Author: chikkamagalur express

ಚಿಕ್ಕಮಗಳೂರು: ಬಲಾಡ್ಯ ಜಾತಿಗಳಲ್ಲಿ ಜನಿಸಿದರೆ ಮಾತ್ರ ಸ್ವರ್ಗ ದೊರಕದು. ಪರೋ ಪಕಾರಿ ಗುಣ ಇರುವವರಿಗೆ ಪುಣ್ಯ, ಪರಪಿಡುಕನಿಗೆ ನರಕ ಎಂಬುದು ಸನಾತನ ಧರ್ಮದಲ್ಲಿದೆ. ಸನ್ನಡತೆ, ಸದ್ವಿಚಾರಗಳಿಂದ ಕೂಡಿರುವ ಮನುಷ್ಯ ದೊಡ್ಡ ವ್ಯಕ್ತಿಯಾಗಲು ಸಾಧ್ಯ, ಜಾತಿಗಳಿಂದಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ಧ ೨೫ನೇ ವರ್ಷದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಭಾಗವಹಿಸಿ ಅವರು ಮಾತನಾಡಿ ಪ್ರತಿಯೊಬ್ಬ ಮನುಷ್ಯನ ಆತ್ಮದಲ್ಲಿ ದೇವರು ನೆಲೆಸಿರುತ್ತಾನೆ. ನಮ್ಮೊಳಗೆ ಎಂದಿಗೂ ಕೀಳರಿಮೆ ಇರಕೂ ಡದು. ಒಂದು ಕಾಲದಲ್ಲಿ ರಾಜಮಹಾರಾಜರಿಗೆ ದೊರಕದ ದೇವರ ದರ್ಶನ, ಬೇಡರ ಕಣ್ಣಪ ಭಕ್ತಿಗೆ ಒಲಿ ದು ಪರಮಶಿವ ಪ್ರತ್ಯಕ್ಷನಾದನು. ಶ್ರೀ ರಾಮನು ಶಬರಿ ಭಕ್ತಿಗೆ ಮೆಚ್ಚಿ ಎಂಜಲು ತಿಂದರೆ ಹೊರತು ಜಾತಿಯಿಂ ದಲ್ಲ ಎನ್ನುವ ಸತ್ಯ ಅರಿಯಬೇಕು ಎಂದು ತಿಳಿಸಿದರು. ಜಗದ ಒಳಿತಿಗಾಗಿ ಶ್ರಮಿಸಿದ ಸವಿತಾ ಮಹರ್ಷಿ ಗುರುಗಳು, ಬಿ.ಆರ್.ಅಂಬೇಡ್ಕರ್, ವಿವೇಕಾನಂದ ರು ಉತ್ತಮ ವಿಚಾರಧಾರೆಗಳಿಂದ ಇಂದಿಗೂ ನೆನೆಸುವಂಥ…

Read More

ಚಿಕ್ಕಮಗಳೂರು: ಕೃಷಿ ಕ್ಷೇತ್ರವನ್ನು ಲಾಭದ ದೃಷ್ಟಿಯಿಂದ ನೋಡುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಆರೋಗ್ಯಕರ ಬದುಕಿಗೆ ಆಹಾರ ಪದ್ದತಿಗಳ ಬದಲಾವಣೆಗಾಗಿ ಸಾವಯವ ಕೃಷಿಗೆ ಹಾಗೂ ಸಿರಿಧಾನ್ಯಗಳಿಗೆ ಉತ್ತೇಜನ ನೀಡಲು ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು ಕಡೂರು ಕ್ಷೇತ್ರದ ಶಾಸಕ ಕೆ.ಎಸ್ ಆನಂದ್ ತಿಳಿಸಿದರು. ಆಹಾರ ಸಂಸ್ಕರಣಾ ಮಂತ್ರಾಲಯ, ಭಾರತ ಸರ್ಕಾರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಏಂPPಇಅ), ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಕಡೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಸಾವಯವ ಮತ್ತು ಸಿರಿಧಾನ್ಯ ಹಬ್ಬ ೨೦೨೪-೨೫ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯದ ಸಮಸ್ಯೆ ನಿವಾರಣೆಗೆ ಸಿರಿಧಾನ್ಯ ಬಹಳ ಮಹತ್ವ ಪಡೆಯುತ್ತಿದೆ. ಹಿಂದಿನ ಬಡವರ ಆಹಾರ ರಾಗಿ, ಜೋಳ, ನವಣೆ, ಸಜ್ಜೆ ಮುಂತಾದ ಸಿರಿಧಾನ್ಯಗಳು ಇಂದಿನ ಶ್ರೀಮಂತರ ಆಹಾರಗಳಾಗಿ ಬದಲಾಗಿ ಮಹತ್ವ ಪಡೆದುಕೊಂಡಿವೆ…

Read More

ಚಿಕ್ಕಮಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಸಾಕಷ್ಟು ಅನುದಾನ ನೀ ಡಿದರೆ, ಮಾನವ ಕನಿಷ್ಟ ರಕ್ತದಾನ ಮೂಲಕ ಅಮೂಲ್ಯವಾದ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು. ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಭೂಮಿಕಾ ಸಂಸ್ಥೆ ವಾರ್ಷಿಕೋತ್ಸವ ಪ್ರಯುಕ್ತ ಸ್ವಾಮಿ ವಿವೇಕಾನಂದ, ನೇತಾಜಿ ಸುಭಾಷ್‌ಚಂದ್ರ ಬೋಸ್ ಜಯಂತ್ಸೋತ್ಸವ ಅಂಗವಾಗಿ ಅಭ್ಯುದಯ-೨೦೨೫ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ಮನುಷ್ಯನಿಗೆ ಆರೋಗ್ಯ ಎಂಬುದು ಸಂಪತ್ತಿಗಿಂತ ಅತಿಮುಖ್ಯ. ನಿಯಮಿತ ಆಹಾರ, ವ್ಯಾಯಮ ದಿಂದ ಆರೋಗ್ಯಪೂರ್ಣ ಶರೀರವನ್ನು ಕಾಪಾಡಿಕೊಳ್ಳಬೇಕು. ಅಲ್ಲದೇ ತುರ್ತು ವೇಳೆ ರೋಗಿಗಳಿಗೆ ರಕ್ತದಾ ನ ಮೂಲಕ ನಾವೆಲ್ಲರೂ ಒಂದು, ಬಂಧುಗಳೆಂದು ಅರಿತಾಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ ವಿದ್ಯಾರ್ಥಿದೆಸೆಯಲ್ಲೇ ಮೈಮರೆತರೆ ಸಂಕಲ್ಪದ ದಾ ರಿಯಲ್ಲಿ ಮುನ್ನೆಡೆಯಲು ಸಾಧ್ಯವಿಲ್ಲ. ಅದರಂತೆ ಸಮಯಕ್ಕೆ ಸರಿಯಾಗಿ ರಕ್ತದಾನಕ್ಕೆ ಮುಂದಾಗದಿದ್ದಲ್ಲಿ ಮನುಷ್ಯನ ಪ್ರಾಣಕ್ಕೆ ಕುತ್ತು…

Read More

ಚಿಕ್ಕಮಗಳೂರು:  ವಿದ್ಯಾರ್ಥಿಗಳು ಶಿಕ್ಷಕರು ಹೇಳುವ ಪಾಠವನ್ನು ಶ್ರದ್ಧೆಯಿಂದ ಕಲಿತಾಗ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲಗೊಳ್ಳಲು ಸಹಕಾರಿಯಾಗುತ್ತದೆ ಎಂದು ಡಿಆರ್‌ಸಿಎಸ್‌ನ ಉಪನಿರ್ದೇಶಕರಾದ ತೇಜಸ್ವಿನಿ ಅಭಿಪ್ರಾಯಿಸಿದರು. ಅವರು ಇಂದು ಜೆವಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳು ಏರ್ಪಡಿಸಿದ್ದ ಕ್ರೀಡಾ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೆವಿಎಸ್ ಶಿಕ್ಷಣ ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಸೇವಾ ಮನೋಭಾವದಿಂದ ಈ ಸಂಸ್ಥೆಗಳು ನಡೆಯುತ್ತಿದೆ. ಕೇವಲ ಶಿಕ್ಷಣದಿಂದ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದರು. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕೂಟಗಳು ಆಯೋಜನೆಗೊಂಡಾಗ ಪಠ್ಯೇತರ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುತ್ತದೆ, ಜೊತೆಗೆ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ನಾಂದಿಯಾಗುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಇಟ್ಟು ಪರಿಶ್ರಮದಿಂದ ಪ್ರಯತ್ನ ಮಾಡಿದರೆ ಸಾಧನೆ ಮಾಡಬಹುದು. ಜೊತೆಗೆ ಪಠ್ಯಗಳ ವಿಷಯದಲ್ಲಿ ಅಧ್ಯಯನ ಮಾಡುವ ಮನೋಭಾವ ಬೆಳೆಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ಇಷ್ಟಪಟ್ಟು ಶಾಲೆಯಲ್ಲಿ ಕಲಿಯಬೇಕು ಆಗಮಾತ್ರ ತಮ್ಮ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಸಮಾಜದ ಎಲ್ಲರೊಂದಿಗೆ ಸಂಯಮದಿಂದ ಬೆರೆತಾಗ ಆರೋಗ್ಯಪೂರ್ಣ…

Read More

ಚಿಕ್ಕಮಗಳೂರು: : ಜನವರಿ ೨೬ರಂದು ಗಣರಾಜ್ಯೋತ್ಸವ ದಿನವನ್ನು ಜಿಲ್ಲಾಡಳಿತದ ವತಿಯಿಂದ ಅರ್ಥಪೂರ್ಣವಗಿ ಅಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ಣಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಬೆಳಗ್ಗೆ ೯:೦೦ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದ ಅವರು ಜಿಲ್ಲೆಯಾದ್ಯಂತ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು. ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಚತೆ, ಕಛೇರಿಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು. ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಧ್ವಜಾರೋಹಣ. ಪಥಸಂಚಲನ, ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ದತೆಗಳನ್ನು ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಪೊಲೀಸ್ ಇಲಾಖೆ…

Read More