Author: chikkamagalur express

ಚಿಕ್ಕಮಗಳೂರು:  ಸ್ವಾಭಿಮಾನಿ ರೈತ ಬೆಳೆಗಾರರ ಫಲವತ್ತಾದ ಭೂಮಿಯನ್ನು ಸರ್ಫೇಸಿ ಕಾಯ್ದೆ ಅಡಿ ಕೆಲವು ಬ್ಯಾಂಕ್ ಅಧಿಕಾರಿಗಳು ದುರುದ್ದೇಶದಿಂದ ಇ-ಹರಾಜು ಮಾಡುವುದನ್ನು ನಿಲ್ಲಿಸದಿದ್ದರೆ ಈ ಪಿಡುಗಿನ ವಿರುದ್ಧ ಬ್ಯಾಂಕ್‌ಗಳ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದೆಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಎಚ್ಚರಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೆಜಿಎಫ್ ಅಧ್ಯಕ್ಷ ಹೆಚ್.ಬಿ. ಶಿವಣ್ಣ, ಬೆಳೆಗಾರರ ಸಾಲ ತೀರುವಳಿ ಆದ ನಂತರವೂ ಕೆನರಾ ಬ್ಯಾಂಕ್ ಮೂಡಿಗೆರೆ ಶಾಖೆಯ ಮೂಲ ದಾಖಲೆಗಳನ್ನು ಬೆಳೆಗಾರರಿಗೆ ಹಿಂದಿರುಗಿಸದೇ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು. ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಸರ್ಫೇಸಿ ಕಾಯ್ದೆ ಅಡಿಯಲ್ಲಿ ಬ್ಯಾಂಕ್‌ಗಳು ಇ-ಹರಾಜು ಮಾಡಲು ಮುಂದಾಗಿರುವ ಬಗ್ಗೆ ಪ್ರತಿರೋಧಿಸಿದ್ದು, ಇಂದೂ ಸಹ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಮೂಡಿಗೆರೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡುವಿನ ಮೊಳಕಲ್ ಗ್ರಾಮದ ಬೆಳೆಗಾರರಾದ ಕೆ.ಕೆ. ಸುರೇಶ್ ಇವರು ತೋಟದ ನಿರ್ವಹಣೆಗಾಗಿ ಸಾಲ ಪಡೆದುಕೊಂಡಿದ್ದು, ಹಲವಾರು ಕಾರಣಗಳಿಂದ ಸಾಲ ಮರುಪಾವತಿ ಮಾಡುವುದು ವಿಳಂಭವಾಗಿದ್ದು,…

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಗಾಂಜಾ ಮಾರಾಟ ಹಾಗೂ ಸೇವನೆ ಸೇರಿದಂತೆ ಮಾದಕ ವಸ್ತುಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಂಗಳವಾರ ಎಸ್ಪಿ ವಿಕ್ರಮ ಅಮಟೆ ಅವರಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಹಲವೆಡೆ ಯುವಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಿ ಗಲವೆ ಸೃಷ್ಟಿ ಮಾಡಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ. ಇಂಥವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಚಿಕ್ಕಮಗಳೂರು ನಗರದ ಸಾಯಿ ಮಧುವನ ಬಡಾವಣೆಯಲ್ಲಿರುವ ಪಾರ್ಕ್, ಗೌರಿ ಕಾಲುವೆ ನರಿಗುಡ್ಡನಹಳ್ಳಿ ವೃತ್ತದಲ್ಲಿರುವ ಖಾಲಿ ನಿವೇಶನಗಳು, ಎಐಟಿ ವೃತ್ತ, ವಾಜಪೇಯಿ ಲೇಔಟ್, ರೈಲ್ವೆ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿದಿನ ಗಾಂಜಾ ಸೇವಿಸಿ ಕೆಲವರು ಬೈಕ್ ವೀಲಿಂಗ್ ಮಾಡುವ ಜೊತೆಗೆ ರಸ್ತೆಯಲ್ಲಿ ನಡೆದಾಡುವ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಇಂತಹ ಕೃತ್ಯಗಳು ಇನ್ನಷ್ಟು ಹೆಚ್ಚುವ ಮೊದಲೇ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.…

Read More

ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಹಾಗೂ ಪರಿಸರ ರಕ್ಷಣೆ ಇಂತಹ ಅನೇಕ ಸಮಾಜಮುಖಿ ಉತ್ತಮ ಕಾರ್ಯಕ್ರಮಗಳನ್ನು ಇನ್ನರ್ ವೀಲ್ ಸಂಸ್ಥೆ ಆಯೋಜನೆ ಮಾಡುವ ಅಗತ್ಯ ಇದೆ ಎಂದು ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಅಧ್ಯಕ್ಷೆ ಬಿ.ಸಿ. ಗೀತಾ ಹೇಳಿದರು. ಅವರು ಟಿಎಂಎಸ್‌ನ ಎಂಎಲ್‌ವಿ ರೋಟರಿ ಸಭಾಂಗಣದಲ್ಲಿ ಇನ್ನರ್ ವೀಲ್ ಕ್ಲಬ್ ಚಿಕ್ಕಮಗಳೂರು ಜಿಲ್ಲೆ-೩೧೮ ಇದರ ೨೦೨೫-೨೬ನೇ ಸಾಲಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಯನಾ ಸಂತೋಷ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅಭಿನಂದಿಸಿ ಶುಭಾಶಯ ಕೋರಿ ಮಾತನಾಡಿದರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೇವೆಯನ್ನು ತಲುಪಿಸುವ ನಿಟ್ಟಿನಲ್ಲಿ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಯೋಜನೆ, ಯೋಚನೆಗಳ ಮೂಲಕ ಕರ್ತವ್ಯ ನಿರತರಾಗಬೇಕೆಂದು ಕರೆನೀಡಿದರು. ಸಮಾಜದಲ್ಲಿ ಆಶಕ್ತರನ್ನು ಕಂಡಾಗ ನಮ್ಮ ಸಹಾಯಹಸ್ತ ಬಯಸುವವರಿಗಾಗಿ ಅಂತಹ ಬಡವರನ್ನು ಗುರ್ತಿಸಿ ಸಹಾಯ ಸೇವೆ ನೀಡುವುದೇ ಇನ್ನರ್ ವೀಲ್ ಸಂಸ್ಥೆಯ ಪ್ರಮುಖ ಉದ್ದೇಶ ಎಂದ ಅವರು, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್‌ನ…

Read More

ಚಿಕ್ಕಮಗಳೂರು: ನಗರಕ್ಕೆ ನೀರು ಪೂರೈಸುವ ಹಿರೇಕೊಳಲೆ ಕೆರೆಗೆ ಇಂದು ಬೆಳಿಗ್ಗೆ ಶಾಸಕ ಹೆಚ್.ಡಿ.ತಮ್ಮಯ್ಯ ಸಪತ್ನೀಕರಾಗಿ ಬಾಗಿನ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರಕ್ಕೆ ಸುಮಾರು ೪೦ ವರ್ಷದಿಂದ ಗುರುತ್ವಾಕರ್ಷಣೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಯಾವುದೇ ಖರ್ಚಿಲ್ಲದೆ ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು. ರಾಜ್ಯದ ಕೆಲವೇ ಕೆಲವು ನಗರದ ಕುಡಿಯುವ ನೀರು ಸರಬರಾಜು ಮಾಡುವ ಗುರುತ್ವಾಕರ್ಷಣಾ ಕೆರೆಗಳಲ್ಲಿ ಈ ಹಿರೇಕೊಳಲೆ ಕೆರೆಯು ಒಂದು. ನಗರದ ೪೦ ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಅಂದು ಈ ಕೆರೆಯನ್ನು ನಿರ್ಮಾಣ ಮಾಡಿ ಈ ನೀರನ್ನು ಜನರು ಕುಡಿಯುವುದಕ್ಕೆ ಬಳಸುತ್ತಿದ್ದಾರೆ. ಇಂತಹ ಸುಂದರವಾದ ಕೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ನೀರು ತುಂಬಿ ಕೋಡಿ ಬಿದ್ದಿದೆ ಎಂದು ಹೇಳಿದರು. ಅಮೃತ್ ಯೋಜನೆಯಡಿ ೨೪ ಗಂಟೆ ನೀರು ಪೂರೈಸಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ಎರಡು ದಿನಕೊಮ್ಮೆ ಸತತವಾಗಿ ನೀರನ್ನು ಸರಬರಾಜು ಮಾಡುತ್ತಿದ್ದೇವೆ ಎಂದ ಅವರು ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ…

Read More

ಚಿಕ್ಕಮಗಳೂರು: ಕಳೆದ ೧೦ ತಿಂಗಳ ಅವಧಿಯಲ್ಲಿ ಚಿಕ್ಕಮಗಳೂರು ಜನತೆಗೆ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಶಿವಕುಮಾರ್ ತಿಳಿಸಿದರು. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆ, ಇಂದು ನಗರಸಭೆಯಿಂದ ನೀಡಿದ ಬೀಳ್ಕೊಡುಗೆ ಸ್ವೀಕರಿಸಿ ಅವರು ಮಾತನಾಡಿದರು. ಅಧ್ಯಕ್ಷೆಯಾಗಿ ನನ್ನ ಕರ್ತವ್ಯವನ್ನು ನಾನು ನಿರ್ವಹಣೆ ಮಾಡಿದ್ದೇನೆ. ಆ ಕೆಲಸ ನನಗೆ ತೃಪ್ತಿತಂದಿದೆ. ನನ್ನಂತೆಯೇ ಸಮಾಜಕ್ಕೆ ಸೇವೆ ಸಲ್ಲಿಸುವವರು ಇನ್ನೂ ಅನೇಕರಿದ್ದಾರೆ. ಹೀಗಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ನನ್ನ ಸ್ಥಾನ ತೆರವು ಮಾಡಿಕೊಡುತ್ತಿದ್ದೇನೆ ಎಂದರು. ೧೦ ತಿಂಗಳ ಕಾಲ ಎಲ್ಲರೂ ಒಂದು ಕುಟುಂಬದವರಂತೆ ಇದ್ದೆವು. ನನ್ನ ಅವಧಿಯಲ್ಲಿ ೫.೫೦ ಕೋಟಿ ರೂ ಬಜೆಟ್ ಮಂಡಿಸಿದ್ದೆವು. ಅನೇಕ ಕೆಲಸಗಳು ಚಾಲ್ತಿಯಲ್ಲಿವೆ. ಈಗ ಸರಕಾರದ ೧೦ ಕೋಟಿ ರೂ.ಅನುದಾನ ಬಂದಿದೆ, ಮಳೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. ೧೫ನೇ ಹಣಕಾಸು, ನಗರಸಭೆ ಅನುದಾನದಿಂದ ಅನೇಕ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇವೆ. ಮುಂದೆ ಬಂದವರು ಅದನ್ನು ಕಾರ್ಯನಿರ್ವಹಣೆ ಮಾಡಲಿದ್ದಾರೆ ಎಂದು ಹೇಳಿದರು. ಕನ್ನಡ ಭವನವನ್ನು ವಿದ್ಯಾರ್ಥಿಗಳಿಗೆ ಅನುಕೂಲ…

Read More

ಚಿಕ್ಕಮಗಳೂರು: ನಮ್ಮ ದೇಶದ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಿಮಾತ್ಯ ದೇಶಗಳ ಸಂಸ್ಕೃತಿಗಳತ್ತ ವಾಲುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಶಾಲಾ ಮುಖ್ಯ ಶಿಕ್ಷಕ ಯೋಗೀಶ್ ಎಂದರು ಅವರು ಮಾಡೆಲ್ ಆಂಗ್ಲ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ಭಾರತದಲ್ಲಿ ಹುಟ್ಟಿದ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸವಿದ್ದು, ಶರೀರ ಮತ್ತು ಮನಸ್ಸು ಎರಡನ್ನೂ ಒಂದೆಡೆ ಕೇಂದ್ರೀಕರಿಸುವುದು ಯೋಗದ ಮಹತ್ವವಾಗಿದೆ ಎಂದರು. ಯೋಗದ ಮಹತ್ವವನ್ನು ಅರಿತು ಪ್ರತಿಯೊಬ್ಬರು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಾಗಿ ಇರಬೇಕೆಂದು ತಿಳಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಟಿ. ಎಸ್. ನಿರಂಜನ್ ಮಾತನಾಡಿ ಜೂನ್ ೨೧ ಸುಧೀರ್ಘ ಹಗಲಿನ ದಿನವಾಗಿದ್ದು ಹಗಲಿನ ಸದುಪಯೋಗ ಪಡೆಯುವುದಕ್ಕಾಗಿ ಈ ಯೋಗ ದಿನಾಚರಣೆಯನ್ನು ಇಂದು ಆಚರಿಸುತ್ತಿರುವುದಾಗಿ ತಿಳಿಸಿದರು. ಪತಂಜಲಿ ಮಹರ್ಷಿ ಅವರು ಯೋಗಾಸನದ ಪಿತಾಮಹರಾಗಿದ್ದಾರೆ. ಪ್ರತಿದಿನ ಯೋಗ ಅಭ್ಯಾಸ ಮಾಡುವುದರಿಂದ ದೈಹಿಕ ಶಕ್ತಿ ಹೆಚ್ಚುತ್ತದೆ, ಮನಸ್ಸಿನ ಚಲತೆ ಕಡಿಮೆಯಾಗಿ ಏಕಾಗ್ರತೆ ಉಂಟಾಗುತ್ತದೆ ಮತ್ತು ಮನಸ್ಸು ಶಾಂತವಾಗುತ್ತದೆ ಎಂದು ತಿಳಿದರು. ಪ್ರತಿಯೊಬ್ಬರು ಜೀವನದಲ್ಲಿ…

Read More

ಚಿಕ್ಕಮಗಳೂರು: ಸಾಮಾಜಿಕ ಮಾಧ್ಯಮಗಳು ಬೆಳೆಯುತ್ತಿದ್ದಂತೆ ಸುಗಮ ಸಂಗೀತ ಮಾಧ್ಯಮ ನೇಪಥ್ಯಕ್ಕೆ ಸರಿಯುತ್ತಿದೆಯೇನೋ ಎಂಬ ಆತಂಕ ಮೂಡುತ್ತಿದೆ ಎಂದು ಗಾಯಕ, ಸಂಗೀತ ನಿರ್ದೇಶಕ ಮೈಸೂರಿನ ನಿತಿನ್ ರಾಜಾರಾಮ್ ಶಾಸ್ತ್ರಿ ವಿಷಾದ ವ್ಯಕ್ತಪಡಿಸಿದರು. ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಹಾಗೂ ಯುರೇಕಾ ಅಕಾಡೆಮಿಯ ಆಶ್ರಯದಲ್ಲಿ ವಿಶ್ವ ಸಂಗೀತ ದಿನಾಚರಣೆ ಪ್ರಯುಕ್ತ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಪೂರ್ವಿ ಗಾನಯಾನ ೧೦೮ರ ಸರಣಿಯಲ್ಲಿ `ಹಾಡು ಹಳೆಯದಾದರೇನು ಭಾವ ನವನವೀನ’ ಶೀರ್ಷಿಕೆಯ ಕನ್ನಡ ಚಿತ್ರಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಪೂರ್ವಿ ನಾದೋಪಾಸನಾ ಪ್ರಶಸ್ತಿ ಪ್ರದಾನ ಸ್ವೀಕರಿಸಿ ಅವರು ಮಾತನಾಡಿದರು. ಹಿಂದೆ ಈಟಿವಿ ಕನ್ನಡ ಚಾನೆಲ್ ಇದ್ದ ಸಂದರ್ಭ ಅತ್ಯುತ್ತಮ ಕಾರ್ಯಕ್ರಮಗಳು ಮೂಡಿ ಬರುತ್ತಿದ್ದವು. ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಸಾರಥ್ಯದ `ಎದೆ ತುಂಬಿ ಹಾಡುವೆನು’, ರವಿ ಬೆಳಗೆರೆ ನಿರೂಪಣೆಯ `ಎಂದೂ ಮರೆಯದ ಹಾಡು’ ಹಾಗೆಯೇ ಪ್ರಣಯರಾಜ ಶ್ರೀನಾಥ್ ಅವರ ನಿರ್ವಹಣೆಯ `ಸ್ನೇಹದ ಕಡಲಲ್ಲಿ’ ಕಾರ್ಯಕ್ರಮ ತುಂಬಾ ಗಮನ ಸೆಳೆಯುತ್ತಿದ್ದವು. ಇಂದು ಆ ಮಟ್ಟಿಗಿನ ವಿಶೇಷ ಕಂಡು ಬರುತ್ತಿಲ್ಲ…

Read More

ಚಿಕ್ಕಮಗಳೂರು: : ಕ್ಷೇತ್ರದಲ್ಲಿ ಕೆರೆ ತುಂಬಿಸುವ ಕಾರ್ಯವೂ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ನೆಟ್ಟೇಕೆರೆಹಳ್ಳಿಯಲ್ಲಿ ಇಂದು ಬೆಳಿಗ್ಗೆ ನಡೆದ ನಡೆದ ಕಾರ್ಯಕ್ರಮದಲ್ಲಿ ನೆಟ್ಟೇಕೆರೆಹಳ್ಳಿ ಹಾಗೂ ಸೆಗನೀಪುರ ಗ್ರಾಮಗಳ ‘ವಾಸಿಸುವವನೇ ಒಡೆಯ’ ಯೋಜನೆಯಡಿ ಹಕ್ಕುಪತ್ರ ಹಾಗೂ ಇ-ಸ್ವತ್ತು ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಈಗಾಗಲೇ ರಾಜ್ಯ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಯನ್ನು ಈಗಾಗಲೇ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೂ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ರೈತರಿಗೆ ಅನುಕೂಲವಾಗುವಂತೆ ಮಳೆ, ಉತ್ತಮ ಬೆಳೆ ಹಾಗೂ ಆ ಬೆಳೆಗೆ ತಕ್ಕಂತೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯಲೆಂದು ತಾವು ಆಶಿಸುವುದಾಗಿ ಹೇಳಿದರು. ೧೯೭೪-೭೫ ರಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಹಾಗೂ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಉಳುವವನೇ ಭೂಮಿ ಯೋಜನೆಯನ್ನು ಜಾರಿಗೆ ತಂದು ೫೦ ವರ್ಷವಾಗಿದೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಸಿಸುವವನೇ ಒಡೆಯ ಯೋಜನೆಯಡಿ ಕಂದಾಯ ಗ್ರಾಮಗಳನ್ನು ಉಪಗ್ರಾಮಗಳನ್ನಾಗಿಸಿ ಗ್ರಾಮಗಳಲ್ಲಿ ಯಾರ್‍ಯಾರಿಗೆ ಹಕ್ಕುಪತ್ರ, ಇ-ಸ್ವತ್ತು ಖಾತೆ ಪತ್ರ…

Read More