Author: chikkamagalur express

ಚಿಕ್ಕಮಗಳೂರು: ಕರ್ನಾಟಕ ಬೆಳೆಗಾರರ ಒಕ್ಕೂಟದಿಂದ ಡಿ.೨೩ ರಂದು ಸಕಲೇಶಪುರದಲ್ಲಿ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಎಚ್.ಟಿ.ಮೋಹನ್ ಕುಮಾರ್ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಕಲೇಶಪುರದ ಎಪಿಎಂಸಿ ಆವರಣದಲ್ಲಿಬೆಳಗ್ಗೆ ೧೦.೩೦ ಕ್ಕೆ ಆರಂಭವಾಗುವ ಸಮಾವೇಶವನ್ನು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್ ಉದ್ಘಾಟಿಸಲಿದ್ದಾರೆ. ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ರಾಜ್ಯ ಅರಣ್ಯ ಸಚಿವ ಈಶ್ವರಖಂಡ್ರೆ, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಪ್ರತಿ ಪಕ್ಷ ನಾಯಕ ಆರ್.ಅಶೋಕ್, ಸಂಸದರಾದ ಶ್ರೇಯಸ್ ಪಟೇಲ್, ಕೋಟಾಶ್ರೀನಿವಾಸ ಪೂಜಾರಿ, ಯದುವೀರ್ ಕೃಷ್ಣದತ್ ಒಡೆಯರ್, ತೇಜಸ್ವಿ ಸೂರ್ಯ ಹಾಗೂ ಕಾಫಿ ಬೆಳೆಯುವ ಮೂರು ಜಿಲ್ಲೆಗಳ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತಿತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಕೃಷಿ ವಸ್ತು ಪ್ರದರ್ಶನ, ಯಂತ್ರೋಪಕರಣಗಳ ಪ್ರದರ್ಶನಕ್ಕಾಗಿ ೧೦೦ ಮಳಿಗೆಗಳನ್ನು ತೆರೆಯಲಾಗುವುದು. ಕಾಫಿ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು. ಬೆಳಗಾರರ…

Read More

ಚಿಕ್ಕಮಗಳೂರು: ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ʼನೂರು ಜನ್ಮಕೂʼ ಕಾಫಿ ನಾಡು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಣಗೊಂಡಿದೆ. ಇದೇ ಡಿಸೆಂಬರ್‌ 23ರಿಂದ ಪ್ರತಿ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡವಾಹಿನಿಯಲ್ಲಿ ʼನೂರು ಜನ್ಮಕೂʼ ಪ್ರಸಾರವಾಗಲಿದೆ. ಅದ್ದೂರಿ ಮತ್ತು ಪ್ರಕೃತಿ ಸೌಂದರ್ಯದ ದೃಶ್ಯ ವೈಭವವನ್ನು ಕಿರುತೆರೆಯಲ್ಲಿ ಆನಂದಿಸಬಹುದು. ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿಯಾಗಿಸುತ್ತದೆ. ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ. ಉನ್ನತ ಮಟ್ಟದ ಗ್ರಾಫಿಕ್ಸ್ ಹೊಂದಿರುವ ಈ ಧಾರವಾಹಿ ಕನ್ನಡ ಪ್ರೇಕ್ಷಕರ ಮನಸೂರೆಗೊಳಿಸುತ್ತದೆ. ಕಥೆಯಲ್ಲೇನಿದೆ?: ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕಥೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕತೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ…

Read More

ಚಿಕ್ಕಮಗಳೂರು: ಪ್ರಜಾಪ್ರಭುತ್ವದ ದೇಗುಲದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಈ ಬಗ್ಗೆ ಸದನ ಸಮಿತಿ ರಚಿಸಿ ಸತ್ಯಾಂಶ ಹೊರತರಬೇಕು ಎಂದು ವಿಧಾನಪರಿಷತ್ ನಲ್ಲಿ ನಡೆದಿರುವ ಸಚಿವೆ ಹೆಬ್ಬಾಳ್ಕಾರ್ ಬಗ್ಗೆ ಸಿ.ಟಿ.ರವಿ ನಿಂಧನೆ ಪ್ರಕರಣದ ಬಗ್ಗೆ ವಿಧಾನಪರಿಷತ್ ಉಪಸಭಾಪತಿ ಎಂ.ಕೆ. .ಪ್ರಾಣೇಶ್‌ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಪರಿಷತ್ತಿಗೆ ಅದರದ್ದೇ ಆದ ಇತಿಹಾಸವಿದೆ.ಚಿಂತಕರ ಚಾವಡಿ ಎಂಬ ಹೆಸರಿದೆ. ಆದರೆ, ಕಾಂಗ್ರೆಸ್ ಸರಕಾರ ಸಂವಿಧಾನಕ್ಕೆ ಅಪಮಾನ ಮಾಡುವಂತಹ ರೀತಿಯಲ್ಲಿ ಪರಿಷತ್ತಿನಲ್ಲಿ ನಡೆದುಕೊಂಡಿದೆ. ಪರಿಷತ್‌ಸಭಾಪತಿ ಅವರು ಇಂತಹ ಘಟನೆ ನಡೆದಿರುವ ಬಗ್ಗೆ ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿಯವರು ಇದೊಂದು ಅಪರಾದ ಪ್ರಕರಣ ಎಂದು ಬಿಂಬಿಸಿ ಇದನ್ನು ರಾಜಕೀಯಕರಣ ಗೊಳಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ವಿಧಾನಪರಿಷತ್ತಿನಲ್ಲಿ ಇಂತ ಘಟನೆ ನಡೆಯಬಾರದಿತ್ತು. ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಬಂಧನ ಮಾಡಿದರೂ ಈ ಬಗ್ಗೆ ಸಭಾಪತಿಗೆ ಮಾಹಿತಿ ನೀಡಿಲ್ಲ. ಮಾಚಿ ಸಚಿವರೊಬ್ಬರನ್ನು ಕೊಲೆಗಾರನಂತೆ ಬಂಸಿದ್ದಾರೆ. ಎನ್ ಕೌಂಟರ್ ಮಾಡುವವರನ್ನು ಕರೆದುಕೊಂಡು ಹೋಗುವವರಂತೆ ವಾಹನದಲ್ಲಿ ಸುತ್ತಿಸಿದ್ದಾರೆ ಎಂದರು. ವಿಧಾನಪರಿಷತ್ತಿನಲಿ ಏನು ನಡೆದಿದೆ…

Read More

ಚಿಕ್ಕಮಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೂಡಲೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಮತೀಯ ಭಾವನೆ ಕೆರಳಿಸಿ ಎಲ್ಲಾ ವರ್ಗದ ಜನರಿಗೆ ತೊಂದರೆ ನೀಡುವುದೇ ಬಿಜೆಪಿ ಕಾಯಕ. ಇದೀಗ ಬಿಜೆಪಿ ಹಿರಿಯ ನಾಯಕರೇ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಮನಸ್ಥಿತಿಯನ್ನು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಘ ಪರಿವಾರ ಎಂದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿಲ್ಲ. ಇನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಕೆಲಸ ಮಾಡುವ ಪಕ್ಷ. ಇವರಿಬ್ಬರೂ ತಮ್ಮ ಅಂತರಾತ್ಮದಲ್ಲಿ ದುರ್ಬಲ ವರ್ಗದವರಿಗೆ ನೆರವಾಗುವ ಕೆಲಸವನ್ನು ಎಂದೂ ಮಾಡಿಲ್ಲ. ಹಿಂದೆ ಚಂದ ಪರಿವಾರದವರು…

Read More

ಚಿಕ್ಕಮಗಳೂರು: ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸಿದರು. ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಮೂರ್‍ನಾಲ್ಕು ಕಡೆಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತರರ ವಿರುದ್ಧ ಘೋಷಣೆಗಳನ್ನು ಕೂಗಿ ಸಿ.ಟಿ.ರವಿ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು. ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆ ಎಂಜಿ ರಸ್ತೆಯ ಹಲವು ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ನೇತೃತ್ವದಲ್ಲಿ ಒಂದು ತಂಡ ಎಂಜಿ ರಸ್ಯೆಯಲ್ಲಿ ಮೆರವಣಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ಹನುಮಂತಪ್ಪ ಸರ್ಕಲ್ ಬಳಿ ಅವರನ್ನು ಪೊಲೀಸರು ತಡೆದು ಎಲ್ಲರನ್ನೂ ಬಂಧಿಸಿ ಕಡೂರು ತಲ್ಲೂಕು ಯಗಟಿ ಪೊಲೀಸ್ ಠಾಣೆಗೆ ಕರೆದೊಯ್ದರು. ಇದರ ನಡುವೆ ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಬಂದ್ ಮಾಡುವಂತೆ ಮನವಿ ಮಾಡಿದರು.…

Read More

ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಶಿಸ್ತು. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಭಾರತ ಸೇವಾದಳದ ಘಟಕಗಳನ್ನು ತೆರೆಯಬೇಕು ಎಂದು ಮಾಜಿ ಶಾಸಕ ಐ.ಬಿ. ಶಂಕರ್ ಸಲಹೆ ಮಾಡಿದರು. ನಗರದ ಬಸವನಹಳ್ಳಿಯ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಸ್ಥಾಪಿಸಿರುವ ಭಾರತ ಸೇವಾದಳದ ಸುಭಾಷ್ ಶಾಖೆಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿಂದು ಶಿಕ್ಷಣವಂತರ ಸಂಖ್ಯೆ ಹೆಚ್ಚಿದೆ. ಆದರೆ ಇಂದಿನ ಪೀಳಿಗೆಯಲ್ಲಿ ಶಿಸ್ತು. ಸಂಯಮ. ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ಕೊರತೆ ಇದೆ. ಅದರಿಂದಾಗಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ವಿಷಾದಿಸಿದರು. ದೇಶದ ಸ್ವಾತಂತ್ರ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತ ಸಂಸ್ಥೆ ಭಾರತ ಸೇವಾದಳ. ಅದು ಶಿಸ್ತು. ಸಂಯಮ. ರಾಷ್ಟ್ರಭಕ್ತಿ ಮತ್ತು ದೇಶಪ್ರೇಮವನ್ನು ಬೆಳೆಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದ ಅವರು ವಿದ್ಯಾರ್ಥಿಗಳು ಸೇವಾದಳದಲ್ಲಿ ಕಲಿತಿದ್ದನ್ನು ಎಂದಿಗೂ ಮರೆಯಬಾರದು ಅದನ್ನು ಜೀವನಪೂರ್ತಿ ಪಾಲಿಸಬೇಕು ಎಂದು ಕಿವಿ ಮಾತು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್ ಮಾತನಾಡಿ ವಿದ್ಯಾರ್ಥಿಗಳು ಸೇವಾದಳಕ್ಕೆ ಸೇರ್ಪಡೆಗೊಳ್ಳುವ ಮೂಲಕ ಶಿಸ್ತು.…

Read More

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂದು ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಅವಾಚ್ಯಪದ ಬಳಕೆ ಆರೋಪಿಸಿ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು, ಪದಚ್ಯುತಿಗೆ ಆಗ್ರಹ : ಹೀಗಾಗಿ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ…

Read More

ಚಿಕ್ಕಮಗಳೂರು: ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಸಿ.ಟಿ.ರವಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಗುರುವಾರ ಸಂಜೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕೆಲ ಕಾಲದ ಬಳಿಕ ಬಿಡುಗಡೆ ಮಾಡಿದರು. ಮಹಿಳಾ ಸಚಿವರ ವಿರುದ್ಧ ಅವಾಚ್ಯ ಶಬ್ಧ ಬಳಕೆ ಮಾಡಿರುವ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವುದು ಮಾತ್ರವಲ್ಲದೆ ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಅನ್ನು ಚಿಂತಕರ ಚಾವಡಿ ಎನ್ನಲಾಗುತ್ತದೆ. ಆದರೆ ನಾಲ್ಕ ಬಾರಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿರುವ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಮಾಡಿರುವುದು ಬಿಜೆಪಿ ಸಂಸ್ಕೃತಿ ತೋರಿಸುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಿ.ಟಿ.ರವಿ ಅವರಿಗೆ ವಿಧಾನ ಪರಿಷತ್‌ನಲ್ಲಿ ಮಾತನಾಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು. ಸಿ.ಟಿ.ರವಿ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ…

Read More