Subscribe to Updates
Get the latest creative news from FooBar about art, design and business.
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
- ಇಂದಾವರ ಗ್ರಾ.ಪಂ. ಅಧ್ಯಕ್ಷರಾಗಿ ಸುಭಾಶ್ ಅವಿರೋಧ ಆಯ್ಕೆ
- ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
- ಕವಿತೆಗಳು ಅನುಭವ ಶೋಧಕ್ಕೆ ದಾರಿ ತೆರೆಯುತ್ತವೆ
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
Author: chikkamagalur express
ಚಿಕ್ಕಮಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಹಣವನ್ನು ದಲಿತರ ಅಭಿವೃದ್ಧಿಗೆ ಬಳಸಲು ಹಿಂದಿರುಗಿಸಬೇಕೆಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು. ಇಂದು ಬೆಳಗ್ಗೆ ನಗರದ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ೨೦೧೩-೧೪ ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಕಾಯಿದೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿದ ಯೋಜನೆ ಎಂದರು. ಅಭಿವೃದ್ಧಿಯ ಅಂತರ ಅಂದರೆ ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎಂದು ವ್ಯಾಖ್ಯಾನಿಸಲಾಗಿದ್ದು, ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ ಎಂದು ಹೇಳಿದ್ದಾರೆ. ೨೦೧೫ ರ ಮಾನವ…
ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಜಾಗಕ್ಕೆ ನೆಲ್ಲೂರು ಮಠದ ಮನೆ ಮತ್ತು ಜಾಮಿಯಾ ಮಸೀದಿ ನಡುವೆ ಹಗ್ಗಜಗ್ಗಾಟ ನಡೆದಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜಾಗದ ವಿಚಾರವಾಗಿ ಜಾಮಿಯಾ ಮಸೀದಿ ಮತ್ತು ನೆಲ್ಲೂ ಮಠದ ನಡುವೆ ಕಳೆದ ಎರಡು ದಶಕಗಳಿಂದ ಕಾನೂನು ಹೋರಾಟ ನಡೆಯುತ್ತಿದೆ. ಆದರೆ ಇದರ ನಡುವೆ ಹೈಕೋರ್ಟ್ ನಲ್ಲಿ ತಮ್ಮ ಪರವಾಗಿ ಆದೇಶ ಬಂದಿದೆ ಎಂದು ಹೇಳಿಕೊಂಡು ಬೆಳ್ಳಂಬೆಳಗ್ಗೆ ಜಾಮಿಯಾ ಮಸೀದಿ ಕಮಿಟಿ ಸುಮಾರು 200 ಹೆಚ್ಚು ಯುವಕರೊಂದಿಗೆ ಬಂದು ಏಕಾಏಕಿ ವಿವಾದಿತ ಮಠದ ಮನೆಯ ಜಾಗದಲ್ಲಿದ್ದ ಮನೆ ಮತ್ತು ಅಂಗಡಿಯನ್ನ ನೆಲಸಮ ಮಾಡಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೊಶಕ್ಕೆ ಕಾರಣವಾಗಿದೆ. ಇನ್ನೂ ಈ ಆಸ್ತಿ ನೆಲ್ಲೂರು ಮಠಕ್ಕೆ ಸೇರಿದ್ದ ಎಂದು ನೆಲ್ಲೂರು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ರೆ ಮತ್ತೊಂದು ಕಡೆ ಈ ಜಾಗ ನಮಗೆ ಸೇರಿದ್ದು ಮಳಿಗೆಗಳ ಬಾಡಿಗೆ ನೀಡದವರ ಮಳಿಗೆಗಳನ್ನ ಹೈ ಕೋರ್ಟ್ ಆದೇಶದಂತೆ ತೆರವು ಮಾಡಿದ್ದೇವೆ ಎಂದು ಜಾಮಿಯಾ ಮಸೀದಿ…
ಚಿಕ್ಕಮಗಳೂರು: ಸುದ್ದಿ ರಾಜು ಪ್ರಕಾಶನ ಮತ್ತು ಚಿಕ್ಕಮಗಳೂರು ಶರಣ ಸಾಹಿತ್ಯ ಪರಿಷತ್ ನಿಂದ ಮಾ. 11ರಂದು ಸಂಜೆ 5ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಗೊ.ರು.ಚನ್ನಬಸಪ್ಪ ಅವರ ಹೊನ್ನ ಬಿತ್ತೇವು ಹೊಲಕೆಲ್ಲ ಗ್ರಂಥದ ಮೂರನೇ ಆವೃತ್ತಿ ಬಿಡುಗಡೆ ಹಾಗೂ ಸಾಧಕರಿಗೆ ಸದಾಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸುದ್ದಿರಾಜು ಪ್ರಕಾಶನದ ಮುಖ್ಯಸ್ಥ ಎನ್.ರಾಜು ತಿಳಿಸಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1967 ರಲ್ಲಿ ನಡೆದ ಪ್ರಥಮ ರಾಜ್ಯ ಜಾನಪದ ಸಮ್ಮೇಳನದ ಸ್ಮರಣ ಗ್ರಂಥವಾಗಿದ್ದ ಹೊನ್ನ ಬಿತ್ತೇವು ಹೊಲಕೆಲ್ಲ ಗ್ರಂಥದ ಮೂರನೇ ಆವೃತ್ತಿ ಇದೀಗ ಬಿಡುಗಡೆಯಾಗುತ್ತಿದೆ ಎಂದರು. ಕಾರ್ಯಕ್ರಮದ ಸಾನಿಧ್ಯ ಹಾಗೂ ಸ್ಮರಣ ಗ್ರಂಥವನ್ನು ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶ ಕೇಂದ್ರ ಸ್ವಾಮೀಜಿ ಬಿಡುಗಡೆಗೊಳಿಸಲಿದ್ದಾರೆ. ಇದೆ ಸಂದರ್ಭದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು. ಗೊ.ರು.ಚ ಅವರ ಕುರಿತು ಜಾನಪದ ಸಾಹಿತಿ ಬಸವರಾಜ ನೆಲ್ಲಿಸರ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸ್ಪಂದನ…
ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಕುಮರಗಿರಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಏ. 9ರಿಂದ 11ರವರೆಗೆ ಪಂಗುನಿ ಉತ್ತಿರ ಜಾತ್ರೆ ಹಾಗೂ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ವಿಜಯ್ ಕುಮಾರ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ. 9ರಂದು ಬೆಳಗ್ಗೆ 6ಗಂಟೆಯಿಂದ 7.30ರವರೆಗೆ ಧ್ವಜಾರೋಹಣ ಹಾಗೂ ಕಂಕಣಧಾರಣೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಏ. 10ರಂದು ಬೆಳಗ್ಗೆ 9ಗಂಟೆಯಿಂದ 10.30ರವರೆಗೆ ಶ್ರೀಅವರಿಗೆ ಅಭಿಷೇಕ, ಅಲಂಕಾರ ಹಾಗೂ ಬೆಳಗ್ಗೆ 10.30ಕ್ಕೆ ಶ್ರೀಸ್ವಾಮಿಯವರ ಉತ್ಸವ ಮೂರ್ತಿಯು ದೇವಾಲಯದಿಂದ ಹೊರಟು ಮಲ್ಲೇನಹಳ್ಳಿ, ಬಾವಿಕಟ್ಟೆ, ಹೆಬ್ಬಳ್ಳಿ, ಮಾವಿನಹಳ್ಳ, ಅರಿಶಿನಗುಪ್ಪೆ, ದಾಸರಹಳ್ಳಿ, ಕೈಮರದಿಂದ ಅತ್ತಿಗಿರಿ ತಲುಪಿ ಪುನಃ ಕಂಬಿಹಳ್ಳ, ಶಾಂತಿಪುರ, ಕಬ್ಬಿಣ ಸೇತುವೆ, ಹೊಸಪೇಟೆ, ಗುಡ್ಡೇನಹಳ್ಳಿ, ಅರವಿಂದ ನಗರ, ನೀರುಗುಂಡಿ, ಎಮ್ಮೇಖಾನ್, ಭಕ್ತರಹಳ್ಳಿಯ ಮೂಲಕ ಸ್ವಾಮಿಯ ಸನ್ನಿಧಿ ತಲುಪಲಿದೆ ಎಂದು ಮಾಹಿತಿ ನೀಡಿದರು. ಏ. 11ರಂದು ಉತ್ತಿರಾ ನಕ್ಷತ್ರ ಶುಭಯೋಗ ಕೂಡಿದ ಶುಭದಿನದಲ್ಲಿ…
ಚಿಕ್ಕಮಗಳೂರು: ಕಾಳ್ಗಿಚ್ಚು, ನೆರೆ, ಪ್ರವಾಹ ಹಾಗೂ ವನ್ಯಮೃಗಗಳ ಹಾವಳಿಯಿಂದ ರೈತರು ಬೆಳೆದ ಶ್ರೀಗಂಧದ ಸಸಿ, ಮರ ದ್ವಂಸಗೊಂಡರೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದ ಮಾತನಾಡಿದ ಸಂಘದ ಅಧ್ಯಕ್ಷ ಡಾ|| ಕೆ.ಸುಂದರಗೌಡ ತರೀಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ವಿಶುಕುಮಾರ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಬೆಲೆಬಾಳುವ ಶ್ರೀಗಂಧ, ಗಾಳಿಮರ, ಮಾವು, ತೆಂಗು, ನುಗ್ಗೆಯ ತೋಟಕ್ಕೆ ಕಾಳ್ಗಿಚ್ಚು ತಗುಲಿ ಮರ ಗಳು ಹೊತ್ತಿ ಉರಿದು ಲಕ್ಷಾಂತರ ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದರು. ಕೆಲವೇ ವರ್ಷಗಳಲ್ಲಿ ಉತ್ತಮ ಫಸಲನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ರೈತನ ಸ್ಥಿತಿ ಕಂಗಾಲಾಗಿದೆ. ಈ ಕುರಿತಾಗಿ ಶೀಘ್ರವೇ ನ್ಯಾಯಯುತವಾದ ಪರಿಹಾರವನ್ನು ನೊಂದ ರೈತನಿಗೆ ನೀಡಬೇಕು. ಜೊತೆಗೆ ಈ ರೀತಿಯ ಘಟನೆಗಳು ರಾಜ್ಯದ ಯಾವ ಮೂಲೆಗಳಲ್ಲಿ ಸಂಭವಿಸಿದರೂ ಸರ್ಕಾರ ಕೂಡಲೇ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಹೇಳಿದರು. ಹವಾಮಾನ ವೈಪರೀತ್ಯ,…
ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ಮಾರ್ಚ್ 3 ರಿಂದ ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ ‘ಭಾರ್ಗವಿ LL. B.’, ತನ್ನ ತಂದೆಯ ಘನತೆಯನ್ನು ಮರಳಿ ಗಳಿಸಲು ಕಾನೂನಿನ ಪ್ರಪಂಚದಲ್ಲಿ ಎಲ್ಲ ಅಡೆತಡೆಗಳನ್ನು ಮೀರಿ ಬಲಿಷ್ಠ ಪ್ರಭಾವಶಾಲಿಗಳ ವಿರುದ್ಧ ಹೋರಾಡುವ ಧೀರ ಯುವತಿಯ ಸ್ಫೂರ್ತಿದಾಯಕ ಕತೆ. ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ “ ‘ಭಾರ್ಗವಿ LL. B.’ ಅನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹುನಿರೀಕ್ಷಿತ ಧಾರಾವಾಹಿ ಮಾರ್ಚ್ 3 ರಿಂದ ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ. ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ಹೇಳುತ್ತದೆ. ಭಾರ್ಗವಿಯ ಲಾಯರ್ ತಂದೆಯನ್ನು ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ…
ಚಿಕ್ಕಮಗಳೂರು: ನಮ್ಮ ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನಾವು ಈ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದೇವೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ನಗರದ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಭಾನುವಾರ ಸಂಕಲ್ಪ ಯೋಜನೆಯ ಸರ್ವರಿಗೂ ಉದ್ಯೋಗ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್ ಗಾರ್ ಉದ್ಯೋಗ ಮೇಳ-೨೦೨೫ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿರುವ ನಿರುದ್ಯೋಗ ಯುವಕ ಯುವತಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಯಾವುದೇ ಪದವಿ, ಡಿಪ್ಲೋಮಾ ಪೂರೈಸಿರುವಂತಹ ವಿದ್ಯಾರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಇಂದು ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದರು. ಅವರಿಗೆ ಮುಂದೆ ತಮ್ಮ ಕಾಲಮೇಲೆ ತಾವು ನಿಂತುಕೊಳ್ಳಲು ನಾವು ತಯಾರು ಮಾಡುತ್ತಿದ್ದೇವೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು. ಬಂದಿರುವಂತಹ ಎಲ್ಲಾ ನಿರುದ್ಯೋಗ ಯುವಕ ಯುವತಿಯರಿಗೆ ಈ ಉದ್ಯೋಗ ಮೇಳದಲ್ಲಿ…
ಮೂಡಿಗೆರೆ: ಕಳಸ ತಾಲ್ಲೂಕಿನ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವದ ರಥೋತ್ಸವವು ಭಾನುವಾರ ವಿಜೃಂಭಣೆಯಿಂದ ನೆರೆವೇರಿತು. ಭಾನುವಾರ ಬೆಳಿಗ್ಗೆ ಪೂಜೆಯ ನಂತರ ಉತ್ಸವ ಮೂರ್ತಿಯ ಸುತ್ತು ಸೇವೆ ನಡೆದು ನಂತರ ಸ್ತುತಿ ಪಾಠಕರು ಸ್ತುತಿ ಘೋಷಗಳನ್ನು ಪಟಿಸುತ್ತಾ,ಛತ್ರಿ ಛಾಮರ ಮಂಗಳವಾದ್ಯಗಳೊಂದಿಗೆ ಹೂವಿನ ಅಲಂಕಾರದೊಂದಿಗೆ ಸಿಂಗರಿಸಿ ಶ್ರೀ ದೇವರ ಉತ್ಸವ ಮೂರ್ತಿಯನ್ನು ಹೊತ್ತುಕೊಂಡು ಸುಂದರವಾಗಿ ಅಲಂಕರಿಸಿದ ಬ್ರಹ್ಮರಥದ ಬಳಿ ದೇವರನ್ನು ತರಲಾಯಿತು. ರಥದಬಳಿ ಬಂದ ಜಗನ್ಮಾತೆ ಅನ್ನಪೂರ್ಣೇಶ್ವರಿಯನ್ನು ಭವ್ಯ ರಥದಲ್ಲಿ ಕುಳ್ಳಿರಿಸಿ ಪೂಜೆಯನ್ನು ಮಾಡಲಾಯಿತು. ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿ ಮಾತನಾಡಿ ವರ್ಷವಿಡಿ ಗರ್ಭಗುಡಿಯಲ್ಲಿ ರುವ ದೇವರು ಬರುವಂತ ಭಕ್ತರಿಗೆ ದರ್ಶನ ಕೊಡುತ್ತಾಳೆ. ರಥೋತ್ಸವದ ವಿಷೇಶ ದಿನದಲ್ಲಿ ಜಗನ್ಮಾತೆಯು ಹೊರಬಂದು ದಿವ್ಯ ರಥದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುವುದೇ ರಥೋತ್ಸವದ ವಿಷೇಶವಾಗಿದೆ ಎಂದು ತಿಳಿಸಿದರು. ಶ್ರೀ ಕ್ಷೇತ್ರದ ಹೊರನಾಡು ಅನ್ನಪೂರ್ಣೆಶ್ವರಿ ಅಮ್ಮನವರ ದಿವ್ಯ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ರಥೋತ್ಸವದ ವಿವರಣೆ ನೀಡಿದ ಅವರು. ಶ್ರೀಕ್ಷೇತ್ರ ದಲ್ಲಿ ನಡೆಯುವ…
ಚಿಕ್ಕಮಗಳೂರು: ಕಲಬೆರಕೆ ಆಹಾರ ಪದಾರ್ಥಗಳ ಹಾವಳಿಯಿಂದ ಆತಂಕ ಪಡುತ್ತಿರುವ ಸಂದರ್ಭದಲ್ಲಿ ಸಿರಿಧಾನ್ಯ ಉತ್ಪನ್ನಗಳ ಬಳಕೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಪಾಂಚಜನ್ಯ ಸಭಾಂಗಣದಲ್ಲಿ ಬೆಳವಾಡಿಯ ತೃಪ್ತಿ ಸಿರಿಧಾನ್ಯ ಸರಿ ಸಂಸ್ಥೆ, ಚಿಕ್ಕಮಗಳೂರು ಆರ್ಟ್ ಸೊಸೈಟಿ ಹಾಗೂ ಚಿತ್ರಕಲಾ ಶಿಕ್ಷಕರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ತೃಪ್ತಿ ಸಿರಿಧಾನ್ಯ ಸರಿ ಉತ್ಪನ್ನಗಳ ಬಿಡುಗಡೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಕಲಬೆರಕೆ ಇಲ್ಲದ ವಸ್ತುಗಳನ್ನು ಮಾರಾಟ ಮಾಡಲು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿಗೆ ವ್ಯವಸ್ಥೆ ತಲುಪಿದೆ. ಮುಖಕ್ಕಿಂತ ಮುಖವಾಡಕ್ಕೆ ಹೆಚ್ಚು ಪ್ರಚಾರ ಸಿಗುವಂತಾಗಿದೆ. ನಮ್ಮ ಯೋಚನೆ ಮತ್ತು ವಿಚಾರ ಎರಡೂ ವ್ಯವಸ್ಥೆಯ ಹತ್ತಿರಕ್ಕಿರಬೇಕು ಎಂದು ಅವರು ತಿಳಿಸಿದರು. ಕರ್ನಾಟಕ ಸರ್ಕಾರದಲ್ಲಿ ಆಹಾರ ಉತ್ಮನ್ನಗಳ ಗುಣ ಮಟ್ಟ ಪರೀಕ್ಷೆಗೆ ನಾಲ್ಕು ಪ್ರಯೋಗಾಲಯಗಳಿವೆ. ಹಣ್ಣುಗಳಿಗೆ ವಿಷಯುಕ್ತ ರಾಸಾಯನಿಕಗಳನ್ನು ಬೆರೆಸಿ ಬಣ್ಣ ಹೆಚ್ಚಿಸುವುದು ಸೇರಿದಂತೆ ಇತರೆ ಕಲಬೆರಕೆಗಳನ್ನು ಅದು ಪರೀಕ್ಷಿಸಬೇಕು. ಆದರೆ ಆ ನಾಲ್ಕೂ ಲ್ಯಾಬ್‌ಗಳು…