Author: chikkamagalur express

ಚಿಕ್ಕಮಗಳೂರು: ಹೆಣ್ಣು ಎಂದರೆ ಒಂದು ಕುಲವನ್ನು ಉದ್ಧಾರ ಮಾಡುವವಳು. ಹೆಣ್ಣುತನಕ್ಕೆ ಪಾವಿತ್ರ್ಯತೆ ಇದೆ. ಹೆಣ್ಣುತನದ ಜವಾಬ್ದಾರಿಯನ್ನು ಅರಿತು ಬದುಕಿದ ದಿನ ನಿಜವಾದ ಮಹಿಳಾ ದಿನಾಚರಣೆ ಆಗುತ್ತದೆ ಎಂದು ಹರಿಹರಪುರ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಹೇಳಿದರು. ಅವರು ಭಾನುವಾರ ನಗರದ ಕುವೆಂಪು ಕಲಾ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕುರುಹಿನ ಶೆಟ್ಟಿ (ನೇಕಾರ) ಮಹಿಳಾ ಸಂಘದ ಎಂಟನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅವರು ಪ್ರವಚನ ನೀಡಿದರು. ಜಗತ್ತಿನಲ್ಲಿ ಬಿಡುವಿಲ್ಲದ ಚಕ್ರವೊಂದಿದೆ ಅದು ಕಾಲ ಚಕ್ರ. ಅದನ್ನು ಹೊರತು ಪಡಿಸಿದರೆ ಮನೆಗಳಲ್ಲಿರುವ ತಾಯಂದಿರು. ಆಕೆ ಒಂದು ಪರುಷನ ಬೆಳವಣಿಗೆಗೆ ಮಹಿಳೆ ಐದು ರೀತಿ ಸಹಾಯ ಮಾಡುತ್ತಾಳೆ. ನಮಗೆ ಈ ಜಗತ್ತನ್ನು ತೋರಿಸಿದ್ದು ತಾಯಿ ಎಂದರು. ಏಳು ಮಕ್ಕಳನ್ನು ಹೆತ್ತ ತಾಯಿಗೆ ಅದು ಭಾರವಾಗಲಿಲ್ಲ. ಆ ಏಳು ಮಂದಿ ಮಕ್ಕಳು ಕೆಲಸಕ್ಕೆ ಸೇರಿದ ಮೇಲೆ ಹೆತ್ತ ತಾಯಿ ಭಾರವಾಗದಿರಲಿ. ಬಿಪಿ, ಶುಗರ್ ಮಾತ್ರೆ ಕೊಡದೆ ವೃದ್ಧಾಶ್ರಮಕ್ಕೆ ಬಿಡಲಾಗುತ್ತಿದೆ. ಆಕೆಗೆ ನೀವು…

Read More

ಶೃಂಗೇರಿ: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿ  ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು…

Read More

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು. “ನಮ್ಮ ಹಿರಿಯರು, ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ನಮ್ಮ ಮಠಗಳನ್ನು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಕರ್ತವ್ಯ. ನೀವು ಇಲ್ಲಿಗೆ ಬಂದು ಹಾಗೇ ಹೋಗಬೇಡಿ. ನೀವು ನೂರು ರೂಪಾಯಿ ಸಂಪಾದನೆ ಮಾಡಿದರೆ, ಒಂದು ರೂಪಾಯಿಯಾದರೂ ಧರ್ಮ ಉಳಿಸುವ ಮಠಕ್ಕೆ ನೀಡಬೇಕು. ಆಗ ಮಾತ್ರ ಮಠ ಉಳಿಯಲು ಸಾಧ್ಯ” ಎಂದು ಕರೆ ನೀಡಿದರು. “ಪ್ರವಚನ ಕೇಳಿ ನೆಮ್ಮದಿ ಪಡೆಯಲು ಬಂದಿದ್ದೇನೆ” “ಇಲ್ಲಿ ಧರ್ಮ ಕಾಪಾಡುವ…

Read More

ಚಿಕ್ಕಮಗಳೂರು: ಬೆಂಗಳೂರಿನ ಪ್ರೆಸ್ ಕ್ಲಭ್ ಆಫ್ ಬೆಂಗಳೂರು ಸಂಸ್ಥೆ ಕೊಡಮಾಡುವ ಪ್ರತಿಷ್ಟಿತ ಪ್ರೈಡ್ ಆಫ್ ಕರ್ನಾಟಕ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಪರಿಸರ ಮೌಲ್ಯಮಾಪನ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಎ.ಎನ್ ಮಹೇಶ್ ಆಯ್ಕೆಯಾಗಿದ್ದಾರೆ. ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆಯಾದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ದೇಶದ ಅತ್ಯುನ್ನತ ಪ್ರತಿಷ್ಠಿತ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ೫೫ ವರ್ಷಗಳ ಇತಿಹಾಸವಿರುವ ಬೆಂಗಳೂರು ಪ್ರೆಸ್‌ಕ್ಲಬ್ ಪ್ರತಿವರ್ಷ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾ ಬಂದಿದ್ದು,ಈಬಾರಿ ಎ.ಎನ್ ಮಹೇಶ್‌ರವರನ್ನು ಆಯ್ಕೆಮಾಡಿದೆ. ಜ.ರಂದು ೧೧ ರ ಶನಿವಾರದಂದು ಸಂಜೆ ೫.೩೦ ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ನಡೆಯುವ ವರ್ಣರಂಜಿತ ಹಾಗೂ ಸುಂದರ ಸಮಾರಂಭದಲ್ಲಿ ಸರ್ಕಾರದ ಆನೇಕ ಸಚಿವರು ಹಾಗೂ ಅತಿಥಿ ಗಣ್ಯರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿ ಅಭಿನಂದಿಸಲಿದ್ದಾರೆ. ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ.ಸಿ.ಎನ್.ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್.…

Read More

ಚಿಕ್ಕಮಗಳೂರು-ನಗರದ ತಾಲ್ಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಕೋಟೆ ರಂಗನಾಥ್ ಮೂರನೇ ಬಾರಿಗೆ ಹಾಗೂ ಉಪಾಧ್ಯಕ್ಷರಾಗಿ ವಾಜುವಳ್ಳಿ ರಮೇಶ್ ಮುಂದಿನ ಐದು ವರ್ಷಗಳ ಅವಧಿಗೆ ಅವಿರೋಧ ಆಯ್ಕೆಯಾಗಿದ್ದಾರೆ. .೨೯ ರಿಂದ ನಡೆದ ಚುನಾವಣೆಯಲ್ಲಿ ನಿರ್ದೇಶಕರುಗಳಾಗಿ ೧೫ ಜನ ಅವಿರೋಧ ಆಯ್ಕೆಯಾಗಿದ್ದು, ಇಂದು ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದು ಅಧ್ಯಕ್ಷರಾಗಿ ಕೋಟೆ ರಂಗನಾಥ್, ಉಪಾಧ್ಯಕ್ಷರಾಗಿ ವಾಜುವಳ್ಳಿ ರಮೇಶ್ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆಯ ಸಹಾಯಕ ಉಪ ನಿಬಂಧಕರಾದ ಚುನಾವಣಾಧಿಕಾರಿ ತ್ರಿವೇಣಿ ಅವರು ಘೋಷಿಸಿದರು. ಬಿಜೆಪಿ ಮುಖಂಡ ಈಶ್ವರಹಳ್ಳಿ ಮಹೇಶ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿ, ಬ್ಯಾಂಕನ್ನು ಕಳೆದ ಸಾಲಿನಲ್ಲಿ ಇಡೀ ರಾಜ್ಯದಲ್ಲೇ ಅಭಿವೃದ್ಧಿಪಡಿಸಿ ಶೇ.೩ ರ ಬಡ್ಡಿ ದರದಲ್ಲಿ ೧೦ ಕೋಟಿಗೂ ಹೆಚ್ಚು ರೈತರಿಗೆ ಅಗತ್ಯ ಸಾಲಸೌಲಭ್ಯ ನೀಡಲಾಗಿದೆ ಎಂದರು. ೨೦೨೪-೨೫ನೇ ಸಾಲಿನ ಪ್ರಸಕ್ತ ಅವಧಿಯಲ್ಲಿ ರಾಜ್ಯ ಬ್ಯಾಂಕಿನಿಂದ ಹಣವನ್ನು ಪಡೆದು ತಾಲ್ಲೂಕಿನ ರೈತರಿಗೆ ಹೆಚ್ಚಿನ ಕೃಷಿ ಸಾಲ ವಿತರಿಸಲು ಮುಂದಾಗಬೇಕೆಂದು ಸಲಹೆ ನೀಡಿದ ಅವರು,…

Read More

ಚಿಕ್ಕಮಗಳೂರು: ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ನಗರದಲ್ಲಿ ಆಯೋಜಿಸಲಾಗಿದ್ದ ೨೦೭ನೇ ಭೀಮ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಜರುಗಿತು. ನಗರದ ಕೆಇಬಿ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ನೀಲಿಯ ಶಾಲು, ನೀಲಿ ಬಾವುಟಗಳು ರಾರಾಜಿಸಿ ಮೆರವಣಿಗೆ ಸಂಪೂರ್ಣ ನೀಲಿಮಯವಾಗಿತ್ತು. ಪುಷ್ಪಾಲಂಕೃತ ವಾಹನಗಳಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಗಳು ಹಾಗೂ ಭೀಮ ಕೋರೆಗಾವ್ ಯುದ್ಧದ ನೇತೃತ್ವವಹಿಸಿದ್ದ ಜಯಸಿದ್ಧ ನಾಯಕರ ಭಾವಚಿತ್ರಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಭೀಮ ಕೋರೆಗಾವ್ ಯುದ್ಧದ ನೆನಪಿನ ಸ್ಮಾರಕ ಸ್ತಂಭದ ಸ್ಥಬ್ದಚಿತ್ರ ಗಮನ ಸೆಳೆಯಿತು. ಡ್ರಮ್ಸ್ ಹಾಗೂ ಡಿಜೆ ಮಾದಕ ಹಿಮ್ಮೇಳಕ್ಕೆ ಯುವಕ, ಯುವತಿಯರು ಕುಣಿದು ಕುಪ್ಪಳಿಸಿದರು. ಡಾಕ್ಟರ್ ಬಿ. ಆರ್ ಅಂಬೇಡ್ಕರ್ ಅವರಿಗೆ ಜಯವಾಗಲಿ ಎಂಬ ಘೋಷಣೆ ಮುಗಿಲು ಮುಟ್ಟಿತ್ತು. ಮೆರವಣಿಗೆ ಸಾಗುವ ರಸ್ತೆಯ ಇಕ್ಕಿಲಗಳಲ್ಲಿ ವಿವಿಧ ಸಂಘಟನೆಗಳವರು ಸಾರ್ವಜನಿಕರಿಗೆ ಪಾನಕ ವಿತರಿಸಿದರು. ಮೆರವಣಿಗೆ ಹನುಮಂತಪ್ಪ ವೃತ್ತಕ್ಕೆ ಬರುತ್ತಿದ್ದಂತೆ ಸಾವಿರಾರು ಸಂಖ್ಯೆಯ ಜನರು ಭವ್ಯ ಮೆರವಣಿಗೆಯನ್ನು ವೀಕ್ಷಿಸಿದರು ಸಂಘಟಕರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.…

Read More