Author: chikkamagalur express

ಚಿಕ್ಕಮಗಳೂರು:  ಡಿಜಿಟಲೀಕೃತ ಭೂ ನಕ್ಷೆಯಿಂದ ಭೂ ಅಕ್ರಮವನ್ನು ತಡೆಗಟ್ಟುವುದರ ಜೊತೆಗೆ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಸರ್ವೆ ನಡೆಸಿ ಸ್ಪ?ವಾದ ಮಾಲೀಕತ್ವದ ಮಾಹಿತಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಕಂದಾಯ ಇಲಾಖೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಪೌರಾಡಳಿತ ಇಲಾಖೆ ವತಿಯಿಂದ ಇಂದು ನಗರ ಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ನಗರ ಪ್ರದೇಶಗಳಲ್ಲಿ ಆಸ್ತಿಗಳ ಭೂ ದಾಖಲೆಗಳ ರಚನೆ ನಕ್ಷಾ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯೋಜನೆ ಅಡಿಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ೧೦ ನಗರ, ಪಟ್ಟಣಗಳನ್ನು ಆಯ್ಕೆಮಾಡಲಾಗಿದೆ. ಇದರಲ್ಲಿ ಜಿಲ್ಲೆಯ ನಗರ ಸಭೆಯನ್ನು ಆಯ್ಕೆ ಮಾಡಲಾಗಿದ್ದು ಯೋಜನೆಯೂ ನಗರ ಸಭೆ ವ್ಯಾಪ್ತಿಯ ಎಲ್ಲಾ ಸ್ಥಳಿಯ ಸಂಸ್ಥೆಗಳ ಸರಳ ಸರ್ವೆ ಕಾರ್ಯಗಳ ಜೊತೆಗೆ ನಾಗರೀಕರು ಸಾಲ ಮತ್ತು ಇತರ ಪ್ರಯೋಜನಗಳನ್ನು ಬ್ಯಾಂಕ್ ಮತ್ತು ಇನ್ನಿತರ ಹಣಕಾಸು ಸಂಸ್ಥೆಗಳಿಂದ ಪಡೆಯುವ ಸುಲಭ ಪ್ರಕ್ರಿಯೆಗೆ…

Read More

ಚಿಕ್ಕಮಗಳೂರು:  ಪ್ರತಿಯೊಂದು ಮಗುವಲ್ಲೂ ವಿಶೇಷ ಜ್ಞಾನ, ಕಲೆ ಅಡಗಿರುತ್ತದೆ ಅವುಗಳನ್ನು ಗುರುತಿಸಿ ಸಮಾಜಕ್ಕೆ ಪರಿಚಯಿಸುವುದಲ್ಲದೇ ಅವರ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕ ಹಾಗೂ ಪೋಷಕರ ಪಾತ್ರ ಬಹಳಷ್ಠಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು. ಮೌಂಟಿ ಎಂಜಲ್ ಇಂಟರ್ ನ್ಯಾಶನಲ್ ಸ್ಕೂಲ್ ವತಿಯಿಂದ ನಗರದ ಕುವೆಂಪು ಕಲಾ ಮಂದಿರದಲ್ಲಿ ಆಯೋಜಿಸಿದ್ದ ಶಾಲ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಮಕ್ಕಳು ಕಲಿಕೆ ಹೆಚ್ಚು ಆಸಕ್ತಿ ವಹಿಸಬೇಕು. ಬಾಲ್ಯದಲ್ಲಿ ಮಕ್ಕಳ ಮನಸ್ಸು ಮತ್ತು ಬುದ್ಧಿಶಕ್ತಿ ಹೆಚ್ಚು ಕ್ರೀಯಾಶೀಲತೆಯಿಂದ ಕೂಡಿರುತ್ತದೆ. ಪೋಷಕರು ಇವುಗಳನ್ನು ಅರಿತು ಮಕ್ಕಳನ್ನು ಐಚ್ಚಿಕ ವಿಶಯಗಳಲ್ಲಿ ಕಲಿಯಲು ಪ್ರೋತ್ಸಾಹಿಸಬೇಕು. ಮಕ್ಕಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಕಲಿತು ತಂದೆ-ತಾಯಿ, ಗುರು, ಹಿರಿಯರಿಗೆ ಗೌರವಿಸುವುದನ್ನು ಕಲಿಯಬೇಕು. ಶಾಲೆಯೂ ವಿದ್ಯೆ ಜೊತೆಗೆ ಸಮಾಜದ ಅರಿವನ್ನು ಮುಡಿಸುತ್ತದೆ. ಮಕ್ಕಳಲ್ಲಿ ನೈತಿಕ ಶಿಕ್ಷಣ ನೀಡಿ ಅವರನ್ನು ಸಮಾಜದ ಗೌರವಯುತ ವ್ಯಕ್ತಿಯಾಗಿ ರೂಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದ ಅವರು ಎಂದರು ಪೋಷಕರು ಮಕ್ಕಳ ಸ್ವಯಂ ಕಲಿಕೆಗೆ…

Read More

ಚಿಕ್ಕಮಗಳೂರು: ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಸೊಮವಾರ ಈ ವಿಷಯ ತಿಳಿಸಿದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೈ.ಎಸ್ ಸುನೀಲ್ ಕುಮಾರ್ ಕಳೆದ ೨೫ ವರ್ಷಗಳಿಂದ ಮಳಲೂರು ಏತ ನೀರಾವರಿ ಯೋಜನೆ ಸ್ಥಗಿತಗೊಂಡಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಕಾಮಗಾರಿಯನ್ನು ಪ್ರಾರಂಭಿಸಿ ರೈತರ ಜಮೀನಿಗೆ ನೀರು ಹರಿಸಬೇಕೆಂದು ಒತ್ತಾಯಿಸಿದರು. ಸದಾ ಕಾಲ ಬರಗಾಲಕ್ಕೆ ತುತ್ತಾಗುವ ಮಲೆನಾಡಿಗೆ ಹೊಂದಿಕೊಂಡಿರುವ ಗ್ರಾಮಗಳಾದ ಮಳಲೂರು,ಕಲ್ಲಹಳ್ಳಿ, ಸಿರಗಾಪುರ, ಕಂಬೀಹಳ್ಳಿ, ಬಿಗ್ಗನಹಳ್ಳಿ, ತಗಡೂರು, ಕದ್ರಿಮಿದ್ರಿ, ಬಿಕ್ಕೇಮನೆ ಈ ಗ್ರಾಮಗಳ ಸುಮಾರು ೧೬೦೦ ಎಕರೆ ಪ್ರದೇಶದ ರೈತರ ಜಮೀನುಗಳಿಗೆ ನೀರು ಒದಗಿಸುವ ಉದ್ದೇಶದಿಂದ ಹಿಂದೆ ಆರಂಭಗೊಂಡ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿ…

Read More

ಚಿಕ್ಕಮಗಳೂರು:  ಸಾಮಾಜದ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗಾಗಿ ಕಾರ್ಯನಿರ್ವಹಿಸುವ ಪೊಲೀಸರೊಂದಿಗೆ ಸಾರ್ವಜನಿಕರು ಉತ್ತಮ ಭಾಂದವ್ಯವನ್ನಿರಿಸಿಕೊಂಡು ಅವರ ಕರ್ತವ್ಯಕ್ಕೆ ಸಹಕಾರ ನೀಡಿದರೆ ಸುಸ್ಥಿರ ಸಮಾಜ ನಿರ್ಮಾಣ ಮಾಡಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಂದು ನಗರದ ರಾಮನಹಳ್ಳಿ ಪೊಲೀಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ನಾಗರೀಕ ಬಂದೂಕು ಶಿಬಿರದ ಸಮಾರೋಪ ಸಮಾರಂಭ ಮತ್ತು ಯಶಸ್ವಿಯಾಗಿ ಬಂದೂಕು ತರಬೇತಿ ಪೂರ್ಣಗೊಳಿಸಿದ ನಾಗರೀಕರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲಾಖೆಯು ಭದ್ರತೆ ಹಾಗೂ ರಕ್ಷಣೆ ಜೊತೆಗೆ ಸಮಾಜದಲ್ಲಿ ಶಾಂತಿ ಸ್ಥಾಪಿಸಲು ನಿಷ್ಠೆಯಿಂದ ಕರ್ತವ್ಯದಲ್ಲಿ ತೊಡಗಿಕೊಂಡಿದೆ ಪ್ರತಿಯೊಬ್ಬ ನಾಗರೀಕನೂ ಕಾನೂನು ಅರಿತು ಪಾಲಿಸಿದಲ್ಲಿ ಅಪರಾಧ ಸಂಖ್ಯೆ ಕ್ಷೀಣಿಸುವುದರೊಂದಿಗೆ ಸ್ವಾಸ್ಥ್ಯ ಸಮಾಜವು ನಿರ್ಮಾಣವಾಗುತ್ತದೆ ಎಂದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸಮಾಜದ ಎಲ್ಲಾ ಸ್ಥಿತಿಗತಿಗಳು, ಆಗು-ಹೋಗುಗಳನ್ನು ಸ್ಫಷ್ಟವಾಗಿ ಅರಿತ ವಿದ್ಯಾವಂತರೇ ಸೈಬರ್ ಕ್ರೈಂನಿಂದ ತಮ್ಮ ಹಣ ಕಳೆದುಕೊಂದು ವಂಚಿತರಾಗಿದ್ದಾರೆ. ಯಾವುದೇ ಅಪರಿಚಿತ ಸಂಖ್ಯೆಯಿಂದ…

Read More

ಚಿಕ್ಕಮಗಳೂರು: ನದಿಗಳು ಉಗಮಗೊಂಡು ಸಣ್ಣ ತೊರೆಗಳಾಗಿ ಕಡಲತೀರಕ್ಕೆ ಸೇರು ವಂತೆ, ದಲಿತ ಸಾಹಿತ್ಯ ಚಟುವಟಿಕೆಗಳು ಹಂತ ಹಂತವಾಗಿ ನಾಡಿನಾದ್ಯಂತ ಪಸರಿಸಬೇಕು. ಬೃಹಾದಕಾ ರವಾಗಿ ಬೆಳೆದು ಸಾಹಿತ್ಯದ ಕಡಲಿನತ್ತ ಸಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿ ದರು. ನಗರದ ಕನ್ನಡ ಭವನದಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ, ಮಹಿಳಾ ಹಾಗೂ ಯುವ ಘಟಕಗಳ ಉದ್ಘಾಟನಾ ಹಾಗೂ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಭಾನುವಾರ ಅವರು ಮಾತನಾಡಿದರು. ಸಾಹಿತ್ಯಾತ್ಮಕ ಚಟುವಟಿಕೆ ಡೊಳ್ಳು ಬೀಜಗಳಾಗದೇ, ಗಟ್ಟಿಬೀಜವಾಗಿ ಹೊರಹೊಮ್ಮಬೇಕು. ಸ್ವಾರ್ಥ ಅಥವಾ ಸಂಕುಚಿತ ಭಾವನೆಯಿಂದ ಸಾಹಿತ್ಯವು ಹೆಚ್ಚು ಕಾಲಗಳ ಉಳಿಯುವುದಿಲ್ಲ. ಬದಲಾಗಿ ಮನಸ್ಸಿನ ಒಡನಾಳ ಧ್ವನಿಯಾಗಿ ಬೆಳಕು ಚೆಲ್ಲುವ ಜೊತೆಗೆ ಸರಿಯಾದ ಮಾರ್ಗದರೆ ಸಾಗಿಸಿದರೆ ಶಾಶ್ವತವಾಗಿ ಮನ ದಾಳದಲ್ಲಿ ನೆಲೆಯೂರಲು ಸಾಧ್ಯ ಎಂದರು. ಸಾಹಿತ್ಯ ಲೋಕದಲ್ಲಿ ಸದ್ವಿಚಾರ, ಸದುದ್ದೇಶದಿಂದ ಕೂಡಿದಾಗ ಚಿರಕಾಲ ಉಳಿಯುತ್ತದೆ. ರಾಷ್ಟ್ರದಲ್ಲಿನ ರಾಜಮಹಾರಾಜರು, ಶ್ರೀಮಂತರು, ಹಣ ಗಳಿಸಿದವರನ್ನು ಜಗತ್ತು ಮರೆತಿದೆ. ಆದರೆ ಸಮಾಜಮುಖಿ…

Read More

ಶೃಂಗೇರಿ: ಶೃಂಗೇರಿ ಶಾರದಾಪೀಠದ ಶ್ರೀಶಾರದಾಮಹಾರಥೋತ್ಸವ ಬಲು ವಿಜೃಂಭಣೆಯಿಂದ ನೆರವೇರಿತು. ಜಗದ್ಗುರು ಶ್ರೀವಿಧುಶೇಖರಭಾರತೀ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನೆರವೇರಿದ ರಥೋತ್ಸವಕ್ಕೆ ಶ್ರೀಮಠದ ಆನೆಗಳು,ಛತ್ರಿ ಚಾಮರಗಳು,ವೇದ,ವಾದ್ಯಗೋಷ್ಠಿಗಳು,ರಂಗವಲ್ಲಿ ಚಿತ್ತಾರಗಳು,ತಳಿರು ತೋರಣಗಳು ಮೆರಗು ನೀಡಿದವು.ಮುಖ್ಯರಸ್ತೆಯಲ್ಲಿ ಸಾಗಿ ಬಂದ ರಥೋತ್ಸವದಲ್ಲಿ ನಾನಾಪ್ರಾಂತ್ಯಗಳಿಂದ ಆಗಮಿಸಿದ ಸದ್ಭಕ್ತರು ಭಾಗಿಯಾದರು.ಪಟ್ಟಣದ ಸದ್ಭಕ್ತರು ಜಗದ್ಗುರುಗಳಿಗೆ ಫಲಗಳನ್ನು ಸಮರ್ಪಿಸಿ ಧನ್ಯತಾಭಾವ ಪಡೆದರು. ಶ್ರೀ ಶಾರದಾಂಬಾ ರಥೋತ್ಸವ ಪ್ರಯುಕ್ತ ಶ್ರೀಶಾರದಾಪೀಠದಲ್ಲಿ ಫೆ.೧೧ರಿಂದ ಶ್ರೀಶಕ್ತಿಗಣಪತಿ ಸನ್ನಿಧಿಯಲ್ಲಿ ಪೂಜೆ,ವಿಶೇಷ ಪ್ರಾರ್ಥನೆ,ಧ್ವಜಾರೋಹಣ,ಮಂತ್ರಜಪ,ವೇದಪಾರಾಯಣಿ ಪ್ರಾರಂಭ,ಸಹಸ್ರಮೋದಕ ಗಣಹೋಮ,ಯಾಗಶಾಲಾ ಪ್ರವೇಶ,ಜಗದ್ಗುರುಗಳಿಂದ ಶತಚಂಡೀಯಾಗದ ಸಂಕಲ್ಪ,ಋತ್ವಿಜರಿಂದ ಚಂಡೀಪಾರಾಯಣಿ,ಕ್ಷೇತ್ರಪಾಲಕ ಬ್ರಹ್ಮ ಸನ್ನಿಧಿಯಲ್ಲಿ ವಿಶೇಷಪೂಜೆ,ಬ್ರಹ್ಮ ಸಂತರ್ಪಣೆ,ಶ್ರೀ ಶಾರದಾಮ್ಮನವರ ಬೀದಿ ಉತ್ಸವ,ಉತ್ಸವದಲ್ಲಿ ಶ್ರೀಮಲಹಾನಿಕರೇಶ್ವರ ದೇವಸ್ಥಾನದಿಂದ ಶ್ರೀಭವಾನಿ ಅಮ್ಮನವರು ಶ್ರೀ ಶಾರದಾಮ್ಮ ಸನ್ನಿಧಿಗೆ ಚಿತ್ತೈಸುವುದು,ಜಗದ್ಗುರುಗಳಿಂದ ಶ್ರೀಶಾರದೆಗೆ ವಿಶೇಷ ಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮ ಜರುಗಿತು. ಭಾನುವಾರ ಜಗದ್ಗುರುಗಳ ಉಪಸ್ಥಿತಿಯಲ್ಲಿ ಶತಚಂಡೀಯಾಗದ ಪೂರ್ಣಾಹುತಿ,ಓಕಳಿ ಉತ್ಸವ,ತೆಪ್ಪೋತ್ಸವ,ಬೀದಿ ಉತ್ಸವ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.ಸೋಮವಾರ ಮಹಾಸಂಪ್ರೋಕ್ಷಣೆ ನೆರವೇರಲಿದೆ. The Shree Sharada Maharathotsava of Sringeri Sharada Peetha was celebrated with great pomp and show.

Read More

ಚಿಕ್ಕಮಗಳೂರು: ಭರತ ಖಂಡದ ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು ಎಂದು ನಗರ ಸಭೆ ಅಧ್ಯಕ್ಷ್ಷೆ ಸುಜಾತ ಶಿವಕುಮಾರ್ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಂತ ಸೇವಾಲಾಲರು ಈಗಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಸೂರಗೊಂಡನ ಕೊಪ್ಪ ಎಂಬಲ್ಲಿ ಜನಿಸಿದರು. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನ ಪಡೆದಿದ್ದಾರೆ, ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿಯೇ ಉಳಿದವರು ಎಂದ ಅವರು ತಮ್ಮ ಜೀವನದ ಅನುಭವವನ್ನು ತಮ್ಮ ತತ್ವದ ಮೂಲಕ ಜನರಲ್ಲಿನ ಅಜ್ಞಾನವನ್ನು ದೂರ ಮಾಡಿದರು. ಸತ್ಯ, ಅಹಿಂಸೆ, ದಯೆ, ಕರುಣೆಗಳನ್ನು ಪಾಲಿಸುವ ಮೂಲಕ ಧರ್ಮಾತೀತರಾಗಿ ಎಂದು ಸಾರಿದ ಮಹಾಪುರುಷ ಎಂದು ಹೇಳಿದರು. ಬೇಲೂರು ರಸ್ತೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಕೆ. ಶ್ರೀನಿವಾಸ್ ಉಪನ್ಯಾಸ ನೀಡಿ ಮಾನವ ಜನ್ಮ…

Read More

ಚಿಕ್ಕಮಗಳೂರು: ಶಾಸಕಾಂಗ ಹಾಗೂ ಕಾರ್ಯಾಂಗ ಸೇರಿ ಕಾರ್ಯನಿರ್ವಹಿಸಿದಲ್ಲಿ ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಲು ಸಹಕಾರಿಯಾಗುತ್ತವೆ. ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಪ್ರತಿಯೊಬ್ಬ ಸಾರ್ವಜನಿಕರಿಗೂ ತಲುಪಿಸಿ ಅವರ ಸಮಸ್ಯೆಗಳಿಗೆ ಸ್ಪಂಧಿಸಿ ಬಗೆಹರಿಸುವುದೇ ನನ್ನ ಕರ್ತವ್ಯ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಶನಿವಾರ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿ ಲಕ್ಕಮ್ಮನಹಳ್ಳಿ ಮತ್ತು ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹಿಡಿದು ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಪ್ರತಿದಿನ ತಿರುಗಿದರು ಕೆಲವೊಮ್ಮೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗದೇ ತಮ್ಮ ಸಮಸ್ಯೆಗಳನ್ನು ಅವರಲ್ಲಿ ವಿವರಿಸಲಾಗದೇ ಸಮಸ್ಯೆಗಳು ಬಗೆಹರಿಸಿಕೊಳ್ಳಲು ಕಷ್ಟಕರವಾಗುತ್ತದೆ ಎಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಿ ಅಧಿಕಾರಿಗಳೆ ಸ್ವತಹ ಜನ ಸಾಮಾನ್ಯರ ಮನೆ ಬಾಗಿಲಿಗೆ ಬಂದು ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಕಾರ್ಯಕ್ರಮ ಉತ್ತಮ ವೇಧಿಕೆಯಾಗಿದೆ ಎಂದರು. ಈ ಜನ…

Read More