Subscribe to Updates
Get the latest creative news from FooBar about art, design and business.
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
Author: chikkamagalur express
ಚಿಕ್ಕಮಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆಯುತ್ತಿದ್ದು, ಇದರಲ್ಲಿ ಭಾರತ ಜಯಗಳಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಅವರು ಇಂದು ಪಿಳ್ಳೇನಹಳ್ಳಿ ಗ್ರಾ.ಪಂ ನೂತನ ಅಧ್ಯಕ್ಷರ ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಅಧ್ಯಕ್ಷ ಪಿ.ಡಿ. ನವೀನ್‌ರವರಿಗೆ ಅಭಿನಂದಿಸಿ ಮಾತನಾಡಿ ನಾವು ಇಲ್ಲಿ ಗೆಲ್ಲುವುದು ಮುಖ್ಯವಾದರೆ ಅದಕ್ಕಿಂತ ಮುಖ್ಯವಾಗಿ ಭಾರತ ದೇಶ ಗೆಲ್ಲಬೇಕು. ಆ ಗೆಲುವಿಗೆ ಪೂರಕವಾಗಿ ಇಲ್ಲಿರುವ ಎಲ್ಲಾ ಗ್ರಾ.ಪಂ ಸದಸ್ಯರ ವಿಶ್ವಾಸ ಪಡೆದು ದೇಶ ಮುಖ್ಯ ಎಂದುಕೊಂಡು ಜನರ ವೈಯಕ್ತಿಕ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷರು ಕೆಲಸ ಮಾಡಲಿ ಎಂದು ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗುವುದು ಎಷ್ಟು ಮುಖ್ಯವೋ ಅಷ್ಟೇ ಒಳ್ಳೆಯ ಹೆಸರು ಗಳಿಸಿ ಕೆಲಸ ಮಾಡುವುದು ಮುಖ್ಯ. ಜನಪ್ರತಿನಿಧಿಗಳಾದ ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮುಂದಾಗಬೇಕೆಂದು ಕರೆನೀಡಿದರು. ಗ್ರಾ.ಪಂ ಮಾಜಿ ಅಧ್ಯಕ್ಷ ಪಿಳ್ಳೇನಹಳ್ಳಿ ರಮೇಶ್…
ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ನಾಗರೀಕರ ಎಲ್ಲಾ ರೀತಿಯ ಆಸ್ತಿಗಳನ್ನು ಸ್ಯಾಟಲೈಟ್ ಮೂಲಕ ಸರ್ವೇ ನಡೆಸಿ ಗಣಕೀಕರಣಗೊಳಿಸಿ ಸಂಪೂರ್ಣ ದಾಖಲೆ ಸಿದ್ದಪಡಿಸುವ ಉದ್ದೇಶದೊಂದಿಗೆ ನೂತನವಾಗಿ ಜಾರಿಗೆ ತರಲಾಗಿರುವ ನಕ್ಷಾ ಯೋಜನೆ ದಾಖಲೆಗಳ ಸಂಗ್ರಹದ ಪರಿಣಾಮಕಾರಿ ಯೋಜನೆಯಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು. ಇಂದು ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಚಿಕ್ಕಮಗಳೂರು ನಗರಸಭೆ ವ್ಯಾಪ್ತಿಯಲ್ಲಿ ನಕ್ಷಾ ಯೋಜನೆ ಜಾರಿಗೆ ಬಂದಿದ್ದು, ಭಾರತದ ಸುಮಾರು ೧೦೦ ನಗರಗಳಲ್ಲಿ ಈ ಯೋಜನೆಯನ್ನು ಜಾರಿಮಾಡಲಾಗಿದೆ ಎಂದರು. ಕರ್ನಾಟಕ ರಾಜ್ಯದಲ್ಲಿ ೧೦ ಸ್ಥಳೀಯ ಸಂಸ್ಥೆಗಳನ್ನು ಆಯ್ಕೆಮಾಡಲಾಗಿದ್ದು, ಇದರಲ್ಲಿ ಚಿಕ್ಕಮಗಳೂರು ನಗರಸಭೆಯೂ ಒಂದಾಗಿದೆ. ಇ-ಸ್ವತ್ತಿನಲ್ಲಿದ್ದರೂ ಈ ಯೋಜನೆಯಡಿ ನಾಗರೀಕರು ತಮ್ಮ ಆಸ್ತಿಗಳನ್ನು ಗಣಕೀಕೃತಗೊಳಿಸಿದಾಗ ಮಾತ್ರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಈ ಕುರಿತು ಸಂಬಂಧಪಟ್ಟ ಖಾತೆದಾರರಿಗೆ ಎಟಿಎಂ ಮಾದರಿಯ ಕಾರ್ಡನ್ನು ವಿತರಿಸುತ್ತೇವೆ ಎಂದು ಹೇಳಿದರು. ಸರ್ವೇ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆಯ ಅಧಿಕಾರಿ ಸಿಬ್ಬಂದಿಗಳು ಸ್ಥಳಕ್ಕೆ ಬಂದಾಗ ಸಾರ್ವಜನಿಕರು ಸ್ವತ್ತಿನ ಸಂಪೂರ್ಣ ವಿವರಗಳ…
ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಆವರಣದಲ್ಲಿ ದಿ.ಡಿ.ಬಿ.ವೆಂಕಟಸುಬ್ಬಾ ಜೋಯಿಸ್ ಮತ್ತು ಶ್ರೀಮತಿ ನರಸಮ್ಮ ವೆಂಕಟಸುಬ್ಬಾ ಜೋಯಿಸ್ ಅವರ ಕಂಚಿನ ಪುತ್ಥಳಿಗಳನ್ನು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅನಾವರಣಗೊಳಿಸಿದರು. ಇದೇ ವೇಳೆ ಲಲಿತಾ ಕಲಾಮಂಟಪದಲ್ಲಿ ನಡೆದ ಗ್ರಾಮೀಣಾಭಿವೃದ್ದಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಕನ್ನಡದಲ್ಲಿ ಮಾತು ಆರಂಭಿಸಿ, `ಎಲ್ಲರಿಗೂ ನಮಸ್ಕಾರ, ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ’ ಎಂದು ಅಚ್ಚರಿ ಮೂಡಿಸಿದರು. ಶ್ರೀಕ್ಷೇತ್ರದಲ್ಲಿ ಜಿ.ಭೀಮೇಶ್ವರ ಜೋಷಿಯವರ ಅಜ್ಜ ದಿ.ಡಿ.ಬಿ.ವೆಂಕಸುಬ್ಬಾ ಜೋಯಿಸ್ ಮತ್ತು ಅವರ ಧರ್ಮಪತ್ನಿ ನರಸಮ್ಮ ವೆಂಕಟಸುಬ್ಬಾ ಜೋಯಿಸ್ ಅವರ ಪ್ರತಿಮೆ ಲೋಕಾರ್ಪಣೆ ಮಾಡುವ ಭಾಗ್ಯ ನನ್ನದಾಗಿದೆ. ಅವರ ವ್ಯಕ್ತಿತ್ವ ಮತ್ತು ಕಾಲಜ್ಞಾನದ ಬಗ್ಗೆ ಪುಸ್ತಕದಲ್ಲಿ ಪ್ರಕಟವಾಗಿದೆ. ಬಿ.ಎಲ್.ಶಂಕರ್ ಅವರ ವಿವರಣೆ ಕೇಳಿ ತಾವು ಪುಳಕಗೊಂಡಿದ್ದು ಪುತ್ಥಳಿ ಅನಾವರಣಗೊಳಿಸುವ ಭಾಗ್ಯ ನನಗೆ ದೊರಕಿದ್ದು ಒಂದು ದೊಡ್ಡ ಪುಣ್ಯ ಎಂದರು. ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ. ಭದ್ರಾ ನದಿಯ ತಟದಲ್ಲಿರುವ ಶ್ರೀಕ್ಷೇತ್ರ, ಭವ್ಯ ದಿವ್ಯ…
ಚಿಕ್ಕಮಗಳೂರು: -ವಾಸವಿ ಜಯಂತಿಯ ಅಂಗವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸುತ್ತಿರುವುದಾಗಿ ವಾಸವಿ ಯುವಜನ ಸಂಘ ಹಾಗೂ ವಾಸವಿ ಕ್ಲಬ್ ಅಧ್ಯಕ್ಷ ದಿನೇಶ್‌ಗುಪ್ತ ತಿಳಿಸಿದರು. ಅವರು ಇಂದು ವಾಸವಿ ಜಯಂತಿ ಅಂಗವಾಗಿ ಆರ್ಯ ವೈಶ್ಯ ಬಂಧುಗಳು ಸೇರಿ ಕಳೆದ ೪೨ ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಮುಂದೆ ಮಜ್ಜಿಗೆ, ಕೋಸಂಬರಿ, ಹೊಸ ವಸ್ತ್ರ ವಿತರಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. ನಗರದ ಎಂಜಿ ರಸ್ತೆಯಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ೧ ವಾರಗಳ ಕಾಲ ಪೂಜೆ, ಹವನ ಇತ್ಯಾದಿ ಧಾರ್ಮಿಕ ಕಾರ್ಯಗಳು ಜರುಗಲಿವೆ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಮುಕ್ತಾಯಗೊಂಡ ಬಳಿಕ ನಗರದ ರಾಜಬೀದಿಯಲ್ಲಿ ಕನ್ನಿಕಾ ಪರಮೇಶ್ವರಿ ದೇವಿಯ ರಥೋತ್ಸವ ಉತ್ಸವ ಜರುಗಲಿದೆ. ನಂತರ ಪ್ರಸಾದ ವಿನಿಯೋಗ ಪ್ರಾಕಾರೋತ್ಸವ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಕ್ಲಬ್‌ನ ಸದಸ್ಯರುಗಳಾದ ಜಿ.ಎನ್. ರಾಮಕೃಷ್ಣ, ಎಂ.ಯು ದೀಪಕ್, ಮಹೇಶ್,…
ಚಿಕ್ಕಮಗಳೂರು: ಸಮಾಜದಲ್ಲಿ ವ್ಯಕ್ತಿಯನ್ನು ದೇಶಭಕ್ತಿ, ಸೇವೆ, ಶಿಸ್ತು, ಸಂಯಮದಿಂದ ಪರಿವರ್ತಿಸುವಂತೆ ಮಾಡುವುದೇ ಭಾರತ ಸೇವಾದಳದ ಪ್ರಮುಖ ಉದ್ದೇಶ ಎಂದು ಮಾಜಿ ಶಾಸಕ ಹಾಗೂ ಸೇವಾದಳದ ರಾಜ್ಯ ಸಮಿತಿ ಸದಸ್ಯ ಐ.ಬಿ. ಶಂಕರ್ ಹೇಳಿದರು. ಅವರು ಇಂದು ಅಜಾದ್ ವೃತ್ತದ ಶಿಕ್ಷಕರ ಭವನದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿ ಏರ್ಪಡಿಸಿದ್ದ ಭಾರತ ಸೇವಾದಳದ ೭೫ನೇ ಅಮೃತ ಮಹೋತ್ಸವ ಹಾಗೂ ಪದ್ಮಭೂಷಣ ಡಾ. ನಾ.ಸು. ಹರ್ಡೀಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ೧೩೬ನೇ ನಾ.ಸು. ಹರ್ಡೀಕರ್‌ರವರ ಜನ್ಮದಿನ ಮತ್ತು ಭಾರತ ಸೇವಾದಳ ಸ್ಥಾಪನೆಯಾಗಿ ೭೫ ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ವೈಭವದಿಂದ ಆಚರಿಸಬೇಕಾಗಿತ್ತು. ಶಿಕ್ಷಕರ ಸಹಭಾಗಿತ್ವ ಇಲ್ಲದಿರುವುದು ವಿಷಾಧನೀಯ ಎಂದರು. ಸರ್ಕಾರದ ಆದೇಶದಂತೆ ಜಾತಿಗಣತಿ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗಿಯಾಗಿರುವುದರಿಂದ ಈ ಕಾರ್ಯಕ್ರಮಕ್ಕೆ ನಿರೀಕ್ಷಿತ ಸಂಖ್ಯೆಯಲ್ಲಿ ಶಿಕ್ಷಕರು ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿ ೧೯೫೦ ರಲ್ಲಿ ಭಾರತ ಸೇವಾದಳ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಬೇಲೂರಿನಲ್ಲಿ ನಾ.ಸು. ಹರ್ಡೀಕರ್‌ರವರ ಕಂಚಿನ ಪ್ರತಿಮೆ…
ಚಿಕ್ಕಮಗಳೂರು: ಶ್ರೀ ಕ್ಷೇತ್ರ ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದಿವಂಗತ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ಮತ್ತು ದಿ. ನರಸಮ್ಮ ವೆಂಕಟಸುಬ್ಬಾ ಜೋಯಿಸ್ ದಂಪತಿಗಳವರ ಕಂಚಿನ ಪುತ್ಥಳಿ ಅನಾವರಣ, ಶ್ರೀ ಅನ್ನಪೂರ್ಣ ಪಾದಸೇವಾ ಧುರಂದರ ಪುಸ್ತಕ ಲೋಕಾರ್ಪಣೆ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಸೌಲತ್ತುಗಳ ವಿತರಣಾ ಕಾರ್ಯಕ್ರಮ ಮೇ.೮ ರಂದು ಬೆಳಗ್ಗೆ ೧೧ ಗಂಟೆಗೆ ಏರ್ಪಡಿಸಲಾಗಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀ ಕ್ಷೇತ್ರ ಹೊರನಾಡು ಟ್ರಸ್ಟಿ ಗಿರಿಜಾಶಂಕರ ಜೋಶಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಧರ್ಮಕರ್ತ ಜಿ. ಭೀಮೇಶ್ವರ ಜೋಶಿ ವಹಿಸುವರು. ಪುತ್ಥಳಿಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅನಾವರಣಗೊಳಿಸುವರು. ಹರಿಹರ ಪೀಠದ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಕಾವತ್ ಅವರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ ಮತ್ತು ಅರ್ಚಕ ನಿವಾಸದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯ ನಾಮಫಲಕವನ್ನು ಅನಾವರಣಗೊಳಿಸಲಿದ್ದಾರೆಂದು ಹೇಳಿದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್, ದಿ.…
ಚಿಕ್ಕಮಗಳೂರು: ನಗರಸಭೆ ವತಿಯಿಂದ ನಗರದಲ್ಲಿ ನಿರ್ಮಿಸಲಾಗಿರುವ ಮಳಿಗೆಗಳನ್ನು ಸಾರ್ವಜನಿಕರು ಹರಾಜು ಪ್ರಕ್ರಿಯೆ ಮೂಲಕ ಪಡೆದುಕೊಂಡಿದ್ದು, ಮಳಿಗೆಯನ್ನು ಒಳಬಾಡಿಗೆಗೆ ನೀಡದೇ ಸರ್ಕಾರದ ಆದೇಶದಂತೆ ಸ್ವಂತ ಜೀವನ ನಿರ್ವಹಣೆಗೆ ಮಾತ್ರ ಬಳಸಬೇಕೆಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು. ಅವರು ಇಂದು ಕೆ.ಎಂ ರಸ್ತೆ ಕತ್ರಿಮಾರಮ್ಮ ದೇವಸ್ಥಾನದ ಹತ್ತಿರ ಹೊಸದಾಗಿ ನಿರ್ಮಿಸಿರುವ ಮಳಿಗೆಗಳು ಮತ್ತು ಡಾ. ಬಿ.ಆರ್. ರಸ್ತೆ ಹಾಗೂ ಕೆ.ಎಂ ರಸ್ತೆಯಲ್ಲಿರುವ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ಮಾತನಾಡಿದರು. ಇಂದು ಹರಾಜಿನಲ್ಲಿ ಪಡೆದುಕೊಂಡಿರುವುದನ್ನು ಹೊರತುಪಡಿಸಿ ಉಳಿದ ಮಳಿಗೆಗಳನ್ನು ಮುಂದಿನ ದಿನಗಳಲ್ಲಿ ಹರಾಜು ಮಾಡಲಾಗುವುದು. ನಾಳೆ (ಮೇ.೭) ರಂದು ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ನಗರಸಭೆ ಆವರಣದಲ್ಲಿ ನಿರ್ಮಿಸಿರುವ ಫುಡ್‌ಕೋರ್ಟ್‌ನ ಆಹಾರ ಮಳಿಗೆಗಳನ್ನು ಹರಾಜಿನಲ್ಲಿ ಭಾಗವಹಿಸಿ ಪಡೆಯಬಹುದಾಗಿದೆ ಎಂದರು. ಹಾಲಿ ೪೮ ಜನ ಬೀದಿಬದಿ ವ್ಯಾಪಾರಿಗಳ ಪಟ್ಟಿ ಮಾಡಲಾಗಿದ್ದು, ಅವರು ಹರಾಜಿನಲ್ಲಿ ಭಾಗವಹಿಸದಿದ್ದರೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿಗಳು, ತಾವು ಪೌರಾಯುಕ್ತರು ಸಭೆ ನಡೆಸಿ ಚರ್ಚಿಸಿ ನಿರ್ಧರಿಸಿದ್ದೇವೆ ಎಂದು ಹೇಳಿದರು. ಆಸಕ್ತರು ಬಂದು ಮಳಿಗೆ…