸಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ವಾಣಿಜ್ಯ ಇಲಾಖೆ, ಸರ್ಕಾರಿ ಪಾಲಿಟೆಕ್ನಿಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಒಂದು ದಿನದ ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿ ಕಾಪರ್ ಸಲ್ಫೇಟ್ ಕೇರಳದಿಂದ ರಾಜ್ಯಕ್ಕೆ ಬರುತ್ತಿತ್ತು. ಇದು ದುಬಾರಿಯಾಗಿದ್ದನ್ನು ಮನಗಂಡು ಉದ್ಯಮವನ್ನು ಸ್ಥಾಪಿಸಿ ಟನ್‌ಗೆ ೫ ಸಾವಿರ ರೂ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡಿದ ಪರಿಣಾಮ ಉದ್ಯಮ ಲಾಭದಾಯಕವಾಗಿ ನಡೆಯುತ್ತಿದೆ ಎಂದು ಹೇಳಿದರು. ಪ್ರತಿಯೊಬ್ಬರೂ ಇಂತಹ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿ ಎಂದು ಸಲಹೆ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶಾಂತರಾಂ ಹೆಗಡೆ ಮಾತನಾಡಿ, ಹೇಳಿದರೆ ಕೇಳಿದವರಿಗೆ ಲಾಭ ಎಂಬಂತೆ ಇಂದಿನ ಕಾರ್ಯಾಗಾರದಲ್ಲಿ ಅನುಭವಿ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದು, ಅವರ ಉಪಯುಕ್ತವಾದ ಮಾಹಿತಿಗಳನ್ನು ಪಡೆದು ಉದ್ಯಮಶೀಲರಾಗಿ ಎಂದು…
ಚಿಕ್ಕಮಗಳೂರು: ಪತ್ರಿಕೋದ್ಯಮ ವೈಚಾರಿಕೆ ಪ್ರಜ್ಞೆ ಮೂಡಿಸುವ ಪ್ರಬಲ ಮಾದ್ಯಮ ಎಂದು ಸಾಹಿತಿ ಹಾಗೂ ಕೆಪಿಸಿಸಿ ವಕ್ತಾರ ರವೀಶ್ ಬಸಪ್ಪ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ ಚಿಕ್ಕಮಗಳೂರು ಪ್ರೆಸ್‌ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಡಿ ಚಂದ್ರೇಗೌಡ ಆಯ್ಕೆಯಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷ ಮತ್ತು ವಿವಿಧ ಜನಪರ ಸಂಘಟನೆಗಳಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದಿಸಿ ಮಾತನಾಡಿದರು. ಸಮಾಜದಲ್ಲಿ ವ್ಯಕ್ತಿ ಎಷ್ಟೇ ಪ್ರಭಾವಿಯಾಗಿದ್ದರೂ ಅವರನ್ನು ಸುದ್ದಿಯಾಗಿಯೇ ನೋಡಬೇಕು, ಜಾತಿ, ಧರ್ಮ, ಪಕ್ಷ ನೋಡದೆ ಸುದ್ದಿಗೆ ಸೀಮಿತವಾಗಿ ಅವರನ್ನು ಕಾಣಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ಪತ್ರಕರ್ತರ ತಂಡ ಬೆಳಕು ಚೆಲ್ಲಿ ಗ್ರಾಮ, ವಾರ್ಡ್‌ಗೆ ಭೇಟಿನೀಡುವ ಮೂಲಕ ಜನರಿಗೆ ಅರಿವು ಮೂಡಿಸಿದಾಗ ಪತ್ರಿಕೋದ್ಯಮ ನಮ್ಮದು ಎಂಬ ಭಾವನೆ ಬೆಳೆಯುತ್ತದೆ ಎಂದರು. ವಸ್ತುನಿಷ್ಠ ಸುದ್ದಿಗಳು ಕಡಿಮೆಯಾಗಿರುವ ಜೊತೆಗೆ ಜಾಹಿರಾತುಗಳ ಬರಾಟೆಯಿಂದಾಗಿ ಇಂದು ದಿನಪತ್ರಿಕೆ ಓದುಗರ ಸಂಖ್ಯೆ ಗಣನೀಯವಾಗಿ ಕ್ಷೀಣಿಸುತ್ತಿದೆ ಎಂದು ವಿಷಾಧಿಸಿದರು. ಇಲ್ಲಿನ ಪತ್ರಕರ್ತರು ಹೊಗರೇಖಾನ್ ಚಳುವಳಿ ಆರಂಭಿಸಿದಾಗ ಪರಿಣಾಮಕಾರಿಯಾಗಿ ಸುದ್ದಿ ಪ್ರಕಟಿಸಿ ಹೋರಾಟಕ್ಕೆ ಶಕ್ತಿ ತುಂಬಿ ಬೆಂಬಲಿಸಿದರು…
e-paper (16-10-2025) Chikkamagalur Express
ಚಿಕ್ಕಮಗಳೂರು: ನಗರದ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿದಿನ ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಮತ್ತು ಪೌರ ನೌಕರರ ಆರೋಗ್ಯ ಕಾಪಾಡಲು ರಾಜ್ಯಸರ್ಕಾರ ಕ್ರೀಡಾಕೂಟ ಆಯೋಜನೆ ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಜಿಲ್ಲಾ ಆಟದ ಮೈದಾನದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಪೌರ ಕಾರ್ಮಿಕರು ತಮ್ಮ ಕುಟುಂಬವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ಸರ್ಕಾರ ಗ್ಲೌಸ್, ಶೂ, ಸಮವಸ್ತ್ರ ಮುಂತಾದ ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು, ಜೊತೆಗೆ ವಿಮಾ ಸೌಲಭ್ಯವನ್ನು ನೀಡಲಾಗಿದೆ ಎಂದರು. ವಾರ್ಷಿಕವಾಗಿ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಚಿಕಿತ್ಸೆ ನೀಡಲಾಗುತ್ತಿದೆ. ಇವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. ಸ್ವಾರ್ಥವಿಲ್ಲದೆ ನಿಸ್ವಾರ್ಥವಾಗಿ ಬದುಕುವ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕಾಗಿ ಪೌರ ಕಾರ್ಮಿಕರು ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಬೇಕು…
ಚಿಕ್ಕಮಗಳೂರು: ಸಂಪೂರ್ಣ ಗೋಹತ್ಯೆ ಕಾಯ್ದೆ ಜಾರಿಯಲ್ಲಿದೆ. ಗೋಹಂತಕರನ್ನು ಪೊಲೀಸರು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಮಾಡದೇ ಇದ್ದರೆ ನಾವೇ ಆ ಕೆಲಸವನ್ನು ಮಾಡುತ್ತೇವೆ. ಹಿಂದೂ ಸಮಾಜಕ್ಕೆ ಆ ತಾಕತ್ತು ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಇತ್ತಿಚೆಗೆ ನಗರದಲ್ಲಿ ಗೋವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಘಟನೆ ಸೇರಿದಂತೆ ಗೋಹತ್ಯೆ, ಲವ್‌ಜಿಹಾದ್ ನಂತಹ ಪ್ರಕರಣಗಳನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಆಜಾದ್ ಪಾರ್ಕ್ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸಿದರೆ ಗೋರಕ್ಷಣೆಯಂತಹ ಕಾರ್ಯಕ್ಕೆ ಬಜರಂಗದಳದ ಕಾರ್ಯಕರ್ತರು ಮುಂದಾಗುವುದಿಲ್ಲ. ಗೋಹಂತಕರಿಂದ ಹಫ್ತಾ ವಸೂಲಿ ಮಾಡಿ ಸುಮ್ಮನಾದರೆ ನಿಮ್ಮ ಹೆಂಡತಿ, ಮಕ್ಕಳು ಸುಖವಾಗಿರಲು ಸಾಧ್ಯವಿಲ್ಲ ಎಂದರು. ಉಪ್ಪಳ್ಳಿ ಬಳಿ ಅಕ್ರಮವಾದ ಮಸೀದಿ ನಿರ್ಮಾಣವಾಗುತ್ತಿದೆ. ಇಂದಿಗೂ ನ್ಯಾಯಬದ್ಧವಾದ ಅನುಮತಿ ಪಡೆದಿಲ್ಲ. ಜಿಲ್ಲಾಡಳಿತ ನಿಲ್ಲಿಸದೇ ಇದಲ್ಲಿ ನಾವೇ ನಿಲ್ಲಿಸಬೇಕಾಗಬಹುದು. ಜಿಲ್ಲಾಡಳಿತ ಕಾನೂನು ಪಾಲಿಸುವಂತೆ ನೋಡಿಕೊಂಡರೆ ಕೋಮು ಗಲಭೆ ಆಗುವುದಿಲ್ಲ ಎಂದು ಹೇಳಿದರು. ಅಂಬೇಡ್ಕರ್…
e-paper (15-10-2025) Chikkamagalur Express
ಚಿಕ್ಕಮಗಳೂರು: ತಾಲ್ಲೂಕಿನ ಬಿಂಡಿಗ ಶ್ರೀ ದೇವೀರಮ್ಮನವರ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಅಕ್ಟೋಬರ್ ೧೯ ರಿಂದ ೨೩ ರವರೆಗೆ ನಡೆಯಲಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ಸಂಪೂರ್ಣ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನಗಳ ಕಾಲ ಬೆಟ್ಟ ಹತ್ತಲು ಅವಕಾಶ ನೀಡಲಾಗಿದೆ ಎಂದು ಹೇಳಿ ದೀಪಾವಳಿಯ ಮೊದಲ ದಿನ ಅಕ್ಟೋಬರ್ ೧೯ ರಂದು ನರಕ ಚತುರ್ದಶಿ ಅಂಗವಾಗಿ ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ರವರೆಗೆ ಭಕ್ತರು ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯಬಹುದು, ಮರುದಿನ ಅಕ್ಟೋಬರ್ ೨೦ ರಂದು ಬೆಳಗ್ಗೆ ೮ ರಿಂದ ಸಂಜೆ ೩ ರವರೆಗೆ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ ಎಂದು ತಿಳಿಸಿದರು. ಅ.೧೮ ಮತ್ತು ೧೯ ರಂದು…