Author: chikkamagalur express

ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ವೀರ ವನಿತೆ ಒಬವ್ವ ಜಯಂತಿ ಆಚರಣಾ ಕಾರ್ಯಕ್ರಮವನ್ನು  ನವೆಂಬರ್ ೧೧ರಂದು ಬೆಳಿಗ್ಗೆ ಗಂಟೆ ೧೨ಕ್ಕೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜು (ಭೈರತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಘನ ಉಪಸ್ಥಿತಿ ಇರಲಿದ್ದು, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಶಾಸಕ  ಆಯನೂರ ಮಂಜುನಾಥ್, ವಿಧಾನಪರಿಷತ್  ಶಾಸಕ ಎಂ.ಕೆ ಪ್ರಾಣೇಶ್, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ,  ವಿಧಾನಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ ವೆಂಕಟೇಶ್ ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್…

Read More

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ವಿವಿಧ ಚಟುವಟಿಕೆ ಹಾಗೂ ಕಾರ್ಯಕ್ರಮಗಳ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಮತದಾರರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು ೯,೩೪,೭೬೯ ಮತದಾರರಿದ್ದು, ಆ ಪೈಕಿ ೪,೬೪,೨೨೮ ಗಂಡು ಹಾಗೂ ೪,೭೦,೫೦೫ ಹೆಣ್ಣು ಮತದಾರರಿದ್ದಾರೆ. ಅವರಲ್ಲಿ ೧೧,೫೦೨ ೧೮ರಿಂದ ೧೯ ವರ್ಷ ವಯಸ್ಸಿನ ಯುವಮತದಾರಿದ್ದಾರೆ ಎಂದು ಅವರು ತಿಳಿಸಿದರು. ಭಾರತ ಚುನಾವಣಾ ಆಯೋಗವು ೪ ದಿನಗಳ ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ನವೆಂಬರ್ ೧೨, ೨೦, ಡಿಸೆಂಬರ್ ೩ ಮತ್ತು ೪ರಂದು ನಡೆಯಲಿದೆ. ಅದರಂತೆ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಡಿಸೆಂಬರ್ ೮ರವರೆಗೆ ಮತದಾರರ ಗುರುತಿನ ಚೀಟಿ ಪರಿಷ್ಕರಣೆಗೆ ಅವಕಾಶವಿದೆ. ಮತದಾರರು ತಮ್ಮ ಹೆಸರು, ಜನ್ಮದಿನಾಂಕ, ವಿಳಾಸ ಪರಿಷ್ಕರಣೆ…

Read More

ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಕನಕದಾಸ ಜಯಂತಿ ಆಚರಣಾ ಕಾರ್ಯಕ್ರಮ ಸಮಾರಂಭವನ್ನು ನವೆಂಬರ್ ೧೧ರಂದು ಬೆಳಿಗ್ಗೆ ಗಂಟೆ ೯.೩೦ಕ್ಕೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರಾಭಿವೃದ್ಧಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜು (ಭೈರತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಘನ ಉಪಸ್ಥಿತಿ ಇರಲಿದ್ದು, ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ, ವಿಧಾನಪರಿಷತ್ ಶಾಸಕ  ಆಯನೂರ ಮಂಜುನಾಥ್, ವಿಧಾನಪರಿಷತ್  ಶಾಸಕ ಎಂ.ಕೆ ಪ್ರಾಣೇಶ್, ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ,  ವಿಧಾನಪರಿಷತ್ ಶಾಸಕ ಎಸ್.ಎಲ್ ಭೋಜೇಗೌಡ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ ವೆಂಕಟೇಶ್ ಹಾಗೂ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಉಪಸ್ಥಿತರಿರಲಿದ್ದಾರೆ. Kanakadasa…

Read More

ಚಿಕ್ಕಮಗಳೂರು: ನಗರಸಭೆ ವತಿಯಿಂದ ಶೀಘ್ರದಲ್ಲಿಯೇ ಜನರ ಕುಂದು ಕೊರತೆಯನ್ನು ಆಲಿಸಲು ಜನಸಂಪರ್ಕ ಸಭೆ ನಡೆಸಿ, ಜನಸ್ನೇಹಿ ನಗರಸಭೆ ಆಡಳಿತವನ್ನು ಮಾಡಲಾಗುವುದೆಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ನಗರದ ೨೩ನೇ ವಾರ್ಡ್‌ನಲ್ಲಿ ಡಾಂಬರೀಕರಣ ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ, ನಗರಸಭೆ ವತಿಯಿಂದ ಶೀಘ್ರದಲ್ಲಿಯೇ ಎಲ್ಲಾ ವಾರ್ಡ್‌ಗಳಲ್ಲಿಯೂ ಜನ ಸಂಪರ್ಕ ಸಭೆ ಮಾಡುವುದರ ಜತೆಗೆ, ಜನರ ಕುಂದು ಕೊರತೆಗಳನ್ನು ಆಲಿಸಿ ತಕ್ಷಣವೇ ಪರಿಹರಿಸುವುದರ ಜತೆಗೆ, ಜನಸ್ನೇಹಿ ನಗರಸಭೆ ಆಡಳಿತವನ್ನು ಮಾಡುತ್ತೇವೆ ಎಂದು ತಿಳಿಸಿದರು. ನಗರಸಭೆ ಎಸ್.ಎಫ್.ಸಿ ನಿಧಿಯಿಂದ ಡಾಂಬರೀಕರಣ ರಸ್ತೆಗೆ ೧೬.೫ ಲಕ್ಷ ರೂಗಳ ಕಾಮಗಾರಿ ನಡೆಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು, ನಗರದ ಎಲ್ಲಾ ವಾರ್ಡ್‌ಗಳ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ ಹಂತಹಂತವಾಗಿ ಕೆಲಸ ಮಾಡಲಾಗುವುದು ಎಂದರು. ನಗರಸಭೆ ಸದಸ್ಯೆ ಮಂಜುಳಾಶ್ರೀನಿವಾಸ್ ಮಾತನಾಡಿ. ನನ್ನ ವಾರ್ಡ್‌ನಲ್ಲಿ ಅಂಬೇಡ್ಕರ್ ಸಮುದಾಯ ಭವನ ಅರ್ಧಕ್ಕೆ ನಿಂತಿದೆ, ಬಾಕ್ಸ್ ಚರಂಡಿ, ರಸ್ತೆ ಕಾಮಗಾರಿ, ಶುದ್ಧಗಂಗಾ ಘಟಕ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆ, ನಮ್ಮ…

Read More

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಇದೇ ನವೆಂಬರ್ ೨೫-೨೬ರಂದು ನಗರದ ಎಐಟಿ ಕಾಲೇಜು ಸಮೀಪದ ಒಕ್ಕಲಿಗರ ಭವನದಲ್ಲಿ ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತು ರಾಷ್ಟ್ರೀಯ ವಿಚಾರ ಸಂಕಿರಣವನ್ನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಕ್ಯಾತನಬೀಡು ಹೇಳಿದ್ದಾರೆ. ಇಂದು ನಗರದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಈ ವಿಚಾರ ಸಂಕಿರಣ ವಚನ ಚಳುವಳಿ, ಅರಿವು ಮತ್ತು ಅನುಸರಣೆ ಎಂಬ ವಿಚಾರದಲ್ಲಿ ನಡೆಯುತ್ತಿದೆ. ಈ ವಿಚಾರ ಸಂಕಿರಣದಲ್ಲಿ ನಾಡಿನ ೧೨ ಜನ ಪ್ರಾಜ್ಞರು ಈ ಗೋಷ್ಟಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಸಂಕಿರಣದಲ್ಲಿ ತಜ್ಞರು ವಿವಿಧ ವಿಚಾರಗಳನ್ನ ಮಂಡಿಸಲಿದ್ದಾರೆ. ಈ ಗೋಷ್ಠಿಗೆ ರಾಜ್ಯದ ೩೦ ಜಿಲ್ಲೆಗಳಿಂದ ಹಾಗೂ ಬೇರೆ-ಬೇರೆ ರಾಜ್ಯಗಳಿಂದಲೂ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮೂರು ಜನ ಗೋಷ್ಠಿಯಲ್ಲಿ ವಿಚಾರ ಮಂಡನೆ ಮಾಡಲಿದ್ದಾರೆ. ಈ ವಿಚಾರ ಸಂಕರಣ ಏಕೆಂದರೆ, ಭಾರತ ಅತ್ಯಂತ ಕೆಟ್ಟ ಸಂದರ್ಭವನ್ನ ಎದುರಿಸುತ್ತಿದೆ. ನಾವು ಬಹುತ್ವದ ಭಾರತವಾಗುತ್ತಿಲ್ಲ. ಇದು ಏಕಸ್ವಾಮ್ಯ ಭಾರತವಾಗುತ್ತಿದೆ. ಬಹುತ್ವ ಭಾರತದೊಳಗೆ ಎಲ್ಲಾ ವಿಚಾರಧಾರೆಗಳು, ನಿರಂತರವಾಗಿ ಜಂಗಮ ಸ್ವರೂಪವಾಗಿರಬೇಕು…

Read More

ಚಿಕ್ಕಮಗಳೂರು: ಪೊಲೀಸ್ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ದಲ್ಲಿ ನಡೆದಿದೆ. ೧೦ ಸಾವಿರ ಲಂಚ ಪಡೆಯುವಾಗ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಸರ್ಕಲ್ ಇನ್ಸ್‌ಪೆಕ್ಟರ್ ವಸಂತ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್. ಎನ್.ಆರ್.ಪುರ ಪಟ್ಟಣದ ಬಸ್ತಿಮಠ ರೋಡ್ ನಿವಾಸಿ ಮಸ್ತಾನ್ ಎಂಬುವರಿಗೆ ಸೇರಿದ ಸಿಮೆಂಟ್ ಲಾರಿ ೧೫ ಟನ್ ತೂಕಕ್ಕಿಂತ ಹೆಚ್ಚುವರಿಯಾಗಿ ಸಾಗಾಟ ಮಾಡಲು ೧೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಸ್ತಾನ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಎನ್.ಆರ್.ಪುರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಲಂಚ ಪಡೆಯುವಾಗ ಚಿಕ್ಕಮಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಣದ ಸಮೇತ ಇನ್ಸ್‌ಪೆಕ್ಟರ್ ಅವರನ್ನ ಬಂಧಿಸಿ ಕೆಲ ಕಾಲ ವಿಚಾರಣೆ ನಡೆಸಿದರು. ವಿಚಾರಣೆಯ ಬಳಕ ನ್ಯಾಯಾಧೀಶರ ಮುಂದೆ…

Read More

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕರ್ನಾಟಕರಾಜ್ಯದ ಎಸ್‌ಸಿ ಮತ್ತುಎಸ್‌ಟಿ ಸಮುದಾಯದ ಬಹುವರ್ಷಗಳ ಕನಸಾದ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಗೆ ಸ್ಪಂದಿಸಿ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿರುವ ಕರ್ನಾಟಕರಾಜ್ಯ ಸರ್ಕಾರಕ್ರಮವನ್ನು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಎಸ್.ಸಿ ಮೋರ್ಚಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಹಂಪಯ್ಯ ತಿಳಿಸಿದರು. ನಗರದ ಪ್ರಸ್‌ಕ್ಲಬ್‌ನಲ್ಲಿ ಮಾತನಾಡಿ ಎಸ್‌ಸಿ ಮೀಸಲಾತಿಯನ್ನು ಶೇ ೧೫ ರಿಂದ ಶೇ ೧೭, ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ ೩ ರಿಂದ ಶೇ ೭ರವರೆಗೆ ಹೆಚ್ಚಿಸಿರುವುದು ಅತ್ಯಂತ ಸ್ವಾಗತಾರ್ಹ. ಈ ಮುಖಾಂತರದಲಿತ ಸಮುದಾಯಕ್ಕೆ ನ್ಯಾಯ ಒದಗಿಸಿದ ತಮಗೆ ಹಾಗೂ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ ಎಂದರು. ಚಿಕ್ಕಮಗಳೂರು ವಿಧಾನಸಭಾಕ್ಷೇತ್ರದ ಎಸ್‌ಸಿ ಮೋರ್ಚಾದ ಪ್ರಮುಖಕಾರ್ಯಕರ್ತರ ಸಮಾವೇಶವನ್ನು ಬುಧವಾರ ನಗರದ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ ಕಾರ್ಯಕ್ರಮಕ್ಕೆಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿರವರು, ಶಾಸಕರು, ಸಿ.ಟಿ.ರವಿ, ಕೊಳ್ಳೇಗಾಲ ಶಾಸಕರಾದ ಎನ್.ಮಹೇಶ್,ಕುಡಚಿವಿಧಾನಸಭಾಕ್ಚೇತ್ರ ಶಾಸಕರಾದ ಪಿ.ರಾಜೀವ್, ಹೊಸದುರ್ಗಶಾಸಕರಾದಗೂಳಿಹಟ್ಟಿ ಶೇಖರ್‌ಕರ್ನಾಟಕರಾಜ್ಯ ಸಫಾಯಿಕರ್ಮಚಾರಿ ನಿಗಮ ಮಂಡಳಿಅಧ್ಯಕ್ಷರಾದ ಕೆ.ಪಿ. ವೆಂಕಟೇಶ್ ಜಿಲ್ಲಾಧ್ಯಕ್ಷರಾದ ಹೆಚ್.ಸಿ.ಕಲ್ಮರುಡಪ್ಪ ನಗರಸಭಾಅಧ್ಯಕ್ಷರು ವರಸಿದ್ಧಿ ವೇಣುಗೋಪಾಲ್, ನಗರಾಭಿವೃದ್ಧಿ ಪ್ರಾಧಿಕಾರಅಧ್ಯಕ್ಷರು…

Read More

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪ್ರತೀ ಜಿಲ್ಲೆಯಿಂದ ಮೃತ್ತಿಕೆ ಸಂಗ್ರಹಿಸುವ ರಥವನ್ನು ಜಿಲ್ಲೆಯಿಂದ ಮಂಗಳವಾರ ಬೀಳ್ಕೊಡಲಾಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಬೆಂಗಳೂರಿನಲ್ಲಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಗೆ ರಾಜ್ಯದ ಪ್ರತೀ ಜಿಲ್ಲೆಗಳಿಂದ ಮೃತ್ತಿಕೆ ಸಂಗ್ರಹ ಮಾಡಲು ಮೃತ್ತಿಕೆ ಸಂಗ್ರಹ ರಥವನ್ನು ಕಳುಹಿಸಲಾಗಿದ್ದು, ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್‌ಗಳಿಗೆ ತೆರಳಿ ಪವಿತ್ರ ಮಣ್ಣು ಸಂಗ್ರಹಿಸಲಾಗಿದೆ. ಇಂದು ಜಿಲ್ಲೆಯಿಂದ ರಥವನ್ನು ಬೀಳ್ಕೊಡಲಾಗಿದ್ದು, ಬೆಂಗಳೂರಿಗೆ ನಿರ್ಗಮಿಸಲಿದೆ ಎಂದು ಅವರು ಹೇಳಿದರು. ನವೆಂಬರ್ ೧೧ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಅವರು ಮೃತ್ತಿಕೆ ಸಂಗ್ರಹಕ್ಕೆ ಸಹಕರಿಸಿದ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಉಪವಿಭಾಗಾಧಿಕಾರಿ ರಾಜೇಶ್, ತಹಶೀಲ್ದಾರ್ ವಿನಾಯಕ ಸಾಗರ್, ವಿವಿಧ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದ್ದರು. Kempegowda statue

Read More

ಚಿಕ್ಕಮಗಳೂರುಎಕ್ಸ್‌ಪ್ರೆಸ್: ಕ್ರೀಡೆ ಕೇವಲ ಮನೋರಂಜನೆಯಷ್ಟೆ ಅಲ್ಲ. ಅದೊಂದು ತಪ್ಪಸ್ಸು. ದೇಶಭಕ್ತಿ. ಕ್ರೀಡೆ ಮನುಷ್ಯನನ್ನ ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಜೀವನಕ್ಕೆ ಶ್ರದ್ಧೆ, ಆಸಕ್ತಿ, ಧ್ಯೇಯವನ್ನ ಕಲಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಪ್ರಭು ಅವರು ಹೇಳಿದ್ದಾರೆ. ಅವರು ಇಂದು ನಗರದ ಡಿ.ಆರ್. ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕ್ರೈಸ್ಥ ವಸತಿ ಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳು ಕ್ರೀಡೆಯಿಂದ ಮನೋರಂಜನೆಯಷ್ಟೆ ಅಲ್ಲದೆ ದೇಶಭಕ್ತಿ, ಶ್ರದ್ಧೆ, ಆಸಕ್ತಿಯನ್ನ ಕಲಿಯಬಹುದು ಎಂದರು. ಪ್ರಪಂಚದ ಎಲ್ಲ ಸಾಧಕರನ್ನ ನೋಡಿ. ಯಾವುದೇ ವ್ಯಕ್ತಿ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಅಂದ್ರೆ ಅವರಿಗೆ ಆ ವಿಚಾರದಲ್ಲಿ ಗಂಭೀರತೆ ಇರಬೇಕು. ಅವರು ಕಲಿಯುವಂತಹಾ ಹಂತದಲ್ಲಿದ್ದಾಗ ವಿದ್ಯೆಗೆ ಹೆಚ್ಚು ಪ್ರಾಮುಖ್ಯಕತೆ-ಗೌರವ ಕೊಟ್ಟಿದ್ದರು. ಎಲ್ಲಾ…

Read More

ಚಿಕ್ಕಮಗಳೂರು: ಶೈಕ್ಷಣಿಕ ದತ್ತು ಕಾರ್ಯಕ್ರಮ ಅನುಷ್ಠಾನ ಸಂಬಂಧ ಜಿಲ್ಲೆಯಲ್ಲಿ ಉಸ್ತುವಾರಿ ಸಮಿತಿ ರಚಿಸಲಾಗಿದ್ದು, ಶಾಲೆಯಲ್ಲಿನ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ದತ್ತು ಯೋಜನೆಗೆ ನಿಯೋಜಿಸಲಾಗಿರುವ ಅಧಿಕಾರಿಗಳು ಶಾಲೆಗೆ ತಿಂಗಳಿಗೆ ಕನಿಷ್ಠ ಒಂದು ಅಥವಾ ಎರಡು ಬಾರಿ ಭೇಟಿ ನೀಡಿ ಶಾಲೆಗಳ ಶೈಕ್ಷಣಿಕ ಪ್ರಗತಿಯನ್ನು ಅವಲೋಕಿಸಿ ಸಲಹೆ ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ  ಕಾಲೇಜುಗಳ ಶೈಕ್ಷಣಿಕ ದತ್ತು ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬ್ಲಾಕ್ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶೈಕ್ಷಣಿಕ ದತ್ತು ಯೋಜನೆ ಪಡೆಯುವ ಅಧಿಕಾರಿಗಳ ವಿವರ ಮತ್ತು ಕ್ರಿಯಾ ಯೋಜನೆಯನ್ನು ನಿರ್ವಹಿಸಬೇಕು. ಡಯಟ್ ತಾಲ್ಲೂಕು ನೋಡಲ್ ಅಧಿಕಾರಿಗಳು ಪ್ರಗತಿ ವರದಿಯನ್ನು ಕಾಲಕಾಲಕ್ಕೆ ಸಂಗ್ರಹಿಸಿ ಮಾಹಿತಿ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಹಾಗೂ ಬೋಧನಾ ಗುಣಮಟ್ಟವನ್ನು ಉತ್ತಮಪಡಿಸುವುದು ಶೈಕ್ಷಣಿಕ ದತ್ತು ಕಾರ್ಯಕ್ರಮದ…

Read More