Author: chikkamagalur express

ಚಿಕ್ಕಮಗಳೂರು: ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿ ಆಯೋಜಿಸುವ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜನವರಿ ೩೦ರಿಂದ ಫೆಬ್ರವರಿ ೧೩ರ ವರೆಗೆ ಪ್ರತಿ ವಷ?ದಂತೆ ಈ ವ?ವು ಗುಣಾತ್ಮಕವಾಗಿ ಆಚರಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನ ಹೆಚ್.ಎಸ್ ಹೇಳಿದರು. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂದು ಮಾಹಿತಿ ಶಿಕ್ಷಣ ಸಂಪರ್ಕ ಭಿತ್ತಿ ಚಿತ್ರವನ್ನು ಬಿಡುಗಡೆ ಮಾಡುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಆಂದೋಲನದ ಉದ್ಧೇಶ ಹಾಗೂ ಮಾಹಿತಿಯನ್ನು ಜಿಲ್ಲೆಯ ಪ್ರತಿಯೊಬ್ಬ ಸಾರ್ವಜನಿಕರಿಗೆ ತಲುಪಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು ಈ ಸಂದರ್ಭದಲ್ಲಿ ಮಾತನಾಡಿ ಕುಷ್ಠರೋಗವು ಮೈಕೋಬ್ಯಾಕ್ಟಿರಿಯಂ ಲೆಪ್ರೆ ಎಂಬ ಬ್ಯಾಕ್ಟಿರಿಯಾದಿಂದ ಹರಡುವ ಸೋಂಕು ರೋಗವಾಗಿದ್ದು, ಆರೋಗ್ಯ ಇಲಾಖೆ ವತಿಯಿಂದ ಉಚಿತವಾಗಿ ನೀಡಲಾಗುವ ಬಹು ಔಷದ ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದೆ. ಇದು ಚರ್ಮ ಮತ್ತು ನರಕ್ಕೆ ಸಂಬಂಧಿಸಿದ ಕಾಯಿಲೆಯಾಗಿದ್ದು ಚಿಕಿತ್ಸೆ ಪಡೆಯದೆ ಉದಾಸಿನ ಮಾಡಿದಲ್ಲಿ ಅಂಗವಿಕಲತೆ ಮತ್ತು…

Read More

ಚಿಕ್ಕಮಗಳೂರು: ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಶನಿವಾರ ಜಿಲ್ಲಾಡಳಿತದೆದುರು ಶರಣಾಗತನಾಗಿದ್ದಾನೆ. ನಕ್ಸಲ್ ಶರಣಾಗತಿ ಪ್ರಕ್ರಿಯೆಯ ನೋಡಲ್ ಅಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ಮತ್ತು ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸದಸ್ಯ ಶ್ರೀಪಾಲ್ ಇತರರು ನಕ್ಸಲ್ ರವೀಂದ್ರನನ್ನು ಶೃಂಗೇರಿಯ ನೆಮ್ಮಾರಿನಿಂದ ಶನಿವಾರ ಬೆಳಗ್ಗೆ ಕರೆ ತಂದರು. ಮಧ್ಯಾಹ್ನ ೧ ಗಂಟೆ ಸುಮಾರಿಗೆ ನಗರಕ್ಕಾಗಮಿಸಿದ ಅವರನ್ನು ನೇರವಾಗಿ ಜಿಲ್ಲಾ ಪೊಲೀಸ್ ಕಚೇರಿಗೆ ಕರೆತಂದು ಎಸ್ಪಿ ಡಾ.ವಿಕ್ರಮ ಅಮಟೆ ಅವರ ಎದುರು ಹಾಜರುಪಡಿಸಲಾಯಿತು. ನಂತರ ಅವರನ್ನು ನಕ್ಸಲ್ ಶರಣಾಗತಿ ಸಮಿತಿ ಜಿಲ್ಲಾ ಅಧ್ಯಕ್ಷರಾದ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜು ಅವರ ಎದುರು ಹಾಜರುಪಡಿಸಲಾಯಿತು. ಈ ವೇಳೆ ಶರಣಾಗತಿ ಸಮಿತಿಯ ಸದಸ್ಯರುಗಳಾದ ಜಿ.ಪಂ. ಸಿಇಓ ಎಚ್.ಎಸ್.ಕೀರ್ತನಾ ಮತ್ತು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಇದ್ದರು. ನಂತರ ನಕ್ಸಲ್ ರವೀಂದ್ರನನ್ನು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿವೈಎಸ್‌ಪಿ ಶೈಲೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ರವೀಂದ್ರನನ್ನು ಶೃಂಗೇರಿ ಜೆಎಂಎಫ್‌ಸಿ ನ್ಯಾಯಾಲಯದ…

Read More

ಚಿಕ್ಕಮಗಳೂರು: ಗೋಮಾಳ ಜಾಗಗಳನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವುದು ಸೇರಿದಂತೆ ಹಣ ದುರುಪಯೋಗ, ಇನ್ನಿತರೆ ಅವ್ಯವಹಾರಗಳ ಬಗ್ಗೆ ತಾವು ಹೋರಾಟ ನಡೆಸಿದ ಪರಿಣಾಮವಾಗಿ ಚಿಕ್ಕಮಗಳೂರು ತಾಲ್ಲೂಕು ಹರಿಹರದಳ್ಳಿ ಗ್ರಾ.ಪಂ.ನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅವರು ಅಮಾನತುಗೊಂಡಿದ್ದಾರೆ ಎಂದು ಮಾಹಿತಿ ಹಕ್ಕು ಹೋರಾಟಗಾರ ಸಿ.ಎನ್.ದೇವರಾಜ್ ಅರಸ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಾನತುಗೊಂಡಿರುವ ಪಿ.ಲಕ್ಷ್ಮಣ್ ಅವರು ಈ ಹಿಂದೆ ತೇಗೂರು ಗ್ರಾ.ಪಂ.ನಲ್ಲಿ ಕರ್ತವ್ಯ ನಿರ್ವಹಿಸುವಾಗ ಕಂದಾಯ ಇಲಾಖೆಗೆ ಸೇರಿದ ಗೋಮಾಳದ ಜಾಗಗಳನ್ನು ಖಾಸಗಿಯವರಿಗೆ ಅಕ್ರಮವಾಗಿ ಖಾತೆ ಮಾಡಿಸಿಕೊಟ್ಟಿದ್ದಾರೆ. ಅಲ್ಲದೆ ಕೆಎಟಿ ಆದೇಶದ ಪ್ರಕಾರ ಅವರು ಹರಿಹರದಳ್ಳಿ ಗ್ರಾ.ಪಂ.ನಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದ್ದರೂ ತಮ್ಮ ಅಕ್ರಮವನ್ನು ಮುಂದುವರಿಸುವ ಸಲುವಾಗಿ ಪ್ರಭಾವಿಗಳಿಂದ ಮೇಲಾಧಿಕಾರಿಗಳಿಗೆ ಒತ್ತಡ ತಂದು ತೇಗೂರಿನಲ್ಲೇ ಮುಂದುವರಿದಿದ್ದರು. ಈ ಅಕ್ರಮಗಳ ವಿರುದ್ಧ ನಾವು ಹೋರಾಟ ನಡೆಸಿದ್ದೆವು ಎಂದು ಹೇಳಿದರು. ಈ ಬಗ್ಗೆ ಜಿ.ಪಂ. ಸಿಇಓ ಸೇರಿದಂತೆ ರಾಜ್ಯ ಸರ್ಕಾರದ ಪಂಚಾಯಿತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ…

Read More

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಬಜೆಟ್ ಪೂರ್ವ ಸಭೆಯಲ್ಲಿ ಅಕ್ಷರದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಟ ವೇತನ ೧೫ ಸಾವಿರ ರೂ ನಿಗಧಿಗೊಳಿಸುವಂತೆ ಒತ್ತಾಯಿಸಿ ಫೆ.೨೧ ರಿಂದ ಜಿಲ್ಲೆಯಾದ್ಯಂತ ಬಿಸಿಯೂಟ ಬಂದ್‌ಗೊಳಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಅಕ್ಷರದಾಸೋಹ ಬಿಸಿಯೂಟ ಕಾರ್ಯಕರ್ತೆಯರ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಇಂದಿನ ಬೆಲೆ ಏರಿಕೆಗೆ ತಕ್ಕಂತೆ ಸುಮಾರು ೭ ಗಂಟೆಗಳ ಕಾಲ ದುಡಿಯುತ್ತಿರುವ ಕಾರ್ಯಕರ್ತೆಯರಿಗೆ ಫೆ.೪ ರಂದು ನಡೆಯಲಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ವೇತನ ನಿಗಧಿಗೊಳಿಸುವಂತೆ ಆಗ್ರಹಿಸಿದರು. ಕಳೆದ ೨೩ ವರ್ಷಗಳಿಂದ ರಾಜ್ಯದ ಶಾಲಾ ಮಕ್ಕಳ ಬಿಸಿಯೂಟ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯಿರಿಗೆ ೩೭೦೦ ರೂಗಳನ್ನು ಮಾಸಿಕ ಗೌರವಧನ ನೀಡಲಾಗುತ್ತಿದ್ದು, ಈ ವೇತನದಿಂದ ಜೀವನ ಸಾಗಿಸಲು ಕಷ್ಟಕರವಾಗಿರುತ್ತದೆ. ಜೊತೆಗೆ ಕಳೆದ ೧೦ ವರ್ಷಗಳಿಂದ ಕೇಂದ್ರಸರ್ಕಾರ ತನ್ನ ಪಾಲಿನ ಶೇ.೬೦ ರಷ್ಟು ವೇತನವನ್ನು ನೀಡದೆ ತೊಂದರೆಯಾಗಿದೆ ಎಂದು ಆರೋಪಿಸಿದರು. ಸರ್ಕಾರಗಳು…

Read More

ಚಿಕ್ಕಮಗಳೂರು: ದೇವಾಲಯಗಳನ್ನು ನಿರ್ಮಾಣ ಮಾಡುವುದು ಸುಲಬದ ಕಾರ್ಯವಲ್ಲ ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ತಾಲ್ಲೂಕಿನ ಲಕ್ಯಾ ಹೋಬಳಿಯ ಕೆ.ಬಿ.ಹಾಳ್ ಗ್ರಾಮದಲ್ಲಿ ಇಂದು ಶ್ರೀ ದುರ್ಗಾಬದೇವಿ ನೂತನ ದೇವಾಲಯ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಪೂರ್ವಿಕರು ಆಚರಿಸಿ ಬೆಳಿಸಿಕೊಂಡು ಬಂದಿರುವ ಸಂಸ್ಕಾರಯುತ ಕಾರ್ಯಗಳನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸಿಕೊಡಬೇಕು ಎಂದರು. ಯಾವುದೇ ದೇವಾಲಯಗಳ ನಿರ್ಮಾಣದ ನಂತರ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳೊಂದಿಗೆ ಅದರ ನಿರ್ವಾಹಣೆಯ ಕಾರ್ಯವು ವ್ಯವಸ್ಥಿತವಾಗಿರಬೇಕು. ದೇವಾಲಯಗಳಿಗೆ ತೆರಳಿ ಹೋರ ಬಂದ ಮಾನಸಿಕವಾಗಿ ಶಾಂತಿಯುತವಾಗಿರಲು ಸಾಧ್ಯವಾಗುತ್ತದೆ ಎಂದ ಅವರು ಪ್ರತಿಯೊಬ್ಬರೂ ದೇವರು, ಗುರು ಹಿರಿಯರನ್ನು ಪೂಜಿಸಿ ಗೌರವಿಸುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿ ಎಂದರು. ಸಾಹಿತಿಗಳಾದ ಚಟ್ನಳ್ಳಿ ಮಹೇಶ್ ಧಾರ್ಮಿಕ ಉಪನ್ಯಾಸ ನೀಡಿ ಇತ್ತೀಚಿನ ದಿನಗಳಲ್ಲಿ ಸುಳ್ಳು, ಮೋಸ, ಅನ್ಯಾಯದ ಕೃತ್ಯಗಳು ಹೆಚ್ಚುತ್ತಿದೆ. ಆತ್ಮ ಸಾಕ್ಷಿಯ ಮೂಲಕ…

Read More

ಚಿಕ್ಕಮಗಳೂರು: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎಂ.ಆರ್.ದೇವರಾಜ ಶೆಟ್ಟಿ ಮರು ಆಯ್ಕೆಯಾಗಿದ್ದು, ನೂತನ ಜಿಲ್ಲಾ ಪ್ರತಿನಿಧಿಯಾಗಿ ಕೆ.ಪಿ.ವೆಂಕಟೇಶ್ ಆಯ್ಕೆಯಾಗಿದ್ದಾರೆ. ಬುಧವಾರ ಜಿಲ್ಲಾ ಬಿಪೆಪಿ ಕಚೇರಿ ಪಾಂಚಜನ್ಯದಲ್ಲಿ ನಡೆದ ಚುನಾವಣೆಯಲ್ಲಿ ಸಂಸದರು, ಮಾಜಿ ಶಾಸಕರು, ಕೋರ್ ಕಮಿಟಿ ಸದಸ್ಯರು ಜಿಲ್ಲಾ ಮುಖಂಡರು, ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ಈ ವೇಳೆ ಮಾಜಿ ಸಚಿವ ಡಿ.ಎನ್.ಜೀವರಾಜ್ ಮಾತನಾಡಿ, ಮುಂದೆ ದೇವರಾಜ್ ಶೆಟ್ಟಿ ಅವರ ನೇತೃತ್ವದಲ್ಲೇ ಜಿಲ್ಲೆಯ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವಂತಾಗಲಿ, ಹಾಗೆಯೇ ಈ ಬಾರಿಯೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲೂ ಬಿಜೆಪಿ ಅಧಿಕಾರ ಹಿಡಿಯುವ ಲಕ್ಷಣ ಕಂಡುಬಂದಿದೆ. ಎಲ್ಲಾ ತಾಲ್ಲೂಕುಗಳಲ್ಲಿ ಸಹಕಾರ ಸಂಘಗಳ ಗೆಲುವುಗಳನ್ನು ಆಧರಿಸಿ ಹೇಳುವುದಾದರೆ ಡಿಸಿಸಿ ಬ್ಯಾಂಕ್ ಅಧಿಕಾರ ಮರಳಿ ನಮ್ಮ ಕೈಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ, ಕಾರ್ಯಕರ್ತರು ಯಾವುದೇ ಊಹಾಪೋಹಗಳಿಗೆ ಕವಿಗೊಡದೆ ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ…

Read More

ಚಿಕ್ಕಮಗಳೂರು: ಮನುಷ್ಯನ ಜೀವನದಲ್ಲಿ ಆರೋಗ್ಯವು ಬಹುಮುಖ್ಯ ಪಾತ್ರ ವಹಿಸುತ್ತದೆ. ಉತ್ತಮ ಆರೋಗ್ಯ ಒಂದಿದ್ದರೆ ಏನನ್ನಾದರು ಸಾಧಿಸಬಹುದು ಎಂದು ಕಡೂರು ಪುರಸಭೆ ಅಧ್ಯಕ್ಷರಾದ ಬಂಡಾರಿ ಶ್ರೀನಿವಾಸ್ ಹೇಳಿದರು. ಸಖರಾಯ ಪಟ್ಟಣ ಹೋಬಳಿ ನಾಗೇನಹಳ್ಳಿ ಗ್ರಾಮದ ಶ್ರೀ ಆಂಜನೇಯ ವಿದ್ಯಾ ಸಂಸ್ಥೆ,ಆವರಣದಲ್ಲಿ ರಾಜೀವ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಹಾಸನ ಇವರ ಸಂಯಕ್ತಾಶ್ರಯದಲ್ಲಿ ಕಡೂರಿನ ಮಾಜಿ ಶಾಸಕ ದಿ. ಎನ್.ಕೆ ಹುಚ್ಚಪ್ಪ, ದಿ. ಶಂಕರಮ್ಮ ಹಾಗೂ ದಿ. ಎನ್.ಎಸ್ ಚಂದ್ರಪ್ಪ ಇವರುಗಳ ಸ್ಮರಣಾರ್ಥವಾಗಿ ಉಚಿತ ಬೃಹತ್ ಆರೋಗ್ಯ ತಪಾಸಣೆ ಮತ್ತು ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಬಹು ಮುಖ್ಯವಾಗಿದೆ. ಅನಾರೋಗ್ಯವು ಸಾಧನೆಗೆ ಅಡ್ಡಿಪಡಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿಯಲ್ಲಿನ ಬದಲಾವಣೆಯು ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಪ್ರತಿಯೊಬ್ಬರು ನಮ್ಮ ಸಾಂಸ್ಕೃತಿಕ ಆಹಾರ ಪದ್ಧತಿಯನ್ನು ಅನುಸರಿಸಿ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಿ ಎಂದರು. ನಾವು ದಿನನಿತ್ಯ ಸೇವಿಸುವ ಆಹಾರ ಪದಾರ್ಥಗಳು ವಿವಿಧ ರಾಸಾಯನಿಕಗಳಿಂದ ಕೂಡಿ ವಿಷವಾಗಿ ಹೋಗಿದೆ. ಇವುಳಿಂದ…

Read More