Subscribe to Updates
Get the latest creative news from FooBar about art, design and business.
- ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
- ಕವಿತೆಗಳು ಅನುಭವ ಶೋಧಕ್ಕೆ ದಾರಿ ತೆರೆಯುತ್ತವೆ
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
Author: chikkamagalur express
ಚಿಕ್ಕಮಗಳೂರು: ಮಕ್ಕಳಿಗೆ ಎದೆ ಹಾಲು ಎಷ್ಟು ಮುಖ್ಯವೋ, ಹಸುವಿನ ಹಾಲೂ ಅಷ್ಟೇ ಮುಖ್ಯ, ಹಾಲು ಕೊಡುವ ಹಸು, ಜಾನುವಾರುಗಳ ಸಂರಕ್ಷಣೆ ಸಲುವಾಗಿ ಸರಕಾರ ಪ್ರತಿವರ್ಷ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಸುತ್ತಿದ್ದು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ತಾಲೂಕಿನ ಹಿರೇಗೌಜದಲ್ಲಿ ಪಶುಸಂಗೋಪನಾ ಇಲಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ೭ ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು. ಹಸುವನ್ನು ಕಾಮಧೇನುವಿಗೆ ಹೋಲಿಸುತ್ತೇವೆ, ಪೂಜನೀಯ ಭಾವದಿಂದ ನೋಡುತ್ತೇವೆ. ಅಂತಹ ಹಸುಗಳ, ಜಾನುವಾರುಗಳ ಸಂರಕ್ಷಣೆ ಸರಕಾರದ ಹೊಣೆ. ಹೀಗಾಗಿ ಪ್ರತಿ ವರ್ಷ ಕಾಲುಬಾಯಿ ಜ್ವರದ ಲಸಿಕಾ ಅಭಿಯಾನ ನಡೆಸಿ ಹಾಲಿನ ಉತ್ಪನ್ನ ಹೆಚ್ಚಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು. ಮನುಷ್ಯರ ರೋಗ ನಿಯಂತ್ರಣಕ್ಕೆ ಹೇಗೆ ಲಸಿಕೆಗಳಿವೆಯೋ ಅದೇ ಮಾದರಿಯಲ್ಲಿಜಾನುವಾರುಗಳಿಗೆ ಯಾವುದೆ ಕಾಯಿಲೆ ಬರದಂತೆ ಲಸಿಕೆ ಹಾಕುತ್ತಿದ್ದು ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಹಿಂದಿನಿಂದಲೂ ನಮ್ಮ ಹಿರಿಯರು ಹಸುಸಾಕಾಣೆ ಮಾಡಿ ಜೀವನ ನಡೆಸಿದ್ದಾರೆ. ಇತ್ತೀಚೆಗೆ…
ಚಿಕ್ಕಮಗಳೂರು: ಮಕ್ಕಳಿಗೆ ಯೋಗ ಕಲಿಸುವ ಜೊತೆಗೆ ಹಲ್ಲುಗಳ ತೊಂದರೆ ನಿವಾರಣೆಗೆ ಡೆಂಟಲ್ ಥೆರಪಿ ಮೂಲಕ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬೇಸಿಗೆ ಶಿಬಿರವನ್ನು ೧೪ ರಿಂದ ೧೬ ವರ್ಷದ ಮಕ್ಕಳಿಗೆ ಮೇ.೬ ರಿಂದ ೧೦ ರವರೆಗೂ ಹಾಗೂ ೧೮ ವರ್ಷ ಮೇಲ್ಪಟ್ಟವರಿಗೆ ಮೇ.೧೨ ರಿಂದ ೧೬ ರವರೆಗೆ ನಗರದ ಬಸವನಹಳ್ಳಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರೀಸ್ ವಿಶ್ವವಿದ್ಯಾಲಯದ ಜ್ಞಾನ ಪ್ರಕಾಶ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೋಗ ತರಬೇತುದಾರ ಡಾ.ಬಾಸ್ಕರ್ ತಿಳಿಸಿದರು. ಅವರು ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಗ ಇಂದು ವಿಶ್ವಮಾನ್ಯತೆಯನ್ನು ಪಡೆದುಕೊಂಡಿದೆ. ಆರೋಗ್ಯ ಪೂರ್ಣ ಜೀವನಕ್ಕೆ ಯೋಗ ಅವಿಭಾಜ್ಯ ಅಂಗವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಯೋಗ ಕಲಿಸಿಕೊಡುವ ಸಲುವಾಗಿ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಮೇ.೬ ರಿಂದ ೧೦ ರವರೆಗೆ ಯೋಗ ಕಲಿಸಿಕೊಡಲಾಗುವುದು. ಹಾಗೇ ೧೦ ವರ್ಷ ಮೇಲ್ಪಟ್ಟವರಿಗೆ ಮೇ.೧೨ ರಿಂದ ೧೬ ರವರೆಗೆ ಯೋಗ ಶಿಕ್ಷಣ ಹೇಳಿಕೊಡಲಾಗುವುದು. ಶಿಬಿರದಲ್ಲಿ ಹಲ್ಲಿನ ಸಮಸ್ಯೆ ಇದ್ದವರಿಗೆ ೧೬…
ಚಿಕ್ಕಮಗಳೂರು: ಆಧುನಿಕತೆ ಬೆಳೆದಂತೆ ವೈದ್ಯಕೀಯ ಉಪಕರಣಗಳು ಬದಲಾವಣೆ ಯಾಗುತ್ತಿವೆ. ಡಿಜಿಟಲ್ ಸ್ಟೆತೊಸ್ಕೋಪ್‌ನ ಅತ್ಯಾಧುನಿಕ ತಂತ್ರಜ್ಞಾನದಿಂದ ರೋಗಿಯ ಲಕ್ಷಣಗಳು ಶೀಘ್ರಗತಿ ಯಲ್ಲಿ ಕಂಡು ಹಿಡಿಯಲು ಸಾಧ್ಯವಾಗುತ್ತಿದೆ ಎಂದು ಆಯು ಡಿವೈಜ್ಸ್ ಸಂಸ್ಥೆ ಮುಖ್ಯಕಾರ್ಯನಿರ್ವಹಣಾ ಧಿಕಾರಿ ಕೆ.ಆದರ್ಶ ಹೇಳಿದರು. ನಗರದ ಆದಿಚುಂಚನಗಿರಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ವಿದ್ಯುತ್ ಮತ್ತು ವಿದ್ಯುನ್ಮಾನ ಎಂಜಿನಿಯರಿಂಗ್ ವಿಭಾಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ಧ ‘ವಿದ್ಯುಯೂತ್’ ಕಾರ್ಯಕ್ರಮವನ್ನು ಶನಿವಾರ ಪಾಲ್ಗೊಂಡು ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ವೈದ್ಯಕೀಯ ಕ್ಷೇತ್ರದಲ್ಲಿ ಇತ್ತೀಚೆಗೆ ಹೊಸ ಹೊಸ ಆವಿಷ್ಕಾರಗಳು ಪ್ರಚಲಿತಕ್ಕೆ ಬರುತ್ತಿವೆ. ಅತ್ಯಾಧುನಿಕ ತಂತ್ರಜ್ಞಾನದಿಂದ ಹೊಸ ಆಯಾಮವನ್ನೇ ವೈದ್ಯಲೋಕ ಸೃಷ್ಟಿಸುತ್ತಿದೆ. ಆಪರೇಷನ್ ಅಥವಾ ಇನ್ನಿತರೆ ಚಿಕಿ ತ್ಸೆಗಳಿಗೆ ತಂತ್ರಜ್ಞಾನ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಉತ್ತಮ ಆರೋಗ್ಯ ಸೇವಾ ಅನುಭವಕ್ಕಾಗಿ ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇಜಿ ಜಿ, ಡಿಜಿಟಲ್ ಸ್ಟೆತೊಸ್ಕೋಪ್ ಹಾಗೂ ಭವಿಷ್ಯದಲ್ಲಿ ಬೆರಳು ಆಧಾರಿತ ರಕ್ತದೊತ್ತಡವನ್ನು ಕಂಡುಹಿಡಿಯ ಬಹುದು. ಸ್ಪ?ತೆ ಮತ್ತು ನಿಖರತೆಗಾಗಿ ಮೀಸಲಾದ ಫಿಲ್ಟರ್ ಅನ್ನು ಒದಗಿಸಲು ಈ ತಂತ್ರಜ್ಞಾನವನ್ನು ವಿನ್ಯಾ…
ಚಿಕ್ಕಮಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ೨೭ ಮಂದಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿರುವ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರು ಶುಕ್ರವಾರ ಸಂಜೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬಸವನಹಳ್ಳಿಯ ಶ್ರೀ ಓಂಕಾರೇಶ್ವರ ಗಣಪತಿ ದೇವಸ್ಥಾನದಿಂದ ಪಾಕ್ ಪ್ರೇರಿತ ಇಸ್ಲಾಮಿಕ್ ಭಯೋತ್ಪಾದಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಎಂಜಿ ರಸ್ತೆ ಮಾರ್ಗವಾಗಿ ಆಜಾದ್ ಪಾರ್ಕ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಈ ವೇಳೆ ಬಾಂಗ್ಲಾದ ನುಸುಳುಕೋರರಿಗೆ ಬೆಂಬಲಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಭಯೋತ್ಪಾದsಕರ ಪ್ರತಿಕೃತಿಯನ್ನೂ ಮೆರವಣಿಗೆ ಮಾಡಿ, ಅವುಗಳನ್ನು ಪಾಕಿಸ್ಥಾನದ ಧ್ವಜವನ್ನೂ ಸೇರಿಸಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಆಜಾದ್ ಮೈದಾನದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು. ಅಮಾಯಕ ಹಿಂದೂ ಪ್ರವಾಸಿಗರನ್ನೇ ಹುಡುಕಿ ಕೊಂದಿರುವ ಭಯೋತ್ಪಾದಕರನ್ನು ಬೇರು ಸಹಿತ ಕಿತ್ತು ಹಾಕಬೇಕು. ಇದಕ್ಕಾಗಿ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಯಿತು. ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಮಾತನಾಡಿ, ಹಿಂದೂಗಳನ್ನು…
ಚಿಕ್ಕಮಗಳೂರು: ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಉತ್ತಮವಾದ ಮಳೆಯಾಗಿದ್ದು, ಪೂರ್ವ ಮುಂಗಾರು ಕೃಷಿಗೆ ಭೂಮಿ ಸಿದ್ಧತೆ ಚಟುವಟಿಕೆ ಚುರುಕುಗೊಂಡಿದೆ. ಅಶ್ವಿನಿ ಮಳೆ ನಕ್ಷತ್ರದಿಂದ ಉತ್ತಮ ಆರಂಭ ಪಡೆದ ಮಳೆ ಇದುವರೆಗೆ ೯೪.ಮಿ.ಮೀ.ನಷ್ಟು (ಶೇ.೬೮ ರಷ್ಟು ಹೆಚ್ಚು) ಸುರಿದಿದ್ದು, ಕೃಷಿ ಯೋಗ್ಯ ವಾತಾವರಣ ಕಲ್ಪಿಸಿಕೊಟ್ಟಿದೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ೨೦೨೫-೨೬ ರಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ೯೦೦೯೦ ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಪೂರ್ವ ಮುಂಗಾರು ಹಂಗಾಮಿಗೆ ೯೧೫೫ ಹೆಕ್ಟೇರ್ ಪ್ರದೇಶದಲ್ಲಿ (ನೆಲಗಡಲೆ-೨೨೦೦ ಹೆಕ್ಟೇರ್, ಹೆಸರು ೧೭೧೦ ಹೆಕ್ಟೇರ್, ಹತ್ತಿ ೧೪೨೦ ಹೆಕ್ಟೇರ್, ಅಲಸಂದೆ ೧೩೦೦ ಹೆಕ್ಟೇರ್, ಉದ್ದು ೪೨೫ ಹೆಕ್ಟೇರ್, ಎಳ್ಳು ೨೧೦೦ ಹೆಕ್ಟೇರ್) ಬಿತ್ತನೆ ಗುರಿ ಹೊಂದಲಾಗಿದೆ. ಬಿತ್ತನೆ ಬೀಜ ಪೂರೈಕೆ: ಪೂರ್ವ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ೧೦೦೯.೨೫ ಕ್ವಿಂಟಾಲ್ ಬಿತ್ತನೆ ಬೀಜದ ಗುರಿಯಿದ್ದು, ಬೇಡಿಕೆಗೆ ಅನುಸಾರವಾಗಿ ಬಿತ್ತನೆಗೆ ಅನುಕೂಲವಾಗುವಂತೆ ಉದ್ದು, ಹೆಸರು, ಅಲಸಂದೆ, ನೆಲಗಡಲೆ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆಯಾಗಿಲ್ಲ. ಅದರಂತೆ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ೪೩೦೮.೮೯ ಕ್ವಿಂಟಾಲ್ ಬಿತ್ತನೆ ಬೀಜಗಳಿಗೆ ಬೇಡಿಕೆ ಇದ್ದು, ಅಗತ್ಯವಾದ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಕಾಲದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಇಲಾಖೆಯು ಸಜ್ಜುಗೊಂಡಿದೆ. ಅಧಿಕೃತ ಮಾರಾಟಗಾರರಿಂದ ಖರೀದಿ ಸೂಕ್ತ: ರೈತರು ಅಧಿಕೃತ ಬಿತ್ತನೆ ಬೀಜ ಮಾರಾಟಗಾರರಿಂದಲೇ ಬಿತ್ತನೆ ಬೀಜವನ್ನು ಖರೀದಿಸುವುದು ಉತ್ತಮ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಸಿದಾಗ ತಪ್ಪದೇ ಅಧಿಕೃತ ರಶೀದಿ ಪಡೆಯಬೇಕು. ಬಿತ್ತನೆ ಬೀಜ ರಶೀದಿಯಲ್ಲಿ ಲಾಟ್‌ನಂಬರ್ ನಮೂದಿಸಿರಬೇಕು. ಬಿತ್ತನೆ ಬೀಜದ ಚೀಲ, ಸ್ವಲ್ಪ ಪ್ರಮಾಣದ ಬಿತ್ತನೆ ಬೀಜ, ದೃಢೀಕರಣದ ಬಗ್ಗೆ ಲಗತ್ತಿಸಿರುವ ಟ್ಯಾಗುಗಳನ್ನು ಬೆಳೆ ಕಟಾವು ಆಗುವವರೆಗೆ ಸುರಕ್ಷಿತವಾಗಿ ಕಾಯ್ದಿಟ್ಟುಕೊಳ್ಳಬೇಕು. ಬಿತ್ತನೆ ಬೀಜವನ್ನು ಪೀಡೆನಾಶಕಗಳಿಂದ ಉಪಚರಿಸಲಾಗಿದೆಯೆ ಎಂಬುದನ್ನು ಗಮನಿಸುವುದು ಹಾಗೂ ಒಂದು ವೇಳೆ ಬಿತ್ತನೆ ಬೀಜಗಳು ಬೀಜೋಪಚಾರವಾಗಿರದಿದ್ದಲ್ಲಿ ಬೀಜದಿಂದ ಹಾಗೂ ಮಣ್ಣಿನಿಂದ ಹರಡುವ ರೋಗ ಮತ್ತು ಕೀಟಗಳಿಂದ ಬೆಳೆಗಳನ್ನು ರಕ್ಷಿಸಲು ಬೀಜವನ್ನು ಬಿತ್ತನೆಗೆ ಉಪಯೋಗಿಸುವ ಮೊದಲು ಪೀಡೆನಾಶಕಗಳಿಂದ ಉಪಚರಿಸಿ ಬಿತ್ತುವುದರಿಂದ ಪೀಡೆಗಳ ನಿರ್ವಹಣೆಗಳೊಂದಿಗೆ ಹೆಚ್ಚಿನ ಇಳುವರಿ ಪಡೆಯಬಹುದು. ರಸಗೊಬ್ಬರ ಪೂರೈಕೆ: ಜಿಲ್ಲೆಯಲ್ಲಿ ಏಪ್ರಿಲ್ ಮಾಸದವರೆಗೆ ಒಟ್ಟು ೧೭೮೨೨ ಟನ್ ವಿವಿಧ ರಸಗೊಬ್ಬರಗಳ ಬೇಡಿಕೆ ಇದ್ದು ಪ್ರಸ್ತುತ ಕಾಪು ದಾಸ್ತಾನು ಮತ್ತು ರಸಗೊಬ್ಬರ ಮಾರಾಟಗಾರರಲ್ಲಿ ಒಟ್ಟು ೨೬೫೪೧ ಟನ್ (ಡಿ ಎಪಿ-೭೫೦, ಕಾಂಪ್ಲೆಕ್ಸ್ ೧೪೦೭೨ ಟನ್, ಎಂಒಪಿ ೪೪೨೭ ಟನ್, ಯೂರಿಯಾ ೬೦೫೭ ಟನ್, ಎಸ್‌ಎಸ್‌ಪಿ ೧೨೩೫ ಟನ್) ರಸಗೊಬ್ಬರ ದಾಸ್ತಾನಿದ್ದು ಯಾವುದೇ ಕೊರತೆ ಇರುವುದಿಲ್ಲ. ರೈತರು ರಸಗೊಬ್ಬರಗಳನ್ನು ಖರೀದಿಸುವಾಗ ಚೀಲದ ಮೇಲೆ ನಮೂದಿಸಿರುವ ಎಂ.ಆರ್.ಪಿ ದರದಲ್ಲಿಯೇ ಖರೀದಿಸಬೇಕು ಹಾಗೂ ಕಡ್ಡಾಯವಾಗಿ ರಸೀದಿಯನ್ನು ಪಡೆಯಬೇಕು. ರಸಗೊಬ್ಬರ ಮಾರಾಟಗಾರರು ಎಂ.ಆರ್.ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಕೃಷಿ ನಿರ್ದೇಶಕರ ಕಚೇರಿ, ಜಂಟಿ ಕೃಷಿ ನಿರ್ದೇಶಕರ ಕಚೆರಿಗೆ ಸೂಕ್ತ ದಾಖಲೆಯೊಂದಿಗೆ ಮಾಹಿತಿ ನೀಡಿದಲ್ಲಿ ಅಂತಹ ರಸಗೊಬ್ಬರ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. Pre-monsoon gives good start to the district
ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯ ೨,೬೧,೪೧೫ ಮಂದಿ ಯಜಮಾನಿಯರಿಗೆ ೫೨.೨೮ ಕೋಟಿ ರೂ. ನೇರವಾಗಿ ಸಂದಾಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ ಸಾರಿಗೆ ಸಂಸ್ಥೆಗೆ ಸರ್ಕಾರ ಶಕ್ತಿ ಯೋಜನೆಯಡಿ ಭರಪೂರ ಅನುದಾನ ಸರ್ಕಾರ ಬಿಡುಗಡೆ ಮಾಡಿರುವುದರಿಂದ ವಿಶೇಷವಾಗಿ ಮಾರ್ಚ್ ತಿಂಗಳಲ್ಲಿ ರಸ್ತೆ ಸಾರಿಗೆ ನಿಗಮದ ೪೭ ಹೊಸ ಬಸ್‌ಗಳು ಜಿಲ್ಲೆಗೆ ಬಂದಿದ್ದು.ಅವುಗಳನ್ನು ಅಗತ್ಯವಿರುವ ಹೆಚ್ಚು ಜನದಟ್ಟಣೆ ಇರುವ ಮಾರ್ಗಗಳಲ್ಲಿ ಸಂಚರಿಸಲು ಒದಗಿಸಲಾಗುವುದು ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಆದಾಯ ತೆರಿಗೆ ಪಾವತಿದಾರರು ಹಾಗೂ ಜಿ.ಎಸ್.ಟಿ. ಪಾವತಿದಾರ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭವಾಗದಿರುವ ಬಗ್ಗೆ ಚರ್ಚಿಸಲಾಗಿದ್ದು, ಇದನ್ನು ಈ ಕುಟುಂಬಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಣಯಿಸಲಾಯಿತು. ಅನ್ನಭಾಗ್ಯ ಯೋಜನೆಯಡಿ ಡಿ.೨೪ರವರೆಗೆ ಫಲಾನುಭವಿಗಳ ಖಾತೆಗೆ ನೇರವಾಗಿ ನಗದು ಜಮಾ ಮಾಡಲಾಗುತ್ತಿದ್ದು, ಮಾರ್ಚ್…
ಚಿಕ್ಕಮಗಳೂರು: ಐದು ದಶಕಗಳ ಕಾಲ ಅನಭಿಷಿಕ್ತ ದೊರೆಯಾಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ತನ್ನದೇ ಛಾಪು ಉಳಿಸಿ ಕನ್ನಡಿಗರ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವವರು ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರದು ಒಂದು ಮಾಸದ ನೆನಪು ಎಂದು ಹಿರಿಯ ಪತ್ರಕರ್ತ, ಸಾಹಿತಿ ಬಿ.ತಿಪ್ಪೇರುದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಂದು (ಏ.೨೪) ನಗರದ ಕುವೆಂಪು ಕಲಾಮಂದಿರದ ಹೇಮಾಂಗಣದಲ್ಲಿ ನಡೆದ ವರನಟ ಡಾ.ವರನಟ ಡಾ.ರಾಜ್‌ಕುಮಾರ್ ಅವರ ೯೭ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕನ್ನಡವನ್ನು ಉಸಿರಾಗಿಸಿಕೊಂಡ ಡಾ.ರಾಜ್‌ರವರು ಕನ್ನಡಕ್ಕಾಗಿ ಕೊನೆವರೆಗೂ ಬದುಕಿ ಕನ್ನಡದ ಹಿರಿಮೆ-ಗರಿಮೆಯನ್ನು ಗಗನದೆತ್ತರಕ್ಕೆ ಏರಿಸಿದರು. ವರನಟ, ನಟಸಾರ್ವಭೌಮನಾಗಿ ರಂಗಭೂಮಿ ಕಲಾವಿದರಾಗಿದ್ದ ತಂದೆಯವರಿಂದ ಪ್ರಭಾವಿತರಾಗಿ ರಂಗಭೂಮಿಯ ಎಲ್ಲಾ ಕಲಾಪ್ರಕಾರಗಳನ್ನು ಮೈಗೂಡಿಸಿಕೊಂಡು ಚಿತ್ರರಂಗದವರೆಗೂ ಬಂದು ಪರದೆಯ ಮೇಲೆ ವಿಜೃಂಭಿಸಿದವರು ಎಂದು ಬಣ್ಣಿಸಿದರು. ರಂಗಭೂಮಿಯ ಪ್ರಮುಖ ಆಶಯಗಳಾದ ಸಂಗೀತ, ಸಾಹಿತ್ಯ ಮತ್ತು ಗಾಯನ ಇವೆಲ್ಲವನ್ನು ಮೇಳೈಸಿಕೊಂಡು ಕಲೆಗಾಗಿ ಕಲೆಯಲ್ಲ, ಕಲೆ ಒಂದು ವಿಶಿಷ್ಟ ಗುಣ ಎಂದು…