Author: chikkamagalur express

ಚಿಕ್ಕಮಗಳೂರು:  ಮತದಾರರ ಬಿಟ್ಟಿ ಭಾಗ್ಯಗಳಿಗೆ ಹಣ ನೀಡುವ ಸರ್ಕಾರ ನೊಂದಾಯಿತ ಗೋಶಾಲೆಗಳಿಗೆ ಅನುದಾನ ಬಿಡುಗಡೆ ಮಾಡದಿರುವ ಪರಿಣಾಮ ಗೋವುಗಳ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಕೊಪ್ಪ ತಾಲ್ಲೂಕು ಹೆರೂರು ಕೆಮ್ಮಣ್ಣು ಶ್ರೀ ಕಾಮಧೇನು ಗೋಸೇವಾ ಟ್ರಸ್ಟ್ ನಾಗೇಶ್ ಅಂಗೀರಸ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಗೋ ನಿರ್ಲಕ್ಷ್ಯದಿಂದಾಗಿ ಗೊಬ್ಬರವನ್ನು ಬಳಕೆ ಮಾಡುತ್ತಿಲ್ಲ. ಜೊತೆಗೆ ಭೂಮಿಗೆ ಅತಿಯಾದ ಕೆಮಿಕಲ್ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಸರ್ಕಾರ ಆದೇಶದಂತೆ ಪ್ರತೀ ಹಸುವಿಗೆ ೧೭ ರೂ ೫೦ ಪೈಸೆ ಅಂತೆ ನೀಡಬೇಕಾಗಿದ್ದು, ಈಗ ಒಂದು ತಿಂಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಸಾಂವಿಧಾನಿಕವಾಗಿ ನಿಗಧಿಪಡಿಸಿದ ಗೋಶಾಲೆ ಮತ್ತು ಗೋವುಗಳ ನಿರ್ವಹಣೆಗೆ ನೀಡುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ ಅವರು, ಹಿಂದುತ್ವ, ತತ್ವ ಸಿದ್ಧಾಂತ ಎಂದು ಹೇಳಿಕೊಳ್ಳುವ ಪ್ರತಿಪಕ್ಷ ಬಿಜೆಪಿ ಈ ಬಗ್ಗೆ ಜಾಣ ಮೌನ ವಹಿಸಿರುವುದು ಖಂಡನೀಯ ಎಂದರು. ಜಿಲ್ಲೆಯಲ್ಲಿ ಗೋಕಳ್ಳತನ, ಅಕ್ರಮ ಸಾಗಾಣೆ, ಗೋಹತ್ಯೆ ಮಿತಿಮೀರಿದ್ದು, ರಸ್ತೆಬದಿ, ಬಸ್ ನಿಲ್ದಾಣ ಪಕ್ಕ,…

Read More

ಚಿಕ್ಕಮಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ ಖರ್ಗೆ ಅವರು ಪ್ರಜಾಪ್ರಭುತ್ವದ ದೇಗುಲ ಸುವರ್ಣ ಸೌಧದಲ್ಲಿ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಅನ್ವರ್ ಮಾಣಿಪ್ಪಾಡಿ ಅವರಿಗೆ ೧೫೦ ಕೋಟಿ ರೂ. ಆಮಿಷ ಒಡ್ಡಿದಾರೆ ಎಂದು ಸುಳ್ಳು ಆರೋಪ ಮಾಡಿದ್ದು, ಈ ಪ್ರಕರಣವನ್ನು ಸರಕಾರ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ ಕಲ್ಮರುಡಪ್ಪ ಒತ್ತಾಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ೧೫೦ ಕೋಟಿ ರೂ. ಆಮಿಷ ಒಡ್ಡಿರುವ ಸಾಕ್ಷ್ಯಾಧಾರಗಳಿದ್ದರೆ ಅದರ ಬಗ್ಗೆ ಖಚಿತ ಮಾಹಿತಿ ಮಖ್ಯಮಂತ್ರಿಗೆ ಇದ್ದರೆ ಅವರು ದಯಮಾಡಿ, ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು. ಇಲ್ಲದಿದ್ದರೆ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡಿರುವ ಸುಳ್ಳು ಆರೋಪ ಎಂದು ಭಾವಿಸಬೇಕಾಗುತ್ತದೆ ಎಂದು ಆರೋಪಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಅದಕ್ಕೆ ಹೆದರಿ ಅವರ ವಿರುದ್ಧ ಈ ಆರೋಪ ಮಾಡಿದ್ದಾರೆ. ವಿಜಯೇಂದ್ರ ಅವರು ಯಾವ ಉದ್ದೇಶಕ್ಕಾಗಿ ಮಾಣಿಪ್ಪಾಡಿಗೆ…

Read More

ಚಿಕ್ಕಮಗಳೂರು: ಯುದ್ಧಭೂಮಿಯಲ್ಲಿ ಪ್ರಾಣದ ಹಂಗು ತೊರೆದು ರಾಷ್ಟ್ರವನ್ನು ಹಗಲು-ರಾತ್ರಿ ಎನ್ನದೇ ದೇಶದ ಜನತೆಯನ್ನು ಕಾಯುತ್ತಿರುವ ಸೈನಿಕರ ಸೇವೆ ಎಂದಿಗೂ ಮರೆಯವಂತಿಲ್ಲ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಾಜಿ ಸೈನಿಕರ ಸಂಘ ವತಿಯಿಂದ ಏರ್ಪಡಿಸಿದ್ದ ೧೯೭೧ರ ಯುದ್ಧದ ೫೪ನೇ ವಿಜಯೋತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿ ದರು. ಹುತಾತ್ಮಕ ಸೈನಿಕರ ತ್ಯಾಗ, ಶೌರ್ಯ ಹಾಗೂ ಬಲಿದಾನದಿಂದ ದೇಶ ನೆಮ್ಮದಿ ಜೀವನಕ್ಕೆ ದಾರಿ ಮಾಡಿ ಕೊಟ್ಟಿದೆ. ಅಂತಹ ಮಹಾನ್ ಯೋಧರನ್ನು ದೇಶದ ಪ್ರತಿಪ್ರಜೆಯು ಸ್ಮರಿಸಬೇಕು. ಜೊತೆಗೆ ನಿವೃತ್ತಿಗೊಂಡ ಬಂದಂ ತಹ ಸೈನಿಕರಿಗೆ ಗೌರವ ಸೂಚಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಯಾವುದೇ ಫಲಾಪೇಕ್ಷೆ ಇಲ್ಲದೇ ತನ್ನ ಇಡೀ ಕುಟುಂಬವನ್ನೇ ತೊರೆದು ದೇಶದ ಹಿತ ಕಾಪಾಡುವಲ್ಲಿ ತೆರ ಳುವ ಸೈನಿಕರು ನಮಗೆಲ್ಲಾ ಸ್ಪೂರ್ತಿಯಾಗಿರಬೇಕು. ವಿದ್ಯಾರ್ಥಿಗಳು ಕೂಡಾ ಮುಂದಿನ ಭವಿಷ್ಯದಲ್ಲಿ ಸೈನಿಕರಾಗ ಬೇಕೆಂಬ ಕನಸು ಕಂಡು ಮುನ್ನೆಡೆದರೆ ಅದಕ್ಕಿಂತ ದೊಡ್ಡಭಾಗ್ಯ ಬೇರೊಂದಿಲ್ಲ ಎಂದು ಹೇಳಿದರು.…

Read More

ಚಿಕ್ಕಮಗಳೂರು: ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ ಜಾನಪದ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಸಮ್ಮೇಳನಾಧ್ಯಕ್ಷ ಶಂಕರಪ್ಪ ಸಲಹೆ ಮಾಡಿದರು. ಅಜ್ಜಂಪುರ ತಾಲೂಕಿನ ಶ್ರೀಶೈಲ ಶಾಖಾ ಮಠ. ಹಣ್ಣೆಮಠದಲ್ಲಿ ಕರ್ನಾಟಕ ಜಾನಪದ ಪರಿಷತ್ ಭಾನುವಾರ ಆಯೋಜಿಸಿದ್ದ ನಾಲ್ಕನೇ ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲೆ ಮರೆಯ ಕಾಯಿಯಂತೆ ಗ್ರಾಮೀಣ ಭಾಗದಲ್ಲಿ ದುಡಿಯುತ್ತಿರುವ ಜಾನಪದ ಕಲಾವಿದರಿಂದಾಗಿ ತಲತಲಾಂತರದಿಂದ ಜಾನಪದ ಸಾಹಿತ್ಯ ಕಲೆ ಸಂಸ್ಕೃತಿ ಉಳಿದು ಬಂದಿದೆ. ಸರ್ಕಾರಗಳು ಮತ್ತು ಸಮಾಜ ಅವರನ್ನು ಗುರುತಿಸಿ ಬಡತನದಲ್ಲಿರುವ ಅವರಿಗೆ ಆರ್ಥಿಕ ಸಹಕಾರ ನೀಡಿದಲ್ಲಿ ಜಾನಪದ ಮತ್ತಷ್ಟು ಬೆಳೆಯುತ್ತದೆ ಎಂದು ಕಿವಿ ಮಾತು ಹೇಳಿದರು. ಜಾನಪದ ಈ ನೆಲದ ಸಂಸ್ಕೃತಿಯ ತಾಯಿಬೇರು ತಲತಲಾಂತರದಿಂದ ನಮ್ಮ ಹಿರಿಯರು ಉಳಿಸಿಕೊಂಡು ಬಂದಿರುವ ಅದನ್ನು ಜತನದಿಂದ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು. ನಾಲ್ಕು ದಶಕಗಳ ತಮ್ಮ ಸೇವೆಯನ್ನು ಗುರುತಿಸಿ ತಮ್ಮನ್ನು ಜಾನಪದ ಸಮ್ಮೇಳನಾಧ್ಯಕ್ಷರನ್ನಾಗಿ…

Read More

ಚಿಕ್ಕಮಗಳೂರು: ಭಗವಂತನ ತತ್ವ, ಆತ್ಮನ ಸ್ವರೂಪ, ಜೀವ, ಜಗತ್ತು, ಈಶ್ವರ ಇವುಗಳ ನಡುವಿನ ಸಂಬಂಧದ ಸತ್ಯವನ್ನು ತಾತ್ವಿಕವಾಗಿ, ಅತ್ಯಂತ ಅರ್ಥಪೂರ್ಣವಾಗಿ, ರಚನಾತ್ಮಕವಾಗಿ, ಯೋಜನಾ ಬದ್ಧವಾಗಿ ಮನುಷ್ಯನ ಅಂತರಂಗಕ್ಕೆ ಬರುವಂತೆ ಉಪನಿಷತ್ತುಗಳು ಬಿಚ್ಚಿಡುತ್ತವೆ ಎಂದು ಹರಿಹರಪುರ ಶ್ರೀಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. ನಗರದ ಬ್ರಹ್ಮಸಮುದ್ರ ರಂಗಣ್ಣನ ಛತ್ರದಲ್ಲಿ ಭಾನುವಾರ ಉದ್ಭವ ಪ್ರಕಾಶನ ಟ್ರಸ್ಟ್, ಬೆಂಗಳೂರಿನ ಋಷ್ಯಶೃಂಗ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಬ್ರಾಹ್ಮಣ ಮಹಾಸಭಾದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ.ಬೆಳವಾಡಿ ಹರೀಶ್ ಭಟ್ಟ ವಿರಚಿತ ನೂರಾರು ಉಪನಿಷತ್ತುಗಳ ಅಧ್ಯಯನದ ಎರಡು ಸಂಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾಗಿರುವ ದರ್ಶನ ಶಾಸ್ತ್ರಗಳಲ್ಲಿ ಉಪನಿಷತ್ತನ್ನು ಒಳಗೊಂಡಿರುವ ಉತ್ತರ ಮೀಮಾಂಸೆ ದಕ್ಷಿಣ ಶಾಸ್ತ್ರವು ಅಗ್ರಸ್ಥಾನದಲ್ಲಿದೆ. ಹಿರಿಯರ ಪ್ರಕಾರ ಮನುಷ್ಯನ ಬೌದ್ಧಿಕ ವಿಕಾಸವು ಯಾವಾಗ ಅಂತಿಮ ಸ್ಥಿತಿಯನ್ನು ತಲುಪುತ್ತದೆಯೋ ಆಗ ಉಪನಿಷತ್ತಿನ ಸತ್ಯಗಳು ಅಂತರಂಗದಲ್ಲಿ ಸ್ಫುರಣೆಯನ್ನು ಕಾಣುತ್ತವೆ ಎಂದು ಹೇಳಿದರು. ಅನಾದಿಕಾಲದಿಂದಲೂ ಸಾವಿನ ನಂತರ ನಮಗೆ ಬದುಕು ಇದೆಯೇ? ಇಲ್ಲವೇ?…

Read More

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. 73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದರು. ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು. ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಅವರು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲ, ಆಲ್-ಸ್ಟಾರ್ ಗ್ಲೋಬಲ್ ಕನ್ಸರ್ಟ್‌ನಲ್ಲಿ ಭಾಗವಹಿಸಲು ಮಾಜಿ ಅಧ್ಯಕ್ಷ ಬರಾಕ್ ಒಬಾಮರಿಂದ ಆಹ್ವಾನ ಪಡೆದ ಮೊದಲ ಭಾರತೀಯ ತಬಲಾ ವಾದಕ ಜಾಕಿರ್ ಹುಸೇನ್ ಆಗಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ 1951ರಲ್ಲಿ ಜನಿಸಿದ ಜಾಕೀರ್ ಹುಸೇನ್ ಕೇವಲ 3 ವರ್ಷ ವಯಸ್ಸಿನಲ್ಲೇ ತಬಲಾವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, 7ನೇ…

Read More

ಬಾಳೆಹೊನ್ನೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ರಂಭಾಪುರಿ ಮಠಕ್ಕೆ ಪ್ರಾಣಿದಯಾ ಸಂಘ ‘ಪೆಟಾ’ ವತಿಯಿಂದ ಸುಮಾರು ₹10 ಲಕ್ಷ ಮೌಲ್ಯದ ರೊಬೊಟಿಕ್‌ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ. ರೊಬೊಟಿಕ್‌ ಆನೆಯನ್ನು ರಂಭಾಪುರಿ ಪೀಠದ ವೀರ ಸೋಮೇಶ್ವರ ಸ್ವಾಮೀಜಿ ಮಠಕ್ಕೆ ಬರಮಾಡಿಕೊಂಡು ಚಾಲನೆ ನೀಡಿದರು. ನೋಡಲು ನೈಜ ಆನೆಯಂತೆ ಕಾಣುವ ಈ ರೊಬೊಟಿಕ್‌ ಆನೆಯು, ಮಠದ ಆವರಣದಲ್ಲೇ ಇರಲಿದ್ದು, ಮಠಕ್ಕೆ ಬರುವ ಭಕ್ತರನ್ನು ಆಶೀರ್ವದಿಸಲಿದೆ. ಮಠದ ಆವರಣದಲ್ಲಿ ಈ ಆನೆಗಾಗಿ ಪ್ರತ್ಯೇಕ ಕಟ್ಟಡ ನಿರ್ಮಿಸಲಾಗಿದೆ.  ಕಣ್ಣು ತೆರೆದು,  ತಲೆ, ಸೊಂಡಿಲು ಹಾಗೂ ಬಾಲವನ್ನು ಅಲುಗಾಡಿಸುತ್ತಿರುವ ಆನೆಯನ್ನು ನೋಡಿದರೆ ನಿಜವಾದ ಆನೆಯೇ ಎದುರಿಗಿದ್ದಂತೆ ಭಾಸವಾಗುತ್ತದೆ. ‘ನಟಿ ಶಿಲ್ಪಾಶೆಟ್ಟಿ ರಂಭಾಪುರಿ ಮಠಕ್ಕೆ ನಿಜವಾದ ಆನೆಯನ್ನೇ ಕೊಡುವ ಯೋಚನೆ ಹೊಂದಿದ್ದರು. ಆದರೆ, ಕಾನೂನಿನ ತೊಡಕಾಗಬಹುದು ಎಂದು, ರೊಬೊಟಿಕ್‌ ಆನೆಯನ್ನು ಕೊಡುಗೆಯಾಗಿ ನೀಡಿದ್ದಾರೆ’ ಎಂದು ಪೆಟಾ ಸಂಸ್ಥೆಯ ಕಾರ್ಯಕರ್ತರು ಹೇಳಿದರು. ಮಠಕ್ಕೆ ಬಂದಿದ್ದ ಭಕ್ತರು ರೊಬೊಟಿಕ್‌ ಆನೆಯ ಜತೆಗೆ ಸೆಲ್ಫಿ ತೆಗೆದುಕೊಂಡು ಖುಷಿಪಟ್ಟರು. Actress Shilpa Shetty donates…

Read More

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ಮನುಷ್ಯನಿಗೆ ಬದುಕಿನಲ್ಲಿ ಭರವಸೆ ಮತ್ತು ಕನಸುಗಳು ಇರಬೇಕು. ಧರ್ಮ ಮತ್ತು ಸಂಸ್ಕೃತಿಯ ಆದರ್ಶಗಳನ್ನು ಅನುಸರಿಸಿ ಬಾಳಿದರೆ ಜೀವನದಲ್ಲಿ ಶ್ರೇಯಸ್ಸು ನಿಶ್ಚಿತ. ಜೀವನ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲಗೊಳ್ಳುತ್ತದೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಭಾನುವಾರ ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ ಲಿಂ.ಶ್ರೀ ರಂಭಾಪುರಿ ವೀರರುದ್ರಮುನಿ ಜಗದ್ಗುರುಗಳವರ ಜನ್ಮ ಶತಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಜೀವನದಲ್ಲಿ ಉನ್ನತಿ ಸಾಧಿಸಬೇಕಾದರೆ ಜನಬಲ ಹಣಬಲ ತೋಳ್ಬಲ ಇದ್ದರೆ ಸಾಲದು. ಅದರೊಂದಿಗೆ ದೈವ ಬಲವೂ ಮುಖ್ಯ. ಆಶಾವಾದಿ ಕಷ್ಟ ಕಾಲದಲ್ಲೂ ಅವಕಾಶವನ್ನು ಹುಡುಕುತ್ತಾನೆ. ಕಲಿತ ಮನುಷ್ಯ ಮರೆಯಲು ಸಾಧ್ಯವಾಗುವುದಿಲ್ಲ. ವೀರಶೈವ ಧರ್ಮ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಲಿಂ.ಶ್ರೀ ಜಗದ್ಗುರು ವೀರರುದ್ರಮುನಿ ಶಿವಾಚಾರ್ಯ ಭಗವತ್ಪಾದರು ಶ್ರಮಿಸಿದ್ದನ್ನು ಎಂದಿಗೂ ಮರೆಯಲಾಗದು. ರಚನಾತ್ಮಕ ಗುಣಾತ್ಮಕ ಸತ್ಕಾರ್ಯಗಳಿಂದ ಎಲ್ಲರ ಮನ ಮಂದಿರಗಳಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ವ್ಯಕ್ತಿಯನ್ನು ನೋಡಿ ಮಾಡುವ ಸ್ನೇಹಕ್ಕಿಂತ ವ್ಯಕ್ತಿತ್ವವನ್ನು ನೋಡಿ ಮಾಡುವ ಸ್ನೇಹ ದೊಡ್ಡದೆಂದು ಭಕ್ತ ಸಮುದಾಯಕ್ಕೆ ಬೋಧಿಸುತ್ತಿದ್ದರು.…

Read More

ಬಾಳೆಹೊನ್ನೂರು (ಚಿಕ್ಕಮಗಳೂರು),  ಆಸ್ತಿ, ಹಣ ಹೋದರೆ ಸಂಪತ್ತು ಮಾತ್ರ ಹೋಗುತ್ತದೆ, ಆದರೆ ಪ್ರಕೃತಿ, ಪರಂಪರೆ ಮತ್ತು ಸಂಸ್ಕೃತಿಯ ನಾಶವಾದರೆ ಸರ್ವಸ್ವವೂ ನಾಶವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬಾಳೆಹೊನ್ನೂರಿನಲ್ಲಿಂದು ಶ್ರೀಮದ್ ರಂಭಾಪುರಿ ವೀರ ರುದ್ರಮುನಿದೇವ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂಸ್ಕೃತಿ, ಪರಂಪರೆಯ ನಾಶವಾದರೆ ಮಾನವತೆಯೇ ಸಂಕಷ್ಟಕ್ಕೆ ಸಿಲುಕುತ್ತದೆ. ಹೀಗಾಗಿಯೇ ಮಠ ಮಾನ್ಯಗಳು ಸಂಸ್ಕೃತಿ, ಪರಂಪರೆಯ ಸಂರಕ್ಷಣೆಗೆ ಅವಿರತ ಶ್ರಮಿಸುತ್ತಿವೆ ಎಂದು ಹೇಳಿದರು. ಬಾಳೆ ಹೊನ್ನೂರು ಮಹಾ ಸಂಸ್ಥಾನ ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ, ಸಾಹಿತ್ಯ ಸಂಸ್ಕೃತಿ ಸಂವರ್ಧಿಸಲಿ, ಶಾಂತಿ ಸಮೃದ್ಧಿ ಸರ್ವರಿಗಾಗಲಿ ಎಂಬ ಮಹೋನ್ನತ ಧ್ಯೇಯದೊಂದಿಗೆ ಧರ್ಮಪ್ರಚಾರ ಮಾಡುತ್ತಿದ್ದು, ಮಠದ ಕಾರ್ಯ ಮಹೋನ್ನತವಾದ್ದು ಎಂದರು. ಜನ ಸಮುದಾಯ ಮತ್ತು ಸಮಾಜದಲ್ಲಿ ಧಾರ್ಮಿಕ ಸಾಮರಸ್ಯ ಬೆಳೆಸುವುದೇ ಮಠಗಳು ಎಂದ ಅವರು, ಪ್ರಕೃತಿ ದೇವಿಯ ವರದಿಂದ ಹಚ್ಚ ಹಸಿರಿನಿಂದ ಕೂಡಿ, ಕರ್ನಾಟಕದ ಕಾಶ್ಮೀರ…

Read More