Author: chikkamagalur express

ಚಿಕ್ಕಮಗಳೂರು:  ಭಾರತ ದೇಶದಲ್ಲಿ ಸುದೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಪ್ರಿಯದರ್ಶಿನಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಇಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಅಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಘೋಷಣೆ ಕೂಗಿ ಹಿಟ್ಲರ್ ಎಂದು ಇಂದಿರಾ ಗಾಂಧಿಯವರನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ, ದೇಶದ ಅಭಿವೃದ್ಧಿಗೆ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ೨೦ ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ ಇವರ ಬಗ್ಗೆ ಬಿಜೆಪಿ ಮತ್ತು ಕೇಂದ್ರಸರ್ಕಾರ ಅವಹೇಳನ ಮಾಡಿದ್ದಾರೆಂದು ಆರೋಪಿಸಿದರು. ಬ್ರಿಟೀಷ್ ಆಡಳಿತದಿಂದ ಖಾಲಿ ಖಜಾನೆಯಾಗಿದ್ದ ಭಾರತ ದೇಶದಲ್ಲಿ ಸರ್ವರಿಗೂ ಸಮಾನತೆ ತಂದುಕೊಟ್ಟ ಧೀಮಂತ ನಾಯಕಿಯಾಗಿದ್ದಾರೆ. ಇಂತಹವರ ಬಗ್ಗೆ ಕ್ಷುಲ್ಲಕ ರಾಜಕೀಯಕ್ಕಾಗಿ…

Read More

ಚಿಕ್ಕಮಗಳೂರು:  ಕಾಫಿನಾಡಿನ ಜನರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಅವಿರತ ಪ್ರಯತ್ನದ ಫಲವಾಗಿ ಜಿಲ್ಲೆಯ ಜನರ ಬಹುದಿನದ ಕನಸು ಇದೀಗ ನನಸಾಗಿದೆ. ರಾಜ್ಯ ರೈಲ್ವೆ ಖಾತೆ ಸಚಿವ ಸೋಮಣ್ಣರವರ ಸಹಕಾರದೊಂದಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ ಪ್ರೆಸ್ ರೈಲಿಗೆ ಅನುಮೋದನೆ ನೀಡಿದ್ದಾರೆ. ಸಧ್ಯ ಈ ರೈಲು ಪ್ರಾಯೋಗಿಕವಾಗಿ ವಾರಕ್ಕೊಂದು ಬಾರಿ ಸಂಚಾರ ನಡೆಸಲಿದ್ದು, ಪ್ರತಿ ಶುಕ್ರವಾರ ಸಂಜೆ ೫.೩೦ ಕ್ಕೆ ಚಿಕ್ಕಮಗಳೂರು ಬಿಟ್ಟು, ಶನಿವಾರ ಬೆಳಗ್ಗೆ ೭.೪೦ ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಚಿಕ್ಕಮಗಳೂರಿಗೆ ಪ್ರತಿ ಗುರುವಾರ ರಾತ್ರಿ ೯ ಕ್ಕೆ ರೈಲು ಹೊರಡಲಿದ್ದು, ಶುಕ್ರವಾರ ಬೆಳಗ್ಗೆ ೧೦.೩೦ ಕ್ಕೆ ಚಿಕ್ಕಮಗಳೂರು ತಲುಪಲಿದೆ. ಚಿಕ್ಕಮಗಳೂರು ನಿಲ್ದಾಣದಿಂದ ಹೊರಡುವ ರೈಲು ಮಾರ್ಗ ಮಧ್ಯೆ ಸಖರಾಯಪಟ್ಟಣ, ಬಿಸಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ,…

Read More

ಚಿಕ್ಕಮಗಳೂರು:  ಬೆಂಗಳೂರು ನಗರ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು. ೧೬ನೇ ಶತಮಾನದ ವಿಜಯನಗರ ಸಾಮ್ರಾಜ್ಯದ ಆಡಳಿತ ಕಾಲದಲ್ಲಿದ್ದಂತೆ ಬೆಂಗಳೂರು ನಗರವನ್ನು ನಿರ್ಮಿಸಬೇಕೆಂಬ ದೂರದೃಷ್ಟಿ ಇಟ್ಟುಕೊಂಡಿದ್ದರು. ತಮ್ಮದೇ ಆದ ಕೊಡುಗೆ ನೀಡಿ ಈ ನಗರವನ್ನು ನಿರ್ಮಿಸಿ ತಮ್ಮ ಕನಸಿನ ನಗರಿಯನ್ನಾಗಿ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಅವರು ಕಟ್ಟಿದ ಕೆರೆಗಳು. ರಸ್ತೆಗಳು, ಮಾರುಕಟ್ಟೆ ವ್ಯವಸ್ಥೆ ಇಂದಿಗೂ ನಮ್ಮ ಬೆಂಗಳೂರಿಗೆ ವಿಶೇಷ ಮೆರುಗು ತಂದುಕೊಟ್ಟಿವೆ. ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಆಫ್ ದಿ ವರ್ಲ್ಡ್ ಎಂದು ಕರೆದರೂ ತಪ್ಪಾಗಲಾರದು. ಈ ರೀತಿ ಬೃಹದಾಕಾರದಲ್ಲಿ ಬೆಳೆಯಲು ಹಾಗೂ ಈ ನಗರ ಇಂದು ವಿಶ್ವಮಾನ್ಯತೆ ಪಡೆಯಲು ಅವರು ಹಾಕಿಕೊಟ್ಟ ಮೇಲ್ಪಂಕ್ತಿಯೇ ಕಾರಣ ಎಂದರು. ಇಂದು ಸುಭದ್ರವಾದ ಬೆಂಗಳೂರು ನಿರ್ಮಾಣದ ಜೊತೆಗೆ ಜನಪರ…

Read More

ಚಿಕ್ಕಮಗಳೂರು:  ವಿಶ್ವಮಟ್ಟದಲ್ಲಿ ಬೆಂಗಳೂರನ್ನು ಪ್ರಗತಿಯತ್ತ ಕೊಂಡೊಯ್ಯಲು ಹಾ ಗೂ ಆಧುನಿಕ ನಗರೀಕರಣಕ್ಕೆ ಮೊಟ್ಟಮೊದಲ ಅಡಿಪಾಯ ಹಾಕಿದವರೇ ನಾಡುಪ್ರಭು ಕೆಂಪೇಗೌಡರು ಎಂ ದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಶುಕ್ರವಾರ ನಡೆದ ನಾಡುಪ್ರಭು ಶ್ರೀ ಕೆಂಪೇಗೌಡರ ೫೧೬ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ ವಿಜಯನಗರ ಸಾಮ್ರಾಜ್ಯದ ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿ ಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರ ಮುಖ ನಗರಗಳಲ್ಲಿ ಒಂದಾಗುವ ಜೊತೆಗೆ ಗಾರ್ಡನ್‌ಸಿಟಿಯಾಗಿ ಪರಿವರ್ತನೆಯಾಗಿದೆ ಎಂದರು. ರಾಜಧಾನಿಯಲ್ಲ್ಲಿ ನೂರಾರು ದೇವಾಲಯ, ಬೆಂಗಳೂರನ್ನು ನಾಲ್ಕು ದಿಕ್ಕನ್ನು ಪ್ರತಿಬಿಂಬಿಸಲು ಕೋಟೆ ಗಳ ನಿರ್ಮಾಣ, ಸರ್ವ ಜನಾಂಗದ ಅಭಿವೃಧ್ದಿ ದೃಷ್ಟಿಯಿಂದ ಆಯಾ ಸಮಾಜಕ್ಕೆ ಮೀಸಲಿರಿಸಿದ ಹೆಸರಿನಲ್ಲಿ ಬಡಾವಣೆ ಹಾಗೂ ಹದಿನೇಳಕ್ಕೂ ಹೆಚ್ಚು ಪೇಟೆಗಳ ನಿರ್ಮಾಣಕ್ಕೆ ಮೂಲವೇ ಕೆಂಪೇಗೌಡರು ಎಂದು ಬಣ್ಣಿ ಸಿದರು. ಪ್ರಸ್ತುತ ದಿನಗಳಲ್ಲಿ ಬೆಂಗಳೂರು ಐಟಿಬಿಟಿ, ಯಾತ್ರಿಕ ನಗರೀಕರಣ ವಿಶ್ವಾದಾದ್ಯಂತ ಹೆಸರು ಸಂಪಾ…

Read More

ಚಿಕ್ಕಮಗಳೂರು: ಪ್ಲಾಂಟೇಶನ್ ಭೂಮಿಯನ್ನು ಗುತ್ತಿಗೆಗೆ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ಜಂಟಿ ಸರ್ವೇ ಪೂರ್ಣಗೊಂಡು ಅರಣ್ಯ ಮತ್ತು ಕಂದಾಯ ಭೂಮಿಯ ನಿಖರ ಮಾಹಿತಿ ಲಭ್ಯವಾದ ಬಳಿಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹಳ ದಿನಗಳಿಂದ ಜಂಟಿ ಸರ್ವೇ ಆಗದೆ ಬಾಕಿ ಉಳಿದಿದೆ. ಇದೀಗ ಜಂಟಿ ಸರ್ವೇ ಕೈಗೊಳ್ಳಲು ಅರಣ್ಯ ಇಲಾಖೆಯೊಂದಿಗೆ ಸೇರಿ ನಿಯಮಾವಳಿಗಳನ್ನು ರೂಪಿಸಿ, ಸುತ್ತೋಲೆಗಳನ್ನು ಹೊರಡಿಸಿ, ಹಿಂದಿನಿಂದಲೂ ಉಳಿದಿದ್ದ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಜಂಟಿ ಸರ್ವೇಯನ್ನು ಕಾರ್ಯ ರೂಪಕ್ಕೆ ತಂದಿರುವುದಾಗಿ ತಿಳಿಸಿದರು. ಜಂಟಿ ಸರ್ವೇ ಆಗದೆ ಅರ್ಜಿ ವಿಲೇವಾರಿ ಮಾಡಲು ಸಾಧ್ಯವಿಲ್ಲ. ಅರಣ್ಯ ಮತ್ತು ಕಂದಾಯ ಜಮೀನಿನ ನಿಖರತೆ ತಿಳಿಯದಿದ್ದಲ್ಲಿ ಅರ್ಜಿ ವಿಲೇವಾರಿ ಪ್ರಕ್ರಿಯೆ ಸಾಧ್ಯವಾಗದು. ಹಿಂದೆ ಆಗಿರುವಂತೆ ಕಂದಾಯ ಜಮೀನೆಂದು ಅರಣ್ಯ…

Read More

ಚಿಕ್ಕಮಗಳೂರು : ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ‘ಮ್ಯಾನ್ ಆಫ್ ದಿ ಮ್ಯಾಚ್ ಚಲನಚಿತ್ರಗಳ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ಮಿಸಿ ನಿರ್ದೇಶಿಸಿರುವುದರ ಜೊತೆಗೆ ಪ್ರಮುಖ ಪಾತ್ರಗಳಲ್ಲೂ ನಟಿಸಿರುವ ಬಹು ನಿರೀಕ್ಷಿತ ‘ಎಕ್ಸ್ ಅಂಡ್ ವೈ’ ಚಲನಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಚಿತ್ರದ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಇತ್ತೀಚಿಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇದರಲ್ಲಿ ನಿರ್ದೇಶಕರು ಪ್ರೇಕ್ಷಕರ ಮನಃ ಸೆಳೆದಿದ್ದಾರೆ. ಚಿತ್ರವನ್ನು ನೋಡುವ ಕಾತರವನ್ನು ಪ್ರೇಕ್ಷಕರಲ್ಲಿ ಹೆಚ್ಚಿಸಿದ್ದಾರೆ, ವಿಭಿನ್ನ ಕಂಟೆಂಟ್ ಹೊಂದಿರುವ ಈ ಚಿತ್ರದ ಟ್ರೈಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ‘ಎಕ್ಸ್ ಅಂಡ್ ವೈ’ ಚಲನಚಿತ್ರ ಇಂದು ಎಲ್ಲಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ನಿರ್ದೇಶಕ ಡಿ. ಸತ್ಯಪ್ರಕಾಶ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು ಸಂಕಲನ, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ…

Read More

ಚಿಕ್ಕಮಗಳೂರು:  ಪೌರ ಕಾರ್ಮಿಕರ ಸಮಸ್ಯೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಂತದಲ್ಲಿ ಪರಿಹರಿಸಲು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು. ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿ?ಧ ಮತ್ತು ಅವರ ಪುನರ್ವಸತಿ ಅಧಿನಿಯಮ ೨೦೧೩ ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅವರಿಗೆ ಸವಲತ್ತುಗಳನ್ನು ಕಲ್ಪಿಸುವತ್ತ ಗಮನ ಹರಿಸಬೇಕು ಎಂದ ಅವರು, ಸರ್ಕಾರ ಪೌರ ಕಾರ್ಮಿಕರಿಗಾಗಿ ನೀಡಿರುವ ಸವಲತ್ತುಗಳನ್ನು ಕೊಡುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದರು. ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಬೇಕು, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ನೀಡಬೇಕೆಂದ ಅವರು, ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ವಿಶ್ರಾಂತಿ ಗೃಹಗಳನ್ನು ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಮಾಡಬೇಕಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಕೂಡ ಅವರಿಗೆ ವಿಶ್ರಾಂತಿ ಗೃಹಗಳನ್ನು ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಸ ಸಂಗ್ರಹಣೆಗಾಗಿ ಬರುವ ಪೌರ…

Read More