Subscribe to Updates
Get the latest creative news from FooBar about art, design and business.
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
- ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
Author: chikkamagalur express
ಚಿಕ್ಕಮಗಳೂರು: ಏಷ್ಯ ಖಂಡದಲ್ಲೇ ಅತಿ ದೊಡ್ಡ ಸರ್ಕಸ್ ತಂಡವಾದ ಜಂಬೂ ಸರ್ಕಸ್‌ರವರಿಂದ ನಗರದ ಬೈಪಾಸ್ ರಸ್ತೆ, ಕಲ್ಯಾಣ ನಗರದಲ್ಲಿ ಅತ್ಯದ್ಭುತ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು ಕಲಾಭಿಮಾನಿಗಳೂ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಸರ್ಕಸ್ ಫ್ಯಾನ್ಸ್ ಫೇರ್‌ವೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಶ್ ಹೇಳಿದರು ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಂಬೂ ಸರ್ಕಸ್ ತಂಡವೂ ೧೯೭೭ರ ಅಕ್ಟೋಬರ್ ೨ರಂದು ಎಂ.ವಿ ಶಂಕರನ್ ಅವರ ಮಾಲೀಕತ್ವದಲ್ಲಿ ಬಿಹಾರಿನ ದಾನಪುರದಲ್ಲಿ ಪ್ರಾರಂಭವಾಗಿದ್ದು. ಪ್ರಸ್ತುತ ಅವರ ಮಕ್ಕಳಾದ ಅಜಯ್‌ಶಂಕರ್ ಹಾಗೂ ಅಶೋಕ್‌ಶಂಕರ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈ ತಂಡದಲ್ಲಿ ನೂರು ಜನ ಕಲಾವಿದರು, ಮಹಿಳೆಯರು, ಪುರು?ರು, ಕಚೇರಿ ನೌಕರರು ಇತರ ಸಹಾಯಕ ನೌಕರರು ಸೇರಿದಂತೆ ಒಟ್ಟು ೩೦೦ಕ್ಕೂ ಹೆಚ್ಚು ಜನ ಸರ್ಕಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು. ಸರ್ಕಸ್ಸಿನಲ್ಲಿ ಆಫ್ರಿಕಾ, ರಷ್ಯಾದ ವಿದೇಶಿ ಕಲಾವಿದರು ಒಳಗೊಂಡಂತೆ ದೇಶದ ವಿವಿದ ರಾಜ್ಯಗಳ ಕಲಾವಿದರು ಮೈ ಜುಮ್ ಎನಿಸುವಂತಹ ಸಾಹಸಗಳು, ಅಮೆರಿಕನ್ ಸ್ಪೀಡ್ ವೀಲ್, ಡಬಲ್ ರಿಂಗ್ ಅಕ್ರೋಬ್ಯಾಟ್, ಪೀಕಾಕ್…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿರುವ ಎಲ್ಲಾ ಕೆರೆಗಳ ಸರ್ವೆ ನಂ ಸಹಿತ ಸಮಗ್ರ ವರದಿಯನ್ನು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸರ್ವೆ, ಒತ್ತುವರಿ, ತೆರವು ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ಒಟ್ಟು ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಾಗಿರುವ ಕೆರೆಗಳನ್ನು ಕೂಡಲೇ ತೆರವುಗೊಳಿಸಿ ಅವುಗಳನ್ನು ಸಂರಕ್ಷಣೆ ಮಾಡಲು ಸಂಬಂಧಿಸಿದ ಇಲಾಖೆಗಳು ತಕ್ಷಣ ಕ್ರಮಕೈಗೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಬೇಕು ಎಂದ ಅವರು ಕೆರೆಗಳ ಸ್ಥಿತಿಗತಿಗಳು ಸೇರಿದಂತೆ ಅಲ್ಲಿನ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಎರಡು-ಮೂರು ದಿನಗಳಲ್ಲಿ ವರದಿಯನ್ನು ನೀಡಬೇಕು ಎಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿದರು. ಕೆರೆಗಳ ಅಪೆಕ್ಸ್ ಸಮಿತಿಯಲ್ಲಿರುವ ಎಲ್ಲ ಜಿಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಈ…
ಚಿಕ್ಕಮಗಳೂರು: ೨೦೨೩-೨೪ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ತರೀಕೆರೆ ತಾಲ್ಲೂಕು ಪಂಚಾಯಿತಿ, ಬರಗೇನಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ಬಿಂತ್ರವಳ್ಳಿ ಗ್ರಾಮ ಪಂಚಾಯಿತಿಯ ವೈಯಕ್ತಿಕ ಫಲಾನುಭವಿ ಹೊನ್ನಮ್ಮ ಅವರಿಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಫೆ.೫ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ರಿಜ್ವಾನ್ ಅರ್ಷದ್, ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೀರ್ತನಾ ಎಚ್.ಎಸ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣ ನಾಯ್ಕ್, ಪಂಚಾಯತ್…
ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದಕ್ಕೆ ಸಣ್ಣ ಮಕ್ಕಳು, ಯುವತಿಯರು, ಹೆಣ್ಣು ಮಕ್ಕಳು ಬಲಿಪಶು ಆಗುತ್ತಿರುವುದು ಅತ್ಯಂತ ಕಳವಳಕಾರಿ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಿಕ್ಕಮಗಳೂರು ಹಾಗೂ ಪರಿವರ್ತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಶಿರಾಳಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ತಾಲ್ಲೂಕು ಪಂಚಾಯಿತಿ ಡಾ. ಅಂಬೇಡ್ಕರ್ ಸಭಾಂಗಣದಲ್ಲಿ ಮಾನವ ಕಳ್ಳ ಸಾಗಣಿಕೆಯ ಮಜಲುಗಳ ಅರಿವು ಕುರಿತು ಒಂದು ದಿನದ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಹೇಳಿದರು. ವಿವಿಧ ಆಮಿಷಗಳಿಗೆ ಒಳಗಾಗಿ ಮೋಸದ ಬಲೆಗೆ ತುತ್ತಾಗಿ ಶೋಷಿತರಾಗುವುದನ್ನು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾಗಬೇಕು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾದಾಗ…
ಚಿಕ್ಕಮಗಳೂರು: ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಮಲಾಕ್ಷಿ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರವೀಶ್ ಘೋಷಿಸಿದರು. ನಂತರ ನಡೆದ ಅಭಿನಂದನೆ ಸಮಾರಂಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ ಪಂಚಾಯಿತಿಯ ಸದಸ್ಯರು ಹಾಗೂ ಮಾಜಿ ಶಾಸಕರು ನಗರಕ್ಕೆ ಹೊಂದಿಕೊಂಡಿರುವ ಅಲ್ಲಂಪುರ ಗ್ರಾಮ ಪಂಚಾಯಿತಿ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಇದೀಗ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮದ ಸಾರ್ವಜನಿಕರ ಸಹಮತವನ್ನು ಪಡೆದು ಪ್ರತಿಯೊಬ್ಬರ ಕುಂದು ಕೊರತೆಗಳನ್ನು ಆಲಿಸಿ ಸ್ಪಂಧಿಸುವುದರ ಜೊತೆಗೆ ಪಂಚಾಯಿತಿಯ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು. ಅಲ್ಲಂಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ಕಮಲಾಕ್ಷಿ ಸೋಮಶೇಖರ್ ಮಾತನಾಡಿ ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿರುವ ಪ್ರತಿಯೊಬ್ಬ ಸದಸ್ಯರಿಗೂ ಹಾಗೂ ಗ್ರಾಮಸ್ಥರಿಗೂ ವಿದೇಯಳಾಗಿರುತ್ತೇನೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪ, ಹಾಗೂ ಸ್ವಚ್ಚತೆ ಸೇರಿದಂತೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ…
ಚಿಕ್ಕಮಗಳೂರು: : ಇಲ್ಲಿನ ಕರ್ತಿಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಪುಟ್ಟಸ್ವಾಮಿ ಶೆಟ್ಟಿ ಅವಿರೋಧ ಆಯ್ಕೆಯಾದರು. ಇಂದು ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಪುಟ್ಟಸ್ವಾಮಿ ಶೆಟ್ಟಿ ಅವರು ನಾಮಪತ್ರ ಸಲ್ಲಿಸಿದ್ದು, ಉಳಿದಂತೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಶೆಟ್ಟಿ ಅವರನ್ನು ಕರ್ತಿಕೆರೆ ಗ್ರಾ.ಪಂ ಉಪಾಧ್ಯಕ್ಷರಾಗಿ ಚುನಾವಣಾಧಿಕಾರಿಯಾಗಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಘೋಷಣೆ ಮಾಡಿದರು. ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಕೋಟೆ ರಂಗನಾಥ್ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ಬೀದಿದೀಪ, ಸ್ವಚ್ಚತೆ ಸೇರಿದಂತೆ ಇನ್ನೂ ಮುಂತಾದ ಮೂಲಭೂತ ಸಮಸ್ಯೆಗಳನ್ನು ಈಡೇರಿಸಲು ಅಧ್ಯಕ್ಷರು, ಉಪಾಧ್ಯಕ್ಷರು ಮುಂದಾಗಬೇಕೆಂದು ಕಿವಿಮಾತು ಹೇಳಿದರು. ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್ ಮಾತನಾಡಿ, ಹಿರಿಯ ಸದಸ್ಯರಾಗಿರುವ ಪುಟ್ಟಸ್ವಾಮಿ ಶೆಟ್ಟಿಯವರು ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಅಭಿನಂದಿಸಿ ಅವರು, ಎಲ್ಲರನ್ನೂ ವಿಶ್ವಾಸಕ್ಕೆ ಪಂಚಾಯಿತಿ ಅಭಿವೃದ್ಧಿಪಡಿಸಲು ಆಧ್ಯತೆ ನೀಡಬೇಕೆಂದು ಸಲಹೆ ನೀಡಿದರು. ಎಸ್‌ಸಿ ಮೋರ್ಚಾ…
ಚಿಕ್ಕಮಗಳೂರು:: ಟ್ಯಾಕ್ಸಿ ಮತ್ತಿತರ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಜೀವದ ಜವಾಬ್ದಾರಿ ಚಾಲಕನ ಮೇಲಿರುತ್ತದೆ. ಈ ಜವಾಬ್ದಾರಿಯನ್ನು ಎಲ್ಲರು ಚಾಚು ತಪ್ಪದೆ ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ.ಮೋಹನ್‌ಕುಮಾರ್ ಹೇಳಿದರು. ಜಿಲ್ಲಾಡಳಿತ, ಸಾರಿಗೆ ಇಲಾಖೆ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಗರದ ಸರಕಾರಿ ನೌಕರರ ಭವನದಲ್ಲಿ ೩೬ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಇಂದು ಏರ್ಪಡಿಸಿದ್ದ ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಾಲಕರಲ್ಲಿ ಬಿಡುವಿನ ವೇಳೆ ಒಂದಷ್ಟು ಸಮಯ ಸಿಗುತ್ತದೆ. ಆ ವೇಳೆ. ಪಾನ್, ಟೊಬೆಕೋ, ಬೀಡಿ ಸಿಗರೇಟ್, ಮದ್ಯಪಾನದಂತಹ ಹವ್ಯಾಸಗಳನ್ನು ಬಿಟ್ಟು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಪ್ರತಿ ಕಾಯಿಲೆಗಳಿಗೆ ಔಷಧಗಳು ಬಂದಿರಬಹುದು. ಆದರೆ, ಅಪಘಾತ ತಡೆಗಟ್ಟಲು ಸದಾ ಎಚ್ಚರವಾಗಿರುವುದೇ ಮದ್ದು. ಕೆಟ್ಟ ಹವ್ಯಾಸಗಳ ಜತೆ ಮೊಬೈಲ್ ಬಳಕೆ ಕಡಿಮೆ ಮಾಡಿದಲ್ಲಿ ಹಲವು ಅಪಘಾತ ತಡೆಯಬಹುದು ಎಂದು ತಿಳಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಕೇಶ್‌ಕುಮಾರ್ ಮಾತನಾಡಿ, ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಹಿನ್ನೆಲೆಯಲ್ಲಿ…
ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ನಗರವನ್ನು ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು. ಅವರು ಇಂದು ನಗರದ ಕೋಟೆ ಬಡಾವಣೆ ಬೇಲೂರು ರಸ್ತೆ ನೂತನ ಬಸ್ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಭಾಗಗಳಲ್ಲಿ ಅತ್ಯುನ್ನತ ಮಾದರಿಯ ೪ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಿಡುಗಡೆಯಾದ ಬಳಿಕ ಕಾಮಗಾರಿಗಳನ್ನು ಆರಂಭಿಸಿ ಮೇ ತಿಂಗಳೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು. ನಗರದ ವಿವಿದೆಡೆ ವಿನೂತನ ಮಾದರಿಯಲ್ಲಿ ಹೊರದೇಶದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದು, ಈ ಬಸ್ ನಿಲ್ದಾಣಗಳನ್ನು ಅತ್ಯಾಧುನಿಕ ರೀತಿಯಲ್ಲಿ ಗ್ಲಾಸ್ ಅಳವಡಿಸಿರುವುದರಿಂದ ಇದು ಸರ್ಕಾರದ ಆಸ್ತಿ ಅಲ್ಲ ಸಾರ್ವಜನಿಕರ ಆಸ್ತಿ ಎಂದು ಭಾವಿಸಿ ಹಾನಿಯಾಗದಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು. ಪಕ್ಷಾತೀತವಾಗಿ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಅಭಿವೃದ್ಧಿಗೆ ಕೈಜೋಡಿಸಿರುವ ಬಗ್ಗೆ ಶ್ಲಾಘನೆ…