Subscribe to Updates
Get the latest creative news from FooBar about art, design and business.
- e-paper (18-07-2025) Chikkamagalur Express
- ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ
- ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
- e-paper (16-07-2025) Chikkamagalur Express
- ಗಿರಿ ಪ್ರದೇಶದ ಪ್ರವಾಸೋದ್ಯಮ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ
Author: chikkamagalur express
ಚಿಕ್ಕಮಗಳೂರು: ಪೋಕ್ಸೊ ಕಾಯ್ದೆಗಳ ಕುರಿತು ಹಲವಾರು ಕಾರ್ಯಕ್ರಮಗಳನ್ನು ಮತ್ತು ಕಾರ್ಯಾಗಾರವನ್ನು ಆಯೋಜಿಸಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಗರದ ತಾಲ್ಲೂಕು ಪಂಚಾಯಿತಿ ಡಾ. ಬಿ. ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ, ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಜೀವನ ಅತಂತ್ರವಾಗುತ್ತಿದೆ. ಇಂತಹ ಚಟಗಳಿಂದ ಹೊರತಂದು ಅರಿವು ಮೂಡಿಸಿ ಮಕ್ಕಳನ್ನು ಜಾಗೃತರಾಗಿರುವಂತೆ ಮಾಡುವುದು…
ಚಿಕ್ಕಮಗಳೂರು: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಟೂಲ್ ಕಿಟ್‌ಗಳನ್ನು ಒದಗಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಿ ಕರಕುಶಲ ಮತ್ತು ಕುಶಲಕರ್ಮಿಗಳ ಕೈ ಬಲಪಡಿಸಲು ಅಗತ್ಯ ಕ್ರಮ ವಹಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಇಂದು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಕರಕುಶಲ ಮತ್ತು ಕುಶಲ ಕರ್ಮಿಗಳನ್ನು ಆರ್ಥಿಕವಾಗಿ ಬಲಪಡಿಸಿ ಅವರ ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ, ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಯೋಜನೆಯ ಫಲವನ್ನು ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದರು. ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಬಡಗಿಗಳು, ಶಿಲ್ಪಿಗಳು, ಕಮ್ಮಾರರು, ಮರಗೆಲಸಗಾರರು, ಕುಂಬಾರಿಕೆ, ಮಾಲಾಕಾರರು, ಮೇಸ್ತ್ರಿಗಳು ಸೇರಿದಂತೆ ೧೮ ವೃತ್ತಿಗಳನ್ನೊಳಗೊಂಡ ಕುಶಲಕರ್ಮಿಗಳಿಗೆ ಗುಣಮಟ್ಟದ…
ಚಿಕ್ಕಮಗಳೂರು: ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತುರ್ತು ಪರಿಸ್ಥಿತಿ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದರು. ನನ್ನ ಮೇಲೆ ದೈಹಿಕ ಹಲ್ಲೆ ಸಂಬಂಧ ಕಿಶೋರ್, ಅರುಣ್ ದೂರು ನೀಡಿದ್ದಾರೆ. ಪಶ್ಚಿಮ ಬಾಗಿಲಿನಲ್ಲಿ ನಮ್ಮ ಮೇಲೆ ಹಲ್ಲೆ ನಡೆದಾಗ ಅರುಣ್ ನನ್ನ ಜೊತೆ ಇದ್ರು, ಒಳಗಡೆ ಹಲ್ಲೆ ವೇಳೆ ಕಿಶೋರ್ ನನ್ನ ಜೊತೆ ಇದ್ರು, ಹಾಗಾಗಿ, ಅವರುಗಳು ದೂರು ನೀಡಿದ್ದಾರೆ. ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ. ಖಾನಾಪುರದಲ್ಲಿ ನಾನು ದೂರು ನೀಡಿದ್ದೇನೆ. ಎಫ್.ಐ.ಆರ್. ಕೊಟ್ಟಿಲ್ಲ ಎಂದು ಹೇಳಿದರು. ಎಫ್‌ಐಆರ್‌ಗಾಗಿ ನಿನ್ನೆ ಹೋಗಿದ್ದಾರೆ, ಇಂದು ಹೋಗಿದ್ದಾರೆ, ಕಮಿಷನರ್ 15 ದಿನ ಟೈಂ ಇದೆ ಎಂದಿದ್ದಾರೆ. ಬಿಜೆಪಿಗೆ ಬೇರೆ, ಕಾಂಗ್ರೆಸ್‌ಗೆ ಬೇರೆ ಕಾನೂನಿಲ್ಲ, ನನ್ನ ದೂರಿಗೂ ಸೂಕ್ತ ಕ್ರಮ ಕೈಗೊಳ್ಳಬೇಕಾಗಿತ್ತು, ಕಮಿಷನರ್ ಆ ಜಾಗದಲ್ಲಿ ಇರಲು ಸೂಕ್ತವಲ್ಲ, ನಾನು ಹೆದರಿ ಹೋಗುವವನಲ್ಲ, ನಮ್ಮ…
ಚಿಕ್ಕಮಗಳೂರು: ಇಂದಿನ ಮಕ್ಕಳು ಇಂದಿನ ಪ್ರಜೆಗಳು. ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್.ಮಂಜು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣಾ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಇಂದು ತೇಗೂರು ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ದೇಶದ ಆಸ್ತಿ. ಅವರಿಗೆ ಉತ್ತಮ ವಾತವರಣದಲ್ಲಿ ನೈತಿಕ ಪಾಠಗಳನ್ನು ಉಣಬಡಿಸಿ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಆತ್ಮಸ್ಥೈರ್ಯವಾಗಿದ್ದಾರೆ. ಮಕ್ಕಳ…
ಚಿಕ್ಕಮಗಳೂರು: ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಹಾಗೂ ಕಲೆ, ಸಾಹಿತ್ಯ ಅನಾವರಣಗೊಳಿಸುವುದೇ ಶಾಲಾ-ಕಾಲೇಜು ವಾರ್ಷಿಕೋತ್ಸವದ ಉದ್ದೇಶ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಕುವೆಂಪುಕಲಾ ಮಂದಿರದಲ್ಲಿ ನಗರದ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ೨೦೨೪-೨೫ನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ಜೀವನದ ಪ್ರಮುಖ ಅಂಶವಾಗಿದ್ದು, ಇದನ್ನು ಮರೆಯಬಾರದು. ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಪಿಯುಸಿ ಸಹಕಾರಿಯಾಗಿದೆ ಎಂದರು. ಶಿಕ್ಷಣ ಅಮೂಲ್ಯವಾದುದ್ದು. ಇದೊಂದು ಬೆಳೆಯುವ ಅಪೂರ್ವ ಸಾಧನವಾಗಿದೆ. ಶಿಕ್ಷಣ ಪ್ರಪಂಚದ ಅತ್ಯಾಧುನಿಕ ಆಯುಧವಾಗಿದ್ದು ಪ್ರಪಂಚದ ದಿಕ್ಕನ್ನು ಬದಲಾಯಿಸಲು ವಿದ್ಯೆಯನ್ನು ಬಳಸಬಹುದಾಗಿದೆ ಎಂದು ಹೇಳಿ ಶ್ರೀಮಂತನನ್ನು ಅವನ ಊರಿನಲ್ಲಿ ರಾಜನಿಗೆ ಒಂದು ದೇಶದಲ್ಲಿ ಮಾತ್ರ ಗೌರವಿಸುತ್ತಾರೆ ಆದರೆ, ವಿದ್ಯೆ ಕಲಿತು ಒಳ್ಳೆಯ ವಿದ್ವಾಂಸನಾದರೆ ಪ್ರಪಂಚದ ಎಲ್ಲಾ ದೇಶಗಳಲ್ಲಿಯೂ ಗೌರವ ಲಭಿಸುತ್ತದೆ ಎಂದು ಸಂಸ್ಕೃತದ ಶ್ಲೋಕದ ಕುರಿತು ವಿಶ್ಲೇಷಿಸಿದರು. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ವ್ಯಸನಮುಕ್ತ ಸಂಸ್ಕಾರ, ಸಂಸ್ಕೃತಿ ಕಲಿಸುವ ಕೆಲಸವನ್ನು ಉಪನ್ಯಾಸಕರು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು. ಸಾಮರಸ್ಯ, ಸಮಾನತೆಯಿಂದ ಕೂಡಿ ವಾರ್ಷಿಕೋತ್ಸವ…
ಚಿಕ್ಕಮಗಳೂರು: ನಮ್ಮ ಬಾಲ್ಯದಲ್ಲಿ ಸಂಗೀತದ ಪ್ರಜ್ಞೆಯನ್ನು ಕಾಪಾಡಿಕೊಂಡು ಬರಲು ಮೊಹಮ್ಮದ್ ರಫಿಯಂತಹ ಗಾಯಕರ ಗಾಯನ ಹಾಗೂ ಚಿತ್ರಗೀತೆಗಳು ನಮ್ಮ ಮೇಲೆ ಪ್ರಭಾವ ಬೀರಿವೆ ಎಂದು ಸಾಹಿತಿ ಕಲ್ಕಟ್ಟೆ ಪುಸ್ತಕದ ಮನೆಯ ನಾಗರಾಜರಾವ್ ಕಲ್ಕಟ್ಟೆ ಅಭಿಪ್ರಾಯ ವ್ಯಕ್ತಪಡಿಸಿದರು. ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಹಾಗೂ ಯುರೇಕಾ ಅಕಾಡೆಮಿಯ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಸಂಜೆ `ಏಕ್ ಶಾಮ್ ರಫಿ ಕೇ ನಾಮ್’ ಶೀರ್ಷಿಕೆಯಡಿ ಪೂರ್ವಿ ಗಾನಯಾನ-೧೦೨ ರ ಅನ್ವಯ ಆಯೋಜಿಸಿದ್ದ ಮೊಹಮ್ಮದ್ ರಫಿ ಗಾಯನದ ಹಿಂದಿ ಚಿತ್ರಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾವು ಬಾಲ್ಯದಲ್ಲಿ ರಾತ್ರಿ ೧೦ ಗಂಟೆಯವರೆಗೆ ಓದು ಮುಗಿಸಿದ ನಂತರ ರೇಡಿಯೋವನ್ನು ಕೇಳಬೇಕಿತ್ತು. ರೇಡಿಯೋದಲ್ಲಿ ವಿವಿಧ ಭಾರತಿಯ ಕನ್ನಡ ಚಿತ್ರಗೀತೆಯ ಬಳಿಕ ಹಿಂದಿಯ ಮೊಹಮ್ಮದ್ ರಫಿ, ಮುಖೇಶ್, ಲತಾ ಮಂಗೇಶ್ಕರ್ ಮುಂತಾದವರ ಗೀತೆಗಳನ್ನು ಕೇಳುತ್ತಾ ತಡರಾತ್ರಿ ನಾವು ನಿದ್ರಿಸುತ್ತಿದ್ದೆವು. ನಮ್ಮಮ್ಮ ಎಚ್ಚರವಾದಾಗ ಮಕ್ಕಳು ರೇಡಿಯೋ ಆರಿಸಿಲ್ಲ ಎಂದು ತಿಳಿದು ಬೆಳಗಿನ ಜಾವ ೩ ಗಂಟೆಗೊ, ೪…
ಚಿಕ್ಕಮಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿ ಪ್ರಕರಣದಲ್ಲಿ ಜಾಮೀನು ಸಿಕ್ಕಿದ ಬಳಿಕ ನಗರಕ್ಕೆ ಆಗಮಿಸಿದದು, ಪತ್ನಿಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಅವರ ಬಿಡುಗಡೆಗೆ ಹಲವರು ಹರಕೆ ಹೊತ್ತಿದ್ದರು. ಶನಿವಾರ ರಾತ್ರಿ ಆಗಮಿಸಿದಾಗ ಹಲವು ಕಾರ್ಯಕರ್ತರು ಹರಕೆ ಹೊತ್ತಿದ್ದ ಮಾಹಿತಿ ತಿಳಿದು ಪತ್ನಿ ಪಲ್ಲವಿ ಹಾಗೂ ಹರಕೆ ಹೊತ್ತಿದ್ದ ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿದರು ನಂತರ ಸುದ್ದಿಗರರೊಂದಿಗೆ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್‌ನವರಿಗೆ ಒಂದು ಕಾನೂನು, ಬಿಜೆಪಿಯವರಿಗೆ ಇನ್ನೊಂದು ಕಾನೂನಾ ಎಂದು ಪ್ರಶ್ನಿಸಿದ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದರು.ಹಮ್ಮುರಾಬಿ ಸಿದ್ದಾಂತದ ಮೇಲೆ ನಂಬಿಕೆ ಇಟ್ಟವರು ಮಾತ್ರ ಕೊಲೆ ಮಾಡುವ ಕೆಲಸ ಮಾಡುತ್ತಾರೆಂದು ಹೇಳಿದರು. ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುತ್ತಿಲ್ಲ. ಅವರಿಗೆ ನಂಬಿಕೆ ಇರುವುದು ಹಮುರಾಬಿ ಸಿದ್ಧಾಂತ ದ ಮೇಲೆ ಎಂಬುದು ಅವರ ಮಾತಿನಲ್ಲಿ ಅರ್ಥವಾಗುತ್ತಿದೆ.ನಾನು ಕೊಟ್ಟ…
Inauguration ceremony:ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ
ಚಿಕ್ಕಮಗಳೂರು: ಪತ್ರಕರ್ತರ ನಡುವೆ ಇರುವ ಗುಂಪುಗಾರಿಕೆ, ಭಿನ್ನಾಭಿಪ್ರಾಯಗಳಿಂದಾಗಿ ಪತ್ರಕರ್ತರ ಯಾವ ಸಮಸ್ಯೆಗಳಿಗೂ ಪರಿಹಾರ ಸಿಗದಂತಾಗಿದೆ. ಪತ್ರಕರ್ತರು ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಬಲಿಷ್ಟವಾದಲ್ಲಿ ಮಾತ್ರ ಪತ್ರಕರ್ತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ ಎಂದು ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಷ್ಟಿçÃಯ ಅಧ್ಯಕ್ಷ ಬಿ.ಜಿ.ವಿಜಯ್ ಹೇಳಿದ್ದಾರೆ. ರವಿವಾರ ತಾಲೂಕಿನ ಬಿಂಡಿಗ ಗ್ರಾಮದಲ್ಲಿರುವ ಬಿಂಡಿಗ ರೆಸಾರ್ಟ್ನಲ್ಲಿ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇಶಾದ್ಯಂತ ಇರುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಪ್ರಸಕ್ತ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ ಈ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಮಾಲಕರು, ಪತ್ರಕರ್ತರಲ್ಲಿನ ಅಭಿಪ್ರಾಯ ಬೇಧ, ಗುಂಪುಗಾರಿಕೆ ಕಾರಣ. ಇದರಿಂದಾಗಿ ಈ ವರ್ಗದ ಪತ್ರಕರ್ತರ ಧ್ವನಿ ಯಾರಿಗೂ ಕೇಳದಂತಾಗಿದೆ ಎಂದರು. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಮತ್ತು ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಸಂಬAಧ ಪ್ರಧಾನಿ ನರೇಂದ್ರ ಮೋದಿ ಅವರನ್ನೂ…
ಚಿಕ್ಕಮಗಳೂರು: ಜಾಮೀನು ದೊರೆತು ಬಿಡುಗಡೆಯಾದ ಬಳಿಕ ನಗರಕ್ಕೆ ಶನಿವಾರ ರಾತ್ರಿ ಬಂದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಕಾರ್ಯಕರ್ತರು ಭವ್ಯ ಸ್ವಾಗತ ನೀಡಿದರು. ತಾಲ್ಲೂಕಿನ ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ, ಸ್ವಾಗತ ಕೋರಿ ಸಂಭ್ರಮಿಸಿದರು. ಹಿರೇಮಗಳೂರು, ಕೋಟೆ ಸೇರಿ ಅಲ್ಲಲ್ಲಿ ಕಾರ್ಯಕರ್ತರು, ಅಭಿಮಾನಿಗಳು ತಡೆದು ಜೈಕಾರ ಮೊಳಗಿಸಿದರು. ಆಜಾದ್ ಪಾರ್ಕ್ ವೃತ್ತದಲ್ಲಿ ಮಹಿಳಾ ಕಾರ್ಯಕರ್ತರು, ಹೂವುಗಳಿಂದ ಸಿ.ಟಿ.ರವಿ ಅವರ ಹೆಸರು ಬರೆದು ಕಾದಿದ್ದರು. ಬಂದ ಕೂಡಲೇ ಜೈಕಾರ ಮೊಳಗಿಸಿದರು. ಕಾರ್ಯಕರ್ತರು ಜೆಸಿಬಿ ಮೇಲೆ ಹತ್ತಿ ಹೂಮಳೆ ಸುರಿಸಿದರು. ನಂತರ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಹನುಮಂತಪ್ಪ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಕಾರ್ಯಕರ್ತರು ಸಂಭ್ರಮಿಸಿದರು. ಮೆರವಣಿಗೆ ಬರುವ ಮುನ್ನ ದಾರಿಯುದ್ದಕ್ಕೂ ಖಾಸಗಿ ಆಂಬುಲೆನ್ಸ್‌ಗಳ ಮೂಲಕ ಸೈರನ್ ಮೊಳಗಿಸಲಾಯಿತು. ಮನೆಗೆ ತೆರಳಿದಾಗ ಪತ್ನಿ ಪಲ್ಲವಿ ಅವರು ಆರತಿ ಎತ್ತಿ ಬಳಿಕ ತಬ್ಬಿಕೊಂಡು ಕಣ್ಣೀರಿಟ್ಟರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿ.ಟಿ.ರವಿ, ‘ಹೆದರಿ ಬದುಕುವುದನ್ನು ನನ್ನ ತಾಯಿ ಹೇಳಿಕೊಡಲಿಲ್ಲ.…