Author: chikkamagalur express

ಚಿಕ್ಕಮಗಳೂರು:  ಇಲ್ಲಿನ ಸಖರಾಯಪಟ್ಟಣದಲ್ಲಿ ಕೆಪಿಎಂಇಯಲ್ಲಿ ನೊಂದಾಯಿಸದೆ ಅನಧಿಕೃತವಾಗಿ ನಡೆಸುತ್ತಿದ್ದ ಶ್ರೀರಾಮ ಕ್ಲಿನಿಕ್‌ಅನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ತಂಡ ಮೊಹರು ಹಾಕಿ ಮುಚ್ಚಿಸಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅಂದರಾಳು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವರದರಾಜು. ಆರ್ ಅವರು ಕೆಪಿಎಂಇಯಲ್ಲಿ ನೊಂದಾಯಿಸದೆ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿರುವುದು ಭೇಟಿನೀಡಿದ ತಂಡಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಕ್ಲಿನಿಕ್‌ನ್ನು ಬಂದ್ ಮಾಡಲಾಗಿದೆ, ಈ ಸಂಬಂಧ ಜಿಲ್ಲಾ ಅಧಿಕಾರಿ, ಅಧ್ಯಕ್ಷರು ಕೆಪಿಎಂಇ ನೋಂದಣಿ ಪ್ರಾಧಿಕಾರ ಇವರಿಗೆ ಸೂಕ್ತ ಕ್ರಮಕ್ಕಾಗಿ ದೂರು ಸಲ್ಲಿಸಲಾಗಿದೆ ಎಂದು ಕೆಪಿಎಂಇ ನೋಡಲ್ ಅಧಿಕಾರಿ ಡಾ. ಶಶಿಕಲಾ.ಎಂ ಇವರು ತಿಳಿಸಿದ್ದಾರೆ. ವೈದ್ಯಾಧಿಕಾರಿಗಳ ತಂಡದಲ್ಲಿ ಜಿಲ್ಲಾ ಆರ್‌ಸಿಹೆಚ್‌ಓ, ಪ್ರಭಾರಿ ಡಿಹೆಚ್‌ಓ ಡಾ. ಮಂಜುನಾಥ್ ಹೆಚ್.ಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ. ಶಶಿಕಲಾ, ಜಿಲ್ಲಾ ಆಶ್ರಿತ ರೋಗಗಳ ರೋಗವಾಹಕ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ ಟಿ.ಪಿ ಮತ್ತಿತರ ಸಿಬ್ಬಂದಿ ಉಪಸ್ಥಿತರಿದ್ದರು Unauthorized clinic in Sakharayapattana shut down

Read More

ಚಿಕ್ಕಮಗಳೂರು:  ನಮ್ಮ ಹೋರಾಟ ಭಾರತದ ವಿರುದ್ಧ ಎನ್ನುವ ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕಛೇರಿಯಿಂದ ಹನುಮಂತಪ್ಪ ಸರ್ಕಲ್ ವರೆಗೆ ಬಿಜೆಪಿ ಮುಖಂಡರುಗಳೊಂದಿಗೆ ಮೆರವಣಿಗೆ ಹೊರಟ ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಬಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ನಂತರ ಹನುಮಂತಪ್ಪ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮುಖಂಡರು ಇದೇ ಜನವರಿ ೧೫ ರಂದು ನವದೆಹಲಿಯಲ್ಲಿ ನೂತನ ಎಐಸಿಸಿ ಕಚೇರಿಯ ಉದ್ಘಾಟನೆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾತನಾಡುತ್ತಾ ನಮ್ಮ ಹೋರಾಟ ಭಾರತದ ವಿರುದ್ಧ ಎನ್ನುವ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದಾರೆ. ಇದು ಪ್ರಚೋದನಾ ಕಾರಿ ಹೇಳಿಕೆಯಾಗಿದ್ದು, ದೇಶದ ಸಮಗ್ರತೆ ಹಾಗೂ ಕಾನೂನು ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶದಿಂದ ಕೂಡಿದೆ. ತಮ್ಮ ಕಾರ್ಯಕರ್ತರಿಗೆ ದೇಶ…

Read More

ಚಿಕ್ಕಮಗಳೂರು: ಅಪಘಾತ, ಸ್ಟ್ರೋಕ್ ಮತ್ತಿತರೆ ತುರ್ತು ಸಂದರ್ಭವನ್ನು ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ವೇಳೆ ಗಾಯಾಳುವನ್ನು ಶೀಘ್ರ ಆಸ್ಪತ್ರೆಗೆ ದಾಖಲಿಸದಿದ್ದಲ್ಲಿ ಜೀವಕ್ಕೆ ಅಪಾಯವಿದೆ. ಈ ನಿಟ್ಟಿನಲ್ಲಿ ನಗರದ ಕೆಆರ್‌ಎಸ್ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾಗಿರುವ ನ್ಯೂರೋ ಸರ್ಜಿಕಲ್ ಕೇಂದ್ರ ಜನತೆಗೆ ಸಾಕಷ್ಟು ಅನುಕೂಲ ಕಲ್ಪಿಸಲಿದೆ ಎಂದು ಮ್ಯಾಕ್ಸ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ನಾರಾಯಣ ಪಣಜಿ ಹೇಳಿದರು. ನಗರದ ಕೆಆರ್‌ಎಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭವಾದ ನ್ಯೂರೋ ಸರ್ಜಿಕಲ್ ಸೆಂಟರ್‌ನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು. ಚಿಕ್ಕಮಗಳೂರಿಗೆ ನ್ಯೂರೋ ಸರ್ಜಿಕಲ್ ಕೇಂದ್ರದ ಅಗತ್ಯತೆ ಸಾಕಷ್ಟಿತ್ತು. ದಕ್ಷಿಣ ಕರ್ನಾಟಕದ ಶಿವಮೊಗ್ಗದಲ್ಲಿ ಮೊದಲ ನ್ಯೂರೋ ಸರ್ಜಿಕಲ್ ಕೇಂದ್ರ ಆರಂಭವಾದಾಗ ಅತ್ಯಾಧುನಿಕ ಉಪಕರಣಗಳಿರಲಿಲ್ಲ ಎಂದರು. ಇಲ್ಲಿ ಉತ್ತಮ ಐಸಿಯು, ಎಂಆರ್‌ಐ, ಸಿಟಿ ಸ್ಕ್ಯಾನ್ ಮತ್ತಿತರೆ ಅನೇಕ ಆಧುನಿಕ ಸೌಲಭ್ಯಗಳಿವೆ. ಡಾ.ಅವಿನಾಶ್ ಎಸ್.ಕೆ. ಮುಂದಾಳ್ವದಲ್ಲಿ ಇಲ್ಲಿನ ನ್ಯೂರೋ ಸರ್ಜಿಕಲ್ ಸೆಂಟರ್ ಉತ್ತಮ ಕೇಂದ್ರವಾಗಿ ಹೊರಹೊಮ್ಮಲಿದೆ. ಚಿಕಿತ್ಸೆಯ ಯಾವುದೇ ಫಲಿತಾಂಶ ಉತ್ತಮವಾಗಿ ಬರಬೇಕಾದರೆ ಗೋಲ್ಡನ್ ಅವರ್‌ನಲ್ಲಿ ಆಸ್ಪತ್ರೆಗೆ ಬರಬೇಕು. ಇಲ್ಲಿ…

Read More

ಚಿಕ್ಕಮಗಳೂರು: ತಾಲ್ಲೂಕು ಲಕ್ಯಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಎಂ ಕೃಷ್ಣೇಗೌಡ, ಉಪಾಧ್ಯಕ್ಷರಾಗಿ ಜಯಣ್ಣ ಅವಿರೋಧ ಆಯ್ಕೆಯಾದರು. ಇಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಚುನಾವಣಾಧಿಕಾರಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿ ನಂತರ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ ಸಹಕಾರ ಸಂಘದಲ್ಲಿ ರಾಜಕೀಯ ಬೆರಸದೆ ಎಲ್ಲರು ಒಗ್ಗಟ್ಟಿನಿಂದ ರೈತರ ಸೇವೆ ಮಾಡಲು ಶ್ರಮಿಸಬೇಕೆಂದು ಹೇಳಿದ ಅವರು ಸರ್ಕಾರದಿಂದ ದೊರೆಯುವ ಅನುದಾನವನ್ನು ಪಡೆದು ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ಸೌಲಭ್ಯ ನೀಡಲು ಮುಂದಾಗಬೇಕೆಂದು ತಿಳಿಸಿದರು. ಸಹಕಾರ ಸಂಘದಲ್ಲಿ ಸರ್ವರನ್ನು ವಿಶ್ವಾಸಕ್ಕೆ ಪಡೆದು ಜನಪರ ಆಡಳಿತ ಕೊಡುವಲ್ಲಿ ಮುಂದಾಗಬೇಕು, ಕೆಲವರು ವೈಯಕ್ತಿಕ ವಿಚಾರದಲ್ಲಿ ರಾಜಕೀಯ ದ್ವೇಷ ನೆಡೆಸುವುದರಿಂದ ಸಹಕಾರ ಸಂಘಗಳು ನಾಶವಾಗುತ್ತದೆ ಇದನ್ನು ಅವರು ಅರಿಯದೆ ಮಾಡುತ್ತಿರುವ ಮೂರ್ಖತನ ಎಂದು ಆರೋಪಿಸಿದರು. ಲಕ್ಯಾ ಜಿಲ್ಲಾ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಿ.ಹೆಚ್ ಮರೀಗೌಡರು ಈ…

Read More

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಟಿ.ರಾಜಶೇಕರ್, ಉಪಾಧ್ಯಕ್ಷರಾಗಿ ಟಿ.ಡಿ.ಮಲ್ಲೇಶ್ ಗೌರವ ಕಾರ್ಯದರ್ಶಿಯಾಗಿ ಎಂ.ಎಸ್ ಪ್ರದೀಪ್‌ಕುಮಾರ್ ಆಯ್ಕೆಯಾಗಿದ್ದಾರೆ. ಇಂದು ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಮೇಲ್ಕಂಡವರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು. ನಂತರ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಟಿ.ರಾಜಶೇಖರ್ ಸಮಾಜದ ಹಿರಿಯರು ಸ್ಥಾಪಿಸಿದ ಒಕ್ಕಲಿಗರ ಸಂಘದ ಅಭಿವೃದ್ಧಿಗೆ ಇಂದು ಆಯ್ಕೆಯಾದ ನಿರ್ದೇಶಕರು, ಪದಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು. ಕಳೆದ ಮೂರು ವರ್ಷದ ಅವಧಿಯಲ್ಲಿ ಸಾಧಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಮೌಲ್ಯಮಾಪನ ಮಾಡಿ ನಿರ್ದೇಶಕರುಗಳು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ, ಜನಾಂಗದ ಮತ್ತು ಹಿರಿಯರ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು. ಮುಂದಿನ ಮೂರು ವರ್ಷಗಳ ಅವಧಿಗೆ ಮತ್ತೋಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಈ ಅವಧಿಯಲ್ಲಿ ಸಮಾಜದ ಮತ್ತು ಸಂಘಟನೆಗೆ ಒತ್ತುನೀಡಿ ಕೆಲಸ ಮಾಡಲು ಬದ್ಧವಾಗಿದ್ದೇವೆ, ಆಯ್ಕೆ ಮಾಡಿರುವ ನಿರ್ದೇಶಕರು ಹಾಗೂ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿದರು.…

Read More

ಚಿಕ್ಕಮಗಳೂರು: ವಾರ್ಷಿಕವಾಗಿ ಅದ್ದೂರಿ ವೆಚ್ಚದಲ್ಲಿ ಆಚರಿಸುವ ಹಬ್ಬಗಳನ್ನು ತಾತ್ಕಾಲಿಕವಾಗಿ ಮುಂದೂಡುವ ಮೂಲಕ ಗ್ರಾಮಕ್ಕೊಂದು ಸುಂದರ ದೇವಾಲಯ ನಿರ್ಮಾಣ ಮಾಡಿದರೆ ಗ್ರಾಮಸ್ಥರಲ್ಲಿ ಧಾರ್ಮಿಕ ಭಾವನೆ ಬೆಳೆಯನ್ನು ಸಹಕಾರಿಯಾಗುತ್ತದೆ ಎಂದು ಮಾಜಿ ವಿಧಾನ ಪರಿ?ತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ಅಭಿಪ್ರಾಯಿಸಿದರು. ಅವರು ಇಂದು ತಾಲೂಕಿನ ಸಿರಬಡಿಗೆ ಗ್ರಾಮದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಲಕ್ಷ್ಮಿದೇವಿ ದೇವಸ್ಥಾನಕ್ಕೆ ಬಾಗಿಲು ಪೂಜೆ ನೆರವೇರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಭಾವನೆಗಳಿಂದ ಯುವ ಜನಾಂಗ ದೂರು ಇರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಗ್ರಾಮದ ಹಿರಿಯರು ದೇವಾಲಯ ನಿರ್ಮಾಣ ಮಾಡಲು ಭದ್ರ ಬುನಾದಿ ಹಾಕಿದಾಗ ಧಾರ್ಮಿಕತೆ, ಸಂಸ್ಕೃತಿ, ಪರಂಪರೆ ಬೆಳೆಯುತ್ತದೆ ಎಂದು ಹೇಳಿದರು. ಶಾಸಕ ಹೆಚ್.ಡಿ. ತಮ್ಮಯ್ಯನವರ ಅನುದಾನದಲ್ಲಿ ೧೦ ಲಕ್ಷ ರೂ ಹಾಗೂ ವಿಧಾನ ಪರಿ?ತ್ ಸದಸ್ಯರ ಅನುದಾನದಲ್ಲಿ ೫ ಲಕ್ಷ ರೂ ಮಂಜೂರು ಮಾಡಿಸುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಅನಗತ್ಯ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕಿ ಅದೇ ಹಣವನ್ನು ಸುಂದರ ದೇವಾಲಯಗಳ ನಿರ್ಮಾಣಕ್ಕೆ…

Read More

ಚಿಕ್ಕಮಗಳೂರು: ತಾಲ್ಲೂಕು ಮುಗುಳುವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಲ್ಕನೇ ಬಾರಿಗೆ ಎಂ.ಎಸ್.ನಿರಂಜನ್, ಉಪಾಧ್ಯಕ್ಷರಾಗಿ ಬಲರಾಮ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೇಲ್ಕಂಡ ಈ ಇಬ್ಬರನ್ನು ಚುನಾವಣಾಧಿಕಾರಿ ಸುಮ.ಜಿ.ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಸಿ. ಕಲ್ಮರುಡಪ್ಪ ಸಹಕಾರಿ ಕ್ಷೇತ್ರದಲ್ಲಿ ಸರ್ವರನ್ನೂ ಒಗ್ಗೂಡಿಸುವ ಕೆಲಸ ಅದು ಕೃಷಿಪತ್ತಿನಲ್ಲಿದೆ. ಇದನ್ನು ಕೇಂದ್ರಸ್ಥಾನದಲ್ಲಿದ್ದುಕೊಂಡು ಶ್ರಮಿಸುತ್ತಿರುವ ಎಂ.ಎಸ್. ನಿರಂಜನ್‌ರವರು ನಾಲ್ಕನೇ ಬಾರಿಗೆ ಆಯ್ಕೆಯಾಗಿ ಶ್ರಮ ವಹಿಸುತ್ತಿರುವ ಅವರ ತಂಡ ರೈತರಿಗೆ ಅನುಕೂಲ ಮಾಡುವ ಉದ್ದೇಶ ಹೊಂದಿದ್ದಾರೆ ಎಂದರು. ಪತ್ತಿನ ಸಹಕಾರ ಸಂಘದಲ್ಲಿ ನಂಬಿಕೆ ಬಹಳ ಮುಖ್ಯವಾಗಿದ್ದು, ಇದರ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳ ನಂಬಿಕೆಯನ್ನು ಈ ತಂಡ ಉಳಿಸಿಕೊಂಡಿದೆ, ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದರು. ಮುಗುಳುವಳ್ಳಿ ಕೃಷಿ ಪತ್ತಿನ…

Read More