Author: chikkamagalur express

ಚಿಕ್ಕಮಗಳೂರು:: ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನೀಡುವುದರೊಂದಿಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚುಣಿಯಲ್ಲಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕಡೂರು ಇವರ ವತಿಯಿಂದ ಬಾಣೂರು ಮತ್ತು ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ  ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ . ಜನರ ಮನೆ ಬಾಗಿಲಿಗೆ ಅಧಿಕಾರಿಗಳನ್ನು ಕರೆತಂದು ಪ್ರತಿಯೊಬ್ಬ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದೇ ಜನ ಸಂಪರ್ಕ ಸಭೆಯ ಮುಖ್ಯ ಉದ್ದೇಶವಾಗಿದೆ, ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡ್ಡಿಯಾಗಿಲ್ಲ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕಡೂರು ಇವರ ವತಿಯಿಂದ ಬಾಣೂರು ಮತ್ತು ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಎಲ್ಲಾ…

Read More

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬ ನಾಗರೀಕರಿಗೂ ತಲುಪಿಸಿ ಅವರ ಜೀವನ ಸುಧಾರಣೆಗೆ ಸಹಕರಿಸುವುದರೊಂದಿಗೆ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿಗೊಳಿಸುವುದೇ ನನ್ನ ಗುರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಸಖರಾಯಪಟ್ಟಣ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿ ಸೇರಿದಂತೆ ಸಖರಾಯಪಟ್ಟಣ ವ್ಯಾಪ್ತಿಯ ರಸ್ತೆ, ದೇವಸ್ಥಾನ, ಸಮುದಯ ಭವನ, ಕಾಂಪೌಂಡ್ ಹಾಗೂ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸುವುದರ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು. ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಪ್ರಾರಂಭವಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಹಾಗೂ ಗ್ರಾಮಾಂತರ ಭಾಗವನ್ನೋಳಗೊಂಡಂತೆ ಕ್ಷೇತ್ರಕ್ಕೆ ಒಟ್ಟು ೨೫ ಕೋಟಿ ರೂಗಳ ವಿಶೇಷ ಅನುಧಾನ ನೀಡಲಾಗಿದೆ ಎಂದರು. ಸಖರಾಯಪಟ್ಟಣ ವ್ಯಾಪ್ತಿಯಲ್ಲಿ ದೇವಸ್ಥಾನ, ಆಟೋ ನಿಲ್ದಾಣ ಹಾಗೂ ರಸ್ತೆ ಸೇರಿದಂತೆ ಸುಮಾರು ೨ ಕೋಟಿಗೂ ಹೆಚ್ಚಿನ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ೪ ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು. ಗುಬ್ಬಿಹಳ್ಳಿ ಗೇಟ್‌ನಿಂದ ದೇವನೂರು…

Read More

ಚಿಕ್ಕಮಗಳೂರು: ಗುರಿ ಹೊಂದಿರುವ ವಿದ್ಯಾರ್ಥಿಗಳಿಗೆ ದಾರಿ ತೋರುವುದು ಶಿಕ್ಷಕರ ಕರ್ತವ್ಯವಾಗಿದೆ. ಶಿಕ್ಷಣ ಕೇವಲ ನೌಕರಿಗಲ್ಲ ಉತ್ತಮ ಜೀವನ ನಿರ್ವಹಣೆಗೂ ಅತ್ಯವಶ್ಯಕ ಎಂದು. ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ನಗರದ ಕುವೆಂಪು ಕಲಾ ಮಂದಿರದಲ್ಲಿ ಯುನೈಟೆಡ್ ಇಂಟರ್ ನ್ಯಾಷನಲ್ ಸ್ಕೂಲ್‌ಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಮಕ್ಕಳು ಕಲಿಕೆಯಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು. ಬಾಲ್ಯದಲ್ಲಿ ಮಕ್ಕಳ ಮನಸ್ಸು ಮತ್ತು ಬುದ್ಧಿಶಕ್ತಿ ಹೆಚ್ಚು ಕ್ರೀಯಾಶೀಲತೆಯಿಂದ ಕೂಡಿರುತ್ತದೆ. ಯಾವುದೇ ವಿಷಯವನ್ನು, ಕಲೆಯನ್ನು ಕರಗತ ಮಾಡಿಕೊಳ್ಳುವಂತ ಶಕ್ತಿ ಪ್ರತಿಯೊಂದು ಮಕ್ಕಳಲ್ಲಿ ಅಡಗಿರುತ್ತದೆ. ಪೋಷಕರು ಇವುಗಳನ್ನು ಅರಿತು ಮಕ್ಕಳನ್ನು ಪ್ರೋತ್ಸಾಹಿಸಬೇಕು ಎಂದರು. ವಿದ್ಯೆ ಎಂಬುದು ಪ್ರಬಲ  ಅಸ್ತ್ರ ಇದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡಲ್ಲಿ ಪ್ರಪಂಚವನ್ನೇ ಬದಲಾಯಿಸಬಹುದು. ಮಕ್ಕಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಕಲಿತು ತಂದೆ-ತಾಯಿ, ಗುರು, ಹಿರಿಯರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದ ಅವರು ಸುಮಾರು ೨೩ ವರ್ಷಗಳಿಂದ ಉತ್ತಮ ಶಿಕ್ಷಣ ನೀಡಿ, ಮಕ್ಕಳ ಭವಿಷ್ಯ ರೂಪಿಸುತ್ತಿರುವ ಈ ಸಂಸ್ಥೆಯು ಇನ್ನಷ್ಟು ಬೆಳವಣಿಗೆ ಹೊಂದಲಿ…

Read More

ಚಿಕ್ಕಮಗಳೂರು: ಹೊಸ ದೇವಾಲಯಗಳ ನಿರ್ಮಾಣಕ್ಕಿಂತ ಹಳೆಯ ದೇವಾಲಯಗಳ ಜೀರ್ಣೋದ್ಧಾರವೇ ಶ್ರೇಷ್ಠ. ಇದು ಬ್ರಹ್ಮದೇವರು ವ್ಯಾಖ್ಯಾನಿಸಿರುವ ರೀತಿ; ಆದ್ದರಿಂದ ಎಲ್ಲಿಯೇ ಇರಲಿ, ಯಾವುದೇ ದೇವಸ್ಥಾನವಿರಲಿ ಅಲ್ಲಿ ಯಾವುದೇ ಪೂಜಾ ವಿಧಾನಗಳಲ್ಲಿ ಲೋಪಗಳಾಗಬಾರದು ಎಂದು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಶ್ರೀಕ್ಷೇತ್ರ ಬಂಗಾರುಮಕ್ಕಿ ಶ್ರೀ ಹೇಮಪುರ ಮಹಾಪೀಠಂನ ಶ್ರೀ ವಿಶ್ವ ವೀರಾಂಜನೇಯ ಸ್ವಾಮೀಜಿ ಹೇಳಿದರು. ನಗರದ ಶ್ರೀ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಶ್ರೀಪೀಠಂನ ಭಕ್ತಾದಿಗಳು ಹಾಗೂ ಚಿಕ್ಕಮಗಳೂರು ಬ್ರಾಹ್ಮಣ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿ, ದೇವಾಲಯಗಳ ಜೀರ್ಣೋದ್ಧಾರಗಳು ಕಾಲ ಕಾಲಕ್ಕೆ ಪುನರುಜ್ಜೀವನ ಆಗಬೇಕು. ಈ ದಿಕ್ಕಿನಲ್ಲಿ ಎಲ್ಲಾ ಜಾತಿ, ಜನಾಂಗ, ಧರ್ಮದವರೂ ಭಾಗಿಯಾಗಬೇಕಾಗಿರುವುದು ಇಂದಿನ ಅವಶ್ಯ. ದೇವಸ್ಥಾನಗಳೇ ಅಭಿವೃದ್ಧಿಯ ಸಂಕೇತ ಎಂದರು. ಹೊನ್ನಾವರದ ಶ್ರೀ ಬಂಗಾರುಮಕ್ಕಿ ಕ್ಷೇತ್ರದಲ್ಲಿ ಮಾ.೩೧ ರಿಂದ ಏಪ್ರಿಲ್ ೧೩ರವರೆಗೆ ಹಮ್ಮಿಕೊಂಡಿರುವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ನೀಡಿದರು. ಶ್ರೀಕ್ಷೇತ್ರದಲ್ಲಿ ಶ್ರೀ ವೀರಾಂಜನೇಯ ಪ್ರತಿಷ್ಠಾ ಬಂಧ, ನೂತನ ಗೋಪುರ – ಸ್ವರ್ಣಮಯ ಕಲಶ, ಶ್ರೀ…

Read More

ಚಿಕ್ಕಮಗಳೂರು: ಜೆ.ಸಿ.ಐ ಸಪ್ತಾಹದ ಹಿನ್ನೆಲೆಯಲ್ಲಿ ಸೆಲ್ಯೂಟ್ ಡಿ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿಯಲ್ಲಿ ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ರುದ್ರಯ್ಯ ಹಾಗೂ ಲೈನ್‌ಮ್ಯಾನ್ ಲಿಂಗರಾಜುರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಖಾಸಗಿ ವಾಹಿನಿಯ ಕಚೇರಿಯಲ್ಲಿ ಕಾರ್ಯಕ್ರಮ ಏರ್ಪಡಿಸಿದ ಜೆ.ಸಿ.ಐ ಮಲ್ನಾಡ್ ಸಂಸ್ಥೆ ಎಲೆಮರೆಯ ಕಾಯಿಯಂತೆ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಪತ್ರಕರ್ತ ರುದ್ರಯ್ಯ ಹಾಗೂ ಲೈನ್ ಮ್ಯಾನ್ ಲಿಂಗರಾಜು ಅವರನ್ನು ಗೌರವಿಸಿ ಅಭಿನಂದಿಸಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತರಾದ ರುದ್ರಯ್ಯ ಅವರು ನನ್ನ ಸೇವೆಯನ್ನು ಗುರುತಿಸಿ ಗೌರವಿಸಿ ಸನ್ಮಾನಿಸುತ್ತಿರುವ ಜೆಸಿಐ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಲೈನ್ ಮ್ಯಾನ್ ಲಿಂಗರಾಜು ಅವರು ತಮ್ಮ ಸೇವೆಯನ್ನು ಗುರುತಿಸಿ, ಗೌರವಿಸಿ ಸನ್ಮಾನಿಸುತ್ತಿರುವುದಕ್ಕೆ ಸಂತೋಷ ವ್ಯಕ್ತ ಪಡಿಸಿದರು. ಜೆ.ಸಿ.ಐ ಮಲ್ನಾಡ್ ಸಂಸ್ಥೆಯ ಅಧ್ಯಕ್ಷ ಪ್ರದೀಪ್ ಮಾತನಾಡಿ ಜೆಸಿಐ ಸಂಸ್ಥೆ ವ್ಯಕ್ತಿ ವಿಕಸನದ ಸಂಸ್ಥೆಯಾಗಿದ್ದು ಹಲವು ವರ್ಷಗಳಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಮಾಜದಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ…

Read More

ಚಿಕ್ಕಮಗಳೂರು: ಮುಸ್ಲಿಂ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಆ ವರ್ಗದ ಜನ ರಾಜಕೀಯವಾಗಿ. ಶೈಕ್ಷಣಿಕವಾಗಿ. ಸಾಮಾಜಿಕವಾಗಿ. ಆರ್ಥಿಕವಾಗಿ ಬೆಳೆಯಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಹೇಳಿದರು. ರಾಜ್ಯ ಮುಸ್ಲಿಂ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ನಗರದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಷ್ಟ್ರ. ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಸ್ಲಿಂ ಸಮುದಾಯ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದಕ್ಕೆ ಮೂಲ ಕಾರಣ ಆ ವರ್ಗದಲ್ಲಿ ಶಿಕ್ಷಣವಂತರ ಸಂಖ್ಯೆ ಕಡಿಮೆ ಇರುವುದು. ಕಾರ್ಮಿಕರ ಸಂಖ್ಯೆ ಹೆಚ್ಚಿರುವುದು ಎಂದ ಅವರು ಮುಸ್ಲಿಂ ಜನಾಂಗ ಪ್ರಗತಿ ಹೊಂದಬೇಕಾದರೆ ಆ ಸಮುದಾಯದವರು ಸಂಘಟಿತರಾಗಬೇಕು. ಕೌಶಲ್ಯ ಬೆಳೆಸಿಕೊಳ್ಳಬೇಕು. ಶಿಕ್ಷಣವಂತರಾಗಿ. ಅಧಿಕಾರಿಗಳಾಗಿ ಹೊರಹೊಮ್ಮಬೇಕು ಎಂದು ಕಿವಿ ಮಾತು ಹೇಳಿದರು. ಮುಸ್ಲಿಂ ಸಮುದಾಯದ ಅಧಿಕಾರಿಗಳು. ನೌಕರರು. ತಮ್ಮ ಜನಾಂಗದವರನ್ನು ಶಿಕ್ಷಣವಂತರನ್ನಾಗಿಸಲು ಪ್ರಯತ್ನಿಸಬೇಕು. ಅವರನ್ನು ಕೈಹಿಡಿದು ಮೇಲೆತ್ತುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು. ಮುಸ್ಲಿಂ ಸರ್ಕಾರಿ…

Read More

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷದಿಂದ ಕಾರ್ಮಿಕರು, ತೋಟಗಳ ಮಾಲೀಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕಳಸ ತಾಲೂಕು ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದ ರಘುಪತಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ತಿವಿದು ಮೃತಪಟ್ಟ ಬೆನ್ನಲ್ಲೆ ತಣಗೆಬೈಲು ವನ್ಯಜೀವಿ ವ್ಯಾಪ್ತಿಯ ಕತ್ಲೆಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಯಲು ತೆರಳುತ್ತಿದ್ದ ವಿನೋಬ ಬಾಯಿ (೪೦) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ್ದು ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನರಸಿಂಹರಾಜಪುರ ತಾಲೂಕು ತರೀಕೆರೆ ಅರಣ್ಯ ವ್ಯಾಪ್ತಿಯಲ್ಲಿನ ಭದ್ರಾ ಅರಣ್ಯ ವಲಯಕ್ಕೆ ಸೇರಿದ ಕತ್ಲೇಖಾನ್ ಎಸ್ಟೇಟ್‌ನಲ್ಲಿ ಕಾಫಿ ಕೊಯ್ಲು ಮಾಡಲು ತೆರಳುತ್ತಿದ್ದ ವಿನೋಬ ಬಾಯಿ ಅವರ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಕಾರ್ಮಿಕ ಮಹಿಳೆ ಜತೆ ಇಬ್ಬರು ಮಹಿಳೆಯರಿದ್ದು, ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಮಹಿಳೆ ವಿನೋಬ ಬಾಯಿ ಹರಪನಹಳ್ಳಿ ತಾಲೂಕಿನ ಶಿವಪುರ ಗ್ರಾಮಕ್ಕೆ ಸೇರಿದವರಾಗಿದ್ದು, ಉದ್ಯೋಗ ಅರಸಿ ಚಿಕ್ಕಮ ಗಳೂರು ಜಿಲ್ಲೆಗೆ ಬಂದಿದ್ದರು. ಶನಿವಾರ ಬೆಳಿಗ್ಗೆ ನಡೆದ ಘಟನೆಯಿಂದ ಕಾರ್ಮಿಕ…

Read More

ಚಿಕ್ಕಮಗಳೂರು: : ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೊಸ ವಿಶ್ವಾಸ ಜೊತೆಗೆ ಸಂತೋಷ ತಂದಿದೆ. ಇದರೊಂದಿಗೆ ದೆಹಲಿ ವಿಧಾನ ಸಭೆಯಲ್ಲಿ ಸತತ ಮೂರನೇ ಬಾರಿಗೆ ಶೂನ್ಯ ಸಾಂಪಾದನೆ ಮೂಲಕ ಸೋಲನುಭವಿಸಿ ದಿಕ್ಕಾಪಾಲಾಗುತ್ತಿರುವ ಕಾಂಗ್ರೆಸ್ ಸರ್ಕಾರಕ್ಕು ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆಂದು ಕಾರ್ಕಳಾ ಶಾಸಕ ಸುನಿಲ್ ಕುಮಾರ್ ಹೇಳಿದರು. ದೆಹಲಿ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಗರದ ಬಿಜೆಪಿ ಕಚೇರಿಯಿಂದ ಆಜಾದ್ ವೃತ್ತದ ವರೆಗೆ ಮೋದಿ ಕಟೌಟ್ ಹಿಡಿದು ಮೆರವಣಿಗೆ ಮಾಡಿ ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿ ನಂತರ ಮಾತನಾಡಿದ ಅವರು.ದೇಶದ ರಾಜಧಾನಿಯಲ್ಲಿ ಕೇಸರಿ ಆಡಳಿತ ಮುಂದುವರಿಯುತ್ತಿದೆ. ಇನ್ನು ಐದು ವರ್ಷ ಡಬಲ್ ಇಂಜೀನ್ ಸರ್ಕಾರದ ಮೂಲಕ ವಿಶ್ವಾಸದ ಆಡಳಿತ ನೀಡಲು ಬಿಜೆಪಿ ಸರ್ಕಾರ ಮುಂದಾಗಿದೆ. ನರೇಂದ್ರ ಮೋದಿ ಯವರ ಜನಪ್ರೀಯತೆಗೆ ದೆಹಲಿಯ ಮತದಾರರು ದೊಡ್ಡ ಪ್ರಮಾಣದ ಗೆಲುವನ್ನು ನೀಡಿದ್ದಾರೆ ಎಂದರು. ದೇಶದ ಅಖಂಡತೆ ವಿರುದ್ಧ ಸಧಾ ಕಾಲಾ ಮಾತನಾಡುತಿದ್ದ ಕೇಜ್ರಿವಾಲ್‌ರವರನ್ನು ಜನ ತಿರಸ್ಕರಿಸಿದ್ದಾರೆ.…

Read More