Subscribe to Updates
Get the latest creative news from FooBar about art, design and business.
- e-paper (18-07-2025) Chikkamagalur Express
- ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ
- ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
Author: chikkamagalur express
ಚಿಕ್ಕಮಗಳೂರು: ಮಹಿಳೆಯರು ಶಿಕ್ಷಣ ಪಡೆದು ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಸಬಲರಾದರೆ ಜೀವನದಲ್ಲಿ ಸಫಲರಾಗಬಹುದು. ಪ್ರತಿಯೊಬ್ಬರು ಶಿಕ್ಷಣವಂತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಿ.ಸಿ ಮತ್ತು ಪಿ.ಎನ್.ಡಿ.ಟಿ ವಿಭಾಗ ಹಾಗೂ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಚಿಕ್ಕಮಗಳುರು ಇವರ ವತಿಯಿಂದ ನಗರದ ಶ್ರೀ ರಾಮಕೃಷ್ಣ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಚ್ಚು ಮಕ್ಕಳ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೆಣ್ಣು ಜಗದ ಕಣ್ಣು ಹೆಣ್ಣಿಲ್ಲದ ಪ್ರಪಂಚವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಹೆಣ್ಣು ಮಕ್ಕಳನ್ನು ಗೌರವಿಸಬೇಕು. ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಠಿ ಬದಲಾಗಬೇಕು. ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜರಿ ಮಾಡಿದೆ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದು ಸಬಲರಾಗಬೇಕು…
ಚಿಕ್ಕಮಗಳೂರು: ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯಾದರೆ ಅದಕ್ಕೆ ಗೌರವ ತಂದಂತಾಗುತ್ತದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ಚೈತ್ರೋತ್ಸವ, ಫಲಪುಷ್ಪ ಪ್ರದರ್ಶನವನ್ನು ಜ.೨೬ ರಿಂದ ೨೮ರವರೆಗೆ ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮೈಸೂರು ಉದ್ಯಾನ ಕಲಾ ಸಂಘ ಹಾಗೂ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಜ.೨೬ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ರವರು ಉದ್ಘಾಟಿಸಲಿದ್ದಾರೆಂದು ತಿಳಿಸಿದರು. ಮೈಸೂರು ದಸರಾ ಉತ್ಸವದಲ್ಲಿ ಪ್ರಶಸ್ತಿ ಪಡೆದ ಮುಖ್ಯ ಆಕರ್ಷಣೆಯಾಗಿದ್ದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ವಿಸ್ಮಯ ಪ್ರಪಂಚ ಪುಷ್ಪ ಕಲಾಕೃತಿಗಳ ಪ್ರದರ್ಶನ, ಹೂಗಳಿಂದ ಅಲಂಕೃತಗೊಂಡ ತೇಜಸ್ವಿ ಪ್ರತಿಷ್ಠಾನ, ಸ್ಕೂಟರ್, ಇತರೆ ಕಲಾಕೃತಿಗಳ ನಿರ್ಮಾಣ, ಸಿರಿ ಧಾನ್ಯಗಳಿಂದ ಅಲಂಕೃತಗೊಂಡ ತೇಜಸ್ವಿ, ಕುವೆಂಪುರವರ…
ಚಿಕ್ಕಮಗಳೂರು: ದೇಶದ ಜನಸಾಮಾನ್ಯರ ಅನುಕೂಲತೆಗಾಗಿ ಕೇಂದ್ರ ಸರ್ಕಾರ ಜಾರಿ ಗೊಳಿಸಿರುವ ಸಬ್ಸಿಡಿ ಸಹಿತದ ಸೋಲಾರ್ ಸಿಸ್ಟಂ ಯೋಜನೆ ಪ್ರತಿ ಕುಟುಂಬದ ವಿದ್ಯುತ್ ಶುಲ್ಕ ಕಡಿಮೆಗೊ ಳಿಸಿ ಆರ್ಥಿಕ ಹೊರೆ ಸುಧಾರಿಸಲು ಮಹತ್ತರ ಹೆಜ್ಜೆಯಿಟ್ಟಿದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ.ಪ್ರಾಣೇಶ್ ಹೇಳಿದರು. ತಾಲ್ಲೂಕಿನ ಅಲ್ಲಂಪುರ ಸಮೀಪ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ರೂಫ್‌ಟಾಪ್ ಸೋ ಲಾರ್ ಮತ್ತು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತಾದ ಕಾರ್ಯಾಗಾರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಸರ್ಕಾರದ ಯೋಜನೆ, ಯೋಚನೆಗಳು ಜನಸಾಮಾನ್ಯರ ಏಳಿಗೆಗೆ ಪೂರಕವಾಗಿದೆ. ಅತಿ ಹೆಚ್ಚು ತಾಪಮಾನ ಹೊಂದಿರುವ ದಕ್ಷಿಣ ಕನ್ನಡದಲ್ಲಿ ಅಳವಡಿಸಿ ಯಶಸ್ವಿಗೊಂಡಿರುವ ಪಿಎಂ ಸೂರ್ಯ ಮನೆಗೆ ವಿದ್ಯುತ್ ಯೋಜನೆ ಅತ್ಯಂತ ಹೆಚ್ಚು ಪ್ರಚಲಿತದಲ್ಲಿದ್ದು ಇದೀಗ ಮಲೆನಾಡು ಭಾಗಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ ಎಂದರು. ಜಿಲ್ಲೆಯ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶದಲ್ಲಿ ಸೋಲಾರ್ ಸಿಸ್ಟಂ ಅಳವಡಿಸಿಕೊಂಡಲ್ಲಿ ವಿದ್ಯುತ್ ಶುಲ್ಕವನ್ನು ಕಡಿಮೆಗೊಳಿಸಿ, ಸಾಕಷ್ಟು ಹಣವನ್ನು ಉಳಿತಾಯ ಮಾಡಬಹುದು. ಆ ನಿಟ್ಟಿನಲ್ಲಿಜನತೆ ಯೋಜನೆಯಿಂದ…
ಚಿಕ್ಕಮಗಳೂರು: ಸಾರ್ವಜನಿಕರು ಸರ್ವ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನೀಡಿರುವ ಸಲಹೆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು. ಅವರು ಇಂದು ನಗರಸಭಾ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ನಗರಸಭೆಯ ಆಯವ್ಯಯ ತಯಾರಿಸಲು ಎರಡನೇ ಹಂತದ ಸಾರ್ವಜನಿಕ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಈ ಸಭೆಯಲ್ಲಿ ನೀಡಿರುವ ಸಲಹೆ, ಸೂಚನೆ, ಅಭಿಪ್ರಾಯಗಳನ್ನು ನಗರಸಭೆ ಅಳವಡಿಸಿಕೊಂಡು ನಗರದ ನಾಗರೀಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವುದಾಗಿ ಭರವಸೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಒಟ್ಟಾರೆ ಅಭಿಪ್ರಾಯ ವ್ಯಕ್ತವಾಗಿದ್ದು, ಸಂಪೂರ್ಣ ನಿಷೇಧಿಸಲು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ವರ್ತಕರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕಲ್ಯಾಣ ಮಂಟಪಗಳಲ್ಲಿ ವಿವಾಹ ಮುಂತಾದ ಶುಭ ಕಾರ್ಯಗಳು ನಡೆಯುವ ಸಂದರ್ಭದಲ್ಲಿ ಅತೀ ಹೆಚ್ಚು ನೀರಿನ ಬಾಟಲಿಗಳು, ಪ್ಲಾಸ್ಟಿಕ್‌ನಲ್ಲಿ ತುಂಬಲಾಗಿರುವ ಉಡುಗೊರೆಗಳನ್ನು ನೀಡುತ್ತಿದ್ದು, ಅಂತಹ ಕಲ್ಯಾಣ ಮಂಟಪದವರಿಗೆ ನಗರಸಭೆಯಿಂದ ಸೂಚನೆ ಪತ್ರ ನೀಡಿ ಕ್ರಮ ಕೈಗೊಳ್ಳಲು ಒತ್ತಾಯಪೂರ್ವಕ ಅಭಿಪ್ರಾಯಗಳು ಮೂಡಿಬಂದವು ಎಂದು…
ಚಿಕ್ಕಮಗಳೂರು: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ ಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ ೫೦ಕ್ಕೂ ಹೆಚ್ಚು ಜನ ಕಲಾವಿದರು, ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ. ಜನವರಿ ೨೩ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ…
ಚಿಕ್ಕಮಗಳೂರು: ಕೃಷಿಯೇತರ ಸಹಕಾರ ಸಂಘಗಳ ಆಡಳಿತವು ಸದಸ್ಯರ ಆರ್ಥಿಕ ಹಿ ತಾಸಕ್ತಿಯನ್ನು ಕಾಪಾಡುವ ಜೊತೆಗೆ ಘಟಕಗಳಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸಹಕಾರ ಮ ಹಾಮಂಡಳ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ ಹೇಳಿದರು. ರಾಜ್ಯ ಸಹಕಾರ ಮಹಾಮಂಡಾಳ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಹ ಯೋಗದಲ್ಲಿ ನಗರದ ಖಾಸಗೀ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ಧ ಆಯ್ದ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಣೆ ಮಾಡಬೇಕಾದರೆ ಪಾರದರ್ಶಕತೆ, ವೃತ್ತಿಪರ ತೆ, ಪರಿಣಾಮಕಾರಿ ಲೆಕ್ಕಪರಿಶೋಧನೆ ಮಾಹಿತಿ ಹೊಂದಿರುವ ಜೊತೆಗೆ ತಂತ್ರಜ್ಞಾನ ಹಾಗೂ ಲಾಭಧಾಯಕ ವಾಗಿರುವ ಅಂಶಗಳನ್ನು ಒಳಗೊಂಡಿರಬೇಕು ಎಂದು ತಿಳಿಸಿದರು. ಸಂಘಗಳು ಆಧ್ಯಾತ್ಮಿಕ ಕಾರ್ಯಗಳೊಡನೆ ಹಣಕಾಸಿನ ವ್ಯವಹಾರ ಹಾಗೂ ವಹಿವಾಟುಗಳಿಗೆ ಗಮನ ಹರಿಸಬೇಕು. ಸಹಕಾರ ಸಂಘಗಳ ಕೇಂದ್ರಬಿಂದು ಆರ್ಥಿಕ ಚಟುವಟಿಕೆಗಳು ಎಂದ ಅವರು ಠೇವಣಿ, ಸಾಲ ವಿತರಣೆ, ಹೂಡಿಕೆ ಹಾಗೂ ಸೇವಾ ನಿಯಮಗಳನ್ನು ಕಾಲ ಕಾಲಕ್ಕೆ ತಕ್ಕಂತೆ ರೂಪಿಸಿ ಅನುಷ್ಟಾನಕ್ಕೆ…
ಚಿಕ್ಕಮಗಳೂರು: ತೇಗೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೆಲವು ಮಧ್ಯವರ್ತಿಗಳು ತೊಂದರೆ ನೀಡುತಿದ್ದು, ಇದರಿಂದ ಆಧಿಶಕ್ತಿ ನಗರದ ಗ್ರಾಮಸ್ಥರಿಗೂ ತೊಂದರೆ ಉಂಟಾಗುತ್ತಿದೆ. ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿರುವ ಅಪರಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಂತರ ಸುದ್ಧಿಗಾರರೊಂದಿಗೆ ರಾಜ್ಯ ಸಂಚಾಲಕ ಜೆನ್ನಿಕ್ಲಾಸ್ ಡೇವಿಡ್ ಮಾತನಾಡಿ, ಗವನಹಳ್ಳಿ ಸರ್ವೆ ನಂ.೧೧೫ ಹಾಗೂ ೯೪ಕ್ಕೆ ಹೊಂದಿಕೊಂಡಿರುವ ಆಧಿಶಕ್ತಿನಗರ ಗ್ರಾಮದಲ್ಲಿ ಬಹುತೇಕ ಕುಟುಂಬಗಳು ಕಡುಬಡವರಾಗಿದ್ದು ಅವರ ಮಕ್ಕಳ ವಿದ್ಯಾಭ್ಯಾಸ, ಮದುವೆ, ಬ್ಯಾಂಕ್ ಲೋನ್ ಮಾಡಿಸಲು ಹಾಗೂ ಇನ್ನಿತರ ಕಾರ್ಯಗಳಿಗೆ ಇ-ಸ್ವತ್ತು ಅಗತ್ಯವಿದ್ದು, ಹಲವಾರು ವರ್ಷಗಳಿಂದ ಇ-ಸ್ವತ್ತು ಮಾಡಲಾಗುತ್ತಿಲ್ಲ ಇದರಿಂದ ಗ್ರಾಮಸ್ಥರಿಗೆ ತೊಂದರೆಗಳು ಉಂಟಾಗುತ್ತಿದೆ ಎಂದರು. ಸದ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖಾತೆದಾರರ ಸಂಬಂಧಪಟ್ಟ ದಾಖಲೆಗಳನ್ನು ಪಡೆದು ಪರಶೀಲಿಸಿ ಇ-ಸ್ವತ್ತು ಮಾಡಿಕೊಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ಅನಕೂಲವಾಗುತ್ತಿದೆ. ಆದರೆ ಕೆಲವು ವ್ಯಕ್ತಿಗಳು ದಾಖಲೆ…