Subscribe to Updates
Get the latest creative news from FooBar about art, design and business.
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
- ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
Author: chikkamagalur express
ಚಿಕ್ಕಮಗಳೂರು: ಕರ್ತವ್ಯ ಲೋಪ ಹಿನ್ನಲೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಕ್ಕಣ್ಣರನ್ನು ಅಮಾನತು ಮಾಡಲಾಗಿದೆ. ಶೃಂಗೇರಿ ಪಿಎಸ್‌ಐ ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ಮೇಲೆ ದಾಳಿ, ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಹಿನ್ನಲೆ ಅಮಾನತು ಮಾಡಲಾಗಿದೆ. ಶೃಂಗೇರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ನೈತಿಕ ಪೊಲೀಸ್‌ಗಿರಿ ಜೊತೆಗೆ ಶೃಂಗೇರಿಯ ಮೀಗಾ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಚಿಕ್ಕಮಗಳೂರು ಸೆನ್ ಪೊಲೀಸ್ ದಾಳಿ, ಈ ಎಲ್ಲಾ ಪ್ರಕರಣದಲ್ಲೂ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜಕ್ಕಣ್ಣ ಸಸ್ಪೆಂಡ್ ಮಾಡಲಾಗಿದೆ. Sub-inspector of Sringeri Police Station suspended
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಸರ್ವೆ ಇಲಾಖೆಯ ಅಧಿಕಾರಿ ಶಿವಕುಮಾರ್ (೫೨) ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆ ಪಟ್ಟಣದ ತನ್ನೊಳ ರಸ್ತೆಯಲ್ಲಿ ಬಾಡಿಗೆಗಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ. ಗುರುವಾರ ಅವರು ತಾವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ. ಬೆಳಗ್ಗೆ ಸಮೀಪದ ಟೀ ಅಂಗಡಿಯಲ್ಲಿ ಟೀ ಕುಡಿದು ಮನೆಗೆ ತೆರಳಿದ್ದರೂ, ನಂತರ ಅವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೂಡಿಗೆರೆ ಸರ್ವೆ ಇಲಾಖೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಹಿರಿಯ ಸರ್ವೆಯರಾಗಿ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದರು. ತುಮಕೂರು ಜಿಲ್ಲೆ, ಗುಬ್ಬಿ ಮೂಲದವರಾದ ಶಿವಕುಮಾರ್ ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು ಅವರ ಪತ್ನಿ ಮತ್ತು ಮಗಳು ಬೆಂಗಳೂರಿನಲ್ಲಿದ್ದು ಮಗಳು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಶಿವಕುಮಾರ್ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ಕಳೆದ ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಬುಧವಾರ ಕಚೇರಿಯಲ್ಲಿ ತೀವ್ರ ವಿಚಲಿತರಾಗಿದ್ದರು ಎಂದು…
ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಇವುಗಳಿಂದ ಜನರ ಬದುಕಿನಲ್ಲಿ ಬೆಳಕು ಮೂಡಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಂ.ಸಿ. ಶಿವಾನಂದ ಸ್ವಾಮಿ ಹೇಳಿದರು. ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಅಸಹಾಯಕ ಮತ್ತು ಬಡ ಕುಟುಂಬಗಳಿಗೆ ವರದಾನವಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲುವಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿದೆ. ರಾಜ್ಯ ಸರ್ಕಾರವು ಸಮಾಜದ ಹಿಂದುಳಿದ ವರ್ಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಅವರ ಜೀವನ ಮಟ್ಟ ಸುಧಾರಿಸಲು ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಈ ಕಾರ್ಯಕ್ಕೆ ಬೆಂಬಲವಾಗಿ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸಹಕಾರಿಯಾಗಿವೆ ಎಂದರು. ಜಿಲ್ಲೆಯಾದ್ಯಂತ…
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದವರ ಮೇಲೆ ಸವರ್ಣೀಯರಿಂದ ನಡೆಯುವ ದೌರ್ಜನ್ಯದ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯದಂತೆ ಈ ಸಾಮಾಜಿಕ ಪಿಡುಗನ್ನು ತೊಡೆದುಹಾಕಲು ಬೀದಿನಾಟಕದ ಮೂಲಕ ಸಾರ್ಥಕ ಪ್ರಯತ್ನ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಸುಮಂತ್ ಶ್ಲಾಘಿಸಿದರು. ಅವರು ಇಂದು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನವಜೀವನ ಚಾರಿಟೇಬಲ್ ಸೇವಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನಾಗರೀಕ ಹಕ್ಕು ರಕ್ಷಣಾ ಕಾಯಿದೆ ೧೯೫೫, ೧೯೮೯ ನಿಯಮ ೧೯೯೫ ತಿದ್ದುಪಡಿ ನಿಯಮಗಳು ೨೦೧೩ ರಂತೆ ೧೭(ಎ) ಮತ್ತು ಪ.ಜಾ, ಪ.ಪಂ(ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಶಿಕ್ಷೆ ಆಗುವ…
ಚಿಕ್ಕಮಗಳೂರು: ಸಮಾಜದಲ್ಲಿ ಮಹಿಳೆಯರು ಆರ್ಥಿಕ ಸಬಲ-ಪ್ರಬಲರಾಗಬೇಕೆಂಬ ಗುರಿಯೊಂದಿಗೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು. ಅವರು ಇಂದು ನಗರಸಭೆಯಲ್ಲಿ ಏರ್ಪಡಿಸಲಾಗಿದ್ದ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯದ ಮಾರ್ಗಸೂಚಿಯಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇನಲ್ಮ್ ಅಭಿಯಾನದಡಿ ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅರ್ಹ ಮಹಿಳಾ ಸ್ವಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ನೀರಿನ ಶುಲ್ಕವನ್ನು ವಸೂಲಾತಿ ಸಂಗ್ರಹಣೆ ಮಾಡುವ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಗರಸಭೆ ವ್ಯಾಪ್ತಿಯ ಆಯಾ ವಾರ್ಡಿನ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಕಂದಾಯ ಮತ್ತು ನೀರಿನ ಕರ ವಸೂಲಿ ಮಾಡಿದರೆ ಶೇ.೫ ರಷ್ಟು ಹಣವನ್ನು ಆ ಸಂಘಕ್ಕೆ ನೀಡಲು ಯೋಜನೆ ರೂಪಿಸಲಾಗಿದ್ದು, ಅಂದು ಸಂಗ್ರಹಿಸಿದ ಹಣವನ್ನು ಅಂದೇ ನಗರಸಭೆಗೆ ಪಾವತಿ ಮಾಡಲು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದರು. ಸಂಗ್ರಹಿಸಲಾದ ಕಂದಾಯ…
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನದ ಸಿ.ಎನ್ ಆದಿಲ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ೧೬,೩೪೭ ಮತಗಳನ್ನು ಪಡೆಯುವ ಮೂಲಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದಾರೆ. Karnataka State Youth Congress General Secretary C.N. Adil
ಚಿಕ್ಕಮಗಳೂರು: ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಸ. ಚಿಕ್ಕಮಗಳೂರು ಇದರ ಆಡಳಿತ ಮಂಡಳಿಗೆ ಚುನಾವಣೆಯು ಫೆಬ್ರವರಿ ೦೨ ರಂದು ನಡೆದಿದ್ದು, ಬ್ಯಾಂಕಿನ ಆಡಳಿತ ಮಂಡಳಿಗೆ ಎಲ್ಲಾ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಮತ್ತು ಮುಂದಿನ ೫ ವ?ಗಳ ಅವಧಿಗೆ ಬ್ಯಾಂಕಿನ ಅಧ್ಯಕ್ಷರಾಗಿ ಕುಮಾರಿ ಬಿ.ಸಿ.ಗೀತಾರವರು ಹಾಗೂ ಉಪಾಧ್ಯಕ್ಷರಾಗಿ ಸುಧಾ.ಹೆಚ್.ಆರ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ರಿಟನಿಂಗ್ ಆಫೀಸರ್ ಡಾ.ತೇಜಸ್ವಿನಿ ಡಿ.ಎಸ್ ರವರು ಘೋಷಿಸಿರುತ್ತಾರೆ.ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರುಗಳಾದ.ಸುಜಾತ ಕೃ?ಮೂರ್ತಿ,.ಕಮಲಾ ಬಸವರಾಜ್, ಜಯಶ್ರೀನಂಜರಾಜ್, ಜಯಲಕ್ಷ್ಮೀ ಟಿ.ಪಿ. ಸೌಭಾಗ್ಯ ಗೋಪಾಲನ್, ಬನಶಂಕರಿ ಜೋಷಿ, ತಾರ ಮೋಹನ್, ಆಶಾ ಹೆಚ್.ಓ, ಕವಿತ ಎಂ ರಾಹುಲ್ ನಾಯಕ್, ಮೀನಾ.ಪಿ, ಸ್ಮಿತ ಬಿ.ಎಮ್, ಸೌಜನ್ಯ ಕೆ.ಆರ್ ಹಾಜರಿದ್ದರು. B.C. Geetha elected unopposed as the President of Karnataka Mahila Sahakari Bank
ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ದಿನ ನಿತ್ಯ ಜೀವನದಲ್ಲಿ ಅಂತರ್ಜಾಲವನ್ನು ಉಪಯೋಗಿಸಿಕೊಂಡೆ ತಮ್ಮ ಎಲ್ಲಾ ಕೆಲಸವನ್ನು ಕುಳಿತ ಜಾಗದಲ್ಲೇ ಮಾಡುತ್ತಿದ್ದಾರೆ. ಆದರೆ ಈ ಅಂತರ್ಜಾಲ ಜನರನ್ನು ಮೋಸದ ಬಲೆಗೆ ಬೀಳಿಸುವ ಮಾಯಜಾಲವಾಗಿ ಪರಿವರ್ತನೆಯಾಗಿದೆ ಎಂದು ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಹೇಳಿದರು. ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿ ಯುವ ಜನತೆಯಂತೂ ಪ್ರತೀಕ್ಷಣವೆಂಬಂತೆ ಅಂತರ್ಜಾಲದಲ್ಲಿ ಜಾಲಾಡುವುದನ್ನು ಕಾಣಬಹುದು. ಇದೊಂದು ರೀತಿಯ ಮಾಯಾಜಾಲ. ಇಂದು ಪ್ರತಿಯೊಬ್ಬರೂ ಸ್ಮಾರ್ಟ್‌ಫೋನ್ ಹೊಂದಿದ್ದು, ಇಂಟರ್‌ನೆಟ್ ಕೂಡಾ ಬಳಸುತ್ತಿರುತ್ತಾರೆ. ಆದರೆ ಇಂಟರ್‌ನೆಟ್ ಬಳಸುವ ಪ್ರತಿಯೊಬ್ಬರಿಗೂ ಸುರಕ್ಷತೆಯ ಅಂತರ್ಜಾಲ ಬಳಕೆಯ ಕುರಿತು ತಿಳಿದಿರುವುದಿಲ್ಲ. ಈ ಪ್ರಭಾವಿ ಅಂತರ್ಜಾಲ ಪ್ರಪಂಚ ಮಕ್ಕಳಿಂದ ಹಿಡಿದು ಹಿರಿಯರವರೆಗೂ ವ್ಯಾಪಿಸಿದೆ. ಸದ್ಯ ಕಚೇರಿ ಕೆಲಸಗಳನ್ನು ಕುಳಿತಲ್ಲಿಂದಲೇ ಮಾಡುವ ಪರಿಣತಿಯನ್ನು ಹೊಂದಿದ ಬಳಕೆದಾರರು ಅನೇಕರಿದ್ದಾರೆ. ಅ?ರ ಮಟ್ಟಿಗೆ ಇಂಟರ್‌ನೆಟ್ ಬಳಕೆ ಮತ್ತು ಅದರ ಉಪಯೋಗವಾಗುತ್ತಿದೆ. ಆದರೆ ಇ?ಲ್ಲಾ ಪ್ರಯೋಜನ ಒದಗಿಸುವ ಇಂಟರ್‌ನೆಟ್‌ನಿಂದ ತೊಂದರೆಯೂ…