Author: chikkamagalur express

ಚಿಕ್ಕಮಗಳೂರು: ನಮ್ಮ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ವ್ಯವಸ್ಥಿತವಾಗಿ ತಲುಪಿಸುವುದಲ್ಲದೇ ವಿವಿಧ ಯೋಜನೆಗಳನ್ನು ರೂಪಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯದಲ್ಲು ಮುಂದಿದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಬೆಳವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳವಾಡಿ ಗ್ರಾಮದ ರಸ್ತೆ ಮತ್ತು ಮಸೀದಿ ಅಭಿವೃದ್ಧಿಗೆ ಅಲ್ಪ ಸಂಖ್ಯಾತರ ಇಲಾಖೆ ಮತ್ತು ವಕ್ಫ್ ಬೋರ್ಡ್ ಇಲಾಖೆ ವತಿಯಿಂದ ೪೦ ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಿಸಿದ ಯೋಜನೆಗಳು ಎಂದರು ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿಯೋಜನೆ ಹಾಗೂ ಯುವನಿಧಿಯಂತಹ   ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ೬ ತಿಂಗಳುಗಳಲ್ಲಿ ಜಾರಿಗೆ ತಂದು ಮಹಿಳಾ ಸಬಲೀಕರಣದೊಂದಿಗೆ ದೀನ ದಲಿತರನ್ನು ಹಸಿವು ಮುಕ್ತರನ್ನಾಗಿ ಮಾಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸುತ್ತಿದೆ ಎಂದ…

Read More

ಚಿಕ್ಕಮಗಳೂರು: ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಪರಮಪೂಜ್ಯ ಶ್ರೀ ಬಾಲಗಂಗಾಧನಾಥ ಸ್ವಾಮೀಜಿಗಳು ಎಲ್ಲಾ ವರ್ಗದ ಜನರ ತಲೆಗೊಂದು ಮರ ಇರಬೇಕೆಂಬ ಸಂಕಲ್ಪ ಮಾಡಿ ಪರಿಸರ ವನಕ್ರಾಂತಿಯನ್ನು ಮಾಡಿದ್ದರು ಎಂದು ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಹೇಳಿದರು. ಅವರು ಇಂದು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘ ಏರ್ಪಡಿಸಿದ್ದ ಆದಿಚುಂಚನಗಿರಿ ಮಹಾ ಸಂಸ್ಥಾನದ ಜಗದ್ಗುರು ಭೈರವೈಕ್ಯ ಡಾ. ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ೮೦ ನೇ ಜಯಂತ್ಯೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹಿರಿಯ ಪರಮ ಪೂಜ್ಯರ ಹೆಸರಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಕಾರ್ಯ ನಿಜವಾದ ಪುಣ್ಯದ ಕಾರ್ಯ ಎಂದ ಅವರು, ದೇವರು ದೇವಾಲಯಗಳಿಂದ ಮಾತ್ರ ಪುಣ್ಯದ ಕಾರ್ಯ ಅಲ್ಲ, ಸಮಾಜಮುಖಿ ಕಾರ್ಯಗಳಿಂದ ಮಾತ್ರ ಸಾಧ್ಯ ಎಂದರು. ಬಾಲಗಂಗಾಧರನಾಥ ಮಹಾಸ್ವಾಮಿಗಳು ದೇವಸ್ಥಾನ, ದೇವರು ಎಂಬುದಕ್ಕಿಂತ ಹೆಚ್ಚಾಗಿ ಸಮಾಜದಲ್ಲಿನ ಬಡವರು, ದೀನದಲಿತರು, ಅನಾಥರ ಸೇವೆ ಮಾಡಬೇಕೆಂದು ಹೇಳುತ್ತಿದ್ದರು. ಜೊತೆಗೆ…

Read More

ಚಿಕ್ಕಮಗಳೂರು: ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎನ್.ಆರ್. ಚನ್ನಕೇಶವ ಹೇಳಿದರು. ಜಿಲ್ಲಾಡಳಿತ,  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ವತಿಯಿಂದ ಇಂದು ನಗರದ ಬಸವನಹಳ್ಳಿಯ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜಿ(ಪ್ರೌಢಶಾಲಾ ವಿಭಾಗ) ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರು ಅಂದರೆ ನಾವೆಲ್ಲರು, ನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗ ಕ್ಷೇಮದ ದೃಷ್ಟಿಯಲ್ಲಿ ಗ್ರಾಹಕ ಹಕ್ಕುಗಳ ಅವಶ್ಯಕತೆ ಇದೆ. ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯದೇ ಹೋದರೆ ನಮಗೆ ಒಳಿತಿಲ್ಲ, ಗ್ರಾಹಕರ ರಕ್ಷಣೆ ಸಮಾಜದ ಧ್ವನಿಯಾದಾಗ ಮಾತ್ರ ಗ್ರಾಹಕರ ರಕ್ಷಣೆ ಸಾಧ್ಯ. ತಾವು…

Read More

ಚಿಕ್ಕಮಗಳೂರು: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೂಗೂಡಿ ಸ್ಥಳೀಯ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಆಯೋಜಿಸಿದರೆ ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ ಹೇಳಿದರು. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಇಂದು ಬೆಳವಾಡಿ, ಮಾಚೇನಹಳ್ಳಿ ಮತ್ತು ಕೆ.ಬಿ ಹಾಳ್ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ಕಾರವು ಬಡ ಹಾಗೂ ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಹಾಗೂ ಸಮಸ್ಯೆಗಳನ್ನು ಹೊತ್ತು ತರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು. ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ…

Read More

ಚಿಕ್ಕಮಗಳೂರು:  ಅತ್ತಿಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಿಟಕಿ, ಬಾಗಿಲು ಸೇರಿದಂತೆ ಅಗತ್ಯವಿರುವ ವಿವಿಧ ದುರಸ್ಥಿ ಕಾರ್ಯಗಳನ್ನು ನಿರ್ವಹಿಸಿ ಶಾಲೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕೆಂದು ಕಾಂಗ್ರೆಸ್ ಮುಖಂಡರಾದ ಉಪ್ಪಳ್ಳಿ ಭರತ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಾರ್ಜ್ ಅವರಿಗೆ ಮನವಿ ನೀಡಿದರು ನಗರದ ನಗರಸಭೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಜಾಗರ ಹೋಬಳಿ ಅತ್ತಿಗುಂಡಿ ಸ.ಕಿ.ಪ್ರಾ ಶಾಲೆಯು ಮೆಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು ಈಗಾಗಲೇ ಶಾಲೆಯ ಮೇಲ್ಚಾವಣಿ ದುರಸ್ಥಿ ಕಾರ್ಯವು ಪೂರ್ಣಗೊಂಡಿದೆ. ಆದರೆ. ಗಾರೆ, ನೆಲಕ್ಕೆ ಟೈಲ್ಸ್, ಕಿಟಕಿ, ಬಾಗಿಲು ದುರಸ್ಥಿ ಜೊತೆಗೆ ಶಾಲೆಗೆ ಸುಣ್ಣಬಣ್ಣದ ಅವಶ್ಯಕತೆ ಇದೆ ಎಂದರು. ಶಾಲೆಯಲ್ಲಿ ಒಟ್ಟು ೧೧ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಈ ಶಾಲೆಯಲ್ಲಿದ್ದು ಪ್ರತಿಯೊಬ್ಬರಿಗು ಉತ್ತಮ ಶಿಕ್ಷಣ ಕೊಡಿಸಿ ಅವರ ಶೈಕ್ಷಣಿಕ ಬದುಕು ಸಫಲವಾಗೊಳಿಸುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದ ಅವರು ಶೀಘ್ರವಾಗಿ ಶಾಲೆಯ ಎಲ್ಲಾ ದುರಸ್ಥಿ ಕಾರ್ಯವನ್ನು ಕೈಗೊಂಡು ಪೂರ್ಣಗೊಳಿಸಿ ಕಲಿಕೆಗೆ…

Read More

ಚಿಕ್ಕಮಗಳೂರು: ಪಶು, ಪಕ್ಷಿಗಳೊಂದಿಗಿನ ಒಡನಾಟವು ಮಾನಸಿಕ ನೆಮ್ಮದಿಯನ್ನು ನೀಡುತ್ತದೆ. ಪ್ರತಿಯೊಬ್ಬರು ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದಕೀಯ ಸೇವಾ ಇಲಾಖೆ ಚಿಕ್ಕಮಗಳೂರು, ಕರ್ನಾಟಕ ಪಶುವೈದಕೀಯ ಸಂಘ(ರಿ), ಚಿಕ್ಕಮಗಳೂರು ಜಿಲ್ಲೆ ಹಾಗೂ ಚಿಕ್ಕಮಗಳೂರು ಕೆನಲ್ ಕ್ಲಬ್ ವತಿಯಿಂದ ಚೈತ್ರೋತ್ಸವದ ಅಂಗವಾಗಿ ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿಯು ಪ್ರತಿಯೊಂದು ಜೀವಿಗೂ ಆಶ್ರಯ ತಾಣವಾಗಿದೆ. ಪ್ರತಿಯೊಂದು ಜೀವಿಗೂ ಜೀವಿಸುವ ಹಕ್ಕಿದೆ. ಮನುಷ್ಯನ ದುರಾಸೆ ಹಾಗೂ ಸ್ವಾರ್ಥದಿಂದ ಹಲವಾರು ಜೀವಿಗಳು ಅವನತಿ ಹೊಂದುತ್ತಿವೆ. ಇಂತಹ ಸಂದರ್ಭದಲ್ಲಿ ಪ್ರಾಣಿಗಳನ್ನು ಪ್ರೀತಿಸಿ ಅವುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಲ್ಲೂ ಮನುಷ್ಯರಿಗಿಂತ ಪ್ರಾಣಿಗಳ ಮೇಲಿನ ಒಲವು ಹೆಚ್ಚುತ್ತಿದೆ. ಇಂದಿನ ಯುವ ಜನತೆಗೆ ಶ್ವಾನದಲ್ಲಿರುವ ವಿಶೇಷ…

Read More

ಚಿಕ್ಕಮಗಳೂರು: ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿ ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ. ಜಿಲ್ಲೆಯ ಅಭಿವೃದ್ದಿಗೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸ್ವಚ್ಚ ಹಾಗೂ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಜಾರ್ಜ್ ಹೇಳಿದರು. ನಗರ ಸಭೆ ವತಿಯಿಂದ ಇಂದು ನಗರಸ ಸಭೆ ಆವರಣದಲ್ಲಿ ಆಯೋಜಿಸಿದ್ದ ನಗರಸಭೆ ವ್ಯಾಪ್ತಿಯಲ್ಲಿ ೧೫ ನೇ ಹಣಕಾಸು ಯೋಜನೆ ಮತ್ತು ನಗರೋತ್ಥಾನ ಹಂತ-೪ ರ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ಜಿಲ್ಲೆಯಾದ್ಯಂತ ಮಳೆಯಿಂದಾಗಿ ಅನೇಕ ರಸ್ತೆಗಳು ಹದಗೆಟ್ಟಿವೆ. ಇವುಗಳ ದುರಸ್ಥಿಗೆ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಿ ಶೀಘ್ರವಾಗಿ ರಸ್ತೆ ದುರಸ್ಥಿ ಕಾರ್ಯ ಹಾಗೂ ಹೊಸ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು. ಜಿಲ್ಲೆಯು ಪ್ರವಾಸಿ ಸ್ಥಳಗಳಿಗೆ  ಪ್ರಸಿದ್ದವಾಗಿದ್ದು ಜಿಲ್ಲೆಯಲ್ಲಿರುವ ಪ್ರತಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಉತ್ತಮ ವ್ಯವಸ್ಥೆ ಕಲ್ಪಿಸಿ ಜಿಲ್ಲೆಯನ್ನು ಇನಷ್ಟು ಸುಂದರಗೊಳಿಸಲು ಕ್ರಮವಹಿಸಲಾಗಿದೆ ಎಂದ ಅವರು ಸಾರ್ವಜನಿಕರ ಪ್ರತಿ ಅಗತ್ಯತೆಗಳನ್ನು…

Read More