Subscribe to Updates
Get the latest creative news from FooBar about art, design and business.
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
- ಇಂದಾವರ ಗ್ರಾ.ಪಂ. ಅಧ್ಯಕ್ಷರಾಗಿ ಸುಭಾಶ್ ಅವಿರೋಧ ಆಯ್ಕೆ
- ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
- ಕವಿತೆಗಳು ಅನುಭವ ಶೋಧಕ್ಕೆ ದಾರಿ ತೆರೆಯುತ್ತವೆ
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
Author: chikkamagalur express
ಚಿಕ್ಕಮಗಳೂರು: ಹೆಣ್ಣು ಮಕ್ಕಳನ್ನು ಭ್ರೂಣದಲ್ಲಿ ಹತ್ಯೆ ಮಾಡುವುದು ಕಾನೂನಾತ್ಮಕ ಅಪರಾಧವಾಗಿದೆ. ಹೆಣ್ಣು ಮತ್ತು ಗಂಡು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಸಮಾನವಾಗಿ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ವಿ. ಹನುಮಂತಪ್ಪ ಹೇಳಿದರು. ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಹಾಗೂ ಡಿ.ಎ.ಸಿ.ಜಿ ಸರ್ಕಾರಿ ಪಾಲಿಟೆಕ್ನಿಕ್, ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಡಿ.ಎ.ಸಿ.ಜಿ ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ”ಭ್ರೂಣ ಹತ್ಯೆ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಕಾಯ್ದೆ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದ್ದು, ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ನೀಡಬೇಕು.ಜೀವನದಲ್ಲಿ ಮಕ್ಕಳು ಗುರಿಗಳನ್ನು ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು. ಗುರಿ ಸಾಧಿಸುವವರೆಗೆ ಪ್ರಯತ್ನ ಬಿಡಬಾರದು, ಸಂವಿಧಾನದ ಆಶಯದಂತೆ ಸಂವಿಧಾನದ ಅಡಿಯಲ್ಲಿ…
ಚಿಕ್ಕಮಗಳೂರು: ರಾಜ್ಯದ ವೀರಶೈವ ಲಿಂಗಾಯುತರು ಯಡಿಯೂರಪ್ಪ ಅವರ ಬೆಂಬಲಿಸಲಿದ್ದಾರೆ ಎಂಬುದನ್ನು ಪ್ರದರ್ಶನ ಮಾಡಲು ಮಾ.೮ ರಂದು ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯುತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್.ಎಂ.ಲೋಕೇಶ್ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಶೈವ ಲಿಂಗಾಯುತ ಸಮುದಾಯದ ಮುಖಂಡರು ಎಲ್ಲ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡು ಜನತೆಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವೀರಶೈವ ಲಿಂಗಾಯುತರ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ಏಳಿಗೆಯನ್ನು ಸಹಿಸದ ಕೆಲವು ಪಟ್ಟಭದ್ರ ಶಕ್ತಿಗಳು ಅವರ ಮೇಲೆ ಅನಗತ್ಯವಾದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಹೀಯಾಳಿಸುತ್ತಾ ಪಕ್ಷ ಸಂಘಟನೆ ಮತ್ತು ಜನಸೇವೆಗೆ ಅಡ್ಡಿ ಪಡಿಸುತ್ತಿದ್ದಾರೆ. ಸ್ವ ಪಕ್ಷದವರೇ ಆದ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋ ಗುಂಪಿನ ಮುಂಚೂಣಿ ನಾಯಕರಾಗಿದ್ದಾರೆ. ಅವರ ನಡೆಯನ್ನು ಸಮುದಾಯ ಖಂಡಿಸುತ್ತದೆ. ಬಿಜೆಪಿ ಕೇಂದ್ರ ನಾಯಕರು ಮಧ್ಯ ಪ್ರವೇದ್ರಿವರ ರಾಜಕೀಯ ನಡೆಯನ್ನು ತಡೆಯಬೇಕು ಎಂದು…
ಚಿಕ್ಕಮಗಳೂರು: ಮೂಗ್ತಿಹಳ್ಳಿಯಿಂದ ಮೂಡಿಗೆರೆ ವರೆಗಿನ ರಾಷ್ಟ್ರೀಯ ಹೆದ್ದಾರಿ ೧೭೩ ರ ಅಭಿವೃದ್ಧಿಗೆ ಅಗತ್ಯವಿರುವ ಭೂ ಸ್ವಾಧೀನ ಸಂಬಂಧ ಈ ತಿಂಗಳ ಅಂತ್ಯದೊಳಗಾಗಿ ರಾಜ್ಯದ ಕಂದಾಯ ಇಲಾಖೆಗೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಹೆದ್ದಾರಿ ಅಭಿವೃದ್ಧಿ ಸಂಬಂಧ ಗುರುವಾರ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರೆಡ್ಡಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಎನ್‌ಎಚ್ ೧೭೩ ರ ಅಗಲೀಕರಣ ಮತ್ತು ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿದ್ದೇವೆ. ಕಂದಾಯ, ಅರಣ್ಯ, ತೋಟಗಾರಿಕೆ, ಸರ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಮೂಗ್ತಿಹಳ್ಳಿಯಿಂದ ಮೂಡಿಗೆರೆ ವರೆಗೆ ೨೬.೩೨ ಕಿ.ಮೀ. ರಸ್ತೆಗೆ ೪೦೦.೬೯ ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿತ್ತು. ಇದಕ್ಕೆ ಒಂದು ಬಾರಿ ಟೆಂಡರ್ ಆಗಿತ್ತು. ಆದರೆ ಭೂಸ್ವಾಧೀನ ಪ್ರಕ್ರಿಯೆ ಅಪೂರ್ಣಗೊಂಡಿರುವುದರಿಂದ ಟೆಂಡರನ್ನು ೨೧.೩.೨೦೨೫ ಕ್ಕೆ ಮುಂದೂಡಲಾಗಿತ್ತು. ಅಷ್ಟರೊಳಗಾಗಿ ಭೂ ಸ್ವಾಧೀನ ಪ್ರಕ್ರಿಯೆಗಳು ಮುಗಿದಿ…
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಮಾಡುತ್ತಿದ್ದ ಎಂಟು ಪ್ರಕರಣಗಳಲ್ಲಿಆರೋಪಿಯನ್ನು ಬಂಧಿಸಿರುವ ಪೊಲೀಸರು ಒಂದು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಹೆಚ್.ಎಂ.ಶೈಲೇಂದ್ರ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ವಿ.ಎಸ್.ಹಾಲಮೂರ್ತಿರಾವ್ ಇವರುಗಳ ಮಾರ್ಗದರ್ಶನದಲ್ಲಿ ಕಡೂರು ವೃತ್ತನಿರೀಕ್ಷಕ ರಫೀಕ್ ನೇತೃತ್ವದಲ್ಲಿ ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವಹಿನ್ನಲೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ತಂಡವನ್ನು ರಚಿಸಲಾಗಿತ್ತು. ಕಾರ್ಯಪ್ರವೃತ್ತವಾದ ತಂಡವು ವಿವಿಧ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ವೈಜ್ಞಾನಿಕ ತನಿಖೆ ನಡೆಸಿ ಆರೋಪಿ ಬಳ್ಳಾರಿ ನಗರ ಈಗ ಚಿಕ್ಕಮಗಳೂರು ನಗರದ ಟಿಪ್ಪುನಗರದಲ್ಲಿ ವಾಸವಾಗಿದ್ದ ಮೊಹಮ್ಮದ್ ಸಾಂ ಸದ್ದಾಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈತನ ಮೇಲೆ ಈ ಹಿಂದೆ ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳ್ಳತನ ಹಾಗೂ ದರೋಡೆ ಪ್ರಕರಣಗಳು ದಾಖಲಾಗಿರುವುದು ಕಂಡುಬಂದಿರುತ್ತದೆ. ಈ ವ್ಯಕ್ತಿಯ ತನ್ನ ಸಹಚರನೊಂದಿಗೆ ಕಡೂರು, ಯಗಟಿ, ಬೀರೂರು, ಸಖರಾಯಪಟ್ಟಣ, ಅಜ್ಜಂಪುರ, ಚಿಕ್ಕಮಗಳೂರು ನಗರ, ಬಸವನಹಳ್ಳಿ, ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಲವಾರು ದೇವಸ್ಥಾನಗಳಲ್ಲಿ ಕಳ್ಳತನ ಮಾಡಿರುವುದು…
ಚಿಕ್ಕಮಗಳೂರು: ಕಳ್ಳತನದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ೮.೫೦ ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಅಯ್ಯಪ್ಪನಗರದ ೧ನೇ ತಿರುವಿನಲ್ಲಿರುವ ಹಸ್ಟೈನ್ ಅಹಮದ್ ಅವರ ಮನೆಯಲ್ಲಿ ಮಾರ್ಚ್ ೨ರಂದು ಸುಮಾರು ೬೭ ಗ್ರಾಂ ಚಿನ್ನದ ಒಡವೆಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಕಳ್ಳರನ್ನು ಪತ್ತೆಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ಶೀಘ್ರ ಪತ್ತೆಗಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಡಾ.ವಿಕ್ರಮ್ ಅಮಟೆ, ಉಪಪೊಲೀಸ್ ಮುಖ್ಯಾಧಿಕಾರಿ ಶೈಲೇಂದ್ರ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ಉಪನಿರೀಕ್ಷ ಬಾಬುದ್ದೀನ್, ಸಿಬ್ಬಂದಿಗಳಾದ ದಿನೇಶ್, ನಂಜಪ್ಪ,ಪ್ರದೀಪ. ನವೀನ, ಮಂಜುನಾಥ್‌ನಾಯ್ಕ, ಮಹಮ್ಮದ್ ರಫೀಕ್ ಘಾಟಿ, ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಕಳವು ಆರೋಪಿತ ಕಡೂರು ಪಟ್ಟಣದ ತ್ಯಾಗರಾಜನಗವರದ ಕಾರ್ಪೆಂಟರ್ ವಿರುಪಾಕ್ಷನನ್ನು ಪ್ರಕರಣ ದಾಖಲಾದ ೨೪ ಗಂಟೆಯೊಳಗೆ ಆಕದ್ದಮಾಲು ಪತ್ತೆ ಮಾಡಿ ಆತನನ್ನು ಬಂಧಿಸಿ ಚಿನ್ನ ಮತ್ತು ವಜ್ರ ಖಚಿತ ೩ ಬಳೆಗಳು,ಒಂದು…
ಕೊಟ್ಟಿಗೆಹಾರ : ಕಂದಾಯ ಇಲಾಖೆ ನಿರ್ಲಕ್ಷ್ಯದಿಂದ ಮೂರು ವರ್ಷಗಳಿಂದ 25 ಮನೆಗಳಿಗೆ ಹಕ್ಕುಪತ್ರ ನೀಡದೆ ವಿಳಂಬ ಮಾಡುತ್ತಿರುವುದಕ್ಕೆ ವಿರೋಧಿಸಿ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಪೂರ್ಣ ಪ್ರತಿಭಟನೆ ನಡೆಸಿದ್ದಾರೆ. ಹಕ್ಕುಪತ್ರ ನೀಡಲು ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರದ ವಿರುದ್ಧ ಅರೆಬೆತ್ತಲೆ ಪಾದಯಾತ್ರೆ ನಡೆಸಿದ ನವೀನ್, 25 ಮನೆಗಳ ಮಣ್ಣನ್ನು ಪುಟ್ಟಿಯಲ್ಲಿ ತುಂಬಿಕೊಂಡು ತಲೆಯ ಮೇಲೆ ಹೊತ್ತುಕೊಂಡು, ನಿಡುವಾಳೆಯಿಂದ ಮೂಡಿಗೆರೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದ್ದಾರೆ. ನಿದಾನವಾಗಿ ನಡೆಯುತ್ತಿರುವ ಭೂಮಿಯ ಹಕ್ಕುಪತ್ರ ವಿತರಣಾ ಪ್ರಕ್ರಿಯೆಗಾಗಿ ಸ್ಥಳೀಯ ಗ್ರಾಮಸ್ಥರು ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಕಂದಾಯ ಇಲಾಖೆ ಸ್ಪಂದಿಸಿಲ್ಲ. 50ಕ್ಕೂ ಹೆಚ್ಚು ಮನೆಗಳಿಗೆ ಹಕ್ಕುಪತ್ರ ನೀಡಬೇಕಾಗಿದ್ದರೂ, ಕೇವಲ 25 ಮನೆಗಳಿಗೆ ಮಾತ್ರ ಮಂಜೂರು ಮಾಡಲಾಗಿದೆ. ಉಳಿದ ಮನೆಗಳಿಗೆ ಯಾಕೆ ಹಕ್ಕುಪತ್ರ ನೀಡಿಲ್ಲ? ಎಂಬ ಪ್ರಶ್ನೆ ಉದ್ಭವಿಸಿದೆ. “ನಾನು ಹೊತ್ತು ತಂದಿರುವ ಮಣ್ಣಿನಲ್ಲಿ ಏನಾದರೂ ತೊಂದರೆ ಇದೆಯಾ? ಈ ಮಣ್ಣಿಗೆ ಹಕ್ಕುಪತ್ರ ಕೊಡಲು ಸಾಧ್ಯವೇ? ಇಲ್ಲವೇ?” ಎಂದು ನವೀನ್ ತಹಶೀಲ್ದಾರ್ ಕಚೇರಿಗೆ ತೆರಳಿ…
ಚಿಕ್ಕಮಗಳೂರು ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮತ್ತು ಗಾಯತ್ರಿ ಶಾಂತೇಗೌಡರ ನಡುವಿನ ಚುನಾವಣಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಹಿಂದಿನ ಆದೇಶದಂತೆ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಮತ ಮರುಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ವೇಳೆ ಸುಪ್ರೀಂಕೋರ್ಟ್, ಪ್ರಕರಣದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿಯ 12 ಮಂದಿ ನಾಮನಿರ್ದೇಶನ ಸದಸ್ಯರು ಮತಗಳನ್ನು ಪರಿಗಣಿಸುವ ಬಗ್ಗೆ ಆಯೋಗದಿಂದ ಮಾಹಿತಿ ಕೇಳಿತು. ಬಳಿಕ ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 25ರಂದು ವಿಚಾರಣೆ ಮುಂದೂವರಿಸುವುದಾಗಿ ಪೀಠ ಹೇಳಿದೆ. 2021ರ ಡಿಸೆಂಬರ್ 10ರಂದು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆದಿತ್ತು. ಆರು ಮತಗಳಿಂದ ಬಿಜೆಪಿ. ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆಲುವು ಸಾಧಿಸಿದ್ದರು. ಮತ ಎಣಿಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಗೆ ಮನವಿ ಸಲ್ಲಿಸಿದ್ದರು. ಆದರೆ,…