Subscribe to Updates
Get the latest creative news from FooBar about art, design and business.
- ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡುವಂತೆ ಸೂಚನೆ
- 2047ಕ್ಕೆ `ಏಳು ಬೀಜಗಳಿಂದ ಏಳು ಲಕ್ಷ ಟನ್ಗೆ ಭಾರತದ ಕಾಫಿ ಜಿಗಿತ’
- e-paper (18-07-2025) Chikkamagalur Express
- ನಿವೃತ್ತ ಪಿಂಚಣಿದಾರರಿಗೆ ಯಥಾವತ್ ಸೌಲಭ್ಯ ಪರಿಷ್ಕರಿಸಲು ಮನವಿ
- ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ
- e-paper (17-07-2025) Chikkamagalur Express
- ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ
- ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?
Author: chikkamagalur express
ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಗುರುವಾರ ರಾತ್ರಿ ಟೈರ್ ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ನಡೆಸಿದರು. ಬಸವನಹಳ್ಳಿಯ ಸಿಟಿ ರವಿ ಅವರ ನಿವಾಸದಿಂದ ಪ್ರತಿಭಟನ ಮೆರವಣಿಗೆ ಮೂಲಕ ಹನುಮಂತಪ್ಪ ವೃತ್ತಕ್ಕೆ ಆಗಮಿಸಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಾಣ ಮಾಡಿ ರಸ್ತೆ ತಡೆ ನಡೆಸಿದರು. ಬಳಿಕ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುಮಾರು ಒಂದು ಗಂಟೆಗಳ ಕಾಲ ಕಡೂರು ಮಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಸಿ.ಟಿ.ರವಿ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ ಸುಳ್ಳು ದೂರನ್ನು ಆಧರಿಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಹನುಮಂತಪ್ಪ ವೃತ್ತದಲ್ಲಿ ಟೈರ್…
ಚಿಕ್ಕಮಗಳೂರು: ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ವಾರ್ಷಿಕ ಮಹಾಸಭೆ ಡಿ.೨೬ರ ಗುರುವಾರ ಬೆಳಿಗ್ಗೆ ೧೦:೩೦ಕ್ಕೆ ಎಐಟಿ ವೃತ್ತದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ಕೆ.ಆರ್.ಯೋಗೀಶ್ ಲಿಂಗದಹಳ್ಳಿ ತಿಳಿಸಿದರು. ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾರ್ಷಿಕ ಮಹಾಸಭೆಯನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ಸಂಘದ ಅಧ್ಯಕ್ಷ ಕೆ.ಆರ್.ಯೋಗೀಶ್ ಅಧ್ಯಕ್ಷತೆವಹಿಸುವರು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಶಾಸಕ ಎಚ್.ಡಿ.ತಮ್ಮಯ್ಯ ಉಪಸ್ಥಿತರಿರುವರು ಎಂದರು. ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ.ರವಿ, ಶಾಸಕರಾದ ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ನಯನ ಮೋಟಮ್ಮ ಹಾಗೂ ಕರ್ನಾಟಕ ರಾಜ್ಯ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷರಾದ ಕೆ.ಎಚ್.ನಾಗರಾಜ ಲೋಕಿಕೆರೆ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ.ಸಿಇಓ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್…
ಚಿಕ್ಕಮಗಳೂರು: ಮಕ್ಕಳಲ್ಲಿರುವ ಅಡಗಿರುವ ಕಲೆ, ಸಂಗೀತ, ಸಾಹಿತ್ಯ ಹಾಗೂ ಸಾಂ ಸ್ಕೃತಿಕ ಚಟುವಟಿಕೆಗಳನ್ನು ಹೊರಹೊಮ್ಮಿಸುವ ಶಿಕ್ಷಕರು ಶ್ರಮಿಸಿದಾಗ ವಿದ್ಯಾರ್ಥಿಗಳು ಸಮಾಜದ ಮು ಂಚೂಣಿಯಲ್ಲಿ ಪ್ರತೀತಿ ಹೊಂದಲು ಸಾಧ್ಯ ಎಂದು ಉಪವಿಭಾಗಾಧಿಕಾರಿ ದಲ್ಜಿತ್‌ಕುಮಾರ್ ಹೇಳಿದರು. ನಗರದ ಗಾಯತ್ರಿ ಸಮುದಾಯ ಭವನದಲ್ಲಿ ಪಿ.ಎಂ.ಶ್ರೀ ಕೇಂದ್ರಿಯ ವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಆರಂಭಗೊಂಡಿರುವ ಕೇಂದ್ರೀಯ ವಿದ್ಯಾಲಯ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ಒದಗಿಸುತ್ತಿದೆ. ಪಠ್ಯದ ಜೊತೆಗೆ ಕ್ರೀಡಾಕೂಟ, ಸಾಂಸ್ಕ್ರತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರೋತ್ಸಾಹಿಸುತ್ತಿರುವುದು ಖುಷಿಯ ಸಂಗತಿ ಎಂದರು. ದೇಶಾದ್ಯಂತ ಹಲವಾರು ಶಾಲೆಗಳನ್ನು ಹೊಂದಿರುವ ಕೇಂದ್ರಿಯ ವಿದ್ಯಾಲಯ ಮಕ್ಕಳಲ್ಲಿ ಪಠ್ಯದ ಸಮ ಗ್ರ ಅರಿವು, ಆತ್ಮಸ್ಥೈರ್ಯ, ಶಾರೀರಿಕ ಹಾಗೂ ದೈಹಿಕ ಶಕ್ತಿ ತುಂಬಿ ಕಾಳಜಿ ವಹಿಸುತ್ತಿರುವುದು ಭವಿಷ್ಯದಲ್ಲಿ ಮಕ್ಕಳ ಬದುಕಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದರು. ಕೇಂದ್ರಿಯ ವಿದ್ಯಾಲಯ ಪ್ರಾಚಾರ್ಯೆ ಮಾಲತಿ ಮಾತನಾಡಿ ಪ್ರಸ್ತುತ ಶಾಲೆಯಲ್ಲಿ ೩೫೦ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು ಒಂದರಿಂದ…
ಚಿಕ್ಕಮಗಳೂರು: ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಗೆ ರಾಜ್ಯಸರ್ಕಾರ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಗಳ ಮೋರ್ಚಾದ ನೇತೃತ್ವದಲ್ಲಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಕಾರ್ಯಕರ್ತರು ಮುಖ್ಯ ಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ರಾಜ್ಯಸರ್ಕಾರದ ಸಚಿವರು, ಶಾಸ ಕರುಗಳು ಜನಪರ ಅಭಿವೃದ್ದಿ ಕಾರ್ಯಗಳನ್ನು ಕುಂಠಿತಗೊಳಿಸಿದೆ. ಕೇವಲ ವೈಯಕ್ತಿಕ ಲಾಭವನ್ನು ಹೆಚ್ಚಳ ಗೊಳಿಸಿ ಸರ್ಕಾರದ ಸಾವಿರಾರು ಕೋಟಿ ಹಣವನ್ನು ಹಗಲು ದರೋಡೆ ನಡೆಸುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್‌ನ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಪೂರೈ ಸುತ್ತಿದೆ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಂಡರೆ ಯಾವುದೇ ಜಿಲ್ಲೆ ಅಥವಾ ತಾಲ್ಲೂಕಿಗೆ ಸಿದ್ದರಾಮ ಯ್ಯ ಸರ್ಕಾರ ಅನುದಾನ ನೀಡಿಲ್ಲ. ಕೇವಲ ಗ್ಯಾರಂಟಿ ಯೋಜನೆಗೆ ಒದಗಿಸುವುದೇ ದೊಡ್ಡ ಸಾಧನೆಯಾ ಗುತ್ತಿದೆ ಎಂದು ಟೀಕಿಸಿದರು. ಜನಸಾಮಾನ್ಯರ ಬದುಕಿನಲ್ಲಿ ಆಟವಾಡುವ ಜೊತೆಗೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಪ್ರಕರಣ ದಾಖಲಿಸುವುದು, ಸಂಘಟನೆ…
ಚಿಕ್ಕಮಗಳೂರು: ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದ ಸಂಚಾರಿ ಠಾಣೆ ಸಿಬ್ಬಂದಿಗಳನ್ನು ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು ಸನ್ಮಾನಿಸಿದರು. ಹರಿಹರದಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಲಿ ಚಿಕ್ಕನಹಳ್ಳಿಯ ೫೧ ವರ್ಷದ ಮಹಿಳೆ ಯಲ್ಲಮ್ಮ ಅವರು ನವೆಂಬರ್ ೩೦ ರ ರಾತ್ರಿ ೧೦.೩೦ ರ ಸಮಯದಲ್ಲಿ ಎಐಟಿ ಸರ್ಕಲ್ ಬಳಿ ನಡೆದು ಬರುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದರು. ಚಾಲಕನು ಕಾರಿನೊಂದಿಗೆ ಪರಾರಿಯಾಗಿದ್ದ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಠಾಣಾಧಿಕಾರಿ ಬಿ.ಸಿ.ಧನಂಜಯ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಧನಪಾಲ ನಾಯಕ್ ಮತ್ತು ರಘು ಅವರು ಶ್ರಮ ಪಟ್ಟು ಪ್ರಕರಣವನ್ನು ಬೇಧಿಸಿ ಕಾರು ಚಾಲಕನನ್ನು ಬಂಧಿಸಿದ್ದರು. ಅವರಿಗೆ ಮೆಕ್ಯಾನಿಕ್ ಪ್ರವೀಣ್ ಎಂಬುವವರು ಸಹಕಾರ ನೀಡಿದ್ದರು. ಅಪಘಾತದಲ್ಲಿ ಮೃತಪಟ್ಟ ಯಲ್ಲಮ್ಮ ಅವರಿಗೆ ನ್ಯಾಯ ಸಿಗಬೇಕು ಎನ್ನುವುದು ನಮ್ಮ ಒತ್ತಾಯವಾಗಿತ್ತು ಎಂದು ತಿಳಿಸಿದ ಗಾಯತ್ರಿ ಶಾಂತೇಗೌಡ ಅವರು,…
ಚಿಕ್ಕಮಗಳೂರು: ಡಿಸೆಂಬರ್ ೧೪ ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ೬೬೪೮ ಪ್ರಕರಣಗಳನ್ನು ರಾಜಿ ಸಂದಾನಕ್ಕಾಗಿ ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ ಒಟ್ಟು ೩೦೩೪ ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದ್ದಾರೆ. ಸರ್ವರಿಗೂ ನ್ಯಾಯ ಇದು ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶರಾಗಿದ್ದು, ಲೋಕ ಅದಾಲತ್ ಮೂಲಕ ಜನರಿಗೆ ತ್ವರಿತ ಮತ್ತು ಸಕ್ಷಮ ನ್ಯಾಯ ಒದಗಿಸುವಲ್ಲಿ ಮುಖ್ಯ ಪಾತ್ರವಹಿಸುತ್ತಿದೆ. ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳ ಪೈಕಿ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ೧೨, ಚೆಕ್ ಅಮಾನ್ಯ ಪ್ರಕರಣಗಳು ೧೪೩, ಬ್ಯಾಂಕ್ ಪ್ರಕರಣಗಳು ೧೪, ಹಣ ವಸೂಲಾತಿ ಪ್ರಕರಣಗಳು ೧೬, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು ೧೭, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ೦೧, ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆ) ಪ್ರಕರಣಗಳು ೦೨, ವೈವಾಹಿಕ ಮತ್ತು ಕುಟುಂಬ ನ್ಯಾಯಾಲಯದ ಪ್ರಕರಣಗಳು ೦೪, ಭೂಸ್ವಾಧೀನಾ ಪ್ರಕರಣಗಳು ೦೬, ಸಿವಿಲ್…
ಚಿಕ್ಕಮಗಳೂರು: ದೈನಂದಿನ ಬದುಕಿನಲ್ಲಿ ತನು, ಮನ, ನುಡಿ ಕನ್ನಡವಾಗಿರಬೇಕು. ಹತ್ತಾರು ಭಾಷೆ ಕಲಿತರೆ ತಪ್ಪೇನಿಲ್ಲ, ಮುಖ್ಯವಾಗಿ ಮಾತೃಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ತಾಲ್ಲೂಕಿನ ಶಿರವಾಸೆ ಗ್ರಾಮದ ಶ್ರೀ ಗಜಾನನ ಕಲಾಮಂದಿರದಲ್ಲಿ ಜಾಗರ ಕಸಾಪ ಹೋಬಳಿ ಘಟಕ ದಿಂದ ಏರ್ಪಡಿಸಿದ್ಧ ೬೯ನೇ ಕನ್ನಡ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಸಂಜೆ ಪಾಲ್ಗೊಂಡು ಅವರು ಮಾತನಾಡಿದರು. ಜೀವನೋದ್ಯಕ್ಕಾಗಿ ಯಾವುದೇ ರಾಜ್ಯ ಅಥವಾ ವಿದೇಶಗಳಿಗೆ ತೆರಳಿ ಸ್ಥಳೀಯ ಭಾಷೆ ಕಲಿತು ಕೊಂ ಡರೆ ತಪ್ಪಿನಿಲ್ಲ. ಜೊತೆಗೆ ಕನ್ನಡ ಭಾಷೆಯ ಸ್ವಾಭಿಮಾನ, ಘನತೆ ಹಾಗೂ ಸಂಸ್ಕೃತಿ ಉಳಿಸುವ ಕೆಲಸವಾಗಬೇ ಕು. ಹೀಗಾಗಿ ಕನ್ನಡಿಗರಾದ ನಾವುಗಳು ಎಲ್ಲೇ ತೆರಳಿದರೂ ಭಾಷೆಯ ಸೊಗಡನ್ನು ಇತರರಿಗೂ ಪರಿಚಯಿ ಸಬೇಕು ಎಂದು ಹೇಳಿದರು. ನಾಡಿನ ನೆಲದಲ್ಲಿ ಜನಿಸಿರುವ ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಎಂದಿಗೂ ನಶಿಸದಂತ ವಿಶೇಷ ಶಕ್ತಿಯಿದೆ. ಆಯಾಯ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಗೌರವಿಸದಂತೆ, ಕನ್ನಡಿಗರಾದ ನಾವು ಗಳು…
ಚಿಕ್ಕಮಗಳೂರು: ಮತದಾರರ ಬಿಟ್ಟಿ ಭಾಗ್ಯಗಳಿಗೆ ಹಣ ನೀಡುವ ಸರ್ಕಾರ ನೊಂದಾಯಿತ ಗೋಶಾಲೆಗಳಿಗೆ ಅನುದಾನ ಬಿಡುಗಡೆ ಮಾಡದಿರುವ ಪರಿಣಾಮ ಗೋವುಗಳ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಕೊಪ್ಪ ತಾಲ್ಲೂಕು ಹೆರೂರು ಕೆಮ್ಮಣ್ಣು ಶ್ರೀ ಕಾಮಧೇನು ಗೋಸೇವಾ ಟ್ರಸ್ಟ್ ನಾಗೇಶ್ ಅಂಗೀರಸ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಗೋ ನಿರ್ಲಕ್ಷ್ಯದಿಂದಾಗಿ ಗೊಬ್ಬರವನ್ನು ಬಳಕೆ ಮಾಡುತ್ತಿಲ್ಲ. ಜೊತೆಗೆ ಭೂಮಿಗೆ ಅತಿಯಾದ ಕೆಮಿಕಲ್ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಸರ್ಕಾರ ಆದೇಶದಂತೆ ಪ್ರತೀ ಹಸುವಿಗೆ ೧೭ ರೂ ೫೦ ಪೈಸೆ ಅಂತೆ ನೀಡಬೇಕಾಗಿದ್ದು, ಈಗ ಒಂದು ತಿಂಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಸಾಂವಿಧಾನಿಕವಾಗಿ ನಿಗಧಿಪಡಿಸಿದ ಗೋಶಾಲೆ ಮತ್ತು ಗೋವುಗಳ ನಿರ್ವಹಣೆಗೆ ನೀಡುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಅವರು, ಹಿಂದುತ್ವ, ತತ್ವ ಸಿದ್ಧಾಂತ ಎಂದು ಹೇಳಿಕೊಳ್ಳುವ ಪ್ರತಿಪಕ್ಷ ಬಿಜೆಪಿ ಈ ಬಗ್ಗೆ ಜಾಣ ಮೌನ ವಹಿಸಿರುವುದು ಖಂಡನೀಯ ಎಂದರು. ಜಿಲ್ಲೆಯಲ್ಲಿ ಗೋಕಳ್ಳತನ, ಅಕ್ರಮ ಸಾಗಾಣೆ, ಗೋಹತ್ಯೆ ಮಿತಿಮೀರಿದ್ದು, ರಸ್ತೆಬದಿ, ಬಸ್ ನಿಲ್ದಾಣ ಪಕ್ಕ,…