Subscribe to Updates
Get the latest creative news from FooBar about art, design and business.
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
- ಇಂದಾವರ ಗ್ರಾ.ಪಂ. ಅಧ್ಯಕ್ಷರಾಗಿ ಸುಭಾಶ್ ಅವಿರೋಧ ಆಯ್ಕೆ
- ಜಿಲ್ಲೆಯಲ್ಲಿ ನೂತನ ಜಿಲ್ಲಾ ಬೆಳೆಗಾರರ ಸಂಘ ಅಸ್ತಿತ್ವಕ್ಕೆ
- ಕವಿತೆಗಳು ಅನುಭವ ಶೋಧಕ್ಕೆ ದಾರಿ ತೆರೆಯುತ್ತವೆ
- e-paper (13-07-2025) Chikkamagalur Express
- ಸಂಸತ್ ಅಧಿವೇಶನದಲ್ಲಿ ಸರ್ಫೇಸಿ ಕಾಯ್ದೆ ಬಗ್ಗೆ ಚರ್ಚೆ
- ಕೇಂದ್ರ ಸರ್ಕಾರದ ಮೇಲೆ ಹೊಸ ನಂಬಿಕೆ-ವಿಶ್ವಾಸ ಬಂದಿದೆ
Author: chikkamagalur express
ಚಿಕ್ಕಮಗಳೂರು:- ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಇಂದು ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಬ್ರಹ್ಮಕುಮಾರಿ ಶಿವಾನಿ ದೀದೀಜಿಯವg ಸ್ವಾಸ್ಥ್ಯ,ಸಾಮರಸ್ಯ, ಹಾಗೂ ಸಂತೋಷ ಜೀವನಕ್ಕೆ ಜಾಗೃತಿ ಮೂಡಿಸುವ ಸ್ಪೂರ್ತಿದಾಯಕ ಉಪನ್ಯಾಸ ಸೇರಿದ್ದ ಆಧ್ಯಾತ್ಮಿಕ ಬಂಧುಗಳಿಗೆ ಆತ್ಮಸಾಕ್ಷಾತ್ಕಾರಗೊಳಿಸುವಲ್ಲಿ ಯಶಸ್ವಿಯಾಯಿತು. ಶನಿವಾರ ಮುಂಜಾನೆ ಯಿಂದಲೇ ಸುಭಾಷ್ ಚಂದ್ರಭೋಸ್ ಆಟದ ಮೈದಾನದಲ್ಲಿ ಹಾಕಿದ್ದ ಬೃಹತ್ ಪೆಂಡಾಲಿನಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜಿಲ್ಲಾಸಂಚಾಲಕಿ ಭಾಗ್ಯಕ್ಕನವರ ಮಾರ್ಗದರ್ಶನದಲ್ಲಿ ಆಧ್ಯಾತ್ಮಿಕ ಪ್ರವಚನಗಳು ಆರಂಭಗೊಂಡವು. ಸುಮಾರು ೯.೩೦ರ ಸುಮಾರಿಗೆ ಸಾಂಕೇತಿಕವಾಗಿ ಉದ್ಘಾಟನೆಗೊಂಡ ಕಾರ್ಯಕ್ರಮದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಬ್ರಹ್ಮಕುಮಾರಿ ಶಿವಾನಿ ದೀದೀಜಿಯವರ ನೀಡಿದ ಆಧ್ಯಾತ್ಮಿಕ ಪ್ರವಚನವನ್ನು ಕಣ್ಣು,ಕಿವಿ, ಮನಸ್ಸುಗಳನ್ನು ಕೇಂದ್ರಿಕರಿಸಿ ಬಹು ನಿಶ್ಯಬ್ಧತೆಯಿಂದ ಕುಳಿತು ಕೇಳಿಸಿಕೊಂಡ ನೂರಾರು ಸಂಖ್ಯೆಯ ಆಸ್ತಿಕರೊಳಗಿನ ಆಧ್ಯಾತ್ಮಿಕ ಚಿಂತನೆಗಳು ಜಾಗೃತಗೊಂಡವು. ಮಲಗುವ ಮೊದಲು ಮತ್ತು ನಿದ್ರೆಯಿಂದ ಎದ್ದ ನಂತರದ ಒಂದು ಗಂಟೆಗಳ ಕಾಲ ಟಿವಿ ಮತ್ತು ಮೊಬೈಲ್ ಗಳಿಂದ ದೂರವಿದ್ದು ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದ…
ಚಿಕ್ಕಮಗಳೂರು: ಭಾರತ ಪ್ರಾಕೃತಿಕ, ಆಧ್ಯಾತ್ಮಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಸಂಪದ್ಭರಿತ ದೇಶವಾಗಿದ್ದು, ಇಡೀ ಜಗತ್ತು ಅತ್ಯಂತ ಗೌರವದಿಂದ ನೋಡುವಂತಹ ಆಧ್ಯಾತ್ಮಿಕ ಆತ್ಮ ತೃಪ್ತಿಯನ್ನು ಹೊಂದಿದೆ ಎಂದು ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಇಂದು ಇಲ್ಲಿನ ಬಸವತತ್ವ ಪೀಠದಲ್ಲಿ ಏರ್ಪಡಿಸಲಾಗಿದ್ದ ಬಸವತತ್ವ ಸಮಾವೇಶ ಹಾಗೂ ಶ್ರೀಮಠದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಚಿಕ್ಕಮಗಳೂರು ಜಿಲ್ಲೆ ಸೌಂದರ್ಯಭರಿತವಾಗಿದ್ದು, ಮಲೆನಾಡು, ಬಯಲು ಪ್ರದೇಶ ಹೊಂದಿರುವ ಅಪರೂಪದ ಜಿಲ್ಲೆ. ಐತಿಹಾಸಿಕ, ಧಾರ್ಮಿಕ ಕೇಂದ್ರಗಳಿರುವುದರ ಜೊತೆಗೆ ನಾನಾ ಕಾರಣಗಳಿಂದ ತನ್ನದೇ ಆದ ಮಹತ್ವ ಪಡೆದುಕೊಂಡಿದ್ದು, ಈ ಜಿಲ್ಲೆಯಲ್ಲಿ ಬಸವತತ್ವ ಪೀಠ ಸ್ಥಾಪನೆಯಾಗಿರುವುದು ಆರ್ಥಪೂರ್ಣ ಎಂದರು. ಧರ್ಮ ಎನ್ನುವುದು ಸಾವಿರಾರು ವರ್ಷಗಳ ವಿಕಾಸವಾಗಿದ್ದು ಈ ಬಗ್ಗೆ ಆತ್ಮಸಾಕ್ಷಿ ನಿರಂತರವಾಗಿ ನಡೆದಿದೆ, ದೊಡ್ಡ ಪರಂಪರೆ ದೇಶದಲ್ಲಿ ಬೆಳೆದಿದೆ. ೧೨ನೇ ಶತಮಾನದಲ್ಲಿ ಆಧ್ಯಾತ್ಮಿಕ ತಿರುವು, ಆಧ್ಯಾತ್ಮಕ ಮಗ್ಗಲು ಬದಲಿಸಿದವರು ವಿಶ್ವಗುರು ಬಸವಣ್ಣನವರು. ಅವರ ಬದುಕೇ ಒಂದು ಪ್ರಯೋಗಶಾಲೆಯಾಗಿತ್ತು ಎಂದು ಹೇಳಿದರು. ಕಾನೂನಿನ ನೆರಳಿನಿಂದ…
ಚಿಕ್ಕಮಗಳೂರು: -ಒಳಚರಂಡಿ ಮತ್ತು ಅಮೃತ್ ಯೋಜನೆಯಿಂದ ಹಾನಿಗೊಳಗಾಗಿರುವ ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಎಸ್‌ಎಫ್‌ಸಿ ಅನುದಾನದಲ್ಲಿ ೧೦ ಕೋಟಿ ರೂ ಬಿಡುಗಡೆ ಮಾಡಿದ್ದಾರೆಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ನಗರಸಭೆಯಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಚಿಕ್ಕಮಗಳೂರು ನಗರ ಪ್ರವಾಸಿ ತಾಣಗಳ ಕೇಂದ್ರವಾಗಿದ್ದು, ಪಕ್ಷಾತೀತವಾಗಿ ನಗರಸಭೆಯ ಎಲ್ಲಾ ವಾರ್ಡ್‌ಗಳ ರಸ್ತೆಗಳ ಅಭಿವೃದ್ಧಿಗೆ ಈ ಅನುದಾನವನ್ನು ಬಳಸಿ ನಗರದ ಸರ್ವತೋಮುಖ ಅಭಿವೃದ್ಧಿಪಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು. ಮೊದಲ ಆದ್ಯತೆಯಾಗಿ ನಗರದ ಕೆಲವು ಪ್ರಮುಖ ರಸ್ತೆಗಳನ್ನು ಆಯ್ಕೆಮಾಡಿಕೊಂಡು ವಾರ್ಡಿನ ಸದಸ್ಯರು ಪಕ್ಷ ನೋಡದೆ ಅವಶ್ಯಕತೆ ಇರುವಲ್ಲಿ ಮೊದಲ ಆದ್ಯತೆ ನೀಡಿ ಕೆಲಸ ಮಾಡಬೇಕೆಂದು ಸೂಚಿಸಿದರು. ಹೆಚ್ಚು ಜನರ ಓಡಾಟ, ಹೆಚ್ಚು ವಾಹನ ದಟ್ಟಣೆ ಇರುವ ರಸ್ತೆಗಳಿಗೆ ಮೊದಲ ಆದ್ಯತೆ ಮೇರೆಗೆ ತೆಗೆದುಕೊಂಡು ಕ್ರಿಯಾಶೀಲ ಯೋಜನೆ ತಯಾರಿಸಿ ಅತೀ ಶೀಘ್ರವಾಗಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸಲಹೆ ನೀಡಿದರು. ಮುಂದಿನ ೩ ತಿಂಗಳು ಅಂದರೆ ಮಾಚ್, ಏಪ್ರಿಲ್, ಮೇ ಈ ಮಾಹೆಯ…
ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರಯಾಣ ನಡೆಸುತ್ತಿದ್ದ ಕಾರಿನ ಹಿಂಬದಿ ಸಾಗುತ್ತಿದ್ದ ಪರ್ಯಾಯ ವಾಹನಕ್ಕೆ ಹಿಂಬದಿಯಿಂದ ಲಾರಿ ಗುದ್ದಿ ಅಪಘಾತ ಸಂಭವಿಸಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಪೀಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿ ವೈ ವಿಜಯೇಂದ್ರ ಅವರು ತಮ್ಮ ಬೆಂಗಾವಲು ವಾಹನ ಹಾಗೂ ಪರ್ಯಾಯ ವಾಹನದೊಂದಿಗೆ ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದ್ದರು. ಈ ವೇಳೆ ಲಕ್ಯ ಕ್ರಾಸ್ ಬಳಿ ಪರ್ಯಾಯ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಗುದ್ದಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. BJP state president B Y Vijayendra substitute vehicle accident
ಚಿಕ್ಕಮಗಳೂರು: ಬಸವತತ್ವದ ಬಗ್ಗೆ ಮಾತನಾಡುತ್ತೇವೆ. ಬಸವಣ್ಣನವರನ್ನು ಕೊಂಡಾಡುತ್ತೇವೆ. ಆದರೆ ನಮ್ಮ ನುಡಿ-ನಡೆ ಆ ದಿಕ್ಕಿನಲ್ಲಿ ಸಾಗುತ್ತಿದೆಯೇ ಎಂದು ಚಿಂತನೆ ಮಾಡಬೇಕಿದೆ. ವೀರಶೈವ ಲಿಂಗಾಯತ ಸಮಾಜ ಎಂದರೆ ಆಲದ ಮರದಂತೆ. ಎಲ್ಲ ಸಮಾಜಗಳಿಗೂ ನಮ್ಮ ಸಮಾಜ ನೆರಳಿದ್ದಂತೆ. ಸಮಾಜವನ್ನು ಒಡೆದಾಳುವ ನೀತಿಯನ್ನು ಇಂದಿನ ಕಾಲಘಟ್ಟದಲ್ಲಿ ಕಾಣುತ್ತಿದ್ದೇವೆ. ಸಮಾಜ ಸಮಾಜಗಳ ಮಧ್ಯೆ ವಿಷ ಬೀಜ ಬಿತ್ತಿ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವವರ ಬಗ್ಗೆ ಜಾಗೃತರಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದ ಹೊರವಲಯದ ದೊಡ್ಡಕುರುಬರಹಳ್ಳಿಯ ಶ್ರೀಬಸವತತ್ವ ಪೀಠದಿಂದ ಶುಕ್ರವಾರ ಆಯೋಜಿಸಲಾಗಿದ್ದ ಬಸವತತ್ವ ಸಮಾವೇಶದಲ್ಲಿ ದಾಕ್ಷಾಯಣಿ ಜಯದೇವಪ್ಪ ಅವರ ದಾಕ್ಷಾಯಣಿ ವಚನಗಳು ಎಂಬ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬಸವಣ್ಣ ಅವರನ್ನು ವಿಶ್ವಗುರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಅವರು ಸಾಮಾಜಿಕ ಕ್ರಾಂತಿಯ ಸಂದೇಶ ನೀಡಿದ್ದಾರೆ. ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅತ್ಯಂತ ಸರಳವಾಗಿ ಜನಸಾಮಾನ್ಯರ ಮಸಸ್ಸಿಗೆ, ಹೃದಯಕ್ಕೆ ತಟ್ಟುವ ರೀತಿಯಲ್ಲಿ ಮಾನವ ಧರ್ಮದ ಶ್ರೇಷ್ಟತೆ ಬಗ್ಗೆ ತಿಳಿಸಿಕೊಟ್ಟಿರುವವರು ಬಸವಣ್ಣನವರು. ಮನುಷ್ಯ ಕುಲವೆಲ್ಲಾ ಒಂದೇ…
ಚಿಕ್ಕಮಗಳೂರು: ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಸ್ಥಳೀಯ ಸೇವಾ ಕೇಂದ್ರದ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಮಾ.೧ ರಂದು ನಗರದಲ್ಲಿ ಪ್ರಥಮ ಬಾರಿಗೆ ಸ್ವಾಸ್ಥ್ಯ, ಸಾಮರಸ್ಯ ಹಾಗೂ ಸಂತೋಷ ಜೀವನದ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದ್ದು ಸಾರ್ವಜನಿಕರು, ಆಧ್ಯಾತ್ಮಿಕ ಒಲವಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಭಾಗ್ಯ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ನಗರದ ಜಿಲ್ಲಾ ಆಟದ ಮೈದಾನದಲ್ಲಿ ಬೆಳಗ್ಗೆ ೯.೩೦ಕ್ಕೆ ಆರಂಭವಾಗುವ ಆಧ್ಯಾತ್ಮಿಕ ಉಪನ್ಯಾಸ ಕಾರ್ಯಕ್ರಮವನ್ನು ಪ್ರೇರಣಾದಾಯಿ ಚಿಂತಕಿ, ಅಂತರಾಷ್ಟ್ರೀಯ ಆಧ್ಯಾತ್ಮಿಕ ಪ್ರೇರಣಯುಕ್ತ ಮಾರ್ಗದರ್ಶಕರೂ ಹಾಗೂ ರಾಷ್ಟ್ರಪತಿ ಅವರಿಂದ ನಾರಿಶಕ್ತಿ ಪ್ರಶಸ್ತಿ ಪುರಸ್ಕೃತರಾದ ಬ್ರಹ್ಮಕುಮಾರಿ ಶಿವಾನಿ ದೀದೀಜಿ ಅವರು ನಡೆಸಿಕೊಡಲಿದ್ದಾರೆ ಎಂದರು. ದೀದೀಜಿ ಅವರು ಬ್ರಹ್ಮಕುಮಾರೀಸ್ ಸಂಸ್ಥೆಯ ರಾಯಭಾರಿಯೂ ಹೌದು. ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ಆಗಮನ ತ್ರಿವೇಣಿ ಸಂಗಮ ಎಂದರೆ ತಪ್ಪಾಗದು ಎಂದರು. ಶ್ರೀ ಶಿವಾನಿ ದೀದೀಜಿ ಅವರು ಬಾಲ್ಯದಿಂದ ಆಧ್ಯಾತ್ಮಿಕ ಒಲವು ಹೊಂದಿದವರೇನಲ್ಲ. ಅವರ…
ಚಿಕ್ಕಮಗಳೂರು: ನಿರುದ್ಯೋಗಿಗಳ ಜೀವನೋಪಾಯಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರದ ಸಂಕಲ್ಪ ಯೋಜನೆಯಡಿ ಜಿಲ್ಲಾಮಟ್ಟದ ಕೌಶಲ್ಯ ರೋಜ್ಗಾರ್ ಉದ್ಯೋಗ ಮೇಳ-೨೦೨೫ ನ್ನು ಮಾ.೨ ರಂದು ಭಾನುವಾರ ಬೆಳಗ್ಗೆ ೯.೩೦ ರಿಂದ ೪.೩೦ ರವರೆಗೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಶಾಂತ್ ಹೆಚ್.ಸಿ ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಸಂಜೀವಿನಿ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಉದ್ಯೋಗದಾತ ಫೌಡೇಷನ್, ಐಡಿಎಸ್‌ಜಿ ಸರ್ಕಾರಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು. ಈ ಉದ್ಯೋಗ ಮೇಳದಲ್ಲಿ ವಿವಿಧ ವಲಯಗಳ ಮಾಹಿತಿ ಮತ್ತು ತಂತ್ರಜ್ಞಾನ, ಉತ್ಪಾದನಾ ವಲಯ, ಸೇವಾವಲಯ, ಪ್ರವಾಸೋದ್ಯಮ ಸೇರಿದಂತೆ ಇತ್ಯಾದಿ ವಲಯಗಳಿಂದ ಸುಮಾರು ೭೦ ರಿಂದ ೭೫ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ. ಸುಮಾರು ೧೧ ಸಾವಿರ…