Subscribe to Updates
Get the latest creative news from FooBar about art, design and business.
- ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
- ಕವಿತೆಗಳು ಅನುಭವ ಶೋಧಕ್ಕೆ ದಾರಿ ತೆರೆಯುತ್ತವೆ
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
Author: chikkamagalur express
ಚಿಕ್ಕಮಗಳೂರು: ಶೋಷಿತರನ್ನು ಸಮಾಜದ ಮುನ್ನಲೆಗೆ ತರುವುದರ ಮೂಲಕ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸಮ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದ ಕೀರ್ತಿ ವಿಶ್ವಗುರು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಕಲ್ಯಾಣ ನಗರದ ಬಸವ ತತ್ವ ಪೀಠದಲ್ಲಿ ಏರ್ಪಡಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದ ಅಂಗವಾಗಿ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ೧೨ನೇ ಶತಮಾನದಲ್ಲಿ ಬಸವಣ್ಣನವರು ಕರ್ನಾಟಕದಲ್ಲಿ ಜನಿಸದಿದ್ದರೆ ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಕಷ್ಟಸಾಧ್ಯವಾಗುತ್ತಿತ್ತು. ಡಾ. ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವಣ್ಣ, ಬುದ್ಧರು ಈ ಮಹಾನ್ ಪುರಷರನ್ನು ಕೇವಲ ಒಂದು ಜಾತಿ, ಧರ್ಮ, ಮತಕ್ಕೆ ಸೀಮಿತಗೊಳಿಸದೆ ಇಡೀ ದೇಶ ಪ್ರಪಂಚ ಒಪ್ಪಿರುವುದರಿಂದ ಈ ಮಹಾನ್ ಪುರುಷರ ಜಯಂತಿಯನ್ನು ಸರ್ವರೂ ಒಗ್ಗಟ್ಟಾಗಿ ಆಚರಿಸಬೇಕೆಂದು ತಿಳಿಸಿದರು. ಸಮಾಜದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಈಗಲೂ ಇದ್ದು, ಅಂದೂ ಇದ್ದರು. ಇಂದೂ ಸಹ ತೊಂದರೆಯನ್ನು ಕೊಡುತ್ತಿದ್ದಾರೆ. ಬಸವಣ್ಣನವರ ವಿಚಾರಧಾರೆಗಳ ಬಗ್ಗೆ ನಂಬಿಕೆ ಇಲ್ಲದೇ ಇರುವ ಪಟ್ಟಭದ್ರ ಹಿತಾಸಕ್ತಿಗಳು ನಶಿಸುತ್ತಾರೆ. ಆದರೆ, ಬಸವಣ್ಣನವರ ವಿಚಾರಧಾರೆಗಳು, ಸಿದ್ಧಾಂತ, ವಚನಗಳು…
ಚಿಕ್ಕಮಗಳೂರು: ಸಮಾಜದಲ್ಲಿ ಎಲ್ಲಾ ಮನುಜರು ಸಮಾನರಾಗಿದ್ದು, ವಿಶ್ವವೇ ಒಂದು ಕುಟುಂಬ ಎಂದು ಸಾರಿದ ಬಸವಣ್ಣನವರು ವಿಶ್ವ ಪ್ರೇಮದ ಅನುಸಂಧಾನಕ್ಕೆ ಕಾರಣರಾದವರು. ಅವರ ಮಾನವ ತತ್ವಗಳನ್ನು ಅಧ್ಯಯನ ಮಾಡಿದರೆ ವಿಶ್ವ ಇಂದು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಹೇಳಿದರು. ಜಿಲ್ಲಾಡಳಿತ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ನಮ್ಮಲ್ಲಿ ಅನೇಕ ಮಹಾಪುರು?ರು, ಸಾಮಾಜಿಕ ಕ್ರಾಂತಿ ಮಾಡಿ ಹೋಗಿದ್ದಾರೆ. ಅಂಥವರನ್ನು ನಾವು ಒಂದು ಸಮುದಾಯ ಅಥವಾ ಒಂದು ಜನಾಂಗಕ್ಕೆ ಸೀಮಿತಗೊಳಿಸುತ್ತಿರುವುದು ದುರಂತದ ವಿಚಾರ. ಬಸವಣ್ಣನವರನ್ನೂ ನಾವೆಲ್ಲೋ ಹಿಡಿದಿಟ್ಟಂತೆ ಕಾಣಿಸುತ್ತಿದೆ. ಇಂಥ ಮಹಾಪುರು?ರು ಸಾರ್ವಕಾಲಿಕ ಮತ್ತು ಇವರ ಸಿದ್ಧಾಂತವನ್ನು ಎಲ್ಲ ವರ್ಗದವರೂ ಅನುಸರಿಸಬೇಕಾಗಿದೆ’ ಎಂದರು. ಅರ್ಥರಹಿತ ಆಚರಣೆಗಳನ್ನು ವಿರೋಧಿಸಿ, ಆಚಾರವೇ ಸ್ವರ್ಗ ಅನಾಚಾರವೇ ನರಕ ಎಂಬ ತತ್ವವನ್ನು ಸಾರಿ ತಮ್ಮ ವಿಚಾರಧಾರೆಯಿಂದ ಧರ್ಮಕ್ಕೆ ವೈಚಾರಿಕ ಸ್ಪರ್ಶವನ್ನು ನೀಡಿದ ಮಹಾನ್ ಸಾಮಾಜಿಕ ವಿಜ್ಞಾನಿ ಬಸವಣ್ಣನವರು. ಅವರ ಸಮಾನತೆ, ಸಹಬಾಳ್ವೆ,…
ಚಿಕ್ಕಮಗಳೂರು: ಬೆಳಗಾವಿಯುಲ್ಲಿ ವೇದಿಕೆಯಲ್ಲೇ ಎಎಸ್ಪಿ ಒಬ್ಬರ ಕಪಾಳ ಮೋಕ್ಷಕ್ಕೆ ಮುಂದಾದ ಮುಖ್ಯಮಂತ್ರಿ ಸಿದ್ದರಾಮುಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಸಂವಿಧಾನ ವಿರೋಧಿ ಕಾಂಗ್ರೆಸ್‌ಗೆ ಧಿಕ್ಕಾರ, ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ, ಸಿದ್ದರಾಮಯ್ಯ ಗೋ ಗೋ ಪಾಕಿಸ್ಥಾನ್, ದರ್ಪ-ದಬ್ಬಾಳಿಕೆ ತೋರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಿ ಎನ್ನುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ಪೊಲೀಸರೊಂದಿಗೆ ಅಸಭ್ಯತನ ಹಾಗೂ ಪಾಕಿಸ್ಥಾನಿ ಪ್ರೇಮಿಗಳಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಕರೆದು ಎಎಸ್ಪಿಗೆ ಕಪಾಳಮೋಕ್ಷಕ್ಕೆ ಮುಂದಾದ ಮುಖ್ಯಮಂತ್ರಿಗಳಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ ಎಂದರು. ದೇಶಾದ್ಯಂತ ಜನತೆ ಪ್ರವಾಸಿಗರ ಸಾವಿನ ದುಃಖದಿಂದ ಬಳಲುತ್ತಿರುವಾಗ ಪಾಕಿಸ್ಥಾನ ಪ್ರೇಮಿಯಂತೆ ವರ್ತಿಸಿದ ಸಿದ್ದರಾಮಯ್ಯ ನಡೆಯ ವಿರುದ್ಧ ಬಿಜೆಪಿ ಮಹಿಳಾ ಕಾರ್ಯಕರ್ತರು ಸಮಾವೇಶದಲ್ಲಿ ಕಪ್ಪುಪಟ್ಟಿ ಧಿಕ್ಕಾರ ಕೂಗಿದರು. ಇದರಿಂದ ಮುಜುಗರಕ್ಕೆ…
ಚಿಕ್ಕಮಗಳೂರು: ಈಶ್ವರಹಳ್ಳಿ, ಸಿಂಧಿಗೆರೆ ಮತ್ತು ಕಳಸಾಪುರ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೪.೯ ಕೋಟಿ ರೂ.ಗಳ ಅನುದಾನದಲ್ಲಿ ದೇವಸ್ಥಾನ, ಸಮುದಾಯ ಭವನ, ಕಾಂಕ್ರ್ರೀಟ್ ರಸ್ತೆ, ಚರಂಡಿ ಮುಂತಾದ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ಚಿಕ್ಕಮಗಳೂರು ತಾಲ್ಲೂಕು ಬಸವನಕೋಡಿ ಸರ್ಕಾರಿ ಶಾಲೆಯಲ್ಲಿ ಇಂದು ನಡೆದ ಈಶ್ವರಹಳ್ಳಿ ಕಳಸಾಪುರ ಮತ್ತು ಸಿಂದಿಗೆರೆ ಗ್ರಾಮ ಪಂಚಾಯಿತಿಗಳ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಅಭಿವೃದ್ಧಿ ಕಾರ್ಯಗಳ ಜೊತೆಗೆ ಬಡವರ ಪರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದರಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ. ಈ ಭಾಗದ ಸುಮಾರು ಒಂದು ಸಾವಿರ ಜನರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತಿಲ್ಲ ಎನ್ನುವ ಮಾಹಿತಿ ಇದೆ. ಇದಕ್ಕೆ ಬೇರೆ ಬೇರೆ ಕಾರಣಗಳಿರಬಹುದು. ಅಂಥ ಪ್ರಕರಣಗಳು ಇದ್ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಿ ಈ ಯೋಜನೆಯ ಹಣ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜನರ ಸಮಸ್ಯೆ…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೆರೆಗಳ ಸರ್ವೆ ಕಾರ್ಯ ನಡೆಸಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸುವಂತೆ ಹಲವಾರು ಬಾರಿ ತಿಳಿಸಿದ್ದರೂ ಇದುವರೆಗೂ ಕೆರೆಗಳ ಒತ್ತುವರಿ ತೆರೆವುಗೊಳಿಸಿಲ್ಲ, ಒತ್ತುವರಿ ತೆರವುಗೊಳಿಸಲು ಕೂಡಲೇ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ, ಕಂದಾಯ, ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ ೧.೮೧೦ ಕೆರೆಗಳಿದ್ದು ಈಗಾಗಲೇ ೧.೭೪೪ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದೆ ,ಇನ್ನು ೬೬ ಕೆರೆಗಳು ಅಳತೆಯಾಗಬೇಕಾಗಿದ್ದು, ೭೭೭ ಕೆರೆಗಳ ಒತ್ತುವರಿಯನ್ನು ಗುರುತಿಸಲಾಗಿದೆ. ಇವುಗಳಲ್ಲಿ ೩೦೧ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಒತ್ತುವರಿ ತೆರವುಗೊಳಿಸಲು ಇನ್ನೂ ೪೭೬ ಕೆರೆಗಳು ಬಾಕಿಯಿವೆ ಎಂದ ಅವರು, ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ೧೨೪ ಕೆರೆಗಳಿದ್ದು…
ಚಿಕ್ಕಮಗಳೂರು: -ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಕೆಂಪನಹಳ್ಳಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಯೊಬ್ಬರ ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಇಂದು ಈ ಎರಡನ್ನು ಲಾಭದ ದೃಷ್ಟಿಯಲ್ಲಿ ನೋಡುತ್ತಿರುವುದು ವಿಷಾಧನೀಯ. ಬಡವರಿಗೆ ಆರೋಗ್ಯ ಸಮಸ್ಯೆ ಎದುರಾದಾಗ ತುರ್ತು ಚಿಕಿತ್ಸೆ ನೀಡಲು ನಮ್ಮ ಕ್ಲಿನಿಕ್ ಅವಶ್ಯಕತೆ ಇದೆ ಎಂದರು. ಜಿಲ್ಲೆಗೆ ಒಟ್ಟು ೮ ನಮ್ಮ ಕ್ಲಿನಿಕ್ ಮಂಜೂರಾಗಿದ್ದು, ಈ ಪೈಕಿ ೩ ನಗರದ ವಿವಿಧೆಡೆ, ೧ ಕೆಂಪನಹಳ್ಳಿಯಲ್ಲಿ ಉದ್ಘಾಟನೆಯಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಗೂ ಉಪ್ಪಳ್ಳಿಯಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.…
ಚಿಕ್ಕಮಗಳೂರು: ಪ್ರಾಕೃತಿಕ ಹಾನಿ, ಧೂಮಕೇತು ಅಪ್ಪಳಿಸುವ ಅಥವಾ ಜ್ವಾಲಮುಖಿಗ ಳಿಂದ ವಿಶಾಲ ಭೂಮಿಗೆ ಹಾನಿ ಸಂಭವಿಸುತ್ತಿಲ್ಲ. ಮಾನವನ ದುರಾಸೆ ಹಾಗೂ ಯಂತ್ರೀಕರಣ ಜೀವನ ಶೈ ಲಿಯಿಂದ ಪ್ರಕೃತಿ ಮಲೀನಗೊಂಡು ಹಂತ ಹಂತವಾಗಿ ಕುಗ್ಗುತ್ತಿದೆ ಎಂದು ಪರಿಸರವಾದಿ ಡಾ|| ಸಂಜೀವ್ ಕುಲಕರ್ಣಿ ಹೇಳಿದರು. ತಾಲ್ಲೂಕಿನ ತೊಂಗರಿಹಂಕಲ್ ಗ್ರಾಮದಲ್ಲಿ ಅಂತರಾಷ್ಟ್ರೀಯ ರೋಟರಿ ಜಿಲ್ಲೆ-೩೧೮೨ ಹಾಗೂ ರೋಟರಿ ಕಾಫಿಲ್ಯಾಂಡ್ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ಧ ಭೂಮಿಯನ್ನು ಸಂರಕ್ಷಿಸುವ ಕುರಿತು ಜಿಲ್ಲಾ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶಾಲ ಬ್ರಹ್ಮಾಂಡದ ಭೂಗರ್ಭದಲ್ಲಿ ಮಾತ್ರ ಜೀವಸಂಕುಲ ಸೃಷ್ಟಿ ಮತ್ತು ವಿಕಸನ ಹೊಂದಿವೆ. ಕಾಲ ಕ್ರಮೇಣ ಮನುಷ್ಯಪ್ರಬೇಧಗಳು ಶುರುವಾದರೂ ಪ್ರಾಕೃತಿಕ ಸಂಪತ್ತು ಏರುಪೇರಾಗಿಲ್ಲ. ಆದರೆ ಕಳೆದ ಮೂ ನ್ನೂರು ವರ್ಷಗಳಿಂದ ಮಾನವ ಆಧುನಿಕತೆಗೆ ಶರಣಾಗಿ ಅರಣ್ಯ ಸಂಪತ್ತನ್ನು ಸರ್ವ ನಾಶಗೊಳಿಸಿ ವಿಶ್ವನ್ನು ಅಳಿನಂಚಿನತ್ತ ಕೊಂಡೊಯ್ಯುತ್ತಿದ್ದಾನೆ ಎಂದು ಹೇಳಿದರು. ಮೊಟ್ಟಮೊದಲು ಪ್ರಪಂಚದಲ್ಲಿ ಮಾನವ ಎರಡು ಕಾಲಿನಿಂದ ನಿಯಂತ್ರಣ ಕಂಡುಕೊಂಡನು, ಪ್ರಾಣಿ ಪ್ರಬೇಧಗಳು ಕಾಣಿಸಿದವು. ಒತ್ತಡವಿರದ ಪರಿಸರಸ್ನೇಹಿ ವಾತಾವರಣವು ನಿರ್ಮಾಣವಾಯಿತು. ಕಾಲ…