Subscribe to Updates
Get the latest creative news from FooBar about art, design and business.
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
- ಆಷಾಢಲಕ್ಷ್ಮಿ ಜಾತ್ರಾ ಮಹೋತ್ಸವ
- e-paper (15-07-2025) Chikkamagalur Express
- ಶಕ್ತಿ ಯೋಜನೆ ಯಶಸ್ಸಿನಿಂದ ಹೊಸ ಬಸ್ಗಳ ಖರೀದಿ
Author: chikkamagalur express
ಚಿಕ್ಕಮಗಳೂರು: ಸಾರ್ವಜನಿಕರ ದೂರು ಮತ್ತು ಅಹವಾಲುಗಳನ್ನು ಪಂಚಾಯಿತಿ ಮಟ್ಟದಲ್ಲಿ ಸ್ವೀಕರಿಸಿ ಇತ್ಯರ್ಥಪಡಿಸಲು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಆರಂಭಿಸಿರುವ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಭಾನುವಾರ ಏರ್ಪಡಿಸಿದ್ದ ಗಣ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, “ಕಡೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದ್ದ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಮುಂದುವರಿಸಲು ಕ್ರಮ ವಹಿಸಲಾಗಿದೆ”, ಎಂದರು. “ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜತೆಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಉತ್ತಮ ರೀತಿಯಲ್ಲಿ ಸಾಧನೆ ಮಾಡಲಾಗುತ್ತಿದೆ. ನಾಗರಿಕ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸುವ ಸಕಾಲ ಯೋಜನೆಯ ಅನುಷ್ಠಾನದಲ್ಲಿ ನಮ್ಮ ಜಿಲ್ಲೆಯು ಇತ್ತೀಚಿನ ರ‍್ಯಾಂಕ್ ಪಟ್ಟಿಯಲ್ಲಿ…
ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಸುಮ್- ಬಿ ಯೋಜನೆಯಡಿ ರೈತರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್- ಸಿ ಯೋಜನೆಯಡಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳನ್ನು ಸೋಲರೈಸೇಷನ್ ಮಾಡಲಾಗುತ್ತಿದೆ. ಕುಸುಮ್-ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿ ರೈತರಿಗೆ ಪೂರೈಸಲಾಗುತ್ತದೆ”, ಎಂದು ತಿಳಿಸಿದರು. “ರಾಜ್ಯದಲ್ಲಿ ಪ್ರಸ್ತುತ 17,500 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಅದಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಕುಸುಮ್- ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸುವುದು ಮತ್ತು ಕುಸುಮ್-ಸಿ ಯೋಜನೆಯಡಿ ಫೀಡರ್ ಸೋಲರೈಸೇಷನ್…
ಸಿನಿಮಾ ತಾರೆಯರಾದ ಶ್ರುತಿ ಮತ್ತು ಸಪ್ತಮಿ ಗೌಡ ಪರಿಚಯಿಸುವ ಎರಡು ಹೊಸ ಕತೆಗಳು ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜನವರಿ 27ರಂದು ಪ್ರಸಾರವಾಗಲಿವೆ. ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ವಧು ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು…
ಚಿಕ್ಕಮಗಳೂರು: ಭಾರತ ವಿಶ್ವದಲ್ಲೇ ಅತೀ ದೊಡ್ಡ ಹಾಗೂ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಹೇಳಿದರು. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಆಡಳಿತಾತ್ಮಕವಾಗಿ ಭೌಗೋಳಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ವಿಶಿಷ್ಟತೆಯನ್ನು ಹೊಂದಿದ ದೇಶವಾಗಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಲೇ ೧೮ ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯರಿಗೂ ಮತದಾನ ಮಾಡುವ ಹಕ್ಕಿದೆ. ಅದೇ ರೀತಿ ಭಾರತೀಯ ಪ್ರಜೆಗಳು ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಕರ್ತವ್ಯಗಳನ್ನು ತಿಳಿಸಿದೆ ಎಂದು ಹೇಳಿದರು. ಉತ್ತಮ ರಾಜಕೀಯ ವ್ಯವಸ್ಥೆಯನ್ನು ಆಯ್ಕೆ ಮಾಡುವಲ್ಲಿ ಮತದಾನ ಪ್ರಮುಖ ಪಾತ್ರವಹಿಸುತ್ತದೆ. ಪ್ರತಿಯೊಂದು ಮತಕ್ಕೂ ಅಮೂಲ್ಯವಾದ ಮೌಲ್ಯವಿದ್ದು, ಒಂದು ಮತದಿಂದ ಸೋಲು ಗೆಲುವನ್ನು ಕಂಡಿರುವ ಉದಾಹರಣೆಗಳಿವೆ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ…
ಚಿಕ್ಕಮಗಳೂರು: ಸರ್ವರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ಹಾಗೂ ವಿಚಾರ, ಅಭಿವ್ಯಕ್ತಿ ಜೊತೆಗೆ ತಮ್ಮ ಇಚ್ಚೆಯ ಧರ್ಮವನ್ನು ಪಾಲಿಸುವ ಸ್ವಾತಂತ್ರ್ಯವನ್ನು ನೀಡಿ ಸರ್ವೇಜನೋ ಸುಖಿನೋ ಭವಂತು ಎಂದು ಹೇಳುವ ಮಾತಿನ ತಾತ್ವಿಕ ರೂಪವೇ ಭಾರತದ ಸಂವಿಧಾನ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು. ಸಂವಿಧಾನ ಸಮ್ಮಾನ್ ಅಭಿಯಾನದ ಅಂಗವಾಗಿ ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ನಿವಾಸದಲ್ಲಿ ಇಂದು ಆಯೋಜಿಸಿದ್ದ ಭೀಮ ಸಂಗಮ ಕಾರ್ಯಕ್ರಮದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿಕಾಸ್ ಪುತ್ತೂರು ಬರೆದಿರುವ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕವನ್ನು ಬಿಡುಗಡೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಭಾರತವು ಸರ್ವಧರ್ಮಗಳನ್ನು ಹೊಂದಿರುವ ಜಾತ್ಯಾತೀತ ರಾಷ್ಟ್ರ. ಇಲ್ಲಿ ಹಿಂದುಗಳು ಭಗವತ್ ಗೀತೆಯನ್ನು, ಮುಸ್ಲಿಂರು ಕುರಾನ್, ಕ್ರೈಸ್ತರು ಬೈಬಲ್ ಹಾಗೂ ಬೌದ್ಧರು ಧಮ್ಮವನ್ನು ಸೇರಿದಂತೆ ಎಲ್ಲ ಧರ್ಮಿಯರು ತಮ್ಮ ತಮ್ಮ ಧರ್ಮಗ್ರಂಥಗಳನ್ನು ಓದಿ ಅನುಸರಿಸುತ್ತಾರೆ. ಆದರೆ ಸರ್ವ…
ಚಿಕ್ಕಮಗಳೂರು: ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು. ಪ್ರತಿಯೊಬ್ಬರು ಶಿಕ್ಷಣವಂತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ವಿಭಾಗ ಹಾಗೂ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಚಿಕ್ಕಮಗಳುರು ಇವರ ವತಿಯಿಂದ ನಗರದ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಚ್ಚು ಮಕ್ಕಳ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಜಗದ ಕಣ್ಣು ಹೆಣ್ಣಿಲ್ಲದ ಪ್ರಪಂಚವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಠಿ ಬದಲಾಗಬೇಕು. ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜರಿ ಮಾಡಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದು ಸಬಲರಾಗಬೇಕು…
ಚಿಕ್ಕಮಗಳೂರು: ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯಾದರೆ ಅದಕ್ಕೆ ಗೌರವ ತಂದಂತಾಗುತ್ತದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ಚೈತ್ರೋತ್ಸವ, ಫಲಪುಷ್ಪ ಪ್ರದರ್ಶನವನ್ನು ಜ.೨೬ ರಿಂದ ೨೮ರವರೆಗೆ ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮೈಸೂರು ಉದ್ಯಾನ ಕಲಾ ಸಂಘ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಜ.೨೬ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ರವರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು. ಮೈಸೂರು ದಸರಾ ಉತ್ಸವದಲ್ಲಿ ಪ್ರಶಸ್ತಿ ಪಡೆದ ಮುಖ್ಯ ಆಕರ್ಷಣೆಯಾಗಿದ್ದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ವಿಸ್ಮಯ ಪ್ರಪಂಚ ಪುಷ್ಪ ಕಲಾಕೃತಿಗಳ ಪ್ರದರ್ಶನ, ಹೂಗಳಿಂದ ಅಲಂಕೃತಗೊಂಡ ತೇಜಸ್ವಿ ಪ್ರತಿಷ್ಠಾನ, ಸ್ಕೂಟರ್, ಇತರೆ ಕಲಾಕೃತಿಗಳ ನಿರ್ಮಾಣ, ಸಿರಿ ಧಾನ್ಯಗಳಿಂದ ಅಲಂಕೃತಗೊಂಡ ತೇಜಸ್ವಿ, ಕುವೆಂಪುರವರ…
ಚಿಕ್ಕಮಗಳೂರು: ದೇಶದ ಜನಸಾಮಾನ್ಯರ ಅನುಕೂಲತೆಗಾಗಿ ಕೇಂದ್ರ ಸರ್ಕಾರ ಜಾರಿ ಗೊಳಿಸಿರುವ ಸಬ್ಸಿಡಿ ಸಹಿತದ ಸೋಲಾರ್ ಸಿಸ್ಟಂ ಯೋಜನೆ ಪ್ರತಿ ಕುಟುಂಬದ ವಿದ್ಯುತ್ ಶುಲ್ಕ ಕಡಿಮೆಗೊ ಳಿಸಿ ಆರ್ಥಿಕ ಹೊರೆ ಸುಧಾರಿಸಲು ಮಹತ್ತರ ಹೆಜ್ಜೆಯಿಟ್ಟಿದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ.ಪ್ರಾಣೇಶ್ ಹೇಳಿದರು. ತಾಲ್ಲೂಕಿನ ಅಲ್ಲಂಪುರ ಸಮೀಪ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ರೂಫ್‌ಟಾಪ್ ಸೋ ಲಾರ್ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತಾದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಸರ್ಕಾರದ ಯೋಜನೆ, ಯೋಚನೆಗಳು ಜನಸಾಮಾನ್ಯರ ಏಳಿಗೆಗೆ ಪೂರಕವಾಗಿದೆ. ಅತಿ ಹೆಚ್ಚು ತಾಪಮಾನ ಹೊಂದಿರುವ ದಕ್ಷಿಣ ಕನ್ನಡದಲ್ಲಿ ಅಳವಡಿಸಿ ಯಶಸ್ವಿಗೊಂಡಿರುವ ಪಿಎಂ ಸೂರ್ಯ ಮನೆಗೆ ವಿದ್ಯುತ್ ಯೋಜನೆ ಅತ್ಯಂತ ಹೆಚ್ಚು ಪ್ರಚಲಿತದಲ್ಲಿದ್ದು ಇದೀಗ ಮಲೆನಾಡು ಭಾಗಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ ಎಂದರು. ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶದಲ್ಲಿ ಸೋಲಾರ್ ಸಿಸ್ಟಂ ಅಳವಡಿಸಿಕೊಂಡಲ್ಲಿ ವಿದ್ಯುತ್ ಶುಲ್ಕವನ್ನು ಕಡಿಮೆಗೊಳಿಸಿ, ಸಾಕಷ್ಟು ಹಣವನ್ನು ಉಳಿತಾಯ ಮಾಡಬಹುದು. ಆ ನಿಟ್ಟಿನಲ್ಲಿಜನತೆ ಯೋಜನೆಯಿಂದ…