Author: chikkamagalur express

ಚಿಕ್ಕಮಗಳೂರು: ಚಿಕ್ಕಮಗಳೂರು  ಜಿಲ್ಲೆಯ ಕಳಸ ತಾಲ್ಲೂಕಿನ ಹದಗೆಟ್ಟ ರಸ್ತೆಯ ದುಸ್ಥಿತಿಯನ್ನು ವ್ಯಂಗ್ಯ ಚಿತ್ರಗಳ ಮೂಲಕ ವಿಡಂಬನೆ ಮಾಡಿರುವ ಪೋಟೋಗಳು ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಸ್ತೆ ದುರಸ್ತಿಗೆ ಅಗ್ರಹಿಸಿ ಜನರು ವಿನೂತನವಾಗಿ ಸಾಮಾಜಿಕ ಜಾಲತಾಣವನ್ನು ಬಳಕೆ ಮಾಡಿಕೊಂಡು ಅಧಿಕಾರಿಗಳು ಜನಪ್ರತಿನಿಧಿಗಳನ್ನು ಎಚ್ಚರಿಸುವ ಪ್ರಯತ್ನವನ್ನು ಮಾಡಿದ್ದಾರೆ ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಸೆಳೆಯುವ ನಿಟ್ಟಿನಲ್ಲಿ ನಾಗರಿಕರು ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದ್ದು, ರಸ್ತೆ ದೂಳಿನಿಂದಾಗುತ್ತಿರುವ ಸಮಸ್ಯೆಗಳನ್ನು ವ್ಯಂಗ್ಯ ಚಿತ್ರಗಳ ಮೂಲಕ ಬಿಂಬಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಳಸ ಪಟ್ಟಣದ ಮುಖ್ಯ ರಸ್ತೆ ಹಾಗೂ ಹೊರನಾಡು ರಸ್ತೆ ಸಂಪೂರ್ಣವಾಗಿ ಹೊಂಡಗುಂಡಿಗಳಿಂದ ಹದಗೆಟ್ಟಿದ್ದು, ರಸ್ತೆಗಳಲ್ಲಿ ವಾಹನಗಳು ಸಂಚರಿಸುವ ವೇಳೆ ಭಾರೀ ಧೂಳು ಎದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಒಂದು ಕಿಲೋ ಮೀಟರ್  ರಸ್ತೆ  ದುರಸ್ತಿಗೆ ಆಗ್ರಹಿಸಿ ನಾಗರಿಕರು ಜನಪ್ರತಿನಿಧಿಗಳು, ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮನವಿ ಮಾಡಿದರೂ ಪುಯೋಜನವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ…

Read More

ಚಿಕ್ಕಮಗಳೂರು: ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕಿ ಸಜೀದಾ ಬಾನು, ಚಿಕ್ಕಮಗಳೂರಿನ ನಿವೃತ್ತ ತಾಲ್ಲೂಕು ಆರೋಗ್ಯ ಮೇಲ್ವಿಚಾರಕಿ ಜಿ.ಎಸ್‌.ಕಾವೇರಿಗೆ 2021ನೇ ಸಾಲಿನ ‘ರಾಷ್ಟ್ರೀಯ ಫ್ಲಾರೆನ್ಸ್‌ ನೈಟಿಂಗೇಲ್‌’ ಪ್ರಶಸ್ತಿ ಪ್ರದಾನ ಮಾಡಿದರು. ಕಾವೇರಿ ಅವರು ಸುಬ್ರಾಯ ಭಟ್ಟ ಮತ್ತು ಸೀತಮ್ಮ ದಂಪತಿಯ ಪುತ್ರಿ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣದಲ್ಲಿ 1990ರಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಮೂಡಿಗೆರೆ ತಾಲ್ಲೂಕಿನ ಬಾಳೆಹೊಳೆ, ಎನ್‌.ಆರ್‌.ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಚಿಕ್ಕಮಗಳೂರು ತಾಲ್ಲೂಕು ಆರೋಗ್ಯ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸಿ 2021ರಲ್ಲಿ ನಿವೃತ್ತರಾಗಿದ್ದಾರೆ. ತೇಗೂರಿನಲ್ಲಿ ನೆಲೆಸಿದ್ದಾರೆ. ‘ಕಾಯಕ ನಿಷ್ಠೆ, ಪರಿಶ್ರಮ ಗುರುತಿಸಿ ಪ್ರಶಸ್ತಿ ನೀಡಿರುವುದು ಬಹಳ ಖುಷಿಯಾಗಿದೆ. ಸಹೋದ್ಯೋಗಿಗಳು ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ರೋಗಿಗಳ ಸೇವೆ ಮಾಡಿದ ತೃಪ್ತಿ ಇದೆ. 32 ವರ್ಷಗಳ ವೃತ್ತಿ ಜೀವನ ಸಾರ್ಥಕ ಭಾವ ಮೂಡಿಸಿದೆ’ ಎಂದು ಕಾವೇರಿ ತಿಳಿಸಿದರು. ಸಜೀದಾ ಅವರು ತರೀಕೆರೆಯ ಗುಲಾಂ ರಸೂಲ್‌ ಮತ್ತು ಖುತೇಜಾ…

Read More

ಚಿಕ್ಕಮಗಳೂರು: ಜನಗಣತಿ ಆಧಾರದ ಮೇಲೆ ಪ್ರಸ್ತುತ ಮೂಡಿಗೆರೆ ತಾಲ್ಲೂಕಿಗೆ ನೀಡಿರುವ ಮೀಸಲಾತಿಯನ್ನು ಸಾಮಾಜಿಕ ನ್ಯಾಯಬದ್ಧದ ಅನುಗುಣವಾಗಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಪರಿವರ್ತಿಸಬೇಕು ಎಂದು ಜಿಲ್ಲಾ ಭೀಮ್ ಆರ್ಮಿ ಸಂಘಟನೆ ಮುಖಂಡರು ರಾಷ್ಟ್ರಪತಿಗಳನ್ನು ಒತ್ತಾಯಿಸಿದರು. ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದ ಸಂಘಟನೆಯ ಮುಖಂಡರುಗಳು ಇಪ್ಪತ್ತು ವರ್ಷಕ್ಕೊಮ್ಮೆ ಮೀಸಲಾತಿ ಬದಲಾವಣೆಯಾಬೇಕೆಂಬ ನಿಯಮದಂತೆ ಮೂಡಿಗೆರೆ ತಾಲ್ಲೂಕು ಮೀಸಲಾತಿಯನ್ನು ಚಿಕ್ಕಮಗಳೂರಿಗೆ ಪರಿವರ್ತಿಸಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಗೌರವಾಧ್ಯಕ್ಷ ಹೊನ್ನೇಶ್ ಮಾತನಾಡಿ ೨೦೧೧ನೇ ಜನಗಣತಿ ಪ್ರಕಾರ ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಸ್ತುತ ೪೬ ಸಾವಿರ ಪ.ಜಾತಿ ಹಾಗೂ ಪ.ಪಂಗಡದವರಿದ್ದು ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ೭೯ ಸಾವಿರ ಮಂದಿಗಳಿರುವ ಕಾರಣ ಜನಗಣತಿಗೆ ಅನುಗುಣವಾಗಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರವನ್ನು ಮೀಸಲು ಕ್ಷೇತ್ರವನ್ನಾಗಿ ಮಾರ್ಪಾಡು ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಭೀಮಾ ಆರ್ಮಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ತಾಲ್ಲೂಕು ಅಧ್ಯಕ್ಷ ರಮೇಶ್, ಯುವಘಟಕದ ಜಿಲ್ಲಾಧ್ಯಕ್ಷ ಪ್ರವೀಣ್‌ಕುಮಾರ್, ಉಪಾಧ್ಯಕ್ಷ ನಂದನ್ ಹಾಜರಿದ್ದರು. Demand to provide reservation according…

Read More

ಚಿಕ್ಕಮಗಳೂರು: ವಯೋವೃದ್ದರು ಸೂಕ್ತ ಸಮಯದಲ್ಲಿ ಕಣ್ಣು ಹಾಗೂ ದಂತ ಚಿಕಿತ್ಸೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಹೇಳಿದರು. ನಗರದ ಬೇಲೂರು ಬಸ್ ನಿಲ್ದಾಣದ ಸಮೀಪವಿರುವ ಸರ್ಕಾರಿ ಟಿಜಿಎಂಎಸ್ ಶಾಲೆಯಲ್ಲಿ ನಡೆದ ನೇಚರ್ ಕನ್ಸರ್‌ವೇಷನ್ ಟ್ರಸ್ಟ್ (ರಿ) ಬಿಕ್ಕಿಮನೆ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಉಡುಪಿ ಹಾಗೂ ನೇತ್ರಾವತಿ ದಂತ ಚಿಕಿತ್ಸಾಲಯ ಇವರ ಸಹಯೋಗದೊಂದಿಗೆ ಉಚಿತ ನೇತ್ರಾ ಹಾಗೂ ದಂತ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಮಾನವ ಶಕ್ತಿ ಬೆಳವಣಿಗೆಯಾಗಬೇಕಾದರೆ ಕಣ್ಣಿನ ಪೊರೆ ನಿವಾರಣೆಯಾಗಬೇಕು. ದೃಷ್ಟಿ ಗುಣಮಟ್ಟದಿಂದ ಕಾಣುವ ಉದ್ದೇಶ ಹೊಂದುವುದರ ಜೊತೆಗೆ ಉತ್ತಮ ವಾತಾವರಣ ಸೃಷ್ಟಿ ಮಾಡುವುದು ಸಮಾಜದ ಉನ್ನತಿ ಬಯಸುವ ಪ್ರತಿಯೊಬ್ಬ ನಾಗರೀಕರ ಕರ್ತವ್ಯ ಎಂದರು. ಸಮಾಜದ ಹಿರಿಯ ನಾಗರೀಕರು ೬೦-೮೦ರ ವಯಸ್ಸಿನ ಆಸುಪಾಸಿನ ನಂತರ ದೃಷ್ಟಿ ಹಾಗೂ ದಂತ ಸಮಸ್ಯೆಗಳು ಎದುರಾಗುವ ಹಿನ್ನೆಲೆಯಲ್ಲಿ ನಗರದ ಕೆಲವು…

Read More

ಚಿಕ್ಕಮಗಳೂರು: ಜೀವನಕ್ಕೆ ಅವಶ್ಯವಾದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕು ಎಂಬುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಎ.ಎಸ್.ಸೋಮ ಹೇಳಿದರು. ನಗರದ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಾಗರೀಕ ಸಬಲೀಕರಣಕ್ಕಾಗಿ ಕಾನೂನು ಅರಿವು ಅಭಿಯಾನ ಕಾರ್ಯಕ್ರಮವನ್ನು ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಯಾವುದೋ ಪರಿಸ್ಥಿತಿಯ ಒತ್ತಡ ಅಥವಾ ಸಂದರ್ಭೋಚಿತವಾಗಿ ವ್ಯಕ್ತಿಗಳು ತಪ್ಪು ಮಾಡುತ್ತಾರೆ. ತಪ್ಪಿತಸ್ಥರು ಪರಿವರ್ತನೆಯಾಗಿ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕು ಎನ್ನುವ ಉದ್ದೇಶದಿಂದ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಅವರು ಹೇಳಿದರು. ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ತಿಳುವಳಿಕೆ ಇರಬೇಕು ಎನ್ನುವ ಉದ್ದೇಶದಿಂದ ಕಾನೂನಿನ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಸಂವಿಧಾನ ನೀಡಿದೆ ಎಂದು ಹೇಳಿದರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲ ಎಸ್.ಮೇಟಿ ಮಾತನಾಡಿ ಅಪರಾಧಿಗಳು ತಮ್ಮ ತಪ್ಪನ್ನು ತಿದ್ದಿಕೊಂಡು ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು. ಜೊತೆಗೆ ಯಾವುದರ…

Read More

ಚಿಕ್ಕಮಗಳೂರು: ಶಾಸಕ ಹಾಗೂ ಮುಖ್ಯಮಂತ್ರಿಗಳ ಆಪ್ತಕಾರ್ಯದರ್ಶಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣ ದಿನಕ್ಕೊಂದು ಹೊಸ ರೀತಿಯ ತಿರುವು ಪಡೆಯುತ್ತಿದ್ದು, ಆತ ಕೊನೆಯ ಬಾರಿ ಭೇಟಿ ನೀಡಿದ್ದು ವಿನಯ್ ಗೌರಿಗದ್ದೆ ಆಶ್ರಮಕ್ಕೆ, ಈ ಹಿನ್ನಲೆಯಲ್ಲಿ ಪೊಲೀಸರು ಆಶ್ರಮಕ್ಕೆ ಭೇಟಿ ನೀಡಿ ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕಿದ್ದಾರೆ. ಕಾಲುವೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಚಂದ್ರಶೇಖರ್ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಸದ್ಯ ಪೊಲೀಸರು ವಿನಯ್ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮಕ್ಕೆ ಚನ್ನಗಿರಿಯ ಸಿಪಿಐ ನೇತೃತ್ವದ ತನಿಖಾಧಿಕಾರಿಗಳ ತಂಡ ಭೇಟಿ ನೀಡಿ ವಿನಯ್ ಗುರೂಜಿ ಅವರ ಬಳಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಗೂ ಮುನ್ನ ಮೃತ ಚಂದ್ರಶೇಖರ್ ಹಾಗೂ ಆತನ ಸ್ನೇಹಿತ ಕಿರಣ್ ಆಶ್ರಮಕ್ಕೆ ಭೇಟಿ ನೀಡಿದ್ದರು. ಹೀಗಾಗಿ ಚಂದ್ರಶೇಖರ್ ಭೇಟಿ ಬಗ್ಗೆ ಪೊಲೀಸರು ಗುರೂಜಿ ಬಳಿ ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಚಂದ್ರಶೇಖರ್ ಆಶ್ರಮದ ಭಕ್ತ, ಪ್ರತಿ ಬಾರಿಯಂತೆ ಆಶ್ರಮಕ್ಕೆ…

Read More

ಚಿಕ್ಕಮಗಳೂರು: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರ ನ್ಯಾಕ್ ಪೀರ್ ತಂಡ ಬೇಟಿ ನೀಡಿದ್ದು, ಡಾ ಪರ್‍ವಿನ್ ಅಕ್ಟರ್ ಪಂಡಿತ್ ಜಮ್ಮು ವಿಶ್ವವಿದ್ಯಾ ನಿಲಯ, ಡಾ. ಪ್ರದೀಪ್ ಸಿಂಗ್ ಚುಂಡಾವತ್ ಬರೋಡಾ ವಿಶ್ವ ವಿದ್ಯಾಲಯ ಹಾಗೂ ಡಾ. ಪ್ರೀಟಾ ಮಲ್ಯಾ., ವಿ.ವಿ.ಎಮ್.ಎಸ್ ದಾಮೋದರ ಕಾಲೇಜ್ ಮಡ್‌ಗಾವ್ ತಂಡವು ಬೇಟಿ ನೀಡಿದ್ದು. ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ಆರ್.ಪ್ರೇಮ್ ಕುಮಾರ್ ಹಾಗೂ ಪ್ರಾಂಶುಪಾಲ ಎಸ್.ಎಂ.ನಟೇಶ್ ಹಾಗೂ ಇತರ ಸಿಬ್ಬಂದಿಗಳು ಸ್ವಾಗತಿಸಿದರು. NAAC PU Team Beti

Read More

ಚಿಕ್ಕಮಗಳೂರು: ನಗರಸಭೆ ವತಿಯಿಂದ ಶೀಘ್ರದಲ್ಲಿಯೇ ಜನರ ಕುಂದು ಕೊರತೆಯನ್ನು ಆಲಿಸಲು ಜನಸಂಪರ್ಕ ಸಭೆ ನಡೆಸಿ, ಜನಸ್ನೇಹಿ ನಗರಸಭೆ ಆಡಳಿತವನ್ನು ಮಾಡಲಾಗುವುದೆಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ನಗರದ ೨೩ನೇ ವಾರ್ಡ್‌ನಲ್ಲಿ ಡಾಂಬರೀಕರಣ ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ, ನಗರಸಭೆ ವತಿಯಿಂದ ಶೀಘ್ರದಲ್ಲಿಯೇ ಎಲ್ಲಾ ವಾರ್ಡ್‌ಗಳಲ್ಲಿಯೂ ಜನ ಸಂಪರ್ಕ ಸಭೆ ಮಾಡುವುದರ ಜತೆಗೆ, ಜನರ ಕುಂದು ಕೊರತೆಗಳನ್ನು ಆಲಿಸಿ ತಕ್ಷಣವೇ ಪರಿಹರಿಸುವುದರ ಜತೆಗೆ, ಜನಸ್ನೇಹಿ ನಗರಸಭೆ ಆಡಳಿತವನ್ನು ಮಾಡುತ್ತೇವೆ ಎಂದು ತಿಳಿಸಿದರು. ನಗರಸಭೆ ಎಸ್.ಎಫ್.ಸಿ ನಿಧಿಯಿಂದ ಡಾಂಬರೀಕರಣ ರಸ್ತೆಗೆ ೧೬.೫ ಲಕ್ಷ ರೂಗಳ ಕಾಮಗಾರಿ ನಡೆಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು, ನಗರದ ಎಲ್ಲಾ ವಾರ್ಡ್‌ಗಳ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ ಹಂತಹಂತವಾಗಿ ಕೆಲಸ ಮಾಡಲಾಗುವುದು ಎಂದರು. ನಗರಸಭೆ ಸದಸ್ಯೆ ಮಂಜುಳಾಶ್ರೀನಿವಾಸ್ ಮಾತನಾಡಿ. ನನ್ನ ವಾರ್ಡ್‌ನಲ್ಲಿ ಅಂಬೇಡ್ಕರ್ ಸಮುದಾಯ ಭವನ ಅರ್ಧಕ್ಕೆ ನಿಂತಿದೆ, ಬಾಕ್ಸ್ ಚರಂಡಿ, ರಸ್ತೆ ಕಾಮಗಾರಿ, ಶುದ್ಧಗಂಗಾ ಘಟಕ ಮತ್ತು ಕುಡಿಯುವ ನೀರಿನ ಸಮಸ್ಯೆ ಇದೆ, ನಮ್ಮ…

Read More

ಚಿಕ್ಕಮಗಳೂರು: ಶಿಕ್ಷಕರ ಆರ್ಹತಾ ಪರೀಕ್ಷೆಗೆ ೧೫೦೭ ಅಭ್ಯರ್ಥಿಗಳು ಹಾಜರಾದರೇ ೨೧೨ ಅಭ್ಯರ್ಥಿಗಳು ಗೈರು ಹಾಜರಾದರು. ಬಸ ವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲೆನಾಡು ವಿದ್ಯಾಸಂಸ್ಥೆ, ವಿಜಯಪುರ ಜೆವಿಎಸ್ ಶಾಲೆ, ಸಂತ ಜೋಸೆಫ್ ಶಾಲೆ, ಬೇಲೂರು ರಸ್ತೆಯಲ್ಲಿರುವ ಪದವಿ ಪೂರ್ವ ಕಾಲೇಜು, ಟಿಎಂಎಸ್ ಶಾಲೆ ಪರೀಕ್ಷ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷೆ ಹಿನ್ನಲೆಯಲ್ಲಿ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ವಿಧಿಸಲಾಗಿತ್ತು. ಅಭ್ಯರ್ಥಿಗಳನ್ನು ತಪಾಸಣೆಗೊಳಪಡಿಸಿ ಪರೀಕ್ಷ ಕೇಂದ್ರದೊಳಗೆ ಬಿಡಲಾಯಿತು. ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ೨೬೦ ಅಭ್ಯರ್ಥಿಗಳು ಹಾಜ ರಾಗಿದ್ದು, ೨೭ ಅಭ್ಯರ್ಥಿಗಳು ಗೈರು ಹಾಜರಾದರು. ಎಂ.ಇಎಸ್ ಕಾಲೇಜು ಪರೀಕ್ಷ ಕೇಂದ್ರದಲ್ಲಿ ೨೫೪ ಅಭ್ಯರ್ಥಿಗಳು ಹಾಜರಾಗಿದ್ದು, ೩೪ ಅರ್ಭರ್ಥಿಗಳು ಗೈರು ಹಾಜರಾದರು. ವಿಜಯಪುರ ಜೆವಿಎಸ್ ಶಾಲೆ ಪರೀಕ್ಷ ಕೇಂದ್ರದಲ್ಲಿ ೨೫೭ ಅಭ್ಯರ್ಥಿಗಳು ಹಾಜರಾಗಿದ್ದು, ೩೦ ಅಭ್ಯರ್ಥಿಗಳು ಗೈರು ಹಾಜರಾದರು. ಸಂತಜೋಸೆಫ್ ಬಾಲಕಿರ ಪ್ರೌಢಶಾಲೆ ಪರೀಕ್ಷ ಕೇಂದ್ರದಲ್ಲಿ ೨೬೦ ಅಭ್ಯರ್ಥಿ ಗಳು ಪರೀಕ್ಷೆ ಬರೆದರೇ, ೨೭ ಅಭ್ಯರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು.…

Read More

ಪ್ರತಿ ವರ್ಷ ದತ್ತಪೀಠಕ್ಕೆ ಬರುವುದು ಅಲ್ಲಿ ಹೆಣ ಇಲ್ಲದ ಗೋರಿಗಳನ್ನು ನೋಡಿಕೊಂಡು ಹೋಗುವುದು, ನಮಗೆ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬಂದಿದೆ ಎಂದು ಶ್ರೀರಾಮ ಸೇನೆ ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ವರ್ಷ ನಮಗೆ ಎಚ್ಚರಿಕೆ ನೀಡಿ…ನೀಡಿ… ಬೇಜಾರಾಗಿದೆ. ಆಕ್ರೋಶವಾಗಿದೆ. ಧರ್ಮದ ವಿಚಾರದಲ್ಲಿ ಈ ಡ್ರಾಮಾ ಒಳ್ಳೆದಲ್ಲ. ಏನಾದರೂ ಆಗಲಿ ಎಂದು ದತ್ತಪೀಠದ ವಿಚಾರದಲ್ಲಿ ಸರ್ಕಾರ ತಕ್ಷಣ ಗಟ್ಟಿ ನಿರ್ಧಾರ ಮಾಡಲಿ.ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಅಲ್ಲಿ ಹಿಂದೂ ಅರ್ಚಕರ ನೇಮಿಸಬೇಕೆಂದು ಆಗ್ರಹಿಸಿದ್ದಾರೆ. ಇಂದಿನಿಂದ 7 ದಿನಗಳ ಕಾಲ ನಡೆಯುವ ದತ್ತಮಾಲಾ ಅಭಿಯಾನದ 13ನೇ ತಾರೀಖು ಕೊನೆಯಾಗಲಿದೆ. ಅಷ್ಟರೊಳಗೆ ಹಿಂದೂ ಅರ್ಚಕರ ನೇಮಿಸಬೇಕು. ಇಲ್ಲವಾದರೆ, ಪರಿಸ್ಥಿತಿ ಕಠಿಣವಾಗಲಿದೆ. ಅಲ್ಲಿ ಹಿಂದೂಗಳು ಹಾಗೂ ದತ್ತಭಕ್ತರಿಂದ ಅಲ್ಲಿ ಏನಾದರೂ ಅನಾಹುತವಾದರೆ ಸರ್ಕಾರವೇ ನೇರ ಹೊಣೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ‌. ಮಂಗಳೂರಿನಲ್ಲಿ…

Read More