Author: chikkamagalur express

ಚಿಕ್ಕಮಗಳೂರು: ಇಡೀ ದೇಶವೇ ಕಣ್ಣೀರು ಸುರಿಸುವ ದಿನವಿದು. ಪ್ರವಾಸಿಗರ ಸ್ವರ್ಗ ಕಾಶ್ಮೀರದಲ್ಲಿ ರಕ್ತದೋಕುಳಿಯೇ ಹರಿದಿದ್ದು, ಹಿಂದುಗಳ ಮಾರಣ ಹೋಮ ನಡೆದಿದೆ. ಕಾಶ್ಮೀರಿ ಉಗ್ರರಿಗೆ ತಕ್ಕ ಪಾಠ ಕಲಿಸಲು ಕೂಡಲೇ ಪಿಓಕೆಯನ್ನು ವಶಪಡಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಎಸ್‌ ಶೆಟ್ಟಿ ಒತ್ತಾಯಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಉಗ್ರರು ಹಿಂದೂ ಪ್ರವಾಸಿಗರ ಹೆಸರನ್ನು ಕೇಳಿ ಕೇಳಿ ಕೊಂದಿದ್ದಾರೆ. ಈ ಕೃತ್ಯದ ಹಿಂದೆ ಪಾಕಿಸ್ತಾನದ ಕುತಂತ್ರವು ಇರುವ ಸಾಧ್ಯತೆ ಇದೆ. ಹೀಗಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಪಿಓಕೆಯನ್ನು ಭಾರತ ವಶಕ್ಕೆ ಪಡೆಯಬೇಕು ಎಂದರು. ಕಾಶ್ಮೀರವನ್ನು ಆಜಾದ್ ಕಾಶ್ಮೀರ ಎಂದು ಕರೆಯುತ್ತೇವೆ. ಅದರಂತೆ ಪಿಓಕೆಯನ್ನು ಸಹ ವಶಪಡಿಸಿಕೊಂಡು ಸ್ವತಂತ್ರಗೊಳಿಸಬೇಕು. ಇದರೊಂದಿಗೆ ಭಾರತದಲ್ಲಿ ಅಡಗಿರುವ ಉಗ್ರರ ದಮನ ಮಾಡಬೇಕು. ಆರ್ಟಿಕಲ್ 370 ತೆಗೆದ ಮೇಲೆ ಕಾಶ್ಮೀರ ನಮ್ಮದು ಎಂದು ಹೇಳುವ ಧೈರ್ಯ ಬಂದಿದೆ. ಈ ಕಾರಣಕ್ಕಾಗಿಯೇ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ಹೋಗಲಾರಂಬಿಸಿದ್ದರು. ಇಲ್ಲಿಗೆ ಬರುವ ಪ್ರವಾಸಿಗರನ್ನು ತಡೆಯುವ ನಿಟ್ಟಿನಲ್ಲಿ…

Read More

ಚಿಕ್ಕಮಗಳೂರು: ಜೀವನದ ಒಂದು ಭಾಗವಾಗಿ ಆತ್ಮವಿಶ್ವಾಸದ ಜೊತೆಗೆ ಗೌರವ ಹೆಚ್ಚಿಸುವುದೇ ಸಂಸ್ಕೃತಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಜಾನಪದ ಉತ್ಸವ-೨೦೨೫ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೈವಿಧ್ಯಮಯ ಜೀವನದ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಂಡು ಭಾರತದ ಸಂಸ್ಕಾರ ಇಡೀ ವಿಶ್ವಕ್ಕೆ ಬಹಳ ದೊಡ್ಡ ಪಾತ್ರ ವಹಿಸಿ ಮಾದರಿಯಾಗಿದೆ ಎಂದು ಹೇಳಿದರು. ನಾವು ಸಾಂಪ್ರದಾಯಿಕವಾಗಿ ಆಚರಿಸುವ ಪ್ರತಿಯೊಂದು ಹಬ್ಬಗಳು ಸಂಸ್ಕೃತಿಯನ್ನು ಜೀವಂತವಾಗಿ ಉಳಿಸಿವೆ. ಭಾರತದಂತ ಜಾತ್ಯಾತೀತ ರಾಷ್ಟ್ರದಲ್ಲಿ ವಿವಿಧ ಧರ್ಮಗಳ ಸಮುದಾಯದವರು ಆಚರಿಸುವ ಹಬ್ಬಗಳು ಜೊತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವ ರೀತಿ ಸಂಸ್ಕೃತಿಯನ್ನು ಬಿಂಬಿಸುತ್ತಿವೆ ಎಂದು ತಿಳಿಸಿದರು. ರೈತರ ಜೀವನಾಡಿಯಾಗಿರುವ ಭತ್ತ, ರಾಗಿ, ಏಲಕ್ಕಿ, ಅಡಿಕೆ, ಕಾಫಿ, ತೆಂಗು, ಮೆಣಸು ಜೋಡಿಸಿ ಸಿಂಗರಿಸಿರುವುದರ ಜೊತೆಗೆ ಕಾಲೇಜಿನ ಆವರಣದಲ್ಲಿ ವಿವಿಧ ರೀತಿಯ ಚಿತ್ರಾಕಾರದ ರಂಗೋಲಿಯನ್ನು ಬಿಡಿಸಿ…

Read More

ಚಿಕ್ಕಮಗಳೂರು : ಕಾಶ್ಮೀರದಲ್ಲಿ ಪ್ರವಾಸಿಗರು ನಡೆಸಿದ ಉಗ್ರರ ದಾಳಿ ಯಿಂದ ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಮಂಜುನಾಥ್ ರಾವ್ ತಂದೆ ಶಿವಮೊಗ್ಗ ಮ್ಯಾಮ್ ಕೋಸ್ ನಲ್ಲಿ ಮ್ಯಾಮೇಜರ್ ಆಗಿದ್ದರು.ನಿವೃತ್ತಿ ಬಳಿಕ 20 ವರ್ಷಗಳ ಹಿಂದೆಯೇ ಶಿವಮೊಗ್ಗ ತೆರಳಿದ್ದರು. ಶಿವಮೊಗ್ಗದಲ್ಲಿ ರಿಯಲ್‌ ಎಸ್ಟೇಟ್ ಮಾಡಿಕೊಂಡಿಕೊಂಡಿದ್ದ ಮಂಜುನಾಥ್ ರಾವ್ ಪತ್ನಿ ಪಲ್ಲವಿ ಕಡೂರು ತಾಲೂಕಿನ ಬೀರೂರು ಮ್ಯಾಮ್ ಕೋಸ್ ನಲ್ಲಿ ಮ್ಯಾನೇಜರ್ ಆಗಿದ್ದಾರೆ. 19 ರಂದು ಮಗನ ಜೊತೆ ದಂಪತಿಗಳು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು.ಮಗನ ಪಿಯುಸಿ ಪರೀಕ್ಷೆ ಮುಗಿದ ಬಳಿಕ 6 ದಿನಗಳ ಪ್ಯಾಕೇಜ್ ನಲ್ಲಿ ಕಾಶ್ಮೀರ ಪ್ರವಾಸ ಹಮ್ಮಿಕೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್ ಕರೆ ಮಾಡಿ 24ನೇ ತಾರೀಕು ವಾಪಸ್ ಬರ್ತೀವಿ ಎಂದಿದ್ದರು ಎಂದು ಹೇಳಲಾಗಿದೆ. Manjunath Rao a native of Kunimakki Koppa taluk was killed in a terrorist attack

Read More

ಚಿಕ್ಕಮಗಳೂರು: ಜಿಲ್ಲಾ ಜಾಗತಿಕ ಲಿಂಗಾಯಿತ ಮಹಾಸಭಾ ವತಿಯಿಂದ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭ ಏ.೨೫ ರಂದು ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ನಗರದ ಹೌಸಿಂಗ್ ಬೋರ್ಡ್ ಕೆ.ಎಂ. ರಸ್ತೆ ನಾಯ್ಡು ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹೆಚ್. ಗಂಗಾಧರಪ್ಪ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಬಿಜೆಪಿ, ಆರ್‌ಎಸ್‌ಎಸ್ ಸಂಘ ಪರಿವಾರದವರು ವಿಶ್ವಗುರು ಬಸವಣ್ಣನವರ ವಚನಗಳನ್ನು ತಿರುಚಿ ಪುಸ್ತಕ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಬಸವಣ್ಣನವರ ನೈಜ ವಚನಗಳನ್ನೊಳಗೊಂಡ ವಚನ ದರ್ಶನ ಮಿಥ್ಯ-ಸತ್ಯ ಗ್ರಂಥ ಬಿಡುಗಡೆ ಸಮಾರಂಭದ ಮೂಲಕ ಉತ್ತರ ನೀಡಲು ಮುಂದಾಗಿದ್ದೇವೆ ಎಂದರು. ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯ ಶ್ರೀ ತರಳಬಾಳು ಜಗದ್ಗುರು ಶಾಖಾ ಮಠದ ಪಟ್ಟಾಧ್ಯಕ್ಷರಾದ ಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದು, ಧ್ವಜಾರೋಹಣವನ್ನು ಚನ್ನಗಿರಿ ತಾಲ್ಲೂಕು ಪಾಂಡೋಮಟ್ಟಿ ವಿರಕ್ತ ಮಠದ ಡಾ. ಗುರುಬಸವ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆಂದು ಹೇಳಿದರು. ಸಾನಿಧ್ಯವನ್ನು ಚಿಕ್ಕಮಗಳೂರು ಕಲ್ಯಾಣ ನಗರದ ಬಸವತತ್ವ ಪೀಠದ ಡಾ. ಶ್ರೀ…

Read More

ಚಿಕ್ಕಮಗಳೂರು: ರೈತರ ಕಷ್ಟದ ದುಡಿಮೆಯ ಬಹುಭಾಗ ಯಾವುದೇ ಬಂಡವಾಳ ಹೂಡದೆ, ಕಷ್ಟಪಡದೇ ಇರುವ ಮಧ್ಯವರ್ತಿಗಳ ಪಾಲಾಗುತ್ತಿದೆ. ಇದನ್ನು ತಪ್ಪಿಸಿ ರೈತರ ಉತ್ಪನ್ನಗಳಿಗೆ ಉತ್ತಮ ದರ ಒದಗಿಸಬೇಕೆಂಬ ಉದ್ದೇಶದಿಂದ ರೈತ ಉತ್ಪಾದಕ ಕಂಪನಿಗಳನ್ನು ಆರಂಭಿಸಲು ಸರ್ಕಾರ ಉತ್ತೇಜನ ನೀಡಲಾಗುತ್ತಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಕಡೂರಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಮೃತ ಮಹೋತ್ಸವ ಹಾಗೂ ಕಡೂರು ಪ್ರಗತಿ ರೈತ ಉತ್ಪಾದಕರ ಕಂಪನಿ ಸಹಯೋಗದಲ್ಲಿ ಆರಂಭಿಸಿರುವ ರೈತ ಬಜಾರ್ ಉದ್ಘಾಟಿಸಿ ಅವರು ಮಾತನಾಡಿದರು. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಒದಗಿಸುವಲ್ಲಿ ರೈತ ಬಜಾರ್ ಕಲ್ಪನೆ ವಿನೂತನವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಸಾಕಷ್ಟು ವಿದ್ಯುತ್ ಶೇಖರಣೆ ಮಾಡಲಾಗಿದೆ. ಹೀಗಿದ್ದರೂ ಸಹ ತಮ್ಮ ಸರ್ಕಾರ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಅಗತ್ಯವಾದ ಕ್ರಮ ಕೈಗೊಂಡಿದೆ. ಏಷ್ಯಾದಲ್ಲಿಯೇ ದೊಡ್ಡದಾದ ಸೋಲಾರ್ ಪಾರ್ಕ್ ಪಾವಗಡದಲ್ಲಿ ರೈತರ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿದ್ದು, ೨ ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ…

Read More

ಚಿಕ್ಕಮಗಳೂರು: ಯಾವುದೇ ಸಹಕಾರ ಸಂಸ್ಥೆಗಳು ರಾಜಕೀಯ ಮುಕ್ತವಾಗಿ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಿ ಆಡಳಿತ ಮಂಡಳಿ ಆಯಾ ಸಂಸ್ಥೆಗಳನ್ನು ಆರ್ಥಿಕವಾಗಿ ಲಾಭದ ಹಾದಿಗೆ ಕೊಂಡೊಯ್ಯಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಇಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮತ್ತಿತರ ಸಹಕಾರ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ  ಜಿಲ್ಲೆಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ನೋಂದಾಯಿಸಿ ಅವುಗಳನ್ನು ಸರ್ಕಾರದ ನಿಯಮಾನುಸಾರ ಆರ್ಥಿಕ ಶಿಸ್ತು ಕಾಪಾಡಿಕೊಂಡು ರೈತರಿಗೆ ಉಪಯೋಗ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದ ಅವರು, ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಣಕಾಸಿಗೆ ಸಂಬಂಧಪಟ್ಟ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ…

Read More

ಚಿಕ್ಕಮಗಳೂರು:  ಮೊಬೈಲ್ ಗ್ರಾಹಕರಿಗೆ ಅಡೆತಡೆಗಳಿಲ್ಲದೇ ಸುಲಲಿತವಾಗಿ ಸಿಗ್ನಲ್ ಲಭಿಸುವ ಸದುದ್ದೇಶದಿಂದ ನೂತನವಾಗಿ ಬಿ.ಎಸ್.ಎನ್.ಎಲ್. ಟವರ್ ನಿರ್ಮಿಸಿ ಗ್ರಾಮಸ್ಥರಿಗೆ ಅನು ಕೂಲ ಮಾಡಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂ ಜಾರಿ ಹೇಳಿದರು. ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಆಲೇಖಾನ್ ಹೊರಟ್ಟಿ ಗ್ರಾಮದಲ್ಲಿ ಸೋಮವಾರ ೮೦ ಲಕ್ಷ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಸೆಟಲೈಟ್ ಬೇಸಿಕ್ ಮೊ ಬೈಲ್ ಟವರ್ ಸಾರ್ವಜನಿಕರಿಗೆ ಸಮರ್ಪಣೆಗೊಳಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಹೊರಟ್ಟಿ ಗ್ರಾಮಕ್ಕೆ ಸೆಂಟಲೈಟ್ ಟವರ್ ನಿರ್ಮಾಣಗೊಂಡಿದೆ. ಇದರಿಂದ ಮೊಬೈಲ್ ಗ್ರಾಹಕರಿಗೆ ಸಿಗ್ನಲ್‌ಗಳು ಅಡೆತಡೆಗಳಿಲ್ಲದೇ ಮಾತುಕತೆ ಮಾಡಬಹುದು. ಈ ಹಿಂ ದಿನ ಸಂಸದರು ಈ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದೀಗ ಪೂರ್ಣಗೊಳಿಸಿ ಸಮರ್ಪಿಸಿದ್ದೇವೆ ಎಂದು ತಿಳಿಸಿದರು. ಹೊರಟ್ಟಿ ಬೆಟ್ಟದ ತುದಿಯಲ್ಲಿರುವ ಗ್ರಾಮವಾದ ಹಿನ್ನೆಲೆ ಮಾಲಿನ್ಯ ರಹಿತ ಹಾಗೂ ಕಲಶವಿಲ್ಲದ ಪರಿ ಸರವನ್ನು ಹೊಂದಿದೆ. ಆಧುನಿಕತೆ ಕಡಿಮೆಯಿದ್ದರೂ ಹಚ್ಚಹಸಿರಿನಂದ ಸ್ವರ್ಗದಂತೆ ಕಂಗೊಳಿಸುತ್ತಿದ್ದು ಮುಂದಿನ ದಿನಗಳಲ್ಲಿ ಆದ್ಯತೆಗನುಸಾರ ಮೂಲಭೂತ ಸೌಕರ್ಯಕ್ಕೆ ಪ್ರಾಮಾಣಿಕವಾಗಿ…

Read More