Subscribe to Updates
Get the latest creative news from FooBar about art, design and business.
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
- ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
Author: chikkamagalur express
ಚಿಕ್ಕಮಗಳೂರು: ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗ ಪುರುಷ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಕುವೆಂಪು ಕಲಾ ಮಂದಿರದ ಹೇಮಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ ಎಂದ ಅವರು ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಮುನ್ನೆಡೆಯಬೇಕು ಎಂದು ಹೇಳಿದರು. ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆಯಬೇಕು. ಜೊತೆಗೆ ಸಹಕಾರ ಸಂಘಗಳ ಮೂಲಕ, ಆರ್ಥಿಕ ಚಟುವಟಿಕೆಗಳ ಮೂಲಕ ಸಂಘವನ್ನು ಸ್ಥಾಪಿಸಿಕೊಂಡು ಮುಂದೇ ಬರಲು ಪ್ರಯತ್ನಿಸಬೇಕು. ಸವಿತಾ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಸಾಹಿತಿ ಬಿ. ತಿಪ್ಪೇರುದ್ರಪ್ಪ ಅವರು ಉಪನ್ಯಾಸ ನೀಡಿ ಪೌರಣಿಕ…
ಚಿಕ್ಕಮಗಳೂರು: ರಾಜನೀತಿಯೊಂದಿಗೆ ಧರ್ಮನೀತಿ ಸಮ್ಮಿಲನವಾದಾಗ ದೇಶದಲ್ಲಿ ಶಾಂತಿ-ಸುಸಂಸ್ಕೃತವಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಇಲ್ಲಿನ ತೇರಾಪಂಥ್ ಭವನದಲ್ಲಿ ತೇರಾಪಂಥ್ ಸಭಾ ವತಿಯಿಂದ ಏರ್ಪಡಿಸಲಾಗಿದ್ದ ತೇರಾಪಂಥ್ ಧರ್ಮಸಂಘದ ೧೬೧ನೇ ಮರ್ಯಾದ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಭಾರತ ದೇಶದಲ್ಲಿ ಚಾರ್ತುಮಾಸ ಪೂಜೆ ಮಾಡುವ ಮೂಲಕ ಹಿಂದೆ ರಾಜರ ಕಾಲದಲ್ಲಿ ಧರ್ಮನೀತಿ ಅಳವಡಿಸಿಕೊಳ್ಳುತ್ತಿದ್ದರು ಎಂದು ಹೇಳಿದರು. ಭಾರತ ದೇಶದಲ್ಲಿ ಸುಮಾರು ೮೦೦ ಕ್ಕೂ ಹೆಚ್ಚು ಸಾಧು-ಸಾಧ್ವಿಗಳನ್ನು ಹೊಂದಿರುವ ಜೈನ ಸಮಾಜದಲ್ಲಿ ಆಚಾರ್ಯರು ಚಾತುರ್ಮಾಸ ಪೂಜೆ ಮಾಡಲು ದಿನಾಂಕ ನಿಗಧಿ ಮಾಡುವ ಇಂದು ಶುಭದಿನವಾಗಿದೆ ಎಂದು ಎಲ್ಲಾ ಜೈನ್ ಸಮುದಾಯದ ಬಾಂಧವರಿಗೆ ಶುಭಾಶಯ ಕೋರಿದರು. ಅಹಿಂಸಾತ್ಮಕವಾದ ಪವಿತ್ರ ಜೈನ ಧರ್ಮವಾಗಿದ್ದು, ಅವರ ಊಟ-ಉಪಹಾರ ಸಂಪೂರ್ಣ ಸಸ್ಯಹಾರಿಯಾಗಿದ್ದು, ಹಿಂಸೆಯ ಮಾರ್ಗವನ್ನು ದೂರವಿರಿಸಿ ನಡೆಯುತ್ತಿರುವ ಜೈನ್ ಸಮಾಜದ ಆಚಾರ-ವಿಚಾರಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಹೂವಿನೊಂದಿಗೆ ನಾರು ಸ್ವರ್ಗಕ್ಕೆ ಹೋದಂತೆ ಜೈನ್ ಸಮಾಜದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಆಶೀರ್ವಚನ ಮತ್ತು ಆಶೀರ್ವಾದ…
ಚಿಕ್ಕಮಗಳೂರು: ಕ್ರೀಡಾಕೂಟದಲ್ಲಿ ಭಾಗವವಿಸುವುದರಿಂದ ಕ್ರಿಯಾಶೀಲತೆಯ ಜೊತೆಗೆ ಸಮಾಜದಲ್ಲಿ ಇತರರೊಂದಿಗೆ ಪರಸ್ಪರ ಸೌಹಾರ್ದತೆ ಹೆಚ್ಚಿಸುತ್ತದೆ ಎಂದು ವಾಣಿಜ್ಯ ತೆರಿಗೆ ಆಯುಕ್ತರಾದ ಟಿ.ಕೆ ಸುನಿಲ್ ಕುಮಾರ್ ಹೇಳಿದರು. ಜಿಲ್ಲಾ ಆದಾಯ ಮತ್ತು ತೆರಿಗೆ ಸಲಹೆಗಾರರ ಸಂಘದ ವತಿಯಿಂದ ನಗರದ ಎಐಟಿ ಕಾಲೇಜಿನ ಬಿಜಿಎಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೈಹಿಕ ಮತ್ತು ಮಾನಸಿಕ ಅರೋಗ್ಯವನ್ನು ಸುಸ್ಥಿತಿಯಲ್ಲಿರಿಸಿಕೊಳ್ಳಲು ಕ್ರೀಡೆಯು ಉತ್ತಮ ಮಾರ್ಗವಾಗಿದೆ ಪ್ರತಿಯೊಬ್ಬರೂ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರೋಗ್ಯಯುತ ಜೀವನ ನಿರ್ವಹಿಸಿ ಎಂದರು. ಆದಾಯ ತೆರಿಗೆ ಅಧಿಕಾರಿ ಕೆ.ಯು ಪ್ರವೀಣ್‌ಮಾತನಾಡಿ ಅಧಿಕಾರಿಗಳು ಕೆಲಸದ ಒತ್ತಡದಿಂದ ಹೊರಬರಲು ಪ್ರತಿನಿತ್ಯ ಕ್ರೀಡಾಭ್ಯಾಸ ಮಾಡಬೇಕು ಕ್ರೀಡೆಯಲ್ಲಿ ಗೆಲುವು ಸೋಲು ಮುಖ್ಯವಲ್ಲ ಭಾಗವಿಹಿಸುವಿಕೆ ಮುಖ್ಯ ಎಂದರು. ಜಿಲ್ಲಾ ಆದಾಯ ಮತ್ತು ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷೆ ಶ್ಯಾಮಲಾ ಎಂ ರಾವ್ ಮಾತನಾಡಿ ಕ್ರೀಡೆಯಿಂದ ದೇಹ ಮತ್ತು ಮನಸ್ಸನ್ನು ಸಧೃಡವಾಗಿರಿಸಿಕೊಂಡು ಆರೋಗ್ಯವಂತರಾಗಿರಬಹುದು. ಆಡಿಟರ್ಸ್ ಅಸೋಶಿಯೆಷನ್ ವತಿಯಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು ಕ್ರೀಡಾಪಟುಗಳ ಉತ್ಸಾಹ ಮತ್ತು…
ಚಿಕ್ಕಮಗಳೂರು:ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕರಾಗಿ ಎಂ.ಎಸ್ ಜಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ಷಕೀಲ್‌ಅಹಮದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗರಾಜ್ ಡಿ.ಟಿ. ಘೋಷಿಸಿದರು ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸಮಾಜ ಸೇವಕರಾದ ಮೈಲಿಮನೆ ಪೂರ್ಣೆಶ್ ಅಭಿನಂದಿಸಿ ಮಾತನಾಡಿ ರೈತರ ಸಮಸ್ಯೆಗಳಿಗೆ ಸ್ಪಂಧಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಿಸುತ್ತಾರೆಂಬ ಬಹಳ ನಿರೀಕ್ಷೆ ಇದೆ ಎಂದ ಅವರು ತಮ್ಮ ಆಡಳಿಯ ಅವದಿಯಲ್ಲಿ ಹೆಚ್ಚು ಪರೋಪಕಾರಿ ಕಾರ್ಯಗಳನ್ನು ನಿರ್ವಹಿಸಲಿ ಎಂದು ತಿಳಿಸಿದರು. ಸಹಕಾರ ಸಂಘದ ವತಿಯಿಂದ ಕೃಷಿಕರಿಗೆ ವ್ಯಾಪಾರಸ್ಥರಿಗೆ ಮತ್ತು ವಾಹನ ಸಾಲವನ್ನು ವಿತರಿಸಲಾಗುತ್ತಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡಿ ಸಂಘದ ಅಭಿವೃದ್ಧಿಯ ಜೊತೆಗೆ ನೀವು ಸಹ ಅಭಿವೃದ್ಧೀ ಹೊಂದಬೇಕೆಂದು ತಿಳಿಸಿದರು. ಮೈಲಿಮನೆ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್‌ಗೌಡ ಮಾತನಾಡಿ ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಕ್ಕೆ ಸುಮಾರು ೧೦೦ ವರ್ಷಗಳ ಇತಿಹಾಸವಿದೆ. ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಉಪಾಧ್ಯಕರುಗಳು ಈ ಸಂಘದ ಬೆಳವಣಿಗೆಗೆ ಸಹಕರಿಸಬೇಕು…
ಚಿಕ್ಕಮಗಳೂರು: ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದು ಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಲಕ್ಯಾ ಹೋಬಳಿ ಸಮೀಪ ಗಾಣದಾಳು ಗ್ರಾಮದಲ್ಲಿ ವಿಶ್ವಬಂಧು ಶ್ರೀ ಮರುಳಸಿದ್ಧೇಶ್ವರ ಸ್ವಾಮಿ ನೂತನ ದೇವಾಲಯ ಪ್ರವೇಶೋತ್ಸವ, ಕುಂಭಾಭಿಷೇಕ, ಕಳಸಾರೋಹಣ ಹಾಗೂ ಧಾರ್ಮಿಕ ಸ ಮಾರಂಭದ ದಿವ್ಯ ಸಾನಿಧ್ಯವಹಿಸಿ ಸೋಮವಾರ ಅವರು ಆರ್ಶೀವಚನ ನೀಡಿದರು. ಭಕ್ತಾಧಿಗಳು ಮತ್ತು ಗ್ರಾಮಸ್ಥರು ದೇವಾಲಯ ನಿರ್ಮಾಣ ಅಥವಾ ಜೀರ್ಣೋದ್ದಾರಕ್ಕೆ ಮುಂದಾದರೆ ಸಾಲದು, ದೈನಂದಿನ ಪೂಜಾಕೈಂಕರ್ಯಗಳಲ್ಲಿ ತಲ್ಲೀನರಾಗಬೇಕು. ಪ್ರಾರ್ಥನೆ, ಪೂಜೆಯ ಜೊತೆಗೆ ವೈಮ ನಸ್ಸಿನ ಕೆಡಕನ್ನು ತೊಡೆದು, ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಾಗಿದರೆ ದೇವಾಲಯ ನಿರ್ಮಾಣಗೊಂ ಡಿದ್ದಕ್ಕೆ ಸಾರ್ಥಕವಾದಂತೆ ಎಂದು ತಿಳಿಸಿದರು. ಶ್ರೀ ಮರುಳಸಿದ್ದೇಶ್ವರರು ಹಾಗೂ ಬಸವಣ್ಣನವರ ಒಂದೇ ಕಾಲದಲ್ಲಿ ಜೀವಿಸಿದವರು. ಶೋಷಿತರ ಧ್ವನಿ ಯಾಗಿ ಮತ್ತು ಸಂಸ್ಕೃತಿ, ಸಂಪ್ರದಾಯದ ಅಂಕುಡೊಂಕುಗಳನ್ನು ತಿದ್ದಲು ಇಡೀ ಜೀವನವನ್ನೆ ಸಮಾಜಕ್ಕಾಗಿ ಮುಡಿಪಿಟ್ಟ…
ಚಿಕ್ಕಮಗಳೂರು: ನಾಡು-ನುಡಿ ಕಟ್ಟುವಲ್ಲಿ ಸಾಹಿತ್ಯ ರಚನೆಯಷ್ಟೇ, ಹೋರಾಟ ಮತ್ತು ಸಂಘಟನೆಯೂ ಮುಖ್ಯ ಎಂದು ಸಾಹಿತಿ ಡಾ. ಬೆಳವಾಡಿ ಮಂಜುನಾಥ ಹೇಳಿದರು. ಕರ್ನಾಟಕ ವಿಕಾಸ ರಂಗದ ಜಿಲ್ಲಾ ಘಟಕ ನಗರದ ರಾಮನಹಳ್ಳಿಯ ಗುರುವೇಶ್ ಅವರ ಮನೆಯಂಗಳದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡಕ್ಕಾಗಿ ದುಡಿದವರು ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಒಂದು ಭಾಷೆಯನ್ನು ಉಳಿಸಿಕೊಳ್ಳುವುದು ಎಂದರೆ ಅದರ ಬಳಕೆ ಮತ್ತು ಅದಕ್ಕೆ ಧಕ್ಕೆಯಾದಾಗ ಹೋರಾಟ ಮಾಡಿ ರಕ್ಷಿಸುವುದಾಗಿದೆ. ಅದಕ್ಕೆ ಪೂರಕವಾದುದು ಸಂಘಟನೆ. ಅದರಿಂದ ಸಂಸ್ಕೃತಿಯೂ ಉಳಿಯುತ್ತದೆ. ಇಂಥ ಕಾರ್ಯಗಳು ಎಲ್ಲಾ ಸ್ತರದ ಜನರಿಂದ ಸಾಧ್ಯವಾಗುವಂಥದ್ದು. ಇದರಲ್ಲಿ ಶ್ರೀಸಾಮಾನ್ಯರ ಪಾತ್ರವೇ ಮಹತ್ವದ್ದು ಎಂದರು. ಸಾಹಿತ್ಯ ರಚನೆ ಬೌದ್ಧಿಕ ಕೆಲಸವಾದರೆ, ಸಂಘಟನೆ ಮತ್ತು ಹೋರಾಟ ಭೌತಿಕ ಕೆಲಸ. ಇದರಲ್ಲಿ ಸಮೂಹ ಪ್ರಜ್ಞೆ ಕ್ರಿಯಾಶೀಲವಾಗಿ ನಾಯಕತ್ವ ಮತ್ತು ಕಟ್ಟಾಳುಗಳನ್ನು ಬಯಸುತ್ತದೆ. ನಮ್ಮಲ್ಲಿ ಹಲವು ಬಗೆಯ ಚಳವಳಿಗಳು ನಡೆದಿವೆ. ಭಾಷಾವಾರು ಪ್ರಾಂತ್ಯ ವಿಂಗಡಣೆಯಿಂದ ಮೊದಲ್ಗೊಂಡು ಕರ್ನಾಟಕ ಏಕೀಕರಣದವರಗಿನ ಹೋರಾಟ ಒಂದು ಬಗೆಯದಾದರೆ ಅನಂತರದ್ದು ಮತ್ತೊಂದು ಬಗೆಯದು. ಅದರಲ್ಲಿ ಗಡಿ,…
ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ. ‘ಬಾಯ್ಸ್ V/S ಗರ್ಲ್ಸ್’ ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಹೆಸರಾಗಿರುವ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ V/S ಗರ್ಲ್ಸ್’ ಒಂದು ರೋಮಾಂಚಕ ಗೇಮ್ ಶೋ. ಹುಡುಗ ಮತ್ತು ಹುಡುಗಿಯರ ಗುಂಪುಗಳು ಜಿದ್ದಾಜಿದ್ದಿಗೆ ಬಿದ್ದು ನೋಡುಗರ ಬಿಸಿ ಏರಿಸುವ ಆಟದ ಶೋ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಅನ್ನು ಹೊತ್ತು ತರಲಿದೆ. ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ.…
ಚಿಕ್ಕಮಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆ, ಜ್ಞಾಪಕಶಕ್ತಿ ಹಾ ಗೂ ಆತ್ಮವಿಶ್ವಾಸದಿಂದ ಕೂಡಿದ್ದರೆ ಮಾತ್ರ ನಿಗಧಿತ ಅಂಕಗಳಿಸುವ ಮೂಲಕ ತೇರ್ಗಡೆ ಹೊಂದಬಹುದು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು. ನಗರದ ಎಐಟಿ ಕಾಲೇಜಿನ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ವಿಜಯಂಗಮ ಕಾರ್ಯಕ್ರಮ ಪ್ರಯುಕ್ತ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಮತ್ತು ಪರೀಕ್ಷಾ ಸಿದ್ಧತೆ ಕಾರ್ಯಾಗಾರದ ಅಧ್ಯ ಕ್ಷತೆ ವಹಿಸಿ ಭಾನವಾರ ಅವರು ಮಾತನಾಡಿದರು. ಅಂತಿಮ ಪರೀಕ್ಷೆಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಆತಂಕ, ಭಯ ಎನ್ನುವುದು ಸಹಜ. ಕಲಿತಂಥ ವಿದ್ಯೆ ಹಾಗೂ ತುಂಬು ಮನಸ್ಸಿನಿಂದ ಪರೀಕ್ಷೆ ಎದುರಿಸಿದರೆ ಪ್ರಶ್ನೆಗಳಿಗೆ ಸಲೀಸಾಗಿ ಉತ್ತರ ಬರೆಯಬಹುದು. ಹೀ ಗಾಗಿ ಪರೀಕ್ಷಾ ಕೊಠಡಿಗಳಲ್ಲಿ ಎಲ್ಲಾ ಭಯವನ್ನು ಬಿಟ್ಟು ಮುಕ್ತವಾಗಿರಬೇಕು ಎಂದು ತಿಳಿಸಿದರು. ಅಧಿಕ ಅಂಕ ಗಳಿಸಲು ಕೆಲವರು ದಿನವೀಡಿ ಓದುವ ಹವ್ಯಾಸ ರೂಢಿಸಿಕೊಳ್ಳುತ್ತಾರೆ. ಆದರೆ ಪರೀಕ್ಷೆ ವೇಳೆಯಲ್ಲಿ ಜ್ಞಾಪಕಶಕ್ತಿ ಕುಂದಲಿವೆ. ಹೀಗಾಗಿ ಕನಿಷ್ಟ ಐದಾರು ಗಂಟೆಗಳ ಪಠ್ಯವನ್ನು ಅಭ್ಯಾಸಿಸುವ ಮೂ ಲಕ ಮನದಟ್ಟು ಮಾಡಿಕೊಳ್ಳಬೇಕು. ಇದರಿಂದಾಗಿ ಪರೀಕ್ಷೆ ಎದುರಿಸುವ…